ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರಲು ನೋಡೆಲ್ ಅಧಿಕಾರಿ ನೇಮಕ

Afghanistan Crisis: ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆಸಿಕೊಳ್ಳಲು ಕೇಂದ್ರ ಸರ್ಕಾರದ ಜೊತೆ ಸಮನ್ವಯತೆಗಾಗಿ ಐಪಿಎಸ್ ಅಧಿಕಾರಿ ಉಮೇಶ್ ಕುಮಾರ್ ಅವರನ್ನು ನೋಡೆಲ್ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.

ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರಲು ನೋಡೆಲ್ ಅಧಿಕಾರಿ ನೇಮಕ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ganapathi bhat

Updated on:Aug 18, 2021 | 7:41 PM

ಬೆಂಗಳೂರು: ತಾಲಿಬಾನ್ ಉಗ್ರರ ವಶದಲ್ಲಿರುವ ಅಫ್ಘಾನಿಸ್ಥಾನದಲ್ಲಿ ಅರಾಜಕತೆ ಉಂಟಾಗಿದೆ. ಅಲ್ಲಿನ ಪರಿಸ್ಥಿತಿಯಲ್ಲಿ ಬದುಕಲು ಸಾಧ್ಯವೇ ಇಲ್ಲವೆಂದು ಸಾವಿರಾರು ಜನರು ಈಗಾಗಲೇ ತಮ್ಮ ದೇಶಗಳಿಗೆ ವಾಪಾಸಾಗಿದ್ದಾರೆ. ಅಫ್ಘಾನ್ (Afghanistan) ದೇಶದ ಮಕ್ಕಳು, ಮಹಿಳೆಯರ ಪರಿಸ್ಥಿತಿಯಂತೂ ಚಿಂತಾಜನಕವಾಗಿದೆ. ಈಗಾಗಲೇ ಅಫ್ಘಾನಿಸ್ತಾನದಲ್ಲಿರುವ ಭಾರತದ ರಾಯಭಾರ ಕಚೇರಿಯ ಬಹುತೇಕ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಏರ್​ಲಿಫ್ಟ್​ (Airlift) ಮೂಲಕ ಕರೆತರಲಾಗಿದೆ. ಇನ್ನೂ ಹಲವು ಭಾರತೀಯರು ಅಲ್ಲಿ ಸಿಲುಕಿದ್ದು, ಅವರ ರಕ್ಷಣೆಗಾಗಿ ವಿದೇಶಾಂಗ ಸಚಿವಾಲಯದಿಂದ ಸಹಾಯವಾಣಿ (Helpline) ಹಾಗೂ ಇ-ಮೇಲ್ ಸೇವೆಯನ್ನು ಕೂಡ ಆರಂಭಿಸಲಾಗಿದೆ. ಇದರ ನಡುವೆ ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಕನ್ನಡಿಗರ ಬಗ್ಗೆ ಮಾಹಿತಿ ನೀಡಿ, ಅವರನ್ನು ಸುರಕ್ಷಿತವಾಗಿ ಕರೆಸಿಕೊಳ್ಳಲು ಕೇಂದ್ರ ಸರ್ಕಾರದ ಜೊತೆ ಸಮನ್ವಯತೆಗಾಗಿ ಐಪಿಎಸ್ ಅಧಿಕಾರಿ ಉಮೇಶ್ ಕುಮಾರ್ ಅವರನ್ನು ನೋಡೆಲ್ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.

ಬೆಂಗಳೂರಿನ ಸಿಐಡಿ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿರುವ ಐಪಿಎಸ್ ಅಧಿಕಾರಿ ಉಮೇಶ್ ಕುಮಾರ್ ಅವರನ್ನು ನೋಡೆಲ್ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ಇವರು ಭಾರತ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದು, ಅಫ್ಘಾನ್​ನಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಭಾರತಕ್ಕೆ ವಾಪಾಸ್ ಕರೆತರುವ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಈ ಕುರಿತು ಕರ್ನಾಟಕದ ರಾಜ್ಯಪಾಲ ಥಾವರಚಂದ ಗೆಹಲೋತ್ ಅವರ ಆದೇಶದ ಅನುಸಾರ ಉಮೇಶ್ ಕುಮಾರ್ ಅವರನ್ನು ನೋಡೆಲ್ ಅಧಿಕಾರಿಯಾಗಿ ನೇಮಿಸಲಾಗಿದೆ.

ಅಫ್ಘಾನಿಸ್ತಾನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜನ ಸಿಲುಕಿದ್ದಾರೆ. ಅಫ್ಘಾನಿಸ್ತಾನದಲ್ಲಿ ಕನ್ನಡಿಗರು ಮಾನಸಿಕ ಒತ್ತಡದಲ್ಲಿದ್ದಾರೆ. ಕನ್ನಡಿಗರನ್ನು ರಾಜ್ಯಕ್ಕೆ ಕರೆತರುವ ಕೆಲಸ ಮಾಡಬೇಕು. ಅದಕ್ಕಾಗಿ ಒಬ್ಬ ನೋಡಲ್ ಅಧಿಕಾರಿಯನ್ನು ನೇಮಕ ಮಾಡಬೇಕು. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಮನವಿ ಮಾಡಲಾಗಿದೆ ಎಂದು ವಿಧಾನಸೌಧದಲ್ಲಿ ಮಾಜಿ ಸಚಿವ ಯು.ಟಿ. ಖಾದರ್ ಇಂದು ಹೇಳಿಕೆ ನೀಡಿದ್ದರು. ನಮ್ಮ ಮನವಿಗೆ ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಅವರು ತಿಳಿಸಿದ್ದರು. ಅದರ ಬೆನ್ನಲ್ಲೇ ಇಂದು ನೋಡಲ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ.

ಅಫ್ಘಾನ್​ನಲ್ಲಿ ಅತಂತ್ರ ಸ್ಥಿತಿಯಲ್ಲಿರುವ ಭಾರತೀಯರನ್ನು ಸುರಕ್ಷಿತವಾಗಿ ನಮ್ಮ ದೇಶಕ್ಕೆ ಕರೆತರುವ ಸಲುವಾಗಿ ಭಾರತದ ವಿದೇಶಾಂಗ ಸಚಿವಾಲಯದಿಂದ ವಿಶೇಷ ಸಹಾಯವಾಣಿ ತೆರೆಯಲಾಗಿದೆ. ಕಳೆದ ಭಾನುವಾರ ರಾತ್ರಿ ತಾಲಿಬಾನ್‌ ಉಗ್ರರು ಅಧ್ಯಕ್ಷೀಯ ಭವನವನ್ನು ವಶಪಡಿಸಿಕೊಂಡ ಬಳಿಕ ಕಾಬೂಲ್‌ನಲ್ಲಿ ಆತಂಕ ಹೆಚ್ಚಾಗಿತ್ತು. ದೇಶದಲ್ಲಿ ಶಾಂತಿ ನೆಲೆಸಬೇಕು, ಜನರ ರಕ್ತಪಾತ ನಿಲ್ಲಬೇಕೆಂಬ ಕಾರಣ ನೀಡಿ ಅಫ್ಘಾನ್ ಅಧ್ಯಕ್ಷ ಅಶ್ರಫ್ ಘನಿ ತಮ್ಮ ಸ್ಥಾನದಿಂದ ಕೆಳಗಿಳಿದಿರುವುದಾಗಿ ಘೋಷಿಸಿದ್ದರು. ಅಫ್ಘಾನ್ ತಾಲಿಬಾನ್ ಉಗ್ರರ ವಶವಾದ ಬಳಿಕ ಅಲ್ಲಿನ ಜನರು ಬೇರೆ ದೇಶಗಳಿಂದ ಬರುವ ವಿಮಾನಗಳನ್ನು ಹತ್ತಿಕೊಂಡು ದೇಶ ಬಿಟ್ಟು ತೆರಳುತ್ತಿದ್ದಾರೆ. 10 ದಿನಗಳಲ್ಲಿ ಇಡೀ ಅಫ್ಘಾನಿಸ್ತಾನವನ್ನು ತಾಲಿಬಾನ್ ಉಗ್ರರು ಆಕ್ರಮಿಸಿಕೊಂಡಿದ್ದಾರೆ.

ಭಾರತದ ವಿದೇಶಾಂಗ ಸಚಿವಾಲಯದಿಂದ ಅಫ್ಘಾನ್​ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗಾಗಿ 919717785379 ಸಹಾಯವಾಣಿ ತೆರೆಯಲಾಗಿದೆ. ಹಾಗೇ, MEAHelpdeskIndia@gmail.com ಇಮೇಲ್ ಹೆಲ್ಪ್​ಲೈನ್ ಮೂಲಕ ಭಾರತಕ್ಕೆ ವಾಪಾಸ್ ಬರಲು ಬಯಸುವ ಅಫ್ಘಾನ್​ನಲ್ಲಿರುವ ಭಾರತೀಯರು ಭಾರತವನ್ನು ಸಂಪರ್ಕಿಸಬಹುದು.

ಇದನ್ನೂ ಓದಿ: MEA Helpline Number: ಅಫ್ಘಾನಿಸ್ತಾನದಲ್ಲಿ ಸಿಲುಕಿದ ಭಾರತೀಯರ ರಕ್ಷಣೆಗೆ ಸಹಾಯವಾಣಿ ಆರಂಭ

ಅಫ್ಘಾನ್ ತೊರೆಯೋ ಭರದಲ್ಲಿ ಮಗುವನ್ನೇ ಮರೆತ ಪೋಷಕರು; ಏರ್​ಪೋರ್ಟ್​ನಲ್ಲಿ ಅನಾಥವಾಯ್ತು 7 ತಿಂಗಳ ಕಂದಮ್ಮ

(Karnataka IPS Officer Umesh Kumar appointed as Nodal Officer to Rescue Kannadigas from Afghanistan)

Published On - 6:23 pm, Wed, 18 August 21

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ