AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರನ್ಯಾ ರಾವ್​ಗೆ 25 ಲಕ್ಷ ರೂ. ನೀಡಿದ್ದಾರಂತೆ ಪರಮೇಶ್ವರ್: ಡಿಕೆ ಶಿವಕುಮಾರ್

ನಟಿ ರನ್ಯಾ ರಾವ್​​ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ 15 ರಿಂದ 25 ಲಕ್ಷ ರೂಪಾಯಿಗಳನ್ನು ನೀಡಿದ್ದಾರೆ ಎಂದು ಡಿಕೆ ಶಿವಕುಮಾರ್ ಬಹಿರಂಗಪಡಿಸಿದ್ದಾರೆ. ಪರಮೇಶ್ವರ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಬೆನ್ನಲ್ಲೇ ಈ ವಿಚಾರ ಬಹಿರಂಗಗೊಂಡಿದೆ. ಈ ಹಣವನ್ನು ನಟಿಯ ಕುಟುಂಬದವರಿಗೆ ಸಹಾಯಕ್ಕಾಗಿ ನೀಡಿರಬಹುದು ಎಂದು ಡಿಕೆಶಿ ಸಮರ್ಥಿಸಿಕೊಂಡಿದ್ದಾರೆ.

ರನ್ಯಾ ರಾವ್​ಗೆ 25 ಲಕ್ಷ ರೂ. ನೀಡಿದ್ದಾರಂತೆ ಪರಮೇಶ್ವರ್: ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್, ರನ್ಯಾ ರಾವ್‌ ಹಾಗೂ ಪರಮೇಶ್ವರ್
ಗಣಪತಿ ಶರ್ಮಾ
|

Updated on:May 22, 2025 | 2:43 PM

Share

ಬೆಂಗಳೂರು, ಮೇ 22: ಗೃಹ ಸಚಿವ ಡಾ. ಜಿ ಪರಮೇಶ್ವರ (G Parameshwara) ಒಡೆತನದ ತುಮಕೂರಿನ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ (Siddhartha Education Institution) ಮೇಲೆ ಜಾರಿ ನಿರ್ದೇಶನಾಲಯದ ದಾಳಿ ಕರ್ನಾಟಕ ರಾಜಕಾರಣದಲ್ಲಿಯೂ ಕೋಲಾಹಲ ಎಬ್ಬಿಸುವ ಎಲ್ಲ ಸುಳಿವು ದೊರೆತಿದೆ. ಅಕ್ರಮ ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟಿ ರನ್ಯಾ ರಾವ್‌ ಖಾತೆಗೆ ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆಯಿಂದ ಲಕ್ಷಾಂತರ ರೂಪಾಯಿ ವರ್ಗಾವಣೆಯಾಗಿದೆ ಎಂಬ ಆರೋಪದ ಮೇಲೆ ಇಡಿ ದಾಳಿ ನಡೆದಿದೆ ಎನ್ನಲಾಗಿತ್ತು. ಇದೀಗ ಆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿಕೆ ಶಿವಕುಮಾರ್ (DK Shivakumr) ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ. ನಟಿ ರನ್ಯಾ ರಾವ್​​ಗೆ ಪರಮೇಶ್ವರ್ 15 ರಿಂದ 25 ಲಕ್ಷ ರೂ. ನೀಡಿದ್ದಾರಂತೆ. ಇದನ್ನು ಅವರೇ ತಿಳಿಸಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಪರಮೇಶ್ವರ್ ಜೊತೆ ಮಾತನಾಡಿದ್ದೇನೆ ರನ್ಯಾಗೆ 25 ಲಕ್ಷ ರೂ. ವರೆಗೆ ನೀಡಿದ್ದಾರಂತೆ. ಕುಟುಂಬದವರಿಗೆಂದು ಆ ಹಣ ಕೊಟ್ಟಿರಬಹುದು. ಪರಮೇಶ್ವರ್ ಪ್ರಭಾವಿ ವ್ಯಕ್ತಿ. ಆದರೆ, ರನ್ಯಾರಂಥ ಹೆಣ್ಮಗಳು ತಪ್ಪು ಮಾಡಿದ್ದರೆ ಕ್ರಮ ಆಗಲಿ. ಪರಮೇಶ್ವರ್ ಮೇಲೆ ಜವಾಬ್ದಾರಿ ಇದೆ, ಅವರು ಗೃಹ ಸಚಿವರು. ನಾನು ಅವರನ್ನು ಭೇಟಿ ಮಾಡಿ ಮಾತನಾಡಿದ್ದೇನೆ. ಅವರು ಆರೋಗ್ಯವಾಗಿ ಇದ್ದಾರೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಚಾರಿಟೇಬಲ್ ಟ್ರಸ್ಟ್​ಗಳು ನೆರವು ನೀಡುವುದು ಸಾಮಾನ್ಯ: ಡಿಕೆ ಶಿವಕುಮಾರ್

ಚಾರಿಟೇಬಲ್​ ಟ್ರಸ್ಟ್​​ಗಳು ಸಾಕಷ್ಟು ನೆರವು ನೀಡುವ ಕೆಲಸ ಮಾಡುತ್ತಿವೆ. ಶಾಲಾ, ಕಾಲೇಜು ಫೀಸ್​​, ಮದುವೆ ಕಾರ್ಯಗಳಿಗೆ ನೆರವು ನೀಡಲಾಗುತ್ತದೆ. ಈ ರೀತಿಯ ಸಣ್ಣಪುಟ್ಟ ಚಾರಿಟಿ ನಡೆದಿರಬಹುದು, ಅದು ಇಲ್ಲ ಅಂತ ಹೇಳುವುದಿಲ್ಲ. ಮದುವೆ, ಆಸ್ಪತ್ರೆ ಬಿಲ್​​ನಂತಹ ಸಂದರ್ಭದಲ್ಲಿ ನೆರವಾಗಿರಬಹುದು. ಉಳಿದ ವಿಚಾರದ ಬಗ್ಗೆ ಏನು ಮಾಡುತ್ತಾರೋ ನೋಡೋಣ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಆ ಮೂಲಕ ರನ್ಯಾಗೆ ಪರಮೇಶ್ವರ್ ಒಡೆತನದ ಸಂಸ್ಥೆಯಿಂದ ಹಣ ವರ್ಗಾವಣೆ ಮಾಡಿರುವ ವಿಚಾರವನ್ನು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ
Image
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
Image
ಪ್ರಿಯಾಂಕ್ ವಿರುದ್ಧ ಛಲವಾದಿ ಅವಹೇಳನಾಕಾರಿ ಮಾತು: ವಿವಾದದ ಬೆನ್ನಲ್ಲೇ ವಿಷಾದ
Image
ಮೆಟ್ರೋ ಪ್ರಯಾಣಿಕರೇ ಗಮನಿಸಿ: ಶುಕ್ರವಾರ ಸಂಚಾರ ಸಮಯದಲ್ಲಿಲ್ಲ ಬದಲಾವಣೆ
Image
ಮಳೆ ಬೆನ್ನಲ್ಲೇ ಬೆಂಗಳೂರಿನಲ್ಲಿ ಹೆಚ್ಚಾದ ಸಾಂಕ್ರಾಮಿಕ ರೋಗಗಳ ಆತಂಕ

ಇದನ್ನೂ ಓದಿ: ರನ್ಯಾ ರಾವ್ ಖಾತೆಗೆ 40 ಲಕ್ಷ ರೂ. ವರ್ಗಾವಣೆ ಆರೋಪ: ಸಿದ್ಧಾರ್ಥ ಶಿಕ್ಷಣ ಸಂಸ್ಥೆಯಲ್ಲಿ ಮುಂದುವರಿದ ಇಡಿ ಶೋಧ

ಇಂಥ ಇಡಿ ದಾಳಿಗಳ ವಿರುದ್ಧ ನಾವು ಹೋರಾಟ ಮಾಡುತ್ತೇವೆ. ಈ ವಿಚಾರದಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು, ಅಧ್ಯಕ್ಷರು, ಮುಖ್ಯಮಂತ್ರಿಗಳ ನಿಲುವೇ ನನ್ನದೂ ಆಗಿರುತ್ತದೆ. ಸೋನಿಯಾ ಗಾಂಧಿ ಕೇಸ್​​ನಿಂದ ಹಿಡಿದು ಎಲ್ಲ ವಿಚಾರವಾಗಿ ನಿತ್ಯ ಹೋರಾಟ ಮಾಡುತ್ತೇವೆ. ನಮಗೆ ನ್ಯಾಯಾಲಯದ ಬಗ್ಗೆ ನಂಬಿಕೆ ಇದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಪರಮೇಶ್ವರ್ ನಿವಾಸಕ್ಕೆ ದೌಡಾಯಿಸಿದ್ದ ಸಚಿವರು

ಇಡಿ ದಾಳಿ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುವ ಸುಳಿವು ದೊರೆತ ಬೆನ್ನಲ್ಲೇ ಗೃಹ ಸಚಿವ ಡಾ. ಜಿ ಪರಮೇಶ್ವರ್​ ನಿವಾಸಕ್ಕೆ ಗುರುವಾರ ಬೆಳಗ್ಗೆ ಸಚಿವರ ದಂಡು ದೌಡಾಯಿಸಿದೆ. ಡಿಸಿಎಂ ಡಿಕೆ ಶಿವಕುಮಾರ್​​, ಸಚಿವರಾದ ಸತೀಶ್ ಜಾರಕಿಹೊಳಿ​, ಚಲುವರಾಯಸ್ವಾಮಿ ಅವರು ಬೆಂಗಳೂರಿನ ಸದಾಶಿವನಗರದಲ್ಲಿರುವ ಪರಮೇಶ್ವರ್​ ನಿವಾಸಕ್ಕೆ ತೆರಳಿ ಸಮಾಲೋಚನೆ ನಡೆಸಿದ್ದಾರೆ. ಅದಾದ ನಂತರ ಮಾಧ್ಯಮ ಪ್ರತಿನಿಧಿಗಳ ಬಳಿ ಮಾತನಾಡಿದ ಡಿಕೆ ಶಿವಕುಮಾರ್, ಮಾಹಿತಿ ನೀಡಿದ್ದಾರೆ.

ವರದಿ: ಈರಣ್ಣ ಬಸವ, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:34 pm, Thu, 22 May 25

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ