AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪೇಗೌಡ ವಿಮಾನ ನಿಲ್ದಾಣದ ಬಳಿ ಇಂಟಿಗ್ರೇಟೆಡ್ ಟೌನ್‌ಶಿಪ್ ನಿರ್ಮಾಣ, ಮಾಹಿತಿ ಇಲ್ಲಿದೆ

ಕರ್ನಾಟಕ ಗೃಹ ಮಂಡಳಿ (ಕರ್ನಾಟಕ ಹೌಸಿಂಗ್ ಬೋರ್ಡ್) ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇಂಟಿಗ್ರೇಟೆಡ್ ಟೌನ್‌ಶಿಪ್ ನಿರ್ಮಿಸಲು ಸಿದ್ಧವಾಗಿದೆ. ಇತ್ತೀಚೆಗೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಉದ್ದೇಶಿತ ಟೌನ್‌ಶಿಪ್ ಯೋಜನೆಯನ್ನು ಪರಿಶೀಲಿಸಿದರು. 65 ಎಕರೆ ಜಾಗದಲ್ಲಿ ವಸತಿ ಮತ್ತು ವಾಣಿಜ್ಯ ಸಂಕೀರ್ಣಗಳು ಏಕೀಕೃತ ಟೌನ್‌ಶಿಪ್‌ನೊಂದಿಗೆ ಬರಲಿವೆ.

ಕೆಂಪೇಗೌಡ ವಿಮಾನ ನಿಲ್ದಾಣದ ಬಳಿ ಇಂಟಿಗ್ರೇಟೆಡ್ ಟೌನ್‌ಶಿಪ್ ನಿರ್ಮಾಣ, ಮಾಹಿತಿ ಇಲ್ಲಿದೆ
ಕೆಂಪೇಗೌಡ ವಿಮಾನ ನಿಲ್ದಾಣದ ಬಳಿ ಇಂಟಿಗ್ರೇಟೆಡ್ ಟೌನ್‌ಶಿಪ್ ನಿರ್ಮಾಣಕ್ಕೆ ಸಿದ್ಧವಾದ ಕರ್ನಾಟಕ ಗೃಹ ಮಂಡಳಿ
Rakesh Nayak Manchi
|

Updated on: Oct 06, 2023 | 8:06 AM

Share

ದೇವನಹಳ್ಳಿ, ಅ.6: ಕರ್ನಾಟಕ ಗೃಹ ಮಂಡಳಿ (Karnataka Housing Board) ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (Kempegowda International Airport) ಬಳಿ ಇಂಟಿಗ್ರೇಟೆಡ್ ಟೌನ್‌ಶಿಪ್ ನಿರ್ಮಿಸಲು ಸಿದ್ಧವಾಗಿದೆ. ಚಿಕ್ಕಜಾಲ-ಮೀನುಕುಂಟೆ ಗ್ರಾಮದ 95.23 ಎಕರೆಯಲ್ಲಿ 65 ಎಕರೆ ಜಾಗದಲ್ಲಿ ವಸತಿ ಮತ್ತು ವಾಣಿಜ್ಯ ಸಂಕೀರ್ಣಗಳು ಏಕೀಕೃತ ಟೌನ್‌ಶಿಪ್‌ನೊಂದಿಗೆ ಬರಲಿವೆ.

ಕರ್ನಾಟಕ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಇತ್ತೀಚೆಗೆ ಕೆಎಚ್‌ಬಿ ಮತ್ತು ಭೂ ಮಾಲೀಕರ ಜಂಟಿ ಉದ್ಯಮವಾಗಿ ಶೇ 50:50 ಅನುಪಾತದಲ್ಲಿ ಬರುತ್ತಿರುವ ಉದ್ದೇಶಿತ ಟೌನ್‌ಶಿಪ್ ಯೋಜನೆಯನ್ನು ಪರಿಶೀಲಿಸಿದರು.

ಇದೇ ವೇಳೆ ಮಾತನಾಡಿದ ಅವರು, ‘ಕೆಎಚ್‌ಬಿ ವತಿಯಿಂದ ಕೈಗೊಳ್ಳಲಿರುವ ಪ್ರತಿಷ್ಠಿತ ವಸತಿ ಯೋಜನೆ ಇದಾಗಿದ್ದು, 850 ಕೋಟಿ ವೆಚ್ಚದಲ್ಲಿ ವಿಶ್ವದರ್ಜೆಯ ಇಂಟಿಗ್ರೇಟೆಡ್ ಟೌನ್‌ಶಿಪ್ ನಿರ್ಮಿಸುವ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಯೋಜನೆಗೆ ಅಗತ್ಯವಿರುವ ಒಟ್ಟು 95.13 ಎಕರೆ ಭೂಮಿಯಲ್ಲಿ 43 ಎಕರೆ ಭೂಮಿಯನ್ನು ಹಸ್ತಾಂತರಿಸಲು ರೈತರು ಒಪ್ಪಿಗೆ ಪತ್ರ ನೀಡಿದ್ದಾರೆ ಎಂದರು.

ಇದನ್ನೂ ಓದಿ: ವಿಮಾನದಲ್ಲಿ ಬಂದು ಕಳ್ಳತನ: ಮಂಗಳೂರು ರೈಲ್ವೆ ಪೊಲೀಸರ ಕೈಗೆ ಸಿಕ್ಕಿಬಿದ್ದ ಹೈಟೆಕ್‌ ದರೋಡೆಕೋರರು

ವಸತಿ ಯೋಜನೆಗೆ ಈಗಾಗಲೇ 65 ಎಕರೆ ಭೂಮಿ ಲಭ್ಯವಿದೆ ಎಂದು ಹೇಳಿದ ಸಚಿವರು, ಉಳಿದ ಭೂಮಿಯನ್ನು ಪಡೆಯುವ ವಿಶ್ವಾಸವನ್ನು ಮಂಡಳಿ ಹೊಂದಿದೆ. ಸಮಗ್ರ ಕ್ರಿಯಾ ಯೋಜನೆ ಸಿದ್ಧಪಡಿಸಿ, ಸರಕಾರದ ಒಪ್ಪಿಗೆ ಪಡೆದು ಟೆಂಡರ್ ಕರೆಯಲಾಗುವುದು ಎಂದರು.

ಕರ್ನಾಟಕ ಗೃಹ ಮಂಡಳಿ ವತಿಯಿಂದ ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದ ನಗರೇಶ್ವರ ನಾಗೇನಹಳ್ಳಿ ಬಳಿ 95 ಕೋಟಿ ವೆಚ್ಚದಲ್ಲಿ ನಡೆಯುತ್ತಿರುವ 1047 ಮನೆಗಳ ನಿರ್ಮಾಣ ಕಾಮಗಾರಿಯನ್ನು ಸಚಿವ ಜಮೀರ್ ಅಹಮದ್ ಖಾನ್ ಪರಿಶೀಲಿಸಿದರು. ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಕೆಎಚ್‌ಬಿ ಆಯುಕ್ತೆ ಕವಿತಾ ಮನ್ನಿಕೇರಿ, ಮುಖ್ಯ ಎಂಜಿನಿಯರ್, ಸ್ಲಂ ಅಭಿವೃದ್ಧಿ ಮಂಡಳಿ ನಿರ್ದೇಶಕ ವೆಂಕಟೇಶ್, ಮುಖ್ಯ ಎಂಜಿನಿಯರ್ ಬಾಲರಾಜು ಜೊತೆಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ