ದರ್ಶನ್ ಮಧ್ಯಂತರ ಜಾಮೀನು ತಡೆ ಕೋರಿ ಸುಪ್ರೀಂಗೆ ಮೇಲ್ಮನವಿ: ಗೃಹ ಸಚಿವ ಪರಮೇಶ್ವರ್ ಅಚ್ಚರಿಯ ಹೇಳಿಕೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ಗೆ ದೊರೆತಿರುವ ಮಧ್ಯಂತರ ಜಾಮೀನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ಬಗ್ಗೆ ಕರ್ನಾಟಕ ಗೃಹ ಸಚಿವ ಡಾ. ಜಿ ಪರಮೇಶ್ವರ್ ಮಾತನಾಡಿದ್ದಾರೆ. ಮೇಲ್ಮನವಿ ಸಲ್ಲಿಕೆಗೆ ವಿಳಂಬ ಆಗಿಲ್ಲ ಎಂದಿರುವ ಅವರು, ಅರ್ಜಿ ಸಲ್ಲಿಸುವುದಾದರೆ ಸಲ್ಲಿಸಿ ಎಂದು ಸೂಚನೆ ನೀಡಿದ್ದೇನೆ ಎಂದಿದ್ದಾರೆ. ಆದರೆ… ಏನೆಂದು ತಿಳಿಯಲು ಮುಂದೆ ಓದಿ.

ದರ್ಶನ್ ಮಧ್ಯಂತರ ಜಾಮೀನು ತಡೆ ಕೋರಿ ಸುಪ್ರೀಂಗೆ ಮೇಲ್ಮನವಿ: ಗೃಹ ಸಚಿವ ಪರಮೇಶ್ವರ್ ಅಚ್ಚರಿಯ ಹೇಳಿಕೆ
ದರ್ಶನ್ & ಪರಮೇಶ್ವರ
Follow us
Ganapathi Sharma
|

Updated on: Nov 13, 2024 | 11:29 AM

ಬೆಂಗಳೂರು, ನವೆಂಬರ್ 13: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​ಗೆ ದೊರೆತಿರುವ ಮಧ್ಯಂತರ ಜಾಮೀನು ತಡೆ ಕೋರಿ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸುವ ವಿಚಾರವಾಗಿ ಕರ್ನಾಟಕ ಗೃಹ ಸಚಿವ ಡಾ. ಜಿ ಪರಮೇಶ್ವರ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಮಧ್ಯಂತರ ಜಾಮೀನು ತಡೆ ಕೋರಿ ಮೇಲ್ಮನವಿ ಸಲ್ಲಿಕೆಗೆ ವಿಳಂಬ ಆಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಪರಮೇಶ್ವರ್, ಮೇಲ್ಮನವಿ ಯಾವಾಗ ಸಲ್ಲಿಸಬೇಕು ಎಂಬುದನ್ನು ಗೃಹ ಇಲಾಖೆ ಕಾರ್ಯದರ್ಶಿ ತೀರ್ಮಾನಿಸುತ್ತಾರೆ. ಮೇಲ್ಮನವಿ ಸಲ್ಲಿಸುವುದಾದರೆ ಸಲ್ಲಿಸಿ ಎಂದು ನಾನೂ ಸೂಚಿಸಿದ್ದೇನೆ. ಇಂಥ ಪ್ರಕರಣಗಳಲ್ಲಿ ಪ್ರಕ್ರಿಯೆಗಳನ್ನು ಅನುಸರಿಸಿ ಮುಂದುವರಿಯಬೇಕಾಗುತ್ತದೆ ಎಂದರು.

ಮೇಲ್ಮನವಿ ಸಲ್ಲಿಕೆ ವಿಚಾರವಾಗಿ ಕಾನೂನು ಇಲಾಖೆಯಿಂದಲೂ ಮಾಹಿತಿ ತೆಗೆದುಕೊಳ್ಳಬೇಕು. ಪೊಲೀಸ್​ ಇಲಾಖೆಯಿಂದಲೂ ಕೂಡ ಪ್ರಸ್ತಾವನೆ ಬರಬೇಕು. ನಂತರವೇ ಸರ್ಕಾರ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಪರಮೇಶ್ವರ್ ಹೇಳಿದರು.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆಗಿರುವ ದರ್ಶನ್​ಗೆ ಷರತ್ತುಬದ್ಧ ಮಧ್ಯಂತರ ಜಾಮೀನು ದೊರೆತಿದ್ದು ಅವರು ಜೈಲಿನಿಂದ ಬಿಡುಗಡೆಯಾಗಿ ಕೆಲವು ದಿನಗಳಾಗಿವೆ. ಅವರು ಬೆನ್ನು ನೋವಿನಿಂದ ಬಳಲುತ್ತಿದ್ದಾರೆ ಎನ್ನಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಮುಸ್ಲಿಮರಿಗೆ ಮೀಸಲಾತಿ ವಿಚಾರದಲ್ಲಿ ತಪ್ಪು ಗ್ರಹಿಕೆ: ಪರಮೇಶ್ವರ್

ಸರ್ಕಾರದ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ವಿಚಾರದಲ್ಲಿ ತಪ್ಪು ಗ್ರಹಿಕೆ ಆಗಿದೆ ಎಂದು ಸಚಿವ ಪರಮೇಶ್ವರ್ ಹೇಳಿದರು. ಈ ವಿಚಾರವಾಗಿ ಸಿಎಂಗೆ ಕೆಲವು ಶಾಸಕರು, ಮುಖಂಡರು ಮನವಿ ಪತ್ರ ಸಲ್ಲಿಸಿದ್ದರು. ಆ ಪತ್ರ ಪರಿಶೀಲನೆಗೆ ಅಲ್ಪಸಂಖ್ಯಾತ ಇಲಾಖೆಗೆ ಸಿಎಂ ಸೂಚನೆ ನೀಡಿದ್ದರು. ಇಷ್ಟು ಬಿಟ್ಟರೆ ಬೇರೇನೂ ಆಗಿಲ್ಲ. ಏನೇ ತೀರ್ಮಾನ ಆದರೂ ಸಂಪುಟ ಸಭೆಯಲ್ಲಿ ಆಗಬೇಕು. ಪರಿಶೀಲನೆ ಮಾಡಿ ಎಂದು ಹೇಳಿದ ತಕ್ಷಣ ತೀರ್ಮಾನ ಆದಂತೆ ಅಲ್ಲ ಎಂದು ಅವರು ಹೇಳಿದರು.

ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಹಾಗೂ ಮಾಜಿ ಆರೋಗ್ಯ ಸಚಿವ ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್​ಗೆ ಶಿಫಾರಸು ವಿಚಾರವಾಗಿ ಪ್ರತಿಕ್ರಿಯಿಸಿ, ಕೋವಿಡ್ ಕಾಲದಲ್ಲಿ ನಡೆದ ಅಕ್ರಮಗಳಿಗೆ ಬೇರೆ ಬೇರೆ ಆಯಾಮವಿದೆ. ಬೆಡ್, ಔಷಧ, ಪಿಪಿಇ‌ ಕಿಟ್, ಟೆಸ್ಟ್ ಕಿಟ್ ಖರೀದಿ ವಿಚಾರಗಳಿವೆ. ಸಂಪುಟ ಉಪಸಮಿತಿ ಅಧ್ಯಯನ ನಡೆಸಿ ತೀರ್ಮಾನಕ್ಕೆ ಬರಲಿದೆ ಎಂದರು.

ಇದನ್ನೂ ಓದಿ: ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಸಂಪುಟ ಉಪಸಮಿತಿಯ ತೀರ್ಮಾನವನ್ನು ಸಂಪುಟದ ಮುಂದೆ ಇಡುತ್ತೇವೆ. ನಾಳೆ ನಡೆಯುವ ಸಂಪುಟ ಸಭೆಯಲ್ಲಿ ಈ ವಿಚಾರ ಚರ್ಚೆ ಆಗಲ್ಲ. ಇನ್ನೂ ಸಂಪುಟ ಉಪಸಮಿತಿ ಸಭೆಯನ್ನೇ ಮಾಡಿಲ್ಲ. ಡಿಸಿಎಂ ಅವರೇ ಸಂಪುಟ ಉಪಸಮಿತಿ ಅಧ್ಯಕ್ಷರು, ನಾವು ಸದಸ್ಯರು. ಮೊದಲು ಸಂಪುಟ ಉಪ ಸಮಿತಿಯಲ್ಲಿ ಚರ್ಚೆ ಆಗಬೇಕು ಎಂದು ಪರಮೇಶ್ವರ್ ಹೇಳಿದರು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್