ಅನೈತಿಕ ಮೈತ್ರಿ ಸರ್ಕಾರ ಮಾಡಿದ್ದವರು ನೀವು: ಸಿದ್ದರಾಮಯ್ಯಗೆ ಯಡಿಯೂರಪ್ಪ ತಿರುಗೇಟು

ಸರ್ಕಾರದ ಆಡಳಿತ ವೈಖರಿಯನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದರು. ಸಿದ್ದರಾಮಯ್ಯ ಮಾಡಿದ್ದ ಆರೋಪಗಳಿಗೆ ಶುಕ್ರವಾರ ಯಡಿಯೂರಪ್ಪ ಪ್ರತಿಕ್ರಿಯಿಸಿದರು.

ಅನೈತಿಕ ಮೈತ್ರಿ ಸರ್ಕಾರ ಮಾಡಿದ್ದವರು ನೀವು: ಸಿದ್ದರಾಮಯ್ಯಗೆ ಯಡಿಯೂರಪ್ಪ ತಿರುಗೇಟು
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
Follow us
Ghanashyam D M | ಡಿ.ಎಂ.ಘನಶ್ಯಾಮ
| Updated By: ರಶ್ಮಿ ಕಲ್ಲಕಟ್ಟ

Updated on:Feb 05, 2021 | 4:05 PM

ಬೆಂಗಳೂರು: ‘ಸ್ವತಃ ಅನೈತಿಕ ಮೈತ್ರಿ ಮಾಡಿಕೊಂಡು ಸರ್ಕಾರ ಮಾಡಿದ್ದ ನೀವು ಅದನ್ನು ಮರೆತು ಮಾತಾಡ್ತಿದ್ದೀರಿ. ಕಾಂಗ್ರೆಸ್​ ಪಕ್ಷಕ್ಕೆ ಸೇರಿ ನೀವು ಆಪರೇಷನ್ ಮಾಡಿಲ್ವಾ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದರು.

ವಿಧಾನಸಭೆಯಲ್ಲಿ ರಾಜ್ಯಪಾಲರ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಮಾತನಾಡುವಾಗ ಸರ್ಕಾರದ ಆಡಳಿತ ವೈಖರಿಯನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದರು. ಸಿದ್ದರಾಮಯ್ಯ ಮಾಡಿದ್ದ ಆರೋಪಗಳಿಗೆ ಶುಕ್ರವಾರ ಯಡಿಯೂರಪ್ಪ ಪ್ರತಿಕ್ರಿಯಿಸಿದರು.

ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ಜನರು ಕಾಂಗ್ರೆಸ್​ ಪಕ್ಷವನ್ನು ತಿರಸ್ಕರಿಸಿದ್ದರು. ಆಗ ಅನೈತಿಕ ಮೈತ್ರಿಯಿಂದ ಸರ್ಕಾರ ಮಾಡಿದವರು ನೀವು. ಈಗ ನಮ್ಮದನ್ನು ಅನೈತಿಕ ಸರ್ಕಾರ, ಕೆಟ್ಟು ನಿಂತ ಡಕೋಟಾ ಸರ್ಕಾರ ಅಂತೀರಾ ಎಂದು ಆಕ್ಷೇಪಿಸಿದರು.

ಹಾಲಿಗೆ ಪ್ರೋತ್ಸಾಹಧನ ಶುರುವಾಗಿದ್ದು ನಾವು ಬಂದ ಮೇಲೆ, ಹೈದರಾಬಾದ್ ಕರ್ನಾಟಕವನ್ನು ಈಗ ಕಲ್ಯಾಣ ಕರ್ನಾಟಕ ಮಾಡಿದ್ದೇವೆ. ಇನ್ನೆರೆಡು ವರ್ಷಗಳಲ್ಲಿ ₹ 600 ಕೋಟಿ ವೆಚ್ಚದಲ್ಲಿ ಅನುಭವ ಮಂಟಪ ನಿರ್ಮಾಣವಾಗಲಿದೆ. ಇಡೀ ಜಗತ್ತಿಗೆ ಹೆಸರುವಾಸಿಯಾಗುವ ಪ್ರವಾಸಿತಾಣವಾಗಲಿದೆ ಅನುಭವ ಮಂಟಪ ಎಂದು ಯಡಿಯೂರಪ್ಪ ತಮ್ಮ ನಿರ್ಧಾರಗಳನ್ನು ಸಮರ್ಥಿಸಿಕೊಂಡರು.

ಸಿದ್ದರಾಮಯ್ಯ ನೀಡಿರುವ ಅಂಕಿಅಂಶಗಳು ಸರಿಯಾಗಿವೆ. ಆದರೆ ಏನೂ ಕೆಲಸವಾಗಿಲ್ಲ, ರಾಜ್ಯ ಪ್ರಗತಿ ಕಂಡಿಲ್ಲ ಎಂಬ ಆರೋಪ ಸತ್ಯಕ್ಕೆ ದೂರವಾದುದು. ದೇಶದಲ್ಲಿ ಅತಿಹೆಚ್ಚು ಆರ್​ಟಿಪಿಆರ್​ (ಕೋವಿಡ್-19) ಪರೀಕ್ಷೆ ಕರ್ನಾಟಕದಲ್ಲಿ ನಡೆದಿದೆ ಎಂದು ಮಾಹಿತಿ ನೀಡಿದರು.

ಬೆಂಗಳೂರು ನಗರದ ಅಭಿವೃದ್ಧಿಗೆ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ನಾಲ್ಕೈದು ತಿಂಗಳಲ್ಲಿ ಬಿಡಿಎ ಕಾರ್ಯವೈಖರಿಯಲ್ಲಿ ಕಣ್ಣಿಗೆ ಕಾಣುವಂಥ ಬದಲಾವಣೆಗಳು ಬರುತ್ತವೆ. ಭೂಗಳ್ಳರಿಂದ ಸುಮಾರು ಮೂರೂವರೆ ಸಾವಿರ ಕೋಟಿ ರೂಪಾಯಿ ಮೌಲ್ಯದ 300 ಎಕರೆಗೂ ಹೆಚ್ಚು ಭೂಮಿ ವಶಪಡಿಸಿಕೊಳ್ಳಲು ಅಗತ್ಯ ಕ್ರಮ ತೆಗೆದುಕೊಂಡಿದ್ದೇವೆ. ಬಿಡಿಎ ಅಕ್ರಮಕ್ಕೆ ಸಂಪೂರ್ಣ ಬ್ರೇಕ್ ಹಾಕಲು ನಿರ್ಧರಿಸಿದ್ದೇನೆ. 2025ರ ಒಳಗೆ 75 ಕಿಮೀ ಮೆಟ್ರೊ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.

ವಿರೋಧಪಕ್ಷಗಳಿದ್ದೇವೆ ಎಂಬ ಒಂದೇ ಕಾರಣಕ್ಕೆ ಎಲ್ಲದಕ್ಕೂ ವಿರೋಧ ಮಾಡಬೇಕಿಲ್ಲ. ಟೀಕೆ-ಟಿಪ್ಪಣಿಗಳು ತಿದ್ದಿಕೊಳ್ಳುವಂತಿರಬೇಕು. ಕೆಲ ಸಮಸ್ಯೆಗಳಿಂದಾಗಿ ಕೆಲ ಕ್ಷೇತ್ರಗಳಿಗೆ ಅನುದಾನ ನೀಡಲು ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಎಲ್ಲ ಶಾಸಕರಿಗೂ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಮಾರ್ಚ್​ ಅಂತ್ಯಕ್ಕೆ ಘೋಷಿತ ಅನುದಾನದ ಶೇ 85ರಷ್ಟು ಬಿಡುಗಡೆ ಮಾಡುವುದಾಗಿ ಯಡಿಯೂರಪ್ಪ ಭರವಸೆ ನೀಡಿದರು.

Published On - 4:01 pm, Fri, 5 February 21

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ