AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಎಸ್ ಮರುಪರೀಕ್ಷೆ ನಡೆಸುವಂತೆ ಸಿಎಂ ಸಿದ್ದರಾಮಯ್ಯಗೆ ವಿಜಯೇಂದ್ರ ಪತ್ರ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕೆಎಎಸ್ ಪೂರ್ವಭಾವಿ ಪರೀಕ್ಷೆಯಲ್ಲಿನ ಗೊಂದಲ, ಲೋಪಗಳು ಮತ್ತು ಭಾಷಾಂತರ ದೋಷಗಳನ್ನು ಖಂಡಿಸಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ, ಎಲ್ಲಾ ಅಭ್ಯರ್ಥಿಗಳಿಗೂ ಮರು ಪರೀಕ್ಷೆ ನಡೆಸುವಂತೆ ಒತ್ತಾಯಿಸಿದ್ದಾರೆ. ಕೆಪಿಎಸ್ಸಿ ಅಸಮರ್ಥತೆಯನ್ನು ಪತ್ರದಲ್ಲಿ ಟೀಕಿಸಲಾಗಿದೆ.

ಕೆಎಎಸ್ ಮರುಪರೀಕ್ಷೆ ನಡೆಸುವಂತೆ ಸಿಎಂ ಸಿದ್ದರಾಮಯ್ಯಗೆ ವಿಜಯೇಂದ್ರ ಪತ್ರ
ಬಿವೈ ವಿಜಯೇಂದ್ರ
ಕಿರಣ್​ ಹನಿಯಡ್ಕ
| Edited By: |

Updated on: Apr 26, 2025 | 5:22 PM

Share

ಬೆಂಗಳೂರು, ಏಪ್ರಿಲ್​ 26: ಕೆಎಎಸ್ (KAS) ಪೂರ್ವಭಾವಿ ಪರೀಕ್ಷೆಯಲ್ಲಿ ಗೊಂದಲ, ಲೋಪಗಳು, ಭಾಷಾಂತರ ದೋಷಗಳು ಪುನರಾವರ್ತನೆಯಾಗಿವೆ. ಈ ಹಿನ್ನೆಲೆಯಲ್ಲಿ ಕೆಎಎಸ್ ಪೂರ್ವಭಾವಿ ಮರುಪರೀಕ್ಷೆ ನಡೆಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿವೈ ವಿಜಯೇಂದ್ರ (BY Vijayendra) ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಪತ್ರದಲ್ಲಿ ಏನಿದೆ?

“ಕರ್ನಾಟಕ ಲೋಕಸೇವಾ ಆಯೋಗ ನಡೆಸುತ್ತಿರುವ ಬಹುತೇಕ ಪರೀಕ್ಷೆಗಳಲ್ಲಿ ಗೊಂದಲ, ಲೋಪಗಳು, ಭಾಷಾಂತರ ದೋಷಗಳು ಪುನರಾವರ್ತನೆಯಾಗುತ್ತಲೇ ಇರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ನಾಚಿಕೆಗೇಡಿನ ವಿಷಯವಾಗಿದೆ. ಈ ಹಿಂದೆ ಕನ್ನಡ ಭಾಷಾ ಪರೀಕ್ಷಾರ್ಥಿಗಳ ಪ್ರಶ್ನೆಪತ್ರಿಕೆಗಳನ್ನು ಸಮರ್ಪಕವಾಗಿ ಭಾಷಾಂತರಿಸದೆ ಎಡವಟ್ಟು ಮಾಡಿ ಲಕ್ಷಾಂತರ ಪರೀಕ್ಷಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿತ್ತು” ಎಂದು ಪತ್ರದಲ್ಲಿ ಬರೆದಿದ್ದಾರೆ.

“ಕರ್ನಾಟಕದ ಮಾತೃಭಾಷೆಯಲ್ಲಿಯೇ ದೋಷಪೂರಿತ ಪ್ರಶ್ನೆಗಳನ್ನು ನೀಡಿ ಕೆಎಎಸ್ ಪರೀಕ್ಷಾರ್ಥಿಗಳನ್ನು ಆತಂಕ ಹಾಗೂ ಗೊಂದಲಕ್ಕೆ, ದೂಡುತ್ತಿರುವ ಆಯೋಗದ ಪರಿ ಕ್ಷಮೆಗೆ ಅರ್ಹವಲ್ಲದ ನಡೆಯಾಗಿದೆ. ಸಂಬಂಧಿಸಿದವರ ಬೇಜವಾಬ್ದಾರಿತನ ಪದೇ ಪದೇ ಮರುಕಳಿಸುತ್ತಿರುವುದು ಕೆಪಿಎಸ್​ಸಿ ವೈಫಲ್ಯ ಹಾಗೂ ರಾಜ್ಯ ಸರ್ಕಾರದ ಅಸಮರ್ಥ ಆಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ” ಎಂದು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ
Image
ಸುತ್ತೂರು ಮಠದಲ್ಲಿ ಮಗುವಿಗೆ ನಾಮಕರಣ ಮಾಡಿದ ಸಿದ್ದರಾಮಯ್ಯ
Image
ಮಲೆ ಮಹದೇಶ್ವರ ಬೆಟ್ಟ ಇನ್ಮುಂದೆ ಪಾನ ಮುಕ್ತ: ಸಿಎಂ ಸಿದ್ದರಾಮಯ್ಯ ಘೋಷಣೆ
Image
ಕೇಂದ್ರದ ಜತೆ ನಾವಿದ್ದೇವೆ, ಉಗ್ರರನ್ನು ಸಂಪೂರ್ಣ ಮಟ್ಟ ಹಾಕಿ: ಸಿದ್ದರಾಮಯ್ಯ
Image
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ

“ಇತ್ತೀಚೆಗೆ ನಡೆದ ಪೂರ್ವಬಾವಿ ಪರೀಕ್ಷೆಯಲ್ಲಿನ ಮರುವರೀಕ್ಷೆಯ 2 ಪತ್ರಿಕೆಗಳಲ್ಲಿ 79 ದೋಷಗಳಿದ್ದರೂ ಕೆ.ಪಿ.ಎಸ್.ಸಿ. ಕೇವಲ 5 ಪ್ರಶ್ನೆಗಳಿಗೆ ಮಾತ್ರ ಕೃಪಾಂಕ ನೀಡುವ ಮೂಲಕ ಕನ್ನಡ ಮಾಧ್ಯಮದ ಪರೀಕ್ಷಾರ್ಥಿಗಳಿಗೆ ಅನ್ಯಾಯ ಮಾಡಿದೆ. ಕೆ.ಪಿ.ಎಸ್.ಸಿ.ಯ ನಿರಂತರ ಎಡವಟ್ಟುಗಳನ್ನು ಸಹಿಸದೇ ಪರೀಕ್ಷಾರ್ಥಿಗಳು ನ್ಯಾಯಾಲಯದ ಮೊರೆ ಹೋಗಿದ್ದರು. ಈ ಹಿಂದೆ ತಾವು ಸದನದಲ್ಲಿ ಹೇಳಿದ್ದಂತೆ ನ್ಯಾಯಾಲಯದ ತೀರ್ಪು ಬಂದ ಕೂಡಲೇ ಪರೀಕ್ಷಾರ್ಥಿಗಳಿಗೆ ಆಗಿರುವ ಅನ್ಯಾಯ ಸರಿಪಡಿಸುವುದಾಗಿ ತಿಳಿಸಿದ್ದೀರಿ” ಎಂದು ಪತ್ರದಲ್ಲಿದೆ.

ಇದನ್ನೂ ನೋಡಿ: ಪಾಕಿಸ್ತಾನದ ಜೊತೆ ಯುದ್ಧ ಮಾಡುವ ಅನಿವಾರ್ಯತೆ ಇಲ್ಲ, ನಾನು ಯುದ್ಧದ ಪರ ಅಲ್ಲ: ಸಿದ್ದರಾಮಯ್ಯ

“ಸದ್ಯ ಘನ ನ್ಯಾಯಾಲಯ 34 ಅಭ್ಯರ್ಥಿಗಳಿಗೆ ಮರುಪರೀಕ್ಷೆಗೆ ಹಾಜರಾಗಲು ಅವಕಾಶ ಕಲ್ಪಿಸಿದೆ. ಆದರೆ ಉಳಿದ ಅಭ್ಯರ್ಥಿಗಳ ಭವಿಷ್ಯದ ಬಗ್ಗೆ ತಾವು ಗಂಭೀರವಾಗಿ ಚಿಂತಿಸಿ ಎಲ್ಲಾ ಅಭ್ಯರ್ಥಿಗಳಿಗೂ ಮರುಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವುದು ನ್ಯಾಯೋಚಿತಕ್ರಮವಾಗುತ್ತದೆ. ಈ ನಿಟ್ಟಿನಲ್ಲಿ ತಾವು ಜರೂರು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುವೆ. ತಮ್ಮ ಭವ್ಯ ಭವಿಷ್ಯದ ಕನಸು ಹೊತ್ತು ಪರೀಕ್ಷೆ ಎದುರಿಸುವ ಅವಕಾಶಕ್ಕಾಗಿ ಪರಿತಪಿಸುತ್ತಿರುವ ಯುವಜನರ ನಿರೀಕ್ಷೆ ತಾವು ಹುಸಿಗೊಳಿಸುವುದಿಲ್ಲ ಎಂದು ನಂಬಿರುವೆ” ಎಂದು ಪತ್ರ ಬರೆದಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್