AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಾದ್ಯಂತ 579 ಮದ್ಯ ಮಾರಾಟ ಸನ್ನದುಗಳ ಇ-ಹರಾಜು: ಅಬಕಾರಿ ಇಲಾಖೆಯಿಂದ ವೇಳಾಪಟ್ಟಿ ಪ್ರಕಟ

Liquor License E-Auction: ಕರ್ನಾಟಕದಲ್ಲಿ 2026-31 ಅವಧಿಗೆ 579 ಮದ್ಯ ಮಾರಾಟ ಪರವಾನಗಿಗಳನ್ನು ಇ-ಹರಾಜು ಮೂಲಕ ಹಂಚಿಕೆ ಮಾಡಲಾಗುತ್ತಿದೆ. ಈ ಕುರಿತಾಗಿ ಅಬಕಾರಿ ಇಲಾಖೆ ವೇಳಾಪಟ್ಟಿ ಪ್ರಕಟಿಸಿದ್ದು, ಜುಲೈ 24ರಿಂದ 31ರವರೆಗೆ ಆಯಾ ಜಿಲ್ಲೆಗಳಲ್ಲಿ ಬಿಡ್ಡಿಂಗ್ ನಡೆಯಲಿದೆ. ಪರಿಶಿಷ್ಟ ಜಾತಿ, ಪಂಗಡಗಳಿಗೆ ಮೀಸಲಾತಿ ಕಲ್ಪಿಸಲಾಗಿದೆ.

ರಾಜ್ಯಾದ್ಯಂತ 579 ಮದ್ಯ ಮಾರಾಟ ಸನ್ನದುಗಳ ಇ-ಹರಾಜು: ಅಬಕಾರಿ ಇಲಾಖೆಯಿಂದ ವೇಳಾಪಟ್ಟಿ ಪ್ರಕಟ
ಪ್ರಾತಿನಿಧಿಕ ಚಿತ್ರImage Credit source: Getty images
ಗಂಗಾಧರ​ ಬ. ಸಾಬೋಜಿ
|

Updated on:Jul 17, 2026 | 7:43 PM

Share

ಬೆಂಗಳೂರು, ಜುಲೈ 17: ರಾಜ್ಯಾದ್ಯಂತ ಒಟ್ಟು 579 ಮದ್ಯ ಮಾರಾಟ ಪರವಾನಗಿಗಳನ್ನ (Licenses) ಮುಂದಿನ 5 ವರ್ಷಗಳ ಅವಧಿಗೆ, ಅಂದರೆ 2026-27 ರಿಂದ 2030-31 ರವರೆಗೆ ಇ-ಹರಾಜು ಮೂಲಕ ಹಂಚಿಕೆ ಮಾಡಲು ಜುಲೈ 1ರಂದು ಅಧಿಕೃತ ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಇದೀಗ ಅಬಕಾರಿ ಇಲಾಖೆಯು ಇ-ಹರಾಜು ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಯಾರಿಗೆ ಎಷ್ಟು ಮೀಸಲಾತಿ?

ಒಟ್ಟು ಪರವಾನಗಿಗಳ ಪೈಕಿ 483 ಸಿಎಲ್(2-ಎ) ಮತ್ತು 96 ಸಿಎಲ್(9-ಎ) ಲಭ್ಯವಿವೆ. ಬೆಂಗಳೂರು ನಗರ ಜಿಲ್ಲೆಯೊಂದರಲ್ಲೇ 119 ಸಿಎಲ್(2-ಎ) ಮತ್ತು 67 ಸಿಎಲ್(9-ಎ) ಸನ್ನದುಗಳು ಇವೆ. ಈ ಇ-ಹರಾಜಿನಲ್ಲಿ ಪರಿಶಿಷ್ಟ ಜಾತಿ-ಎ ವರ್ಗದವರಿಗೆ ಶೇ. 5.25, ಪರಿಶಿಷ್ಟ ಜಾತಿ-ಬಿ ವರ್ಗದವರಿಗೆ ಶೇ. 5.25, ಪರಿಶಿಷ್ಟ ಜಾತಿ-ಸಿ ವರ್ಗದವರಿಗೆ ಶೇ. 4.50 ಹಾಗೂ ಪರಿಶಿಷ್ಟ ಪಂಗಡ ವರ್ಗದವರಿಗೆ ಶೇ. 3 ರಷ್ಟು ಮೀಸಲಾತಿಯನ್ನು ಕಲ್ಪಿಸಲಾಗಿದೆ.

ಇ-ಹರಾಜು ನಡೆಯುವ ದಿನಾಂಕ ಮತ್ತು ವಿವರ

  • ಜುಲೈ 24ರಂದು ಬೀದರ್​, ಹಾವೇರಿ, ಚಿಕ್ಕಮಗಳೂರು, ಕಲಬುರಗಿ
  • ಜುಲೈ 27ರಂದು ಹಾಸನ, ರಾಯಚೂರು, ಶಿವಮೊಗ್ಗ, ಯಾದಗಿರಿ
  • ಜುಲೈ 28ರಂದು ಬೆಳಗಾವಿ (ಉತ್ತರ), ಉತ್ತರ ಕನ್ನಡ, ಬಳ್ಳಾರಿ, ಬಾಗಲಕೋಟೆ
  • ಜುಲೈ 29ರಂದು ತುಮಕೂರು, ಕೊಪ್ಪಳ, ಚಿಕ್ಕಬಳ್ಳಾಪುರ, ಮೈಸೂರು ಗ್ರಾಮಾಂತರ
  • ಜುಲೈ 30ರಂದು ದಾವಣಗೆರೆ, ವಿಜಯನಗರ, ಚಿತ್ರದುರ್ಗ, ಮಂಡ್ಯ, ವಿಜಯಪುರ, ಚಾಮರಾಜನಗರ, ದಕ್ಷಿಣ ಕನ್ನಡ, ಗದಗ,
  • ಜುಲೈ 31ರಂದು ಕೋಲಾರ, ಧಾರವಾಡ, ಕೊಡಗು, ಬೆಳಗಾವಿ (ದಕ್ಷಿಣ), ಬೆಂಗಳೂರು ಗ್ರಾಮಾಂತರ, ಮೈಸೂರು (ನಗರ), ಬೆಂಗಳೂರು (ದಕ್ಷಿಣ) ಮತ್ತು ಉಡುಪಿ ಜಿಲ್ಲೆಗಳಲ್ಲಿ ಇ-ಹರಾಜು ನಡೆಯಲಿದೆ.

ಇದನ್ನೂ ಓದಿ: ಡಿಸಿಆರ್‌ಇ ಘಟಕದ ಪೊಲೀಸ್​ ಸಿಬ್ಬಂದಿಗೆ ಗುಡ್​ನ್ಯೂಸ್​​: ವಾರದಲ್ಲಿ ಒಂದು ದಿನ ಕಡ್ಡಾಯ ರಜೆ

ಇ-ಹರಾಜಿನ ಸಂಪೂರ್ಣ ವಿವರಗಳು ಅಬಕಾರಿ ಇಲಾಖೆಯ ಅಧಿಕೃತ ವೆಬ್‌ಸೈಟ್ stateexcise.karnataka.gov.in ಹಾಗೂ ಇ-ಕಾಮರ್ಸ್ ಪೋರ್ಟಲ್ www.mstcecommerce.comನಲ್ಲಿ ಲಭ್ಯವಿವೆ. ಬಿಡ್‌ದಾರರ ನೋಂದಣಿ ಪ್ರಕ್ರಿಯೆಯು ಜುಲೈ 3 ರಿಂದಲೇ ಪ್ರಾರಂಭವಾಗಿದ್ದು, ಲೈವ್ ಬಿಡ್ಡಿಂಗ್ ಪ್ರಕ್ರಿಯೆಯು ಜುಲೈ 24ರಿಂದ 31 ರವರೆಗೆ ನಡೆಯಲಿದೆ. ಬಿಡ್‌ದಾರರು ತಾವು ಇಚ್ಛಿಸುವ ಸ್ಥಳಗಳ ನಿಯಮಿತ ಇ-ಹರಾಜಿನಲ್ಲಿ ಭಾಗವಹಿಸಲು ಎರಡು ದಿನಗಳ ಮುಂಚಿತವಾಗಿಯೇ ವೆಬ್‌ಸೈಟ್‌ನಲ್ಲಿ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು.

ಅರ್ಜಿ ಸಲ್ಲಿಕೆ ಮತ್ತು ಶುಲ್ಕದ ವಿವರ

ಇ-ಹರಾಜಿನಲ್ಲಿ ಯಾವುದೇ ವ್ಯಕ್ತಿ, ಏಕವ್ಯಕ್ತಿ ಮಾಲೀಕತ್ವದ ಸಂಸ್ಥೆ ಅಥವಾ ಭಾರತದ ಕಾನೂನುಗಳ ಅಡಿಯಲ್ಲಿ ನೋಂದಾಯಿತವಾದ ಟ್ರಸ್ಟ್, ಸೊಸೈಟಿ, ಪಾಲುದಾರಿಕೆ ಸಂಸ್ಥೆ, ಸೀಮಿತ ಪಾಲುದಾರಿಕೆ ಒಪ್ಪಂದ ಮತ್ತು ಕಂಪನಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಇದನ್ನೂ ಓದಿ: ಕರಾವಳಿ ಕಂಬಳ ಆಯೋಜಕರಿಗೆ ಸರ್ಕಾರ ಗುಡ್​ನ್ಯೂಸ್​​! 1.15 ಕೋಟಿ ರೂ ಅನುದಾನ ಘೋಷಣೆ

1 ಸಾವಿರ ರೂ ನೋಂದಣಿ ಶುಲ್ಕ ನಿಗದಿ ಪಡಿಸಲಾಗಿದ್ದು, ಜಿಎಸ್‌ಟಿ ಮೊತ್ತವನ್ನು ಆನ್‌ಲೈನ್ ಮೂಲಕವೇ ಪಾವತಿಸಬೇಕು. ಪ್ರತಿ ಸನ್ನದಿನ ಅರ್ಜಿಗೆ 50 ಸಾವಿರ ರೂ ಅರ್ಜಿ ಶುಲ್ಕ ನಿಗದಿಪಡಿಸಲಾಗಿದ್ದು, ಇದು ಯಾವುದೇ ಕಾರಣಕ್ಕೂ ಮರುಪಾವತಿಯಾಗುವುದಿಲ್ಲ. ಬಿಡ್‌ದಾರರು ತಮ್ಮ ಆಯ್ಕೆಗೆ ಅನುಗುಣವಾಗಿ ಎಷ್ಟು ಸನ್ನದುಗಳಿಗಾದರೂ ಅರ್ಜಿಗಳನ್ನು ಸಲ್ಲಿಸಲು ಮುಕ್ತ ಅವಕಾಶ ಕಲ್ಪಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:42 pm, Fri, 17 July 26

Follow Us
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಚಿತ್ರೀಕರಣದಲ್ಲಿ ಆದ ಕಷ್ಟಗಳನ್ನು ವಿವರಿಸಿದ ನಟ ತಬಲಾ ನಾಣಿ: ವಿಡಿಯೋ
ಚಿತ್ರೀಕರಣದಲ್ಲಿ ಆದ ಕಷ್ಟಗಳನ್ನು ವಿವರಿಸಿದ ನಟ ತಬಲಾ ನಾಣಿ: ವಿಡಿಯೋ
ಅರಬ್ಬಿ ಸಮುದ್ರದಲ್ಲಿ ಮಗುಚಿದ ನಾಡದೋಣಿ: ನಾಲ್ವರು ಮೀನುಗಾರರು ಪಾರು
ಅರಬ್ಬಿ ಸಮುದ್ರದಲ್ಲಿ ಮಗುಚಿದ ನಾಡದೋಣಿ: ನಾಲ್ವರು ಮೀನುಗಾರರು ಪಾರು
ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿ. 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ
ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿ. 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ
ಚಾಮುಂಡೇಶ್ವರಿ ದೇವಾಲಯದಲ್ಲಿ ವಿಜಯಲಕ್ಷ್ಮಿ ದರ್ಶನ್ ವಿಶೇಷ ಪೂಜೆ: ವಿಡಿಯೋ
ಚಾಮುಂಡೇಶ್ವರಿ ದೇವಾಲಯದಲ್ಲಿ ವಿಜಯಲಕ್ಷ್ಮಿ ದರ್ಶನ್ ವಿಶೇಷ ಪೂಜೆ: ವಿಡಿಯೋ
ಸುಪ್ರೀಂಕೋರ್ಟ್​​ ನೋಟಿಸ್ ಬಗ್ಗೆ ರೇವಣ್ಣ ಫಸ್ಟ್​​ ರಿಯಾಕ್ಷನ್​​
ಸುಪ್ರೀಂಕೋರ್ಟ್​​ ನೋಟಿಸ್ ಬಗ್ಗೆ ರೇವಣ್ಣ ಫಸ್ಟ್​​ ರಿಯಾಕ್ಷನ್​​