ಕರ್ನಾಟಕದ ಜನತೆಗೆ ವಿದ್ಯುತ್ ದರ ಏರಿಕೆ ಶಾಕ್: ಎಷ್ಟು? ಎಂದಿನಿಂದ ಜಾರಿ? ಇಲ್ಲಿದೆ ವಿವರ

Electricity Hikes: ಸದ್ಯ ರಾಜ್ಯದಲ್ಲಿ ಬೆಲೆ ಏರಿಕೆಯ ನಡುವೆ ಇದೀಗ ಜನರಿಗೆ ವಿದ್ಯುತ್ ದರ ಏರಿಕೆ ಶಾಕ್​​ ಎದುರಾಗಿದೆ. ಈ ಬಗ್ಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು ಮಹತ್ವದ ಆದೇಶ ಹೊರಡಿಸಿದೆ. ಪ್ರತಿ ಯೂನಿಟ್​ಗೆ ಎಷ್ಟು ಏರಿಕೆ ಆಗಿದೆ, ಯಾವಾಗಿನಿಂದ ಹೊಸ ದರ ಅನ್ವಯವಾಗಲಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಕರ್ನಾಟಕದ ಜನತೆಗೆ ವಿದ್ಯುತ್ ದರ ಏರಿಕೆ ಶಾಕ್: ಎಷ್ಟು? ಎಂದಿನಿಂದ ಜಾರಿ? ಇಲ್ಲಿದೆ ವಿವರ
KERC
Image Credit source: saurenergy

Updated on: Apr 17, 2026 | 8:55 PM

ಬೆಂಗಳೂರು, ಏಪ್ರಿಲ್​ 17: ಕರ್ನಾಟಕದ ಗೃಹಬಳಕೆ ವಿದ್ಯುತ್ ಗ್ರಾಹಕರಿಗೆ ಮತ್ತೊಮ್ಮೆ ದರ ಏರಿಕೆಯ (electricity hike) ಶಾಕ್ ಎದುರಾಗಿದೆ. ವಿದ್ಯುತ್ ದರವನ್ನು ಹೆಚ್ಚಿಸಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು (KERC) ಶುಕ್ರವಾರ ಮಹತ್ವದ ಆದೇಶ ಹೊರಡಿಸಿದೆ. ಒಂದು ಯೂನಿಟ್‌ಗೆ 56 ಪೈಸೆ ಹೆಚ್ಚಳ ಮಾಡಲಾಗಿದೆ. ಆ ಮೂಲಕ ರಾಜ್ಯದ ಜನರಿಗೆ ಕರೆಂಟ್​ ಶಾಕ್​ ನೀಡಲಾಗಿದೆ.

ದರ ಏರಿಕೆಗೆ ಕಾರಣವೇನು?

ರಾಜ್ಯದ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳು (ಎಸ್ಕಾಂಗಳು) ನಷ್ಟದ ಭೀತಿಯಿಂದ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದವು. 2024-25ರ ಆರ್ಥಿಕ ವರ್ಷದಲ್ಲಿ ವಿದ್ಯುತ್ ಮಾರಾಟದಿಂದ ಆಯೋಗವು ಸುಮಾರು 34,084 ಕೋಟಿ ರೂಪಾಯಿ ಆದಾಯದ ನಿರೀಕ್ಷೆ ಇಟ್ಟುಕೊಂಡಿತ್ತು. ಆದರೆ ವಾಸ್ತವದಲ್ಲಿ 32,019 ಕೋಟಿ ರೂಪಾಯಿ ಮಾತ್ರ ಸಂಗ್ರಹವಾಗಿದ್ದು, ಸುಮಾರು 2,068 ಕೋಟಿ ರೂಪಾಯಿಗಳಷ್ಟು ಬೃಹತ್ ಆದಾಯದ ಕೊರತೆಯುಂಟಾಗಿದೆ. ಈ ಆರ್ಥಿಕ ಕೊರತೆಯನ್ನು ಸರಿದೂಗಿಸಲು ಗ್ರಾಹಕರಿಂದಲೇ ಹಣ ಸಂಗ್ರಹಿಸಲು ಆಯೋಗವು ಅನುಮತಿ ನೀಡಿದೆ.

ನೂತನ ದರ ಯಾವಾಗ ಅನ್ವಯ?

ಈ ನೂತನ ದರ ಏರಿಕೆಯೂ ಇದೇ ಮೇ ತಿಂಗಳಿನಿಂದ ಜಾರಿಗೆ ಬರಲಿದೆ. ಅಂದರೆ ಗ್ರಾಹಕರು ಮೇ ತಿಂಗಳಲ್ಲಿ ಪಡೆಯುವ ಬಿಲ್‌ನಲ್ಲಿ ಪ್ರತಿ ಯೂನಿಟ್‌ಗೆ 56 ಪೈಸೆಯಷ್ಟು ಹೆಚ್ಚುವರಿ ಮೊತ್ತವನ್ನು ಪಾವತಿಸಬೇಕಾಗುತ್ತದೆ.

ಇದನ್ನೂ ಓದಿ: ಏಪ್ರಿಲ್ 1 ರಿಂದ ವಿದ್ಯುತ್ ದರ ಏರಿಕೆ ಶಾಕ್​​: ಎಸ್ಕಾಂಗಳಿಂದ ಹಳೆ ಬಾಕಿ ವಸೂಲಿ; ಯಾವ ವರ್ಗಕ್ಕೆ ಎಷ್ಟು ದರ ಏರಿಕೆ?

ಬೆಲೆ ಏರಿಕೆಯ ನಡುವೆಯೇ ಇದೀಗ ವಿದ್ಯುತ್ ದರ ಕೂಡ ಏರಿಕೆಯಾಗಿದೆ. KERC ಆದೇಶದಂತೆ ಗೃಹಬಳಕೆ ಗ್ರಾಹಕರಿಗೆ ಹೆಚ್ಚುವರಿ ಹೊರೆ ಬೀಳಲಿದೆ. ಇದರಿಂದ ಗೃಹಬಳಕೆ ಗ್ರಾಹಕರ ತಿಂಗಳ ವಿದ್ಯುತ್ ಬಿಲ್​​​ನಲ್ಲಿ ಹೆಚ್ಚುವರಿ ಹೊರೆ ಬೀಳಲಿದೆ. ವಿಶೇಷವಾಗಿ ಮಧ್ಯಮ ವರ್ಗ ಮತ್ತು ಕಡಿಮೆ ಆದಾಯದ ಕುಟುಂಬಗಳಿಗೆ ಇದು ಮತ್ತೊಂದು ಆರ್ಥಿಕ ಒತ್ತಡವಾಗಲಿದೆ.

ಇದನ್ನೂ ಓದಿ: ದಾಖಲೆ ಬರೆದ ರಾಜ್ಯದ ವಿದ್ಯುತ್ ಬೇಡಿಕೆ: ಬೆಂಗಳೂರಿನ ಎಸಿ ಅಬ್ಬರಕ್ಕೆ ಬೆವರುತ್ತಿದೆ ಪವರ್ ಗ್ರಿಡ್!

ಒಟ್ಟಿನಲ್ಲಿ ವಿದ್ಯುತ್ ದರದಿಂದ ಸಾಮಾನ್ಯ ಜನರ ಬದುಕಿನ ವೆಚ್ಚ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ. ಮೇ ತಿಂಗಳ ಬಿಲ್‌ನಿಂದಲೇ ಈ ಹೊರೆ ಅನುಭವಿಸಬೇಕಾಗಿದೆ.

ವರದಿ: ನಟರಾಜ್ ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:34 pm, Fri, 17 April 26

ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Loading...
Unable to load recommendations.
Follow Us