ಬಿಜೆಪಿ ದೂರಿನ ಬೆನ್ನಲ್ಲೇ ವಾರ್ತಾ ಇಲಾಖೆ ಆಯುಕ್ತ ಹೇಮಂತ್ ‌ನಿಂಬಾಳ್ಕರ್ ವರ್ಗಾವಣೆ

ಉತ್ತರ ಕನ್ನಡ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿಯಾಗಿರುವ ತಮ್ಮ ಪತ್ನಿ ಅಂಜಲಿ ನಿಂಬಾಳ್ಕರ್ ಪರ ತಮ್ಮ ಕಚೇರಿಯಲ್ಲಿ ಕೆಸಲ ಮಾಡುತ್ತಿದ್ದಾರೆ ಎಂದು ಆರೋಪಿಸಿ ವಾರ್ತಾ ಮತ್ತು ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿತ್ತು. ಇದರ ಬೆನ್ನಲ್ಲೇ, ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

ಬಿಜೆಪಿ ದೂರಿನ ಬೆನ್ನಲ್ಲೇ ವಾರ್ತಾ ಇಲಾಖೆ ಆಯುಕ್ತ ಹೇಮಂತ್ ‌ನಿಂಬಾಳ್ಕರ್ ವರ್ಗಾವಣೆ
ಹೇಮಂತ್ ನಿಂಬಾಳ್ಕರ್ ಮತ್ತು ಇವರ ಪತ್ನಿ ಉತ್ತರ ಕನ್ನಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್
Updated By: Rakesh Nayak Manchi

Updated on: Mar 30, 2024 | 8:48 PM

ಬೆಂಗಳೂರು, ಮಾ.30: ಉತ್ತರ ಕನ್ನಡ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿಯಾಗಿರುವ ತಮ್ಮ ಪತ್ನಿ ಅಂಜಲಿ ನಿಂಬಾಳ್ಕರ್ (Anjali Nimbalkar) ಪರ ತಮ್ಮ ಕಚೇರಿಯಲ್ಲಿ ಕೆಸಲ ಮಾಡುತ್ತಿದ್ದಾರೆ ಎಂದು ಆರೋಪ ಬಂದ ಹಿನ್ನೆಲೆ ವಾರ್ತಾ ಮತ್ತು ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ (Hemant Nimbalkar) ಅವರನ್ನು ವರ್ಗಾವಣೆ ಮಾಡಲಾಗಿದೆ. ಅದರಂತೆ, ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾಗಿದ್ದ ಸೂರಳ್ಕರ್ ವಿಕಾಸ್ ಕಿಶೋರ್ ಅವರನ್ನು ವಾರ್ತಾ ಇಲಾಖೆ ಆಯುಕ್ತರನ್ನಾಗಿ ನೇಮಿಸಲಾಗಿದೆ.

ತಮ್ಮ ಕಚೇರಿಯಲ್ಲಿ ಪತ್ನಿ ಅಂಜಲಿ ನಿಂಬಾಳ್ಕರ್ ಪರ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹೇಮಂತ್ ನಿಂಬಾಳ್ಕರ್ ವಿರುದ್ಧ ಛಲವಾದಿ ನಾರಾಯಣಸ್ವಾಮಿ ನೇತೃತ್ವದ ಬಿಜೆಪಿ ನಿಯೋಗವು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಇದರ ಬೆನ್ನಲ್ಲೇ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಕಚೇರಿ‌‌ ಉಪಯೋಗಿಸಿಕೊಂಡು ಕಾಂಗ್ರೆಸ್​ಗೆ ಮತ‌ ನೀಡುವಂತೆ ಹೇಳುತ್ತಿದ್ದಾರಂತೆ. ಹೀಗಾಗಿ ಹೇಮಂತ್ ನಿಂಬಾಳ್ಕರ್ ಕರ್ನಾಟಕದಲ್ಲಿ ಇದ್ದರೆ ಮತ್ತೆ ಪ್ರಭಾವ‌ ಬೀರಬಹುದು. ಆಯುಕ್ತ ಸ್ಥಾನ

ಇದನ್ನೂ ಓದಿ: ಅಮಿತ್ ಶಾ ಬಗ್ಗೆ ಅವಹೇಳನಕಾರಿ ಹೇಳಿಕೆ: ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದೂರು 

ಛಲವಾದಿ ನಾರಾಯಣಸ್ವಾಮಿ ನೇತೃತ್ವದ ಬಿಜೆಪಿ ನಿಯೋಗವು ಹೇಮಂತ್ ನಿಂಬಾಳ್ಕರ್ ವಿರುದ್ಧ ಮಾತ್ರವಲ್ಲದೆ, ಸರ್ಕಾರದ ಚಿಹ್ನೆ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧವೂ ದೂರು ನೀಡಿತ್ತು.

ಪ್ರಧಾನಿ ಮೋದಿ‌ಯವರ‌ ಹೆಸರು ಹಾಗೂ ಬಿಜೆಪಿಯ ನಕಲಿ ‌ಚಿಹ್ನೆ ಹಾಕಿ‌ ಸಾಮಾಜಿಕ ಜಾಲತಾಣದಲ್ಲಿ ಲಿಂಕ್ ಹಾಕಿದ್ದಾರೆ. ಇದರಿಂದ ಮತದಾರರು ಮೋಸ ಹೋಗುತ್ತಿದ್ದಾರೆ. ಹೀಗಾಗಿ ದೂರು‌ ಕೊಟ್ಟಿದ್ದೇವೆ. ರಾಜ್ಯ ಸಚಿವರು ‌ತಮ್ಮ ಅಧಿಕೃತ ಕಚೇರಿಗಳನ್ನು ಚುನಾವಣಾ ‌ಪ್ರಚಾರಕ್ಕೆ ಬಳಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಕಾನೂನು‌ ಪ್ರಕೋಷ್ಠದ ಮುಖ್ಯಸ್ಥ ‌ವಿವೇಕ್ ರೆಡ್ಡಿ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ