ಪೆಟ್ರೋಲ್, ಡೀಸೆಲ್ ದರ ಏರಿಕೆಯ ಶಾಕ್ ನೀಡಲಿದೆಯಾ ರಾಜ್ಯ ಸರ್ಕಾರ? ಸೆಸ್ ವಿಧಿಸಲು ಕಾರ್ಮಿಕ ಇಲಾಖೆ ಪ್ರಸ್ತಾವನೆ
ಸೆಸ್ ವಿಧಿಸಿದರೆ ಕರ್ನಾಟಕದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ತುಸು ಏರಿಕೆಯಾಗಲಿದೆ. ಈ ವಿಚಾರವಾಗಿ ಈಗಾಗಲೇ ಕಾರ್ಮಿಕ ಇಲಾಖೆ ಪ್ರಸ್ತಾವನೆ ಸಿದ್ಧಪಡಿಸಿದೆ. ಅಂತಿಮವಾಗಿ ಸಿಎಂ ಸಿದ್ದರಾಮಯ್ಯ ನಿರ್ಧಾರ ಕೈಗೊಳ್ಳಲಿದ್ದಾರೆ.
ಬೆಂಗಳೂರು, ಡಿಸೆಂಬರ್ 13: ಕರ್ನಾಟಕ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಸೆಸ್ ವಿಧಿಸುವ (Petrol and Diesel Cess) ಮೂಲಕ ಬೆಲೆ ಹೆಚ್ಚಿಸುವ ಸಾಧ್ಯತೆ ಇದೆ. ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡಿಸೇಲ್ ಮೇಲೆ ಒಂದು ರೂಪಾಯಿ ಸೆಸ್ ವಿಧಿಸಲು ಕಾರ್ಮಿಕ ಇಲಾಖೆ ಚಿಂತನೆ ನಡೆಸಿದೆ. ಈ ಕುರಿತು ಶೀಘ್ರದಲ್ಲೇ ಸರ್ಕಾರಕ್ಕೆ ಪ್ರಸ್ತಾವನೆಯನ್ನೂ ಸಲ್ಲಿಸಲಿದೆ.
ಸೆಸ್ ವಿಧಿಸುವ ಮೂಲಕ ವಾರ್ಷಿಕ 2100 ಕೋಟಿ ರೂಪಾಯಿ ಸಂಗ್ರಹದ ಗುರಿಯನ್ನು ಹೊಂದಲಾಗಿದೆ. ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕೆ ಈ ಹಣ ಬಳಕೆ ಮಾಡಲಾಗುತ್ತದೆ. ಈ ಸಂಬಂಧ ಕಾರ್ಮಿಕ ಇಲಾಖೆ ಈಗಾಗಲೇ ಪ್ರಸ್ತಾವನೆ ಸಿದ್ದಪಡಿಸಿದೆ. ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಲ್ಲಿಕೆ ಮಾಡಲಿದೆ.
ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಸೆಸ್ ವಿಧಿಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಅಂತಿಮ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕೈಗೊಳ್ಳಲಿದ್ದಾರೆ ಎಂದು ಇಲಾಖೆ ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಡಿಸೆಂಬರ್ 13ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?
ಈಗಾಗಲೇ ರಾಜ್ಯ ಸರ್ಕಾರವು ಮುದ್ರಾಂಕ ಶುಲ್ಕ ಹೆಚ್ಚಿಸುವ ಬಗ್ಗೆ ನಿರ್ಧಾರ ಕೈಗೊಂಡಿದೆ. ಇದಕ್ಕಾಗಿ ಪ್ರಸ್ತುತ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧೇಯಕವನ್ನೂ ಮಂಡನೆ ಮಾಡಿ ಅನುಮೋದನೆ ಪಡೆಯಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:15 am, Wed, 13 December 23