AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಗುಟ್ಕಾ ಉಗುಳುವುದು, ಸಿಗರೇಟ್ ಸೇದಿದ್ರೆ 4 ಪಟ್ಟು ದಂಡ ಹೆಚ್ಚಳ!

Hookah Bars Ban In Karnataka : ಬೆಂಗಳೂರು ಸೇರಿದಂತೆ ಕರ್ನಾಟಕದೆಲ್ಲೆಡೆ ಹುಕ್ಕಾ ಬಾರ್‌ಗಳನ್ನು ನಿಷೇಧಿಸಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸಿದೆ. ಇನ್ನು ಸಾರ್ವಕನಿಕ ಸ್ಥಳಗಳಲ್ಲಿ ಗುಟ್ಕಾ ತಿಂದು ಉಗುಳುವುದು ಹಾಗೂ ಸಿಗರೇಟ್ ಸೇದುವುದಕ್ಕೆ ದಂಡದ ಪ್ರಮಾಣ ನಾಲ್ಕು ಪಟ್ಟು ಹೆಚ್ಚಳ ಮಾಡಲಾಗಿದೆ. ಹಾಗಾದ್ರೆ, ಗೆಜೆಟ್ ನಲ್ಲಿ ಏನೇನಿದೆ ಎನ್ನುವ ಡಿಟೇಲ್ಸ್ ಇಲ್ಲಿದೆ.

ಇನ್ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಗುಟ್ಕಾ ಉಗುಳುವುದು, ಸಿಗರೇಟ್ ಸೇದಿದ್ರೆ 4 ಪಟ್ಟು ದಂಡ ಹೆಚ್ಚಳ!
Cigarette
ರಮೇಶ್ ಬಿ. ಜವಳಗೇರಾ
|

Updated on:May 31, 2025 | 11:03 AM

Share

ಬೆಂಗಳೂರು, (ಮೇ 31): ಕರ್ನಾಟಕ ರಾಜ್ಯಾದ್ಯಂತ ಹುಕ್ಕಾ ಬಾರ್ ತೆರೆಯುವುದು ಅಥವಾ ನಡೆಸುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸಿದೆ. 21 ವರ್ಷಗಳಿಗಿಂತ ಕಡಿಮೆ ವಯಸ್ಸಿನವರಿಗೆ ಸಿಗರೇಟ್ ಮಾರಾಟ ಹಾಗೂ ಹುಕ್ಕಾ ಬಾರ್ ನಿಷೇಧಿಸುವ ಮಸೂದೆಗೆ ರಾಷ್ಟ್ರಪತಿಗಳು ಅಂಕಿತ ಹಾಕಿದೆ. ಇದರ ಬೆನ್ನಲ್ಲೇ  ಸಿಗರೇಟುಗಳ ಮತ್ತು ಇತರ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ವಿನಿಯಮನ) (ಕರ್ನಾಟಕ ತಿದ್ದುಪಡಿ) ಅಧಿನಿಯಮ 2024 ಜಾರಿ ಮಾಡಿ ರಾಜ್ಯ ಸರ್ಕಾರ, ಗೆಜಟ್ ನೋಟಿಫಿಕೇಷನ್ ಹೊರಡಿಸಿದೆ. ಇದರೊಂದಿಗೆ ಸಾರ್ವಜನಿಕವಾಗಿ ಗುಟ್ಕಾ ತಿಂದು ಉಳಿದರೆ ಹಾಗೂ ಸಿಗರೇಟ್ ಸೇದಿದರೆ ದಂಡದ ಪ್ರಮಾನ ನಾಲ್ಕು ಪಟ್ಟು ಹೆಚ್ಚಳವಾಗಿದೆ.

ಸಿಗರೇಟುಗಳ ಮತ್ತು ಇತರ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ವಿನಿಯಮ) (ಕರ್ನಾಟಕ ತಿದ್ದುಪಡಿ) ಅಧಿನಿಯಮ, 2024ಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. ಈ ಮಸೂದೆ ಫೆಬ್ರವರಿ 2024ರಂದು ಉಭಯ ಸದನಗಳಲ್ಲಿ ಅಂಗೀಕಾರವಾಗಿತ್ತು. 2003ರ ಕೇಂದ್ರ ಕಾಯ್ದೆಯನ್ನು ಕರ್ನಾಟಕ ರಾಜ್ಯಕ್ಕೆ ಅನ್ವಯಿಸಿ ತಿದ್ದುಪಡಿ ಮಾಡಲಾಗಿದೆ. ಕೇಂದ್ರ ಅಧಿನಿಯಮಕ್ಕೆ ತಿದ್ದುಪಡಿ ತಂದಿರುವುದರಿಂದ ಈ ಮಸೂದೆಯನ್ನು ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಕಳುಹಿಸಿ ಕೊಡಲಾಗಿತ್ತು.

ಇದನ್ನೂ ಓದಿ: ಶಾಲೆಗಳಿಂದ 100 ಮೀ. ವ್ಯಾಪ್ತಿಯಲ್ಲಿ ಸಿಗರೇಟ್ ನಿಷೇಧ, ದಂಡ ಹೆಚ್ಚಳ: ಮಸೂದೆ ಪಾಸ್

ರಾಷ್ಟ್ರಪತಿಗಳ ಅಂಕಿತದ ನಂತರ ಇದೀಗ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಇನ್ನು ಮುಂದೆ ರಾಜ್ಯದಲ್ಲಿ 21 ವಯೋಮಿತಿ ಒಳಗಿನ ವ್ಯಕ್ತಿಗಳಿಗೆ ಸಿಗರೇಟು, ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ.‌ ಪ್ರಸ್ತುತ ತಂಬಾಕು ಉತ್ಪನ್ನಗಳನ್ನು ಖರೀದಿಸುವುದಕ್ಕೆ ಕನಿಷ್ಠ ವಯೋಮಾನ 18 ಇದೆ. ಈಗ ಆ ವಯೋಮಾನವನ್ನು 21 ವರ್ಷಕ್ಕೆ ಏರಿಕೆ ಮಾಡಲಾಗಿದೆ. ಯಾವುದೇ ಶಿಕ್ಷಣ ಸಂಸ್ಥೆಯ 100 ಮೀಟರ್ ಸುತ್ತಳತೆಯೊಳಗಿನ ಪ್ರದೇಶದೊಳಗೆ, ಬಿಡಿಯಾಗಿ ಅಥವಾ ಒಂಟಿ ಕಡ್ಡಿಯಾಗಿ ಸಿಗರೇಟ್ ಮಾರಾಟವನ್ನು ನಿಷೇಧಿಸಲಾಗಿದೆ.

ಸಿಗರೇಟು ಅಥವಾ ಯಾವುದೇ ಇತರ ತಂಬಾಕು ಉತ್ಪನ್ನದ ಮಾರಾಟ ಮಾಡುವಂತಿಲ್ಲ. ಅಥವಾ ಮಾರಾಟಕ್ಕೆ ಅನುಮತಿ ನೀಡುವಂತಿಲ್ಲ.‌ ಸಾರ್ವಜನಿಕ ಸ್ಥಳದಲ್ಲಿ ತಂಬಾಕು ಉತ್ಪನ್ನಗಳ ಬಳಕೆಯನ್ನು ನಿಷೇಧಿಸಲಾಗಿದೆ‌. ಯಾವುದೇ ವ್ಯಕ್ತಿಯು ಸಾರ್ವಜನಿಕ ಸ್ಥಳದಲ್ಲಿ ತಂಬಾಕು ಉತ್ಪನ್ನವನ್ನು ಬಳಸುವಂತಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ಮತ್ತು ತಂಬಾಕು ಉಗಿಯುವಂತಿಲ್ಲ.

ಹುಕ್ಕಾ ಬಾರ್ ನಿಷೇಧ

ಈ ತಿದ್ದುಪಡಿ ಕಾಯ್ದೆ ಪ್ರಕಾರ ಹುಕ್ಕಾ ಬಾರ್ ತೆರೆಯುವುದು ಅಥವಾ ನಡೆಸುವುದಕ್ಕೆ ನಿಷೇಧಿಸಲಾಗಿದೆ. ಯಾರೇ ವ್ಯಕ್ತಿಯು ತಾನಾಗಿಯಾಗಲಿ ಅಥವಾ ಯಾರೇ ಇತರ ವ್ಯಕ್ತಿಯ ಪರವಾಗಿಯಾಗಲಿ ಉಪಹಾರ ಗೃಹ ಅಥವಾ ಪಬ್ ಅಥವಾ ಬಾರು ಅಥವಾ ರೆಸ್ಟೋರೆಂಟ್ ಒಳಗೊಂಡಂತೆ ಯಾವುದೇ ಸ್ಥಳದಲ್ಲಿ ಹುಕ್ಕಾ ಬಾರನ್ನು ತೆರೆಯುವಂತಿಲ್ಲ ಹಾಗೂ ನಡೆಸುವಂತಿಲ್ಲ.

ನಿಯಮ‌ ಉಲ್ಲಂಘಿಸಿದರೆ  ಎಷ್ಟು ದಂಡ?

ಸಾರ್ವಜನಿಕ ಸ್ಥಳದಲ್ಲಿ ಗುಟ್ಕಾ ಉಗುಳುವುದು, ಸಿಗರೇಟು ಸೇದಿ ನಿಯಮ‌ ಉಲ್ಲಂಘಿಸಿದವರಿಗೆ ದಂಡದ ಪ್ರಮಾಣವನ್ನು 200 ರೂ.ದಿಂದ  1,000 ರೂ.ಗೆ ಏರಿಕೆ ಮಾಡಲಾಗಿದೆ. ಇನ್ನು ಹುಕ್ಕಾ ಬಾರ್ ನಡೆಸಿ ನಿಯಮ ಉಲ್ಲಂಘಿಸುವವರಿಗೆ 1 ವರ್ಷದಿಂದ 3 ವರ್ಷ ಜೈಲು ಹಾಗೂ 50 ಸಾವಿರ ರೂಪಾಯಿದಿಂದ 1 ಲಕ್ಷ ರೂಪಾಯಿಗಳವರೆಗೆ ದಂಡ ವಿಧಿಸಲಾಗುತ್ತದೆ.

Published On - 11:02 am, Sat, 31 May 25

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ