ಖ್ಯಾತ ಬಂಡಾಯ ಸಾಹಿತಿ ಡಾ.ಚೆನ್ನಣ್ಣ ವಾಲಿಕಾರ್ ನಿಧನ

|

Updated on: Nov 25, 2019 | 10:04 AM

ಕಲಬುರಗಿ: ಕಲ್ಯಾಣ ಕರ್ನಾಟಕ ನಾಡಿನ ಖ್ಯಾತ ಬಂಡಾಯ ಸಾಹಿತಿ ಡಾ.ಚೆನ್ನಣ್ಣ ವಾಲಿಕಾರ್ ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ. 2 ವರ್ಷದ ಹಿಂದೆ ಲಿವರ್ ಕ್ಯಾನ್ಸರ್ ಆಗಿತ್ತು. ಹೀಗಾಗಿ ಚಿಕಿತ್ಸೆ ಪಡೆದುಕೊಲ್ಳುತ್ತಿದ್ದ ಡಾ.ಚೆನ್ನಣ್ಣ ವಾಲಿಕಾರ್ ಕಳೆದ ಕೆಲ ತಿಂಗಳಿನಿಂದ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದರು. ಚೆನ್ನಣ್ಣ ವಾಲಿಕಾರ್ ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕಳೆದ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 77 ವರ್ಷ ವಯಸ್ಸಾಗಿತ್ತು. ಇಂದು ಕಲಬುರ್ಗಿ ನಗರದ ಸೇಡಂ ರಸ್ತೆಯಲ್ಲಿ ಬರುವ ಹಿಂದಿ ಪ್ರಚಾರ […]

ಖ್ಯಾತ ಬಂಡಾಯ ಸಾಹಿತಿ ಡಾ.ಚೆನ್ನಣ್ಣ ವಾಲಿಕಾರ್ ನಿಧನ
Follow us on

ಕಲಬುರಗಿ: ಕಲ್ಯಾಣ ಕರ್ನಾಟಕ ನಾಡಿನ ಖ್ಯಾತ ಬಂಡಾಯ ಸಾಹಿತಿ ಡಾ.ಚೆನ್ನಣ್ಣ ವಾಲಿಕಾರ್ ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ. 2 ವರ್ಷದ ಹಿಂದೆ ಲಿವರ್ ಕ್ಯಾನ್ಸರ್ ಆಗಿತ್ತು. ಹೀಗಾಗಿ ಚಿಕಿತ್ಸೆ ಪಡೆದುಕೊಲ್ಳುತ್ತಿದ್ದ ಡಾ.ಚೆನ್ನಣ್ಣ ವಾಲಿಕಾರ್ ಕಳೆದ ಕೆಲ ತಿಂಗಳಿನಿಂದ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದರು. ಚೆನ್ನಣ್ಣ ವಾಲಿಕಾರ್ ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೇ ಕಳೆದ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 77 ವರ್ಷ ವಯಸ್ಸಾಗಿತ್ತು. ಇಂದು ಕಲಬುರ್ಗಿ ನಗರದ ಸೇಡಂ ರಸ್ತೆಯಲ್ಲಿ ಬರುವ ಹಿಂದಿ ಪ್ರಚಾರ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಯಿಂದ 12 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ನಂತರ ಚಿತ್ತಾಪುರ ತಾಲ್ಲೂಕಿನ ಶಂಕ್ರವಾಡಿ ಗ್ರಾಮದಲ್ಲಿ ಮಧ್ಯಾಹ್ನ 3 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.

Published On - 7:35 am, Mon, 25 November 19