ಕ್ರಿಸ್‌ಮಸ್: ಹೆಚ್ಚುವರಿ ಕೆಎಸ್ಆರ್‌ಟಿಸಿ ಬಸ್, ಟಿಕೆಟ್ ದರದಲ್ಲಿ ಶೇ.10 ರಷ್ಟು ಡಿಸ್ಕೌಂಟ್
KSRTC special buses:ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಆರ್‌ಟಿಸಿ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದೆ. ಡಿಸೆಂಬರ್ 22 ರಿಂದ 24 ರವರೆಗೆ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳು ಮತ್ತು ಅಕ್ಕ-ಪಕ್ಕದ ರಾಜ್ಯಗಳಿಗೆ ಈ ಬಸ್‌ಗಳು ಸಂಚಾರ ನಡೆಸಲಿವೆ. ಇದರ ಜೊತೆ ಟಿಕೆಟ್ ದರದಲ್ಲಿ ರಿಯಾಯಿತಿ ನೀಡಿದೆ.
ಬೆಂಗಳೂರು, (ಡಿಸೆಂಬರ್ 19): ಕ್ರಿಸ್ ಮಸ್ ಹಬ್ಬದ (christmas Festival) ನಿಮಿತ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್’ಟಿಸಿ) ಹೆಚ್ಚುವರಿ 1000 ವಿಶೇಷ ಬಸ್(special buses) ವ್ಯವಸ್ಥೆ ಮಾಡಿದೆ. ಡಿಸೆಂಬರ್ 22 ರಿಂದ ಡಿ. 24 ರವರೆಗೆ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳು ಮತ್ತು ಅಕ್ಕ-ಪಕ್ಕದ ರಾಜ್ಯಗಳಿಗೆ ಈ ವಿಶೇಷ ಬಸ್‌ಗಳು ಸಂಚಾರಿಸಲಿವೆ. ಹಾಗೇ ಡಿಸೆಂಬರ್ 25ರಂದು ಈ ವಿಶೇಷ ಬಸ್‌ಗಳು ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಸಂಚರಿಸಲಿವೆ ಎಂದು ಕೆಎಸ್ಆರ್‌ಟಿಸಿ ತಿಳಿಸಿದೆ.
ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ,ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ ಸೇರಿದಂತೆ ಹಲವು ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಿಗೆ ಬಸ್ ಗಳು ಹೊರಡಲಿವೆ. ಇನ್ನು ನೆರೆ ರಾಜ್ಯಗಳಾದ ತಮಿಳುನಾಡು, ಕೇರಳದ ವಿವಿಧ ಸ್ಥಳಗಳಿಗೆ ಹೆಚ್ಚುವರಿ ಬಸ್ ಗಳು ಸಂಚರಿಸಲಿವೆ.
ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್‌ಗಳಲ್ಲಿ ಮುಂಗಡ ಟಿಕೆಟ್ ಬುಕ್ಕಿಂಗ್ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ. www.ksrtc.in ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಆನ್‌ಲೈನ್ ಮೂಲಕವೂ ಟಿಕೆಟ್ ಬುಕ್ ಮಾಡಬಹುದಾಗಿದೆ. ಪ್ರಯಾಣಿಕರು ಮೊದಲೇ ಸೀಟ್ ಕಾಯ್ದಿರಿಸಬಹುದಾಗಿದೆ. ವೆಬ್ ಸೈಟ್ ಮೂಲಕ ಪಡೆಯಬಹುದು. ನಾಲ್ಕು ಹಾಗೂ ನಾಲ್ಕಕ್ಕಿಂತ ಹೆಚ್ಚಿನ ಟಿಕೆಟ್ ಕಾಯ್ದಿರಿಸಿದರೆ ಶೇ.5ರಷ್ಟು ರಿಯಾಯಿತಿ ಇದೆ. ಇನ್ನು ಹೋಗುವ ಹಾಗೂ ಬರುವ ಟಿಕೆಟ್ ಕಾಯ್ದಿರಿಸಿದರೆ ಶೇ.10ರಷ್ಟು ರಿಯಾಯಿತಿ ನೀಡಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ