ಡಿ. 10ಕ್ಕೆ ವಿಧಾನ ಪರಿಷತ್ ಕ್ಷೇತ್ರಗಳಿಗೆ ಚುನಾವಣೆ; ಜನವರಿ 5ಕ್ಕೆ ತೆರವಾಗಲಿರುವ ಸ್ಥಾನಗಳಿವು

ಬೀದರ್ 1 , ಕಲಬುರ್ಗಿ 1, ವಿಜಯಪುರ 2, ಬೆಳಗಾವಿ 2, ಉತ್ತರ ಕನ್ನಡ 1, ಧಾರವಾಡ 2, ರಾಯಚೂರು 1, ಬಳ್ಳಾರಿ 1, ಚಿತ್ರದುರ್ಗ 1, ಶಿವಮೊಗ್ಗ 1, ದಕ್ಷಿಣ ಕನ್ನಡ 2, ಮೈಸೂರು ,2, ಚಿಕ್ಕಮಗಳೂರು 1, ಹಾಸನ1, ತುಮಕೂರು 1, ಮಂಡ್ಯ1, ಬೆಂಗಳೂರು 1, ಬೆಂಗಳೂರು ಗ್ರಾಮಾಂತರ 1, ಕೋಲಾರ 1 ಹಾಗೂ ಕೊಡಗು ಜಿಲ್ಲೆಯ ಒಂದು ಕ್ಷೇತ್ರಕ್ಕೆ ಡಿ. 10ರಂದು ಚುನಾವಣೆ ನಡೆಯಲಿದೆ

ಡಿ. 10ಕ್ಕೆ ವಿಧಾನ ಪರಿಷತ್ ಕ್ಷೇತ್ರಗಳಿಗೆ ಚುನಾವಣೆ; ಜನವರಿ 5ಕ್ಕೆ ತೆರವಾಗಲಿರುವ ಸ್ಥಾನಗಳಿವು
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Nov 09, 2021 | 3:39 PM

ಬೆಂಗಳೂರು: ಕರ್ನಾಟಕದ ವಿಧಾನ ಪರಿಷತ್​​ನ 25 ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದೆ. ಕೇಂದ್ರ ಚುನಾವಣಾ ಆಯೋಗ ಡಿಸೆಂಬರ್ 10ರಂದು ಮತದಾನ ನಡೆಸುವುದಾಗಿ ಘೋಷಣೆ ಮಾಡಿದೆ. ಡಿಸೆಂಬರ್ 14ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ನವೆಂಬರ್ 16ರಂದು ಚುನಾವಣಾ ಅಧಿಸೂಚನೆ ಹೊರಬೀಳಲಿದೆ. ನವೆಂಬರ್ 23ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ನವೆಂಬರ್ 24ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ನವೆಂಬರ್ 26 ಕೊನೆಯ ದಿನವಾಗಿದೆ.

ಡಿಸೆಂಬರ್ 10ರ ಶುಕ್ರವಾರ ಚುನಾವಣೆ ನಡೆಯಲಿದೆ. ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ಮಾಡಬಹುದಾಗಿದೆ. ಡಿಸೆಂಬರ್ 14ರಂದು ಫಲಿತಾಂಶ ಪ್ರಕಟವಾಗಲಿದೆ. ಡಿಸೆಂಬರ್ 16ರ ವೇಳೆಗೆ ಎಲ್ಲ ಚುನಾವಣಾ ಪ್ರಕ್ರಿಯೆಗಳು ಪೂರ್ಣಗೊಳ್ಳಲಿವೆ. ಬೀದರ್ 1 , ಕಲಬುರ್ಗಿ 1, ವಿಜಯಪುರ 2, ಬೆಳಗಾವಿ 2, ಉತ್ತರ ಕನ್ನಡ 1, ಧಾರವಾಡ 2, ರಾಯಚೂರು 1, ಬಳ್ಳಾರಿ 1, ಚಿತ್ರದುರ್ಗ 1, ಶಿವಮೊಗ್ಗ 1, ದಕ್ಷಿಣ ಕನ್ನಡ 2, ಮೈಸೂರು ,2, ಚಿಕ್ಕಮಗಳೂರು 1, ಹಾಸನ1, ತುಮಕೂರು 1, ಮಂಡ್ಯ1, ಬೆಂಗಳೂರು 1, ಬೆಂಗಳೂರು ಗ್ರಾಮಾಂತರ 1, ಕೋಲಾರ 1 ಹಾಗೂ ಕೊಡಗು ಜಿಲ್ಲೆಯ ಒಂದು ಕ್ಷೇತ್ರಕ್ಕೆ ಡಿ. 10ರಂದು ಚುನಾವಣೆ ನಡೆಯಲಿದೆ.

ಜನವರಿ 5ಕ್ಕೆ ತೆರವಾಗುವ ವಿಧಾನ ಪರಿಷತ್ ಸ್ಥಾನಗಳು:

ಬಿಜೆಪಿ: ಕೋಟ ಶ್ರೀನಿವಾಸ ಪೂಜಾರಿ (ಸಭಾ ನಾಯಕ)- ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ಎಂ.ಕೆ. ಪ್ರಾಣೇಶ್ (ಉಪ ಸಭಾಪತಿ)- ಚಿಕ್ಕಮಗಳೂರು ಸ್ಥಳೀಯ ಸಂಸ್ಥೆ ಮಹಾಂತೇಶ್ ಕವಟಗಿಮಠ (ಸರ್ಕಾರಿ ಮುಖ್ಯ ಸಚೇತಕ)-ಬೆಳಗಾವಿ ಸ್ಥಳೀಯ ಸಂಸ್ಥೆ ಬಿ.ಜಿ. ಪಾಟೀಲ್-ಕಲಬುರಗಿ ಸ್ಥಳೀಯ ಸಂಸ್ಥೆ ಪ್ರದೀಪ್ ಶೆಟ್ಟರ್- ಧಾರವಾಡ ಸ್ಥಳೀಯ ಸಂಸ್ಥೆ ಸುನೀಲ್ ಸುಬ್ರಮಣಿ- ಕೊಡಗು ಸ್ಥಳೀಯ ಸಂಸ್ಥೆ

ಪಕ್ಷೇತರ: ವಿವೇಕರಾವ್ ಪಾಟೀಲ್ – ಬೆಳಗಾವಿ ಸ್ಥಳೀಯ ಸಂಸ್ಥೆ

ಕಾಂಗ್ರೆಸ್: ಎಸ್.ಆರ್. ಪಾಟೀಲ್ (ವಿಪಕ್ಷ ನಾಯಕ)- ವಿಜಯಪುರ ಸ್ಥಳೀಯ ಸಂಸ್ಥೆ ಎಂ. ನಾರಾಯಣಸ್ವಾಮಿ (ವಿಪಕ್ಷ ಮುಖ್ಯ ಸಚೇತಕ)-ಬೆಂಗಳೂರು ಸ್ಥಳೀಯ ಸಂಸ್ಥೆ ಪ್ರತಾಪ್ ಚಂದ್ರ ಶೆಟ್ಟಿ-ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ಶ್ರೀಕಾಂತ್ ಘೋಟ್ನೇಕರ್- ಉತ್ತರ ಕನ್ನಡ ಸ್ಥಳೀಯ ಸಂಸ್ಥೆ ಶ್ರೀನಿವಾಸ್ ಮಾನೆ- ಧಾರವಾಡ ಸ್ಥಳೀಯ ಸಂಸ್ಥೆ ಧರ್ಮಸೇನ-ಮೈಸೂರು ಸ್ಥಳೀಯ ಸಂಸ್ಥೆ ವಿಜಯ್ ಸಿಂಗ್- ಬೀದರ್ ಸ್ಥಳೀಯ ಸಂಸ್ಥೆ ಬಸವರಾಜ್ ಪಾಟೀಲ್ ಇಟಗಿ- ರಾಯಚೂರು ಸ್ಥಳೀಯ ಸಂಸ್ಥೆ ಕೆ.ಸಿ. ಕೊಂಡಯ್ಯ-ಬಳ್ಳಾರಿ ಸ್ಥಳೀಯ ಸಂಸ್ಥೆ ಆರ್. ಪ್ರಸನ್ನಕುಮಾರ್- ಶಿವಮೊಗ್ಗ ಸ್ಥಳೀಯ ಸಂಸ್ಥೆ ಎಂ.ಎ. ಗೋಪಾಲಸ್ವಾಮಿ-ಹಾಸನ ಸ್ಥಳೀಯ ಸಂಸ್ಥೆ ಎಸ್. ರವಿ- ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆ ರಘು ಆಚಾರ್- ಚಿತ್ರದುರ್ಗ ಸ್ಥಳೀಯ ಸಂಸ್ಥೆ ಸುನೀಲ್ ಗೌಡ ಪಾಟೀಲ್- ವಿಜಯಪುರ ಸ್ಥಳೀಯ ಸಂಸ್ಥೆ

ಜೆಡಿಎಸ್: ಎನ್. ಅಪ್ಪಾಜಿ ಗೌಡ (ಜೆಡಿಎಸ್ ಮುಖ್ಯ ಸಚೇತಕ)-ಮಂಡ್ಯ ಸ್ಥಳೀಯ ಸಂಸ್ಥೆ ಸಂದೇಶ್ ನಾಗರಾಜ್-ಮೈಸೂರು ಸ್ಥಳೀಯ ಸಂಸ್ಥೆ ಸಿ.ಆರ್. ಮನೋಹರ್- ಕೋಲಾರ ಸ್ಥಳೀಯ ಸಂಸ್ಥೆ ಕಾಂತರಾಜು- ತುಮಕೂರು ಸ್ಥಳೀಯ ಸಂಸ್ಥೆ.

ತೆರವಾಗುತ್ತಿರುವ 25 ವಿಧಾನ ಪರಿಷತ್ ಸ್ಥಾನಗಳ ವಿವರ:

ಬಿಜೆಪಿ – 6 ಪಕ್ಷೇತರ – 1 ಕಾಂಗ್ರೆಸ್​​- 14 ಜೆಡಿಎಸ್​​​ -4

ದ್ವಿಸದಸ್ಯ ಸ್ಥಾನಗಳಿರುವ ಕ್ಷೇತ್ರಗಳು: ವಿಜಯಪುರ ಬೆಳಗಾವಿ ಮೈಸೂರು ಧಾರವಾಡ ದಕ್ಷಿಣ ಕನ್ನಡ

ಇದನ್ನೂ ಓದಿ: ಕರ್ನಾಟಕ ವಿಧಾನ ಪರಿಷತ್​ಗೆ ದ್ವೈವಾರ್ಷಿಕ ಚುನಾವಣೆ ದಿನಾಂಕ ಪ್ರಕಟ, ಡಿಸೆಂಬರ್​​ನಲ್ಲಿ 25 ಸ್ಥಾನಗಳಿಗೆ ಮತದಾನ

ವಿಧಾನ ಪರಿಷತ್​ನಲ್ಲಿ ಧಾರ್ಮಿಕ ಕಟ್ಟಡಗಳ ಸಂರಕ್ಷಣೆ ವಿಧೇಯಕ ಅಂಗೀಕಾರ; ವಿಧೇಯಕ ಸಂವಿಧಾನ ವಿರೋಧಿ ಎಂದ ಮರಿತಿಬ್ಬೇಗೌಡ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ