AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Jobs: ಬೆಳಗಾವಿ ಜಿಲ್ಲಾ ಪಂಚಾಯತ್​ನಲ್ಲಿ ಉದ್ಯೋಗವಕಾಶ; 17 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಳಗಾವಿ ಜಿಲ್ಲಾ ಪಂಚಾಯತ್ 2026ನೇ ಸಾಲಿನ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಜಿಲ್ಲಾ ವ್ಯವಸ್ಥಾಪಕ ಮತ್ತು ಕ್ಲಸ್ಟರ್ ಸೂಪರ್‌ವೈಸರ್ ಸೇರಿದಂತೆ ಒಟ್ಟು 17 ಹುದ್ದೆಗಳು ಖಾಲಿ ಇವೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ. ಜುಲೈ 15 ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್​ಸೈಟ್​​ಗೆ ಭೇಟಿ ನೀಡಿ.

Karnataka Jobs: ಬೆಳಗಾವಿ ಜಿಲ್ಲಾ ಪಂಚಾಯತ್​ನಲ್ಲಿ ಉದ್ಯೋಗವಕಾಶ; 17 ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಳಗಾವಿ ಜಿಲ್ಲಾ ಪಂಚಾಯತ್​ನಲ್ಲಿ ಉದ್ಯೋಗವಕಾಶImage Credit source: Getty Images
ಅಕ್ಷತಾ ವರ್ಕಾಡಿ
|

Updated on:Jul 10, 2026 | 3:41 PM

Share

ಮುಖ್ಯಾಂಶಗಳು

  • ಬೆಳಗಾವಿ ಜಿಲ್ಲಾ ಪಂಚಾಯತ್ 2026ನೇ ಸಾಲಿನ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.
  • ಜಿಲ್ಲಾ ವ್ಯವಸ್ಥಾಪಕ ಮತ್ತು ಕ್ಲಸ್ಟರ್ ಸೂಪರ್‌ವೈಸರ್ ಸೇರಿದಂತೆ ಒಟ್ಟು 17 ಹುದ್ದೆಗಳು ಖಾಲಿ ಇವೆ.
  • ಜು. 15 ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್​ಸೈಟ್​​ಗೆ ಭೇಟಿ ನೀಡಿ.

ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಬೆಳಗಾವಿ ಜಿಲ್ಲಾ ಪಂಚಾಯತ್ (Belagavi Zilla Panchayat) ವತಿಯಿಂದ ಉತ್ತಮ ಅವಕಾಶ ದೊರೆತಿದೆ. 2026ನೇ ಸಾಲಿನ ವಿವಿಧ ಹುದ್ದೆಗಳ ಭರ್ತಿಗಾಗಿ ಒಟ್ಟು 17 ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಈ ನೇಮಕಾತಿ ಪ್ರಕ್ರಿಯೆಯಡಿ ವಿವಿಧ ವಿಭಾಗಗಳಲ್ಲಿ ಒಟ್ಟು 17 ಹುದ್ದೆಗಳು ಭರ್ತಿಯಾಗಲಿವೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಾನುಸಾರ ನೇಮಕಾತಿ ಮಾಡಲಾಗುತ್ತದೆ.

ವಿದ್ಯಾರ್ಹತೆ ಏನು?

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಶಿಕ್ಷಣ ಸಂಸ್ಥೆಯಿಂದ ಪದವಿ ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ಹುದ್ದೆಗೆ ಅನುಗುಣವಾಗಿ ನಿಗದಿಪಡಿಸಿರುವ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು.

ವಯೋಮಿತಿ:

ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 45 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ದೊರೆಯಲಿದೆ.

ವೇತನ ಎಷ್ಟು?

ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಯ ಆಧಾರದ ಮೇಲೆ ತಿಂಗಳಿಗೆ 18,000 ರಿಂದ 30,000 ರೂ. ವರೆಗೆ ವೇತನ ನೀಡಲಾಗುತ್ತದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ. ಸಾಮಾನ್ಯ, 2A, 2B, 3A, 3B, ಎಸ್‌ಸಿ, ಎಸ್‌ಟಿ ಹಾಗೂ ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವಿಲ್ಲದೆ ಅರ್ಜಿ ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ ಹೇಗಿರಲಿದೆ?

ಅಭ್ಯರ್ಥಿಗಳ ಆಯ್ಕೆಯನ್ನು ಇಲಾಖೆಯ ನಿಯಮಾನುಸಾರ ಸಂದರ್ಶನದ ಮೂಲಕ ನಡೆಸಲಾಗುತ್ತದೆ. ಅಂತಿಮ ಆಯ್ಕೆ ಸಂದರ್ಶನದಲ್ಲಿ ಅಭ್ಯರ್ಥಿಗಳ ಸಾಧನೆ ಮತ್ತು ಅರ್ಹತೆಯ ಆಧಾರದ ಮೇಲೆ ನಡೆಯಲಿದೆ.

ಇದನ್ನೂ ಓದಿ: ಕರ್ನಾಟಕ ಅರಣ್ಯ ಇಲಾಖೆಯಲ್ಲಿ 750 ಅರಣ್ಯ ವೀಕ್ಷಕ ಹುದ್ದೆಗಳಿಗೆ ನೇಮಕಾತಿ; 10th ಪಾಸಾಗಿದ್ರೆ ಸಾಕು!

ಅರ್ಜಿ ಸಲ್ಲಿಸುವ ವಿಧಾನ:

ಅರ್ಹ ಅಭ್ಯರ್ಥಿಗಳು ಬೆಳಗಾವಿ ಜಿಲ್ಲಾ ಪಂಚಾಯತ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳುವುದು ಸೂಕ್ತ.

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 01-07-2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-07-2026

ಅಭ್ಯರ್ಥಿಗಳಿಗೆ ಪ್ರಮುಖ ಸೂಚನೆ:

ಅರ್ಜಿ ಸಲ್ಲಿಸುವ ವೇಳೆ ಅಗತ್ಯ ದಾಖಲೆಗಳನ್ನು ಸರಿಯಾಗಿ ಅಪ್‌ಲೋಡ್ ಮಾಡಬೇಕು ಹಾಗೂ ನೀಡುವ ಮಾಹಿತಿಯು ನಿಖರವಾಗಿರಬೇಕು. ಅಪೂರ್ಣ ಅಥವಾ ತಪ್ಪಾದ ಮಾಹಿತಿಯಿರುವ ಅರ್ಜಿಗಳನ್ನು ಇಲಾಖೆಯು ತಿರಸ್ಕರಿಸಬಹುದು. ಆದ್ದರಿಂದ ಕೊನೆಯ ದಿನಾಂಕದವರೆಗೆ ಕಾಯದೆ ಮುಂಚಿತವಾಗಿಯೇ ಅರ್ಜಿ ಸಲ್ಲಿಸುವುದು ಒಳಿತು.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:39 pm, Fri, 10 July 26

Follow Us