ರಾಜ್ಯದಲ್ಲಿ ಈವರೆಗೆ 240 ಕೈದಿಗಳಿಗೆ ಕೊರೊನಾ ದೃಢಪಟ್ಟಿದೆ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಗಡಿಭಾಗದಲ್ಲಿ ಆರ್‌ಟಿಪಿಸಿಆರ್‌ ಟೆಸ್ಟ್‌ ಕಡ್ಡಾಯ ಮಾಡಬೇಕು. ಗಡಿಯಲ್ಲಿ ಅಕ್ರಮವಾಗಿ ಪ್ರವೇಶ ತಡೆಗೆ ಸೂಚಿಸಲಾಗುವುದು. ಮಹಾರಾಷ್ಟ್ರ, ತಮಿಳುನಾಡು, ಕೇರಳ ಗಡಿಯಲ್ಲಿ ನಾಳೆಯಿಂದ ಬಿಗಿ ಭದ್ರತೆ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ ಈವರೆಗೆ 240 ಕೈದಿಗಳಿಗೆ ಕೊರೊನಾ ದೃಢಪಟ್ಟಿದೆ: ಗೃಹ ಸಚಿವ ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
Follow us
guruganesh bhat
|

Updated on: Apr 29, 2021 | 10:20 PM

ಬೆಂಗಳೂರು: ಕಳೆದ 1 ವಾರದಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ಗೃಹಸಚಿವ ಬಸವರಾಜ ಬೊಮ್ಮಾಯಿ ಜೈಲಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ದಿನವೊಂದಕ್ಕೆ 20ರಿಂದ 30 ಪ್ರಕರಣ ಬರುತ್ತಿರುವ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸೋಂಕು ಹೆಚ್ಚಾಗದಂತೆ ಕೈಗೊಂಡಿರುವ ಕ್ರಮಗಳ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು.

ಪರಪ್ಪನ ಅಗ್ರಹಾರ ಜೈಲಿನ ಆಸ್ಪತ್ರೆ ಸ್ವಚ್ಛವಾಗಿಟ್ಟುಕೊಂಡಿದ್ದಾರೆ. ಹೊಸದಾಗಿ ಬರುವವರಿಗೆ 14 ದಿನ ಕ್ವಾರಂಟೈನ್ ಮಾಡಲಾಗುವುದು. ರಾಜ್ಯದಲ್ಲಿ ಈವರೆಗೆ 240 ಕೈದಿಗಳಿಗೆ ಸೋಂಕು ದೃಢಪಟ್ಟಿದೆ. ಅವರಿಗೆ ಬೆಂಗಳೂರಿನ ಹಜ್ ಭವನದಲ್ಲಿ ಐಸೋಲೇಷನ್‌ಗೆ ವ್ಯವಸ್ಥೆ ನಿರ್ಮಿಸಲಾಗಿದೆ. ಪ್ರತಿ ವಾರವೂ ಹೆಲ್ತ್ ಕ್ಯಾಂಪ್‌ ಮಾಡುವಂತೆ ಸೂಚಿಸಿದ್ದೇನೆ. 45 ವರ್ಷ ಮೇಲ್ಪಟ್ಟ ಕೈದಿಗಳಿಗೆ ಶೇಕಡಾ 80ರಷ್ಟು ಲಸಿಕೆ ಹಾಕಿದ್ದೇವೆ. ಜೈಲಿನ ಆಸ್ಪತ್ರೆಯಲ್ಲಿ ಸೌಲಭ್ಯ, ವೈದ್ಯ ಸಿಬ್ಬಂದಿಯ ಅವಶ್ಯಕತೆ ಇದೆ. ಈ ಸೌಲಭ್ಯ ಕೈಗೊಳ್ಳಲು ಎಸ್‌ಡಿಆರ್‌ಎಫ್‌ನಿಂದ 5 ಕೋಟಿ ಬಿಡುಗಡೆ ಮಾಡಲಾಗುತ್ತದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಲು ಕ್ರಮ ಕೈಗೊಳ್ಳುತ್ತೇವೆ. ಹೈಕೋರ್ಟ್ ಮಾರ್ಗದರ್ಶನದಂತೆ ನಡೆದುಕೊಳ್ಳುತ್ತೇವೆ ಎಂದು ತಿಳಿಸಿದರು.

ಗಡಿ ಭಾಗದಲ್ಲಿ ಪ್ರತಿ ವಾಹನ ತಪಾಸಣೆಗೆ ಸೂಚನೆ ನೀಡುತ್ತೇನೆ. ಬೆಂಗಳೂರು ಗ್ರಾಮಾಂತರ ಎಸ್‌ಪಿಗೆ ಈ ಬಗ್ಗೆ ಸೂಚಿಸುತ್ತೇನೆ. ಗಡಿಭಾಗದಲ್ಲಿ ಆರ್‌ಟಿಪಿಸಿಆರ್‌ ಟೆಸ್ಟ್‌ ಕಡ್ಡಾಯ ಮಾಡಬೇಕು. ಗಡಿಯಲ್ಲಿ ಅಕ್ರಮವಾಗಿ ಪ್ರವೇಶ ತಡೆಗೆ ಸೂಚಿಸಲಾಗುವುದು. ಮಹಾರಾಷ್ಟ್ರ, ತಮಿಳುನಾಡು, ಕೇರಳ ಗಡಿಯಲ್ಲಿ ನಾಳೆಯಿಂದ ಬಿಗಿ ಭದ್ರತೆ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಇದನ್ನೂ ಓದಿ: Explainer: 18ರಿಂದ 45 ವಯೋಮಾನದವರಿಗೆ ಕೋವಿಡ್ ಲಸಿಕೆ; ನೋಂದಣಿ ಹೇಗೆ? ಪಡೆದುಕೊಳ್ಳುವುದು ಎಲ್ಲಿ? ಡೇಟ್ ಮಿಸ್ ಆದ್ರೆ ಏನು ಮಾಡಬೇಕು?

Covid 19 Treatment in Bengaluru: ಬೆಂಗಳೂರಿನಲ್ಲಿ ತುರ್ತು ಕೊರೊನಾ ಆರೋಗ್ಯ ಸೇವೆಗಳಿಗಾಗಿ ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ

Covid-19 Karnataka Update: ಕರ್ನಾಟಕದಲ್ಲಿ ಇಂದು 35,024 ಮಂದಿಗೆ ಕೊರೊನಾ ಸೋಂಕು, 270 ಸಾವು

(Karnataka Home Minister visits Parappana Agrahara central jail for increase of Covid cases)

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?