ಬೆಂಗಳೂರು: ಗುಜರಾತ್‌ನ (Gujarat) ಅಮುಲ್ (Amul) ಮತ್ತು ಕರುನಾಡಿನ ಕೆಎಂಎಫ್ (KMF) ನಂದಿನಿ ಹಾಲು (Nandini Milk) ಒಕ್ಕೂಟ ವಿಚಾರವಾಗಿ ರಾಜ್ಯದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಬಿಜೆಪಿಯವರು (BJP) ನಂದಿನಿಯನ್ನು ಅಮುಲ್ನಲ್ಲಿ, ವಿಲೀನ ಮಾಡಲು ಮುಂದಾಗಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ (Congress) ನಾಯಕರು ಆರೋಪ ಮಾಡುತ್ತಿದ್ದಾರೆ. ಇನ್ನು ರಾಜ್ಯದಲ್ಲಿ ಅಮುಲ್ ಕಂಪನಿಯ ಐಸ್ಕ್ರೀಂ ಸೇರಿದಂತೆ ಹಲವು ಉತ್ಪನ್ನಗಳು ಮಾರಾಟವಾಗುತ್ತಿವೆ. ಇದರ ಜೊತೆಗೆ ಈಗ ಅಮುಲ್ ಮೊಸರು ಮತ್ತು ಹಾಲನ್ನು ಮಾರಾಟ ಮಾಡಲು ಮುಂದಾಗಿದ್ದು, ಇದನ್ನು ವಿರೋಧಿಸಿ ಸಾಮಾಜಿ ಜಾಲತಾಣದಲ್ಲಿ (Social Media) ಸಾರ್ವಜನಿಕರು ಅಭಿಯಾನ ಆರಂಭಿಸಿದ್ದಾರೆ. #SaveNandiKMF ಎಂದು ನಂದಿನಿ ಹಾಲು, ಮೊಸರನ್ನಲ್ಲದೆ ಬೇರೆ ಬ್ರ್ಯಾಂಡ್ ಬಳಸುವುದಿಲ್ಲ. ಕೆಎಂಎಫ್ ಉತ್ಪನ್ನ ಬಳಸೋಣ ಎಂದು ಶಪಥಗೈಯುತ್ತಿದ್ದಾರೆ.
ಈಗ ನಂದಿನಿ ಜಾಗವನ್ನು ಅಮುಲ್ ಆಕ್ರಮಿಸಲು ಬರುತ್ತಿದೆ. ನಮ್ಮ ನಂದಿನಿಯನ್ನು ಈಗ ಕನ್ನಡಿಗರಾದ ನಾವೇ ಕಾಪಾಡಿಕೊಳ್ಳಬೇಕು. ನಂದಿನಿಯನ್ನಷ್ಟೇ ಬಳಸೋಣ ಎಂದು ಸೋಷಿಯಲ್ ಮೀಡಿಯಾದಲ್ಲಿ ಜನರು ಕರೆ ನೀಡುತ್ತಿದ್ದಾರೆ.
ಇದನ್ನೂ ಓದಿ: ನಂದಿನಿ ರಾಷ್ಟ್ರ ಮಟ್ಟದ ಬ್ರ್ಯಾಂಡ್, ಕಾಂಗ್ರೆಸ್ನಿಂದ ಅಮುಲ್ ವಿಚಾರದಲ್ಲಿ ರಾಜಕೀಯ; ಸಿಎಂ ಬೊಮ್ಮಾಯಿ
“ಗುಜರಾತ್‌ನ ಅಮುಲ್‌ಗೆ, ಕೆಎಂಎಫ್ ವಿಲೀನ ಮಾಡಲು ಷಡ್ಯಂತ್ರ ನಡೆಯುತ್ತಿದೆ. ಬಿಜೆಪಿಯ ಷಡ್ಯಂತ್ರ ಈಗ ಸ್ಪಷ್ಟವಾಗಿದೆ. ಅಮುಲ್ನಲ್ಲಿ ಕೆಎಂಎಫ್ ವಿಲೀನ ಮಾಡಲಾಗುತ್ತೆದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಿದ್ದರು. ಈಗ ಅಮಿತ್ ಶಾ ಹೇಳಿಕೆಯನ್ನು ಶೋಭಾ ಕರಂದ್ಲಾಜೆ ಬೆಂಬಲಿಸಿದ್ದಾರೆ. ನಂದಿನಿ ಇಳಿಕೆ, ಅಮುಲ್ ಗಳಿಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರ ಮೂಕ ಬಸವ. ನಂದಿನಿ ಉಳಿಸಿ, ಬಿಜೆಪಿ ಓಡಿಸಿ” ಎಂದು ಟ್ವೀಟ್ ಮೂಲಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಗುಜರಾತ್‌ನ ಅಮುಲ್ ಉತ್ಪನ್ನಗಳ ಮಾರಾಟ ವಿಚಾರವಾಗಿ ಟ್ವಿಟರ್ ಮೂಲಕ ಬಿಜೆಪಿ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. “ಕನ್ನಡಿಗರ ಜೀವನಾಡಿ ಕೆಎಂಎಫ್ ಮುಗಿಸಲು 3ನೇ ಸಂಚು ನಡೆದಿದೆ. ಮೊದಲನೇ ಸಂಚು ಅಮುಲ್ ಜತೆ ಕೆಎಂಎಫ್ ವಿಲೀನ. ಅಮುಲ್ ಜತೆ ಕೆಎಂಎಫ್ ವಿಲೀನ ಎಂದು ಅಮಿತ್ ಶಾ ಹೇಳಿದ್ದರು. 2ನೇ ಸಂಚು ಮೊಸರಿನ ಪಾಕೆಟ್ ಮೇಲೆ ಹಿಂದಿಯ ‘ದಹಿ’ ಪದ ಮುದ್ರಣ. ಕನ್ನಡಿಗರ ತೀವ್ರ ವಿರೋಧದಿಂದ ಎರಡೂ ಸಂಚು ವಿಫಲವಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.
ಕನ್ನಡಿಗರ ಜೀವನಾಡಿ ನಂದಿನಿಯನ್ನು ಮುಗಿಸಲು ಈಗ ನಡೆದಿದೆ 3ನೇ ಸಂಚು.
ಸಂಚು1: ಅಮುಲ್ ಜತೆ ನಂದಿನಿ ವಿಲೀನ; ಕೇಂದ್ರ ಗೃಹ ಸಚಿವ @AmitShah ಹೇಳಿಕೆ
ಸಂಚು2: ಮೊಸರಿನ ಮೇಲೆ ಹಿಂದಿಯ ‘ದಹಿ’ ಪದ ಮುದ್ರಣಕನ್ನಡಿಗರ ತೀವ್ರ ವಿರೋಧದಿಂದ ಎರಡೂ ಸಂಚು ವಿಫಲ. 3ನೇ ಸಂಚು ಸಫಲಗೊಳಿಸಲು ಅಮುಲ್ ಮೂಲಕ ಕೇಂದ್ರ ಸರಕಾರ ಹೊರಟಿದೆ. 1/10#ನಂದಿನಿಉಳಿಸಿ
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 8, 2023
3ನೇ ಸಂಚು ಸಫಲಗೊಳಿಸಲು ಅಮುಲ್ ಮೂಲಕ ಕೇಂದ್ರ ಹೊರಟಿದೆ. ಕೆಎಂಎಫ್ಗೆ ಅಡ್ಡಿ ಮಾಡಬೇಕೆನ್ನುವುದು ಅಮುಲ್ ದುರಾಲೋಚನೆ. ‘ಒಂದು ದೇಶ, ಒಂದು ಅಮುಲ್, ಒಂದೇ ಹಾಲು, ಒಂದೇ ಗುಜರಾತ್’ ಇದು ಕೇಂದ್ರ ಸರ್ಕಾರದ ಅಧಿಕೃತ ನೀತಿಯಂತಿದೆ. ಅದಕ್ಕೆ ಅಮುಲ್‌ಗೆ ಒತ್ತಾಸೆಯಾಗಿ ನಿಂತು ಕೆಎಂಎಫ್ ಕತ್ತು ಹಿಚುಕುತ್ತಿದೆ. ಈಗ ಅಮುಲ್ ಹಿಂಬಾಗಿಲ ಮೂಲಕ ಒಳನುಗ್ಗುತ್ತಿದೆ ಎಂದು ಕಿಡಿಕಾರಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:50 am, Sat, 8 April 23