ಖಾಲಿ ಹುದ್ದೆ ಭರ್ತಿಗೆ ರಾಜ್ಯ ಸರ್ಕಾರದ ಮುಂದಿರುವ ಸವಾಲುಗಳೇನು? ಇಲ್ಲಿದೆ ಮಾಹಿತಿ

ಕರ್ನಾಟಕದಲ್ಲಿ 2.84 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿಯಿದ್ದು, ಅವುಗಳನ್ನು ಭರ್ತಿ ಮಾಡಲು ಸರ್ಕಾರಕ್ಕೆ ಹಲವು ಸವಾಲುಗಳಿವೆ. ಒಳ ಮೀಸಲಾತಿ ಗೊಂದಲ, ಗ್ಯಾರಂಟಿ ಯೋಜನೆಗಳಿಂದಾದ ಆರ್ಥಿಕ ಹೊರೆ ಸೇರಿ ಕೆಲ ವಿಚಾರಗಳು ಸರ್ಕಾರಕ್ಕೆ ತಲೆನೋವಾಗಿ ಮಾರ್ಪಟ್ಟಿದೆ. ಈ ನಡುವೆ ಪೊಲೀಸ್​​ ಅನುಮತಿ ನಿರಾಕರಣೆ ನಡುವೆ ಧಾರವಾಡದಲ್ಲಿ ಪ್ರತಿಭಟನೆ ಹಿನ್ನೆಲೆ ಸಂಘಟನೆಗಳ ಮುಖಂಡರ ವಿರುದ್ಧ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಖಾಲಿ ಹುದ್ದೆ ಭರ್ತಿಗೆ ರಾಜ್ಯ ಸರ್ಕಾರದ ಮುಂದಿರುವ ಸವಾಲುಗಳೇನು? ಇಲ್ಲಿದೆ ಮಾಹಿತಿ
ಖಾಲಿ ಹುದ್ದೆ ಭರ್ತಿಗೆ ರಾಜ್ಯ ಸರ್ಕಾರದ ಮುಂದಿವೆ ಹಲವು ಸವಾಲು
Image Credit source: Google
Edited By:

Updated on: Feb 26, 2026 | 11:56 AM

ಬೆಂಗಳೂರು, ಫೆಬ್ರವರಿ 26: ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳು ಧಾರವಾಡದಲ್ಲಿ ಬೃಹತ್​​ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನೇಮಕಾತಿ ಪ್ರಕ್ರಿಯೆಗಳನ್ನು ಹಂತ ಹಂತವಾಗಿ ಶೀಘ್ರ ನಡೆಸುವ ಭರವಸೆ ಕೊಟ್ಟಿದ್ದಾರೆ. ಕಾಂಗ್ರೆಸ್​​ ನೇತೃತ್ವದ ಸರ್ಕಾರದ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಕಳೆದ 2.5 ವರ್ಷಗಳಲ್ಲಿ 40,000ಕ್ಕೂ ಹೆಚ್ಚು ನೇಮಕಾತಿಗಳನ್ನು ವಿವಿಧ ಇಲಾಖೆಗಳಲ್ಲಿ ಮಾಡಲಾಗಿದೆ. ಹಿಂದಿನ ಬಿಜೆಪಿ ಸರ್ಕಾರದ ನಿರ್ಲಕ್ಷ್ಯದಿಂದಲೇ ಹುದ್ದೆಗಳು ಖಾಲಿಯಾಗಿವೆ ಎಂದು ಅವರು ಆರೋಪಿಸಿದ್ದರು. ಅವರ ಈ ಹೇಳಿಕೆ ರಾಜಕೀಯ ಕಚ್ಚಾಟಕ್ಕೂ ಕಾರಣವಾಗಿತ್ತು. ಅಸಲಿಗೆ ಖಾಲಿ ಇರುವ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಸರ್ಕಾರದ ಮುಂದೀಗ ಸಾಲು ಸವಾಲುಗಳಿವೆ.

ಸರ್ಕಾರದ ಮುಂದಿರುವ ಸವಾಲುಗಳೇನು?

43 ಇಲಾಖೆಗಳಲ್ಲಿ ಸುಮಾರು 2.84 ಲಕ್ಷಕ್ಕೂ ಹೆಚ್ಚು ಹುದ್ದೆ ಖಾಲಿ ಇದ್ದರೆ, ನಿಗಮ ಮತ್ತು ಮಂಡಳಿಗಳನ್ನು ಸೇರಿಸಿದರೆ ಇವುಗಳ ಸಂಖ್ಯೆ 4 ಲಕ್ಷಕ್ಕೂ ಹೆಚ್ಚು. ಆದರೆ ಇವುಗಳ ಭರ್ತಿಗೆ ಅನೇಕ ತೊಡಕುಗಳು ಸರ್ಕಾರಕ್ಕೆ ಇವೆ. ಪರಿಶಿಷ್ಟ ಜಾತಿ ಆಂತರಿಕ ಮೀಸಲಾತಿ ನೀಡುವ ವಿಚಾರದ ಬಗ್ಗೆ ಸ್ಪಷ್ಟತೆ ಸಿಕ್ಕಿಲ್ಲ. ಒಳ ಮೀಸಲಾತಿ ಬಿಲ್ ಪಾಸ್ ಮಾಡಿದ್ರೂ ರಾಜ್ಯಪಾಲರಿಂದ ಒಪ್ಪಿಗೆ ಸಿಕ್ಕಿಲ್ಲ. ಕೆಲ ಅಂಶಗಳ ಕುರಿತು ಸ್ಪಷ್ಟನೆ ಕೋರಿ ಅವರು ವಾಪಸ್ ಕಳುಹಿಸಿದ್ದಾರೆ. ಇದರಿಂದ ಒಳ ಮೀಸಲಾತಿ ಇತ್ಯರ್ಥವಾಗದೆ ನೇಮಕಾತಿ ಮಾಡುವುದು ಸವಾಲಾಗಾಗಿದೆ. PSI ಹಗರಣದಂತಹ ದೊಡ್ಡ ಅಕ್ರಮ ವ್ಯವಸ್ಥೆ ಮೇಲಿನ ನಂಬಿಕೆ ಕುಗ್ಗಿಸಿರುವ ಜೊತೆಗೆ ಗ್ಯಾರಂಟಿ ಯೋಜನೆ ಅನುಷ್ಠಾನದ ನಡುವೆ ನೇಮಕಾತಿಯಿಂದ ಉಂಟಾಗುವ ವೇತನದ ಹೊರೆ ಭರಿಸುವ ತಲೆಬಿಸಿಯೂ ಎದುರಾಗಲಿದೆ. ಕೊವಿಡ್​ನಿಂದ ನೇಮಕಾತಿ ವಿಳಂಬ ಕಾರಣ ವಯೋಮಿತಿ‌ ಮೀರಿರುವ ಕಾರಣ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿಯನ್ನ ಸರ್ಕಾರ ಸಡಿಲಿಕೆ ಮಾಡಿದ್ದರೂ ನೇಮಕಾತಿ ವಿಚಾರದಲ್ಲಿನ ಸಮಸ್ಯೆಗಳು ಬಗೆಹರಿದಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಸಿಎಂ ಸ್ಪಂದನೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ ಸಿದ್ದರಾಮಯ್ಯ

ಹೋರಾಟ ನಡೆಸಿದವರಿಗೆ ಶಾಕ್​​?

ಪೊಲೀಸರ ಅನುಮತಿ ನಿರಾಕರಣೆ ನಡುವೆಯೂ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ ಹಿನ್ನೆಲೆ ವಿದ್ಯಾರ್ಥಿ ಸಂಘಟನೆ ಮುಖಂಡರ ಮೇಲೆ ಕೇಸು ದಾಖಲಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರೊಟೆಸ್ಟ್​​ ಹಿನ್ನೆಲೆ ಧಾರವಾಡದ ಜುಬಿಲಿ ವೃತ್ತದಲ್ಲಿ ಸುಮಾರು ನಾಲ್ಕು ಗಂಟೆಗಳ ಕಾಲ ಸಾರ್ವಜನಿಕರಿಗೆ ತೊಂದರೆಯಾಗಿದೆ. ಅಲ್ಲದೆ ಪ್ರತಿಭಟನಾ ಮೆರವಣಿಗೆ ವೇಳೆ ಕೆಲ ಅಹಿತಕರ ಘಟನೆಗಳು ನಡೆದಿವೆ. ಕೆಲ ಯುವಕರು ಪೊಲೀಸರ ಜೊತೆಗೂ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾಗಿದ್ದು, ಹೀಗಾಗಿ ಸಂಘಟನೆ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಲು ಸಿದ್ಧತೆ ನಡೆದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
Loading...
Unable to load recommendations.
Follow Us