Karnataka Assembly Session Live: ಕರ್ನಾಟಕ ವಿಧಾನಸಭೆ ಅಧಿವೇಶನದ 4ನೇ ದಿನದ ಕಲಾಪ ನೇರಪ್ರಸಾರ
ರ್ನಾಟಕ ವಿಧಾನಸಭೆ ಅಧಿವೇಶನ ನೇರಪ್ರಸಾರ: ಕರ್ನಾಟಕದಲ್ಲಿ ತಲೆದೋರಿರುವ ಬರ ಪರಿಸ್ಥಿತಿಯ ಕುರಿತು ಚರ್ಚಿಸಬೇಕಿರುವ ಹಿನ್ನೆಲೆ 3 ದಿನ ನಿಗದಿಯಾಗಿದ್ದ ವಿಧಾನಸಭೆಯ ವಿಶೇಷ ಅಧಿವೇಶನವನ್ನು ಒಂದು ದಿನ ವಿಸ್ತರಿಸಲಾಗಿದ್ದು, ರೈತರಿಗೆ ಸರ್ಕಾರದಿಂದ ವಿಶೇಷ ಪರಿಹಾರ ಹಾಗೂ ಮಹತ್ವದ ಘೋಷಣೆಗಳ ನಿರೀಕ್ಷೆಯಿದೆ. ಈ ಬಗ್ಗೆ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ಸದಸ್ಯರು ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಲಿದ್ದಾರೆ.
ಬೆಂಗಳೂರು, ಸೆಪ್ಟೆಂಬರ್ 24: ಕರ್ನಾಟಕ ರಾಜ್ಯದಲ್ಲಿ ವ್ಯಾಪಕವಾಗಿರುವ ಬರ ಪರಿಸ್ಥಿತಿಯ ಕುರಿತು ಚರ್ಚಿಸುವ ನಿಟ್ಟಿನಲ್ಲಿ 3 ದಿನಗಳಿಗೆ ನಿಗದಿಯಾಗಿದ್ದ ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನವನ್ನು ಒಂದು ದಿನ ವಿಸ್ತರಿಸಲಾಗಿದೆ. ಅದರಂತೆ ಇಂದು ಕೂಡ ವಿಧಾನಸಭೆಯಲ್ಲಿ ಬರಗಾಲದ ಕುರಿತು ಚರ್ಚೆ ನಡೆಯಲಿದ್ದು, ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ಸದಸ್ಯರು ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಲಿದ್ದಾರೆ. ಈ ನಡುವೆ ರೈತರು ಸರ್ಕಾರದಿಂದ ಸೂಕ್ತ ಪರಿಹಾರ ಮತ್ತು ವಿಶೇಷ ಪ್ಯಾಕೇಜ್‌ಗಳನ್ನು ನಿರೀಕ್ಷಿಸುತ್ತಿರುವ ಹಿನ್ನೆಲೆ ಮಹತ್ವದ ಘೋಷಣೆಯನ್ನು ಸರ್ಕಾರ ಮಾಡುವ ಸಾಧ್ಯತೆ ಇದೆ. ವಿಧಾನ ಸಭೆ ಕಲಾಪದ ನೇರಪ್ರಸಾರ ಇಲ್ಲಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
