AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Session Live: ಕರ್ನಾಟಕ ವಿಧಾನಸಭೆ ಅಧಿವೇಶನದ 4ನೇ ದಿನದ ಕಲಾಪ ನೇರಪ್ರಸಾರ

Karnataka Assembly Session Live: ಕರ್ನಾಟಕ ವಿಧಾನಸಭೆ ಅಧಿವೇಶನದ 4ನೇ ದಿನದ ಕಲಾಪ ನೇರಪ್ರಸಾರ

ಪ್ರಸನ್ನ ಹೆಗಡೆ
|

Updated on: Sep 24, 2026 | 11:26 AM

Share

ರ್ನಾಟಕ ವಿಧಾನಸಭೆ ಅಧಿವೇಶನ ನೇರಪ್ರಸಾರ: ಕರ್ನಾಟಕದಲ್ಲಿ ತಲೆದೋರಿರುವ ಬರ ಪರಿಸ್ಥಿತಿಯ ಕುರಿತು ಚರ್ಚಿಸಬೇಕಿರುವ ಹಿನ್ನೆಲೆ 3 ದಿನ ನಿಗದಿಯಾಗಿದ್ದ ವಿಧಾನಸಭೆಯ ವಿಶೇಷ ಅಧಿವೇಶನವನ್ನು ಒಂದು ದಿನ ವಿಸ್ತರಿಸಲಾಗಿದ್ದು, ರೈತರಿಗೆ ಸರ್ಕಾರದಿಂದ ವಿಶೇಷ ಪರಿಹಾರ ಹಾಗೂ ಮಹತ್ವದ ಘೋಷಣೆಗಳ ನಿರೀಕ್ಷೆಯಿದೆ. ಈ ಬಗ್ಗೆ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ಸದಸ್ಯರು ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಲಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್​​ 24: ಕರ್ನಾಟಕ ರಾಜ್ಯದಲ್ಲಿ ವ್ಯಾಪಕವಾಗಿರುವ ಬರ ಪರಿಸ್ಥಿತಿಯ ಕುರಿತು ಚರ್ಚಿಸುವ ನಿಟ್ಟಿನಲ್ಲಿ 3 ದಿನಗಳಿಗೆ ನಿಗದಿಯಾಗಿದ್ದ ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನವನ್ನು ಒಂದು ದಿನ ವಿಸ್ತರಿಸಲಾಗಿದೆ. ಅದರಂತೆ ಇಂದು ಕೂಡ ವಿಧಾನಸಭೆಯಲ್ಲಿ ಬರಗಾಲದ ಕುರಿತು ಚರ್ಚೆ ನಡೆಯಲಿದ್ದು, ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ಸದಸ್ಯರು ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಲಿದ್ದಾರೆ. ಈ ನಡುವೆ ರೈತರು ಸರ್ಕಾರದಿಂದ ಸೂಕ್ತ ಪರಿಹಾರ ಮತ್ತು ವಿಶೇಷ ಪ್ಯಾಕೇಜ್‌ಗಳನ್ನು ನಿರೀಕ್ಷಿಸುತ್ತಿರುವ ಹಿನ್ನೆಲೆ ಮಹತ್ವದ ಘೋಷಣೆಯನ್ನು ಸರ್ಕಾರ ಮಾಡುವ ಸಾಧ್ಯತೆ ಇದೆ. ವಿಧಾನ ಸಭೆ ಕಲಾಪದ ನೇರಪ್ರಸಾರ ಇಲ್ಲಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More