AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆದ್ದಾರಿಯಲ್ಲಿ ಕಣ್ಣೆದುರೇ ಅಪಘಾತಕ್ಕೆ ಒಳಗಾದವರ ನೆರವಿಗೆ ನಿಂತ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ

ಕಚೇರಿಯ ಕಾರ್ಯ ಕಲಾಪ ಮುಗಿಸಿ ಹುಬ್ಬಳ್ಳಿಯ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲೆಂದು ಇಂದು ಬೆಳಿಗ್ಗೆ ಬೆಂಗಳೂರಿನಿಂದ ಹುಬ್ಬಳ್ಳಿ ಮಾರ್ಗವಾಗಿ ತೆರಳುತ್ತಿದ್ದ ಸಭಾಪತಿ ಬಸವರಾಜ ಹೊರಟ್ಟಿಯವರ ಕಾರು ಸಿರಿಗೆರೆ ಬಳಿ ಬರುವಾಗ ಮಾರ್ಗ ಮಧ್ಯೆ ಅವರ ಕಣ್ಣೆದುರಲ್ಲೇ ಅಪಘಾತ ನಡೆದಿದೆ.

ಹೆದ್ದಾರಿಯಲ್ಲಿ ಕಣ್ಣೆದುರೇ ಅಪಘಾತಕ್ಕೆ ಒಳಗಾದವರ ನೆರವಿಗೆ ನಿಂತ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ
ಸಹಾಯಕ್ಕೆ ಧಾವಿಸಿದ ಬಸವರಾಜ ಹೊರಟ್ಟಿ
TV9 Web
| Edited By: |

Updated on:Jun 26, 2021 | 1:23 PM

Share

ಹುಬ್ಬಳ್ಳಿ: ಚಿತ್ರದುರ್ಗ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿನ ಸಿರಿಗೆರೆ ಬಳಿ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಓರ್ವ ಬಾಲಕ ಸೇರಿದಂತೆ ದಂಪತಿಯನ್ನು ಕೂಡಲೇ ಅಸ್ಪತ್ರೆಗೆ ಸಾಗಿಸಿ ಅವರ ಜೀವ ಉಳಿಸುವಲ್ಲಿ ಕರ್ನಾಟಕ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ನೆರವಾಗಿದ್ದಾರೆ. ಕಾರು ಹಾಗೂ ದ್ವಿಚಕ್ರ ವಾಹನಗಳ ಮಧ್ಯೆ ಇಂದು ಬೆಳಿಗ್ಗೆ ಸುಮಾರು 10 ಗಂಟೆಯ ವೇಳೆ ಚಿತ್ರದುರ್ಗ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿನ ಸಿರಿಗೆರೆ ಬಳಿ ಅಪಘಾತ ಸಂಭವಿಸಿತ್ತು. ಈ ವೇಳೆ ಅದೇ ಮಾರ್ಗದಲ್ಲಿ ಸಾಗುತ್ತಿದ್ದ ಬಸವರಾಜ ಹೊರಟ್ಟಿ ಸಹಾಯಕ್ಕೆ ಧಾವಿಸಿ ಮಾನವೀಯತೆ ಮರೆದಿದ್ದಾರೆ.

ಕಚೇರಿಯ ಕಾರ್ಯ ಕಲಾಪ ಮುಗಿಸಿ ಹುಬ್ಬಳ್ಳಿಯ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲೆಂದು ಇಂದು ಬೆಳಿಗ್ಗೆ ಬೆಂಗಳೂರಿನಿಂದ ಹುಬ್ಬಳ್ಳಿ ಮಾರ್ಗವಾಗಿ ತೆರಳುತ್ತಿದ್ದ ಸಭಾಪತಿ ಬಸವರಾಜ ಹೊರಟ್ಟಿಯವರ ಕಾರು ಸಿರಿಗೆರೆ ಬಳಿ ಬರುವಾಗ ಮಾರ್ಗ ಮಧ್ಯೆ ಅವರ ಕಣ್ಣೆದುರಲ್ಲೇ ಅಪಘಾತ ನಡೆದಿದೆ. ಅಪಘಾತ ಸಂಭವಿಸುತ್ತಿದ್ದಂತೆಯೇ ತಮ್ಮ ವಾಹನವನ್ನು ನಿಲ್ಲಿಸಲು ಸೂಚಿಸಿದ ಅವರು, ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಲು ನೆರವಾಗಿದ್ದಾರೆ.

Basavaraj Horatti

ಅಪಘಾತ ನಡೆದ ಸ್ಥಳದಲ್ಲಿ ಸಹಾಯಕ್ಕೆ ನಿಂತ ಬಸವರಾಜ ಹೊರಟ್ಟಿ

ತಕ್ಷಣ ಸ್ಥಳೀಯ ಪೊಲೀಸರಿಗೆ ಕರೆ ಮಾಡಿ ಅಪಘಾತ ನಡೆದ ಸ್ಥಳಕ್ಕೆ ಆಗಮಿಸುವಂತೆ ಸೂಚಿಸಿದ್ದಲ್ಲದೇ ತುರ್ತಾಗಿ ಆ್ಯಂಬುಲೆನ್ಸ್​ ಚಾಲಕರಿಗೆ ವಿಷಯ ತಿಳಿಸಿ ಮೂವರು ಗಾಯಳುಗಳನ್ನೂ ಸಮೀಪದ ಆಸ್ಪತ್ರೆಗೆ ಕಳುಹಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಅಪಘಾತ ನಡೆದ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಸ್ಥಳದಲ್ಲಿದ್ದ ಬಸವರಾಜ ಹೊರಟ್ಟಿ ಗಾಯಾಳುಗಳಿಗೆ ಧೈರ್ಯ ಹೇಳಿ ತುರ್ತು ಚಿಕಿತ್ಸೆ ದೊರಕಿಸುವಲ್ಲಿ ಸಹಾಯ ಮಾಡಿರುವುದು ಮೆಚ್ಚುಗೆಗೆ ಪಾತ್ರವಾಗಿದೆ.

ಸಾಂವಿಧಾನಿಕ ದೊಡ್ಡ ಹುದ್ದೆಯಲ್ಲಿರುವವರು ಹೀಗೆ ಜನಸಾಮಾನ್ಯರ ಕಷ್ಟಗಳಿಗೆ ಕೂಡಲೇ ಪ್ರತಿಸ್ಪಂದಿಸಿ ನೆರವಾಗುವ ಮಾನವೀಯ ಗುಣ ಯುವ ರಾಜಕಾರಣಿಗಳು ಹಾಗೂ ಜನಸಾಮಾನ್ಯರಿಗೆ ಮಾದರಿಯಾಗಿದೆ ಎಂದು ಅನೇಕರು ಬಸವರಾಜ ಹೊರಟ್ಟಿಯವ ಕಾರ್ಯವನ್ನು ಶ್ಲಾಘಿಸಿದ್ದಾರೆ. ಅಪಘಾತ ನಡೆದ ತಕ್ಷಣವೇ ಚಿಕಿತ್ಸೆ ನೀಡಿದ ಕಾರಣ ಗಾಯಾಳುಗಳು ಚೇತರಿಸಿಕೊಳ್ಳುತ್ತಿದ್ದು, ಅವರಿಗೆ ಸೂಕ್ತ ಚಿಕಿತ್ಸೆ ದೊರಕುತ್ತಿರುವುದು ಖಚಿತವಾದ ನಂತರ ಬಸವರಾಜ ಹೊರಟ್ಟಿ ತಮ್ಮ ಪ್ರಯಾಣ ಮುಂದುವರೆಸಿದ್ದಾರೆ.

ಇದನ್ನೂ ಓದಿ: ಅಪಘಾತದಲ್ಲಿ ಮೃತಪಟ್ಟ ಮರಿ ಕುದುರೆಗಾಗಿ ಹಂಬಲಿಸಿದ ತಾಯಿ ಕುದುರೆ; ಸಂಜೆವರೆಗೂ ರಸ್ತೆಯಲ್ಲೇ ನಿಂತ ದೃಶ್ಯ ಮೊಬೈಲ್​ನಲ್ಲಿ ಸೆರೆ 

ಬ್ರೇಕಿಂಗ್: ಬೆಳಗಾವಿ ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಭೀಕರ ರಸ್ತೆ ಅಪಘಾತ

Published On - 1:21 pm, Sat, 26 June 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್