Karnataka Breaking News in Kannada Highlights: ಕಾವೇರಿ ಕಿಚ್ಚು: ನಾಳಿನ ಮಂಡ್ಯ ಬಂದ್​ಗೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಬೆಂಬಲ

ಕಿರಣ್ ಹನುಮಂತ್​ ಮಾದಾರ್
| Updated By: ಗಂಗಾಧರ​ ಬ. ಸಾಬೋಜಿ

Updated on:Sep 22, 2023 | 10:41 PM

Breaking News Today Highlights: ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ನಿನ್ನೆ(ಸೆ.21) ಆದೇಶ ನೀಡಿದೆ. ಈ ಹಿನ್ನೆಲೆ ಇಂದು ರೈತರು ಹಾಗೂ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯುತ್ತಿದೆ. ಹೀಗಾಗಿ ಬೆಂಗಳೂರಿನಾದ್ಯಂತ ಕಟ್ಟೆಚ್ಚರ ವಹಿಸಲು ಪೊಲೀಸ್ ಆಯುಕ್ತ ದಯಾನಂದ್ ಸೂಚನೆ ನೀಡಿದ್ದಾರೆ. ಇದರ ಜೊತೆಗೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಡುವೆ ರಾಜಕೀಯ ವಾಕ್ಸಮರದ ಜೊತೆಗೆ ಪಕ್ಷಗಳಲ್ಲಿ ಲೋಕಸಭೆ ಚುನಾವಣೆ ತಯಾರಿಯೂ ನಡೆಯುತ್ತಿದೆ.

Karnataka Breaking News in Kannada Highlights: ಕಾವೇರಿ ಕಿಚ್ಚು: ನಾಳಿನ ಮಂಡ್ಯ ಬಂದ್​ಗೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಬೆಂಬಲ
ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ

Breaking News Today: ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ನಿನ್ನೆ(ಸೆ.21) ಆದೇಶ ನೀಡಿದೆ. ಈ ಹಿನ್ನೆಲೆ ಇಂದು ರೈತರು ಹಾಗೂ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯುವ ಸಾಧ್ಯತೆ ಇದೆ. ಹೀಗಾಗಿ ಬೆಂಗಳೂರಿನಾದ್ಯಂತ ಕಟ್ಟೆಚ್ಚರ ವಹಿಸಲು ಪೊಲೀಸ್ ಆಯುಕ್ತ ದಯಾನಂದ್ ಸೂಚನೆ ನೀಡಿದ್ದಾರೆ. ಇನ್ನು ಈಗಾಗಲೇ ಲೋಕಸಭೆ ಚುನಾವಣೆಗೆ ಉಭಯ ಪಕ್ಷಗಳು ತಯಾರಿ ನಡೆಸುತ್ತಿದ್ದು. ಅದರಂತೆ ನಿನ್ನೆ ಜೆಡಿಎಸ್​, ಬಿಜೆಪಿ ಮೈತ್ರಿ ಮಾತುಕತೆ ದೆಹಲಿಯ ಹೆಚ್​ಡಿ ದೇವೇಗೌಡ ಅವರ ನಿವಾಸದಲ್ಲಿ ನಡೆದಿದೆ. ಈ ಕುರಿತು ಇಂದು ಬೆಳಗ್ಗೆ 9.30ಕ್ಕೆ ದೆಹಲಿಯ ಸಫ್ದರ್​ಜಂಗ್ ಲೇನ್​ನಲ್ಲಿರುವ ನಿವಾಸದಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡ ಅವರು ಸುದ್ದಿಗೋಷ್ಠಿ ನಡೆಸಲಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿದ್ದು, ಕೆಲವೆಡೆ ಮಳೆಗಾಗಿ ರೈತರು ಕಾಯುತ್ತಿದ್ದಾರೆ. ಈ ಎಲ್ಲದರ ಕ್ಷಣಕ್ಷಣದ ಮಾಹಿತಿ ಟಿವಿ9 ಲೈವ್​ನಲ್ಲಿ ಪಡೆಯಿರಿ.

LIVE NEWS & UPDATES

The liveblog has ended.
  • 22 Sep 2023 10:34 PM (IST)

    Karnataka Breaking News in Kannada Live: ನಾವು ಇದುವರೆಗೆ ಎಲ್ಲ ರೈತರ ಹಿತವನ್ನೂ ಕಾಪಾಡಿದ್ದೇವೆ

    ಕಾನೂನು ತಜ್ಞರು ಕ್ಯಾಬಿನೆಟ್‌ಗೆ ಬಂದು ಎಲ್ಲ ಕಾನೂನು ವಿವರ ನೀಡಿದ್ದಾರೆ ಎಂದು ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. 5000 ಕ್ಯೂಸೆಕ್‌ ಬಿಡಲು ಹೇಳಿದ್ದಾರೆ, 7000 ಕ್ಯೂಸೆಕ್‌ ಇನ್‌ಫ್ಲೋ ಇದೆ. ಸಾಮಾನ್ಯವಾಗಿ 2500ರಿಂದ 3000 ಕ್ಯೂಸೆಕ್‌ ನೀರು ಹರಿಯುತ್ತದೆ. ನಾವು ಇದುವರೆಗೆ ಎಲ್ಲ ರೈತರ ಹಿತವನ್ನೂ ಕಾಪಾಡಿದ್ದೇವೆ ಎಂದಿದ್ದಾರೆ.

  • 22 Sep 2023 09:29 PM (IST)

    Karnataka Breaking News in Kannada Live: ಬರ ಘೋಷಣೆ ತಾಲೂಕುಗಳಿಗೆ ಸಚಿವ ಸಂಪುಟ ಅನುಮೋದನೆ

    195 ತಾಲೂಕುಗಳ ಬರ ಘೋಷಣೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.

  • 22 Sep 2023 09:17 PM (IST)

    Karnataka Breaking News in Kannada Live: ಬೆಂಗಳೂರು ಮಹಾನಗರದ ಹಲವೆಡೆ ವರ್ಷಧಾರೆ

    ಬೆಂಗಳೂರು ಮಹಾನಗರದ ಹಲವೆಡೆ ಮಳೆ ಸುರಿದಿದೆ. ಮೆಜೆಸ್ಟಿಕ್, ಟೌನ್ ಹಾಲ್, ಕೆ.ಆರ್.ಮಾರ್ಕೆಟ್, ಮಲ್ಲೇಶ್ವರಂ, ರಾಜಾಜಿನಗರ, ಶಾಂತಿನಗರ ಸೇರಿದಂತೆ ಹಲವೆಡೆ ವರ್ಷಧಾರೆ ಆಗಿದ್ದು, ಮಳೆಯಿಂದ ವಾಹನ ಸವಾರರ ಪರದಾಡಿದ್ದು, ಸಂಚಾರ ವ್ಯತ್ಯಯವಾಗಿದೆ.

  • 22 Sep 2023 08:19 PM (IST)

    Karnataka Breaking News in Kannada Live: ನಾಳಿನ ಮಂಡ್ಯ ಬಂದ್​ಗೆ ಹೆಚ್.ಡಿ.ಕುಮಾರಸ್ವಾಮಿ ಬೆಂಬಲ

    ನಾಳಿನ ಮಂಡ್ಯ ಬಂದ್​ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬೆಂಬಲ ಸೂಚಿಸಿದ್ದಾರೆ. ದೆಹಲಿಯಿಂದ ನಾಳೆ ಮಂಡ್ಯಕ್ಕೆ ಆಗಮಿಸಿ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಬಂದ್ ಬೆಂಬಲಿಸುವ ಬಗ್ಗೆ ಸಿ.ಎಸ್.ಪುಟ್ಟರಾಜು ಜತೆ ಚರ್ಚೆ ಮಾಡಿದ್ದಾರೆ.

  • 22 Sep 2023 07:42 PM (IST)

    Karnataka Breaking News in Kannada Live: ಜೆಡಿಎಸ್‌ ಹೆಸರಿನಲ್ಲಿರುವ ಸೆಕ್ಯುಲರ್ ಅನ್ನೋ ಪದವನ್ನು ತೆಗೆದು ಹಾಕಲಿ

    ಜೆಡಿಎಸ್‌ ಹೆಸರಿನಲ್ಲಿರುವ ಸೆಕ್ಯುಲರ್ ಅನ್ನೋ ಪದವನ್ನು ತೆಗೆದು ಹಾಕಲಿ ಎಂದು ವಿಧಾನಸೌಧದಲ್ಲಿ ಕೃಷಿ ಇಲಾಖೆಯ ಸಚಿವ ಚಲುವರಾಯಸ್ವಾಮಿ ಕಿಡಿಕಾರಿದ್ದಾರೆ. ಜನತಾ ಪರಿವಾರ ಹುಟ್ಟಿದ ಬಳಿಕ ಎಂದೂ ಇಂಥ ನಿರ್ಧಾರ ಕೈಗೊಂಡಿರಲಿಲ್ಲ. ಈಗ JDSನವರು ಬಿಜೆಪಿ ಜತೆ ಹೋಗಿದ್ದಾರೆ ಅಂದರೆ ಅದರಲ್ಲೇ ಅರ್ಥ ಆಗುತ್ತೆ ಅವರಿಗೆ ಇವರ ಅವಶ್ಯಕತೆ ಇತ್ತು, ಇವರಿಗೆ ಅವರ ಅವಶ್ಯಕತೆ ಇತ್ತು.

  • 22 Sep 2023 07:03 PM (IST)

    Karnataka Breaking News in Kannada Live: 2 ಐಎಎಸ್ ಅಧಿಕಾರಿಗಳ ವರ್ಗಾವಣೆ

    2 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

    ಶ್ರೀವಿದ್ಯಾ ಪಿ.ಐ. – ಹೆಚ್ಚುವರಿ ನಿರ್ದೇಶಕಿ, ಫಿಸ್ಕಲ್ ಪಾಲಿಸಿ ಸಂಸ್ಥೆ, ಆರ್ಥಿಕ ಇಲಾಖೆ

    ರಮ್ಯ ಎಸ್.- ಬಿಬಿಎಂಪಿ ವಲಯ ಅಯುಕ್ತೆ, ಬೊಮ್ಮನಹಳ್ಳಿ ವಲಯ

  • 22 Sep 2023 06:24 PM (IST)

    Karnataka Breaking News in Kannada Live: ಕಾವೇರಿ ನೀರಿನ ವಿಚಾರದ ಬಗ್ಗೆ ಮಹತ್ವದ ಚರ್ಚೆ ನಡೆಸುವ ಸಚಿವರು

    ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆ ಆರಂಭವಾಗಿದೆ. ಕಾವೇರಿ ನೀರಿನ ವಿಚಾರದ ಬಗ್ಗೆ ಸಚಿವರು ಮಹತ್ವದ ಚರ್ಚೆ ನಡೆಸಲಿದ್ದಾರೆ. ಸರ್ಕಾರದ ಮುಂದಿನ ನಡೆಯ ಬಗ್ಗೆ ಸಂಪುಟದಲ್ಲಿ ಮಹತ್ವದ ನಿರ್ಧಾರ ಸಾಧ್ಯತೆ ಇದೆ.

  • 22 Sep 2023 05:57 PM (IST)

    Karnataka Breaking News in Kannada Live: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

    ರಾಜ್ಯ ಸರ್ಕಾರ ರೈತರ ಬದುಕಿನ ಜೊತೆ ಚೆಲ್ಲಾಟವಾಡಿದೆ ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ ಮಾಡಿದ್ದಾರೆ. ಒಂದು ಕಡೆ ನೀರಿಲ್ಲ ಅಂತಾರೆ, ಮತ್ತೊಂದು ಕಡೆ ನೀರು ಬಿಡುತ್ತಾರೆ. ಸರ್ಕಾರ ಗ್ಯಾರಂಟಿಗಳ ಭಜನೆ ಮಾಡಿಕೊಂಡು ಕುಳಿತಿದೆ. ಸರ್ಕಾರಕ್ಕೆ ಕನಿಷ್ಠ ತಿಳಿವಳಿಕೆ ಕೂಡ ಇಲ್ಲ ಎಂದಿದ್ದಾರೆ.

  • 22 Sep 2023 05:21 PM (IST)

    Karnataka Breaking News in Kannada Live: ಆಗಸ್ಟ್‌ನಲ್ಲೇ ನೀರು ಬಿಡಬೇಡಿ ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದೆ

  • 22 Sep 2023 04:42 PM (IST)

    Karnataka Breaking News in Kannada Live: ರಾಜ್ಯದ 28 ಕ್ಷೇತ್ರಗಳಲ್ಲೂ ಬಿಜೆಪಿ, JDS ಗೆಲ್ಲುವುದೇ ನಮ್ಮ ಗುರಿ

    ರಾಜ್ಯದ 28 ಕ್ಷೇತ್ರಗಳಲ್ಲೂ ಬಿಜೆಪಿ, JDS ಗೆಲ್ಲುವುದೇ ನಮ್ಮ ಗುರಿ. ಬಿಜೆಪಿ, ಜೆಡಿಎಸ್‌ ಮೈತ್ರಿ ವಿಚಾರದಲ್ಲಿ ಯಾವುದೇ ಸಮಸ್ಯೆ ಇಲ್ಲ. ಮುಂದೆ ಯಾವುದೇ ರೀತಿಯಲ್ಲೂ ಗೊಂದಲ ಇಲ್ಲದೆ ಮೈತ್ರಿ ನಡೆಯುತ್ತೆ. ಮೈತ್ರಿ ಸಂಬಂಧ ಚರ್ಚಿಸಲೆಂದೇ ಇಂದು ಬಿಜೆಪಿ ನಾಯಕರ ಭೇಟಿ ಮಾಡಿದ್ದೇವೆ ಎಂದು ಹೇಳಿದ್ದಾರೆ.

  • 22 Sep 2023 04:34 PM (IST)

    Karnataka Breaking News in Kannada Live: ಬಿಜೆಪಿ, JDS ಮೈತ್ರಿ ಸಭೆ ಅಂತ್ಯ

    ಅಧಿಕೃತವಾಗಿ ಮೈತ್ರಿ ಬಗ್ಗೆ ಕೆಲ ವಿಚಾರ ಚರ್ಚೆ ನಡೆಸಿದ್ದೇವೆ ಎಂದು ದೆಹಲಿಯಲ್ಲಿ ಸಭೆ ಬಳಿಕ ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮೈತ್ರಿ ಬಗ್ಗೆ ಎಲ್ಲಾ ರೀತಿಯಲ್ಲೂ ಸುಗಮವಾಗಿ ಚರ್ಚೆ ನಡೆಯುತ್ತಿದೆ. ಎಷ್ಟು ಸೀಟ್‌ ನಮಗೆ ಕೊಡುತ್ತಾರೆಂಬುದು ಮುಖ್ಯವಲ್ಲ ಎಂದು ಹೇಳಿದ್ದಾರೆ.

  • 22 Sep 2023 04:11 PM (IST)

    Karnataka Breaking News in Kannada Live: 6 ಸ್ಥಾನಗಳಿಗೆ ಬೇಡಿಕೆ ಇಟ್ಟಿರುವ ಜೆಡಿಎಸ್

    ಬಿಜೆಪಿ, ಜೆಡಿಎಸ್ ಮೈತ್ರಿ ಸಂಬಂಧ ಅಂತಿಮ ಮಾತುಕತೆ ಆರಂಭವಾಗಿದ್ದು, 6 ಸ್ಥಾನಗಳಿಗೆ ಜೆಡಿಎಸ್ ಬೇಡಿಕೆ ಇಟ್ಟಿದೆ. 6 ಕ್ಷೇತ್ರಗಳ ಪಕ್ಷಗಳ ಬಲಾಬಲ ಮತ ವಿವರವನ್ನು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಕಲೆ ಹಾಕುತ್ತಿದ್ದಾರೆ. ಬಿಜೆಪಿಗಿಂತಾ ಹೆಚ್ಚು ಮತಗಳು ಇರುವ ಕ್ಷೇತ್ರಗಳ ಮೇಲೆ ಕಣ್ಣಿಡಲಾಗಿದೆ.

  • 22 Sep 2023 03:55 PM (IST)

    Karnataka Breaking News in Kannada Live: ನಾಲ್ವರು IPS ಅಧಿಕಾರಿಗಳಿಗೆ ಹುದ್ದೆ

    ಸ್ಥಳ ನಿಯೋಜನೆಗಾಗಿ ಕಾಯುತ್ತಿದ್ದ ನಾಲ್ವರು IPS ಅಧಿಕಾರಿಗಳಿಗೆ ಹುದ್ದೆ ನೀಡಲಾಗಿದೆ.

    ಸುಧೀರ್ ಕುಮಾರ್ ರೆಡ್ಡಿ, ಪೊಲೀಸ್ ವರಿಷ್ಠಾಧಿಕಾರಿ, ಸಿಐಡಿ ಅರಣ್ಯ ಘಟಕ

    ಸಿ.ಬಿ.ವೇದಮೂರ್ತಿ, ಪೊಲೀಸ್ ವರಿಷ್ಠಾಧಿಕಾರಿ, ಗುಪ್ತಚರ ಇಲಾಖೆ

    ಹಾಕೆ ಅಕ್ಷಯ್ ಮಚ್ಚೀಂದ್ರ, ಡಿಸಿಜಿ, ಗೃಹರಕ್ಷಕ ದಳ

    ಕ್ಷಮಾ ಮಿಶ್ರಾ, ಡಿಸಿಪಿ, ಕಮಾಂಡ್ ಸೆಂಟರ್, ಬೆಂಗಳೂರು

    ಗುಪ್ತಚರ ಇಲಾಖೆ ಎಸ್​ಪಿ ಆಗಿದ್ದ ರವೀಂದ್ರ ಗಡಾದಿ ವರ್ಗಾವಣೆ

    ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಎಸ್​ಪಿ ಆಗಿ ವರ್ಗಾವಣೆ

  • 22 Sep 2023 03:54 PM (IST)

    Karnataka Breaking News in Kannada Live: ಅಮಿತ್ ಶಾ ಜತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಾತುಕತೆ

    2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ, JDS ಮೈತ್ರಿ ವಿಚಾರವಾಗಿ ಕೇಂದ್ರ ಗೃಹ ಇಲಾಖೆ ಸಚಿವ ಅಮಿತ್ ಶಾ ನಿವಾಸದಲ್ಲಿ ಸಭೆ ಆರಂಭವಾಗಿದೆ. ಅಮಿತ್ ಶಾ ಜತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಾತುಕತೆ ನಡೆಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಉಪಸ್ಥಿತರಿದ್ದಾರೆ.

  • 22 Sep 2023 03:21 PM (IST)

    Karnataka Breaking News in Kannada Live: ಡಿಸಿಎಂ ಡಿಕೆ ಶಿವಕುಮಾರ್​ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ಕಿಡಿ

  • 22 Sep 2023 02:40 PM (IST)

    Karnataka Breaking News in Kannada Live: ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಸಂಜೆ ಮಾತುಕತೆ ನಡೆಯಲಿದೆ

    ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಸಂಜೆ ಮಾತುಕತೆ ನಡೆಯಲಿದೆ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ‌ ಹೇಳಿದ್ದಾರೆ. JDS ಜೊತೆಗಿನ ಮಾತುಕತೆ ನಂತರ ವರಿಷ್ಠರು ನಮಗೆ ತಿಳಿಸುತ್ತಾರೆ. ನಮ್ಮ ನಾಯಕರು ಬೇರೆ ಬೇರೆ ಹಂತದಲ್ಲಿ ವರಿಷ್ಠರ ಜೊತೆ ಚರ್ಚಿಸಿದ್ದಾರೆ. ಜೆಡಿಎಸ್​ನವರ ಮನಸ್ಥಿತಿ ತಿಳಿದು ಬಳಿಕ ನಮ್ಮ ಜೊತೆ ಮಾತಾಡುತ್ತಾರೆ ಎಂದು ಹೇಳಿದ್ದಾರೆ.

  • 22 Sep 2023 02:07 PM (IST)

    Karnataka Breaking News: ಮತ್ತೆ ನೀರು ಹರಿಸಿದರೆ ಇಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗುತ್ತದೆ; ಅಭಿಷೇಕ್ ಅಂಬರೀಶ್​

    ಮಂಡ್ಯ: ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ‘ಸುಪ್ರೀಂ’ ಆದೇಶ ವಿಚಾರ ‘ಮತ್ತೆ ನೀರು ಹರಿಸಿದರೆ ಇಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗುತ್ತದೆ ಎಂದು ಅಭಿಷೇಕ್ ಅಂಬರೀಶ್ ಹೇಳಿದ್ದಾರೆ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಮಾತನಾಡಿದ ಅವರು ‘ಒಂದು ವೇದಿಕೆ ಸೃಷ್ಟಿ ಮಾಡುತ್ತೇವೆ, ಚಿತ್ರನಟರು ಭಾಗಿಯಾಗಲಿದ್ದಾರೆ. ಕಾವೇರಿ ನೀರು ಹಳೇ ಸಮಸ್ಯೆ, ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ ಎಂದರು.

  • 22 Sep 2023 01:33 PM (IST)

    Karnataka Breaking News: ಮೈಸೂರಿನ ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗ ಪ್ರತಿಭಟನೆ; ರೈತರನ್ನು ವಶಕ್ಕೆ ಪಡೆದ ಪೊಲೀಸರು

    ಮೈಸೂರು: ಸುಪ್ರೀಂ ಕೋರ್ಟ್​ ನಿರ್ಧಾರಕ್ಕೆ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ನೇತೃತ್ವದಲ್ಲಿ ಮೈಸೂರಿನ ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಪ್ರತಿಭಟನಾನಿರತ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

  • 22 Sep 2023 01:25 PM (IST)

    Karnataka Breaking News: ಇಂಧನ ಇಲಾಖೆಯ ಜೊತೆ ಸಿಎಂ ಸಿದ್ದರಾಮಯ್ಯ ಪ್ರಗತಿ ಪರಿಶೀಲನೆ ಸಭೆ

    ಬೆಂಗಳೂರು: ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಇಂಧನ ಇಲಾಖೆ ಜೊತೆ ಸಿಎಂ ಪ್ರಗತಿ ಪರಿಶೀಲನಾ ಸಭೆ ನಡೆಸುತ್ತಿದ್ದಾರೆ. ಸಭೆಯಲ್ಲಿ ಇಂಧನ ಇಲಾಖೆ ಸಚಿವ ಕೆ.ಜೆ.ಜಾರ್ಜ್‌, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತಾ, ಆರ್ಥಿಕ ಇಲಾಖೆ ಕಾರ್ಯದರ್ಶಿ ಡಾ.ಎಂ.ಟಿ.ರೇಜು‌ ಇನ್ನಿತರರು ಉಪಸ್ಥಿತರಿದ್ದಾರೆ.

  • 22 Sep 2023 01:22 PM (IST)

    Karnataka Breaking News: ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ

    ಮಂಡ್ಯ: ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆಯಲ್ಲಿ ಅಭಿಷೇಕ್ ಅಂಬರೀಶ್ ಕೂಡ ಭಾಗಿಯಾಗಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿರುವ ಪ್ರತಿಭಡನಕಾರರು ಬೆಂಗಳೂರು ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆ ಟ್ರಾಫಿಕ್ ಜಾಮ್ ಆಗಿದ್ದು, ವಾಹನ ಸವಾರರು ಪರದಾಟ ನಡೆಸುವ ಸ್ಥಿತಿ ನಿರ್ಮಾಣವಾಗಿದೆ.

  • 22 Sep 2023 01:12 PM (IST)

    Karnataka Breaking News: ಬೆಂಗಳೂರಿನ ಎಸ್​ಬಿಎಂ ವೃತ್ತದಲ್ಲಿ ನಮ್ಮ ಕರ್ನಾಟಕ ಸೇನೆ ಪ್ರತಿಭಟನೆ

    ಬೆಂಗಳೂರು: ಸುಪ್ರೀಂಕೋರ್ಟ್ ಆದೇಶ ಹಿನ್ನಲೆ ಬೆಂಗಳೂರಿನ ಎಸ್​ಬಿಎಂ ವೃತ್ತದಲ್ಲಿ ನಮ್ಮ ಕರ್ನಾಟಕ ಸೇನೆ ಪ್ರತಿಭಟನೆ ನಡೆಸಿದೆ. ಅವೆನ್ಯೂ ರಸ್ತೆಯ ರಾಜ ಮಾರ್ಕೆಟ್ ವೃತ್ತದಲ್ಲಿ ಕರವೇ ನಾರಾಯಗೌಡ ಬಣದಿಂದ ಪ್ರತಿಭಟನೆ ನಡೆಯುತ್ತಿದ್ದು, ಪ್ರತಿಕೃತಿ ದಹಿಸಿ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸದಂತೆ ಘೋಷಣೆ ಕೂಗಿದ್ದಾರೆ.

  • 22 Sep 2023 01:09 PM (IST)

    Karnataka Breaking News: ಧಾರವಾಡದ ಡಿಸಿ ಕಚೇರಿ ಎದುರು ಕರವೇ ಪ್ರತಿಭಟನೆ

    ಧಾರವಾಡ: ಕಾವೇರಿ ನೀರು ಬಿಡುವಂತೆ ಆದೇಶ ಹಿನ್ನೆಲೆ ಧಾರವಾಡದ ಡಿಸಿ ಕಚೇರಿ ಎದುರು ಸಂಸದರು ಹಾಗೂ ಶಾಸಕರ ವಿರುದ್ಧ ಧಿಕ್ಕಾರ ಕೂಗಿ ಕರವೇ ಪ್ರತಿಭಟನೆ ನಡೆಸಿದ್ದಾರೆ. ಯಾವುದೇ ಕಾರಣಕ್ಕೂ ನೀರು ಬಿಡದಂತೆ ಒತ್ತಾಯಿಸಿ, ನೀರು ಬಿಟ್ಟರೆ ಕ್ರಾಂತಿ ಎಂದು ಘೋಷಣೆ ಕೂಗುವ ಮೂಲಕ ಟಿ ಎ ನಾರಾಯಣಗೌಡ ಬಣದ ಕಾರ್ಯಕರ್ತರಿಂದ ಪ್ರತಿಭಟನೆಗೆ ಮುಂದಾಗಿದ್ದಾರೆ.

  • 22 Sep 2023 01:06 PM (IST)

    Karnataka Breaking News: ಉತ್ತರ ಕರ್ನಾಟಕದಲ್ಲಿ ತೀವ್ರ ಬರಗಾಲ; ಮಲಪ್ರಭಾ ಜಲಾಶಯದಿಂದ ಕಾಲುವೆಗೆ ನೀರು ಬಿಡುಗಡೆ

    ಬೆಳಗಾವಿ: ಉತ್ತರ ಕರ್ನಾಟಕ ಭಾಗದಲ್ಲಿ ತೀವ್ರ ಬರಗಾಲ ಹಿನ್ನೆಲೆ ಮಲಪ್ರಭಾ ಜಲಾಶಯದಿಂದ ಬಲದಂಡೆ ಕಾಲುವೆಗೆ ನೀರು ಬಿಡುಗಡೆ ಮಾಡಲಾಗಿದೆ. ಹೌದು, ಶಾಸಕರಾದ ವಿಶ್ವಾಸ್ ವೈದ್ಯ, ಎನ್.ಎಚ್ ಕೋನರೆಡ್ಡಿಯಿಂದ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ ಜಿಲ್ಲೆಯ 14 ತಾಲೂಕಿನಲ್ಲಿ ಕುಡಿಯುವ ಸಲುವಾಗಿ ನೀರು ಬಿಡುಗಡೆ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಹೊರ ವಲಯದಲ್ಲಿರುವ ಜಾಕ್​ವೆಲ್​ನಿಂದ ನೀರು ರಿಲೀಸ್‌ ಆಗಿದೆ.

  • 22 Sep 2023 12:45 PM (IST)

    Karnataka Breaking News: ಕಾವೇರಿ ವಿಚಾರದಲ್ಲಿ ಸರ್ಕಾರ ಎಡವಿದೆ; ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

    ಬೆಂಗಳೂರು: ಕಾವೇರಿ ವಿಚಾರದಲ್ಲಿ ಸರ್ಕಾರ ಎಡವಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು ‘ನಮ್ಮ ವಕೀಲರು ಕೋರ್ಟ್ ಪ್ರೊಸೀಡಿಂಗ್ ನೋಡಿದ್ದಾರೆ, ರಾಜ್ಯದ ಲೀಗಲ್ ಟೀಂ ಸರಿಯಾಗಿ ವಾದ ಮಾಡಿಲ್ಲ. ಟ್ರಿಬ್ಯುನಲ್ ನಾರ್ಮ್ಸ್ ಬಗ್ಗೆ,‌ ತಮಿಳುನಾಡಿನಲ್ಲಿ ಎಷ್ಟು ನೀರು ಬಳಕೆಯಾಗಿದೆ ಎಂಬುದನ್ನು ಹೇಳಿಲ್ಲ. ಸರ್ಕಾರದ ವಿರುದ್ಧ ಜನಜಾಗೃತಿ ಮೂಡಿಸಬೇಕಿದೆ. ಅದನ್ನು ನಾವು ಮಾಡುತ್ತಿದ್ದೇವೆ‌. ಈಗಾಗಲೇ ಮಂಡ್ಯ, ಚಾಮರಾಜನಗರ, ಬೆಂಗಳೂರಿನಲ್ಲಿ ಸೇರಿ ಎಲ್ಲಾ ಕಡೆ ಹೋರಾಟ ಮಾಡಲು ನಿರ್ಧಾರ ಮಾಡಿದ್ದು, ಇಂದಿ‌ನ ಸಭೆಯಲ್ಲಿ ಹೋರಾಟದ ರೂಪು ರೇಷೆ ನಿರ್ಧರಿಸಲಿದ್ದೇವೆ ಎಂದರು.

  • 22 Sep 2023 12:41 PM (IST)

    Karnataka Breaking News: ತಮಿಳುನಾಡಿಗೆ‌ ನೀರು; ಕರವೇ ಕಾರ್ಯಕರ್ತರಿಂದ ಸಂಸದ ಜಿಎಂ‌. ಸಿದ್ದೇಶ್ವರ ಕಚೇರಿಗೆ ಮುತ್ತಿಗೆ

    ದಾವಣಗೆರೆ: ತಮಿಳುನಾಡಿಗೆ‌ ಕಾವೇರಿ ನದಿ ನೀರು ಬಿಡುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಕರವೇ ಕಾರ್ಯಕರ್ತರು ಸಂಸದ ಜಿಎಂ‌. ಸಿದ್ದೇಶ್ವರ ಕಚೇರಿಗೆ ಮುತ್ತಿಗೆ ಹಾಕಿ‌‌ದ್ದಾರೆ. ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ರಾಜ್ಯದ ಹಿತ ಕಾಪಡಲಿಲ್ಲವೆಂದು ಸಂಸದರ ಕಚೇರಿಗೆ ನುಗ್ಗಲು ಯತ್ನಿಸಿದ್ದಾರೆ.

  • 22 Sep 2023 12:38 PM (IST)

    Karnataka Breaking News: ರೈತರ ಪರವಾಗಿ ಆದಿಚುಂಚನಗಿರಿ ಪೀಠ ಸದಾ ನಿಮ್ಮ ಜೊತೆ ಇರುತ್ತೆ; ನಿರ್ಮಲಾನಂದನಾಥ ಶ್ರೀ

    ಮಂಡ್ಯ: ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ‘ಸುಪ್ರೀಂ’ ಆದೇಶ ವಿಚಾರ ‘ಪ್ರಜೆಗಳ ಹಿತವನ್ನು ಕಾಪಾಡುವ ಕೆಲಸ ಯಾವುದೇ ಸರ್ಕಾರ ಮಾಡಲಿ. ಸದ್ಯ ನ್ಯಾಯಾಲಯದ ಆದೇಶದಂತೆ ನಡೆದುಕೊಳ್ಳುವ ಸ್ಥಿತಿ ಬಂದಿದೆ. ವಸ್ತುಸ್ಥಿತಿ ಬಗ್ಗೆ ಸುಪ್ರೀಂಕೋರ್ಟ್​ಗೆ ಸರ್ಕಾರ ಸೂಕ್ತ ಮನವರಿಕೆ ಮಾಡಲಿ ಎಂದು ಮಂಡ್ಯದಲ್ಲಿ ಆದಿಚುಂಚನಗಿರಿ ಪೀಠದ ನಿರ್ಮಲಾನಂದನಾಥ ಶ್ರೀ ಹೇಳಿದರು. ‘ನಾವು ಕೂಡ ರಾಜ್ಯ ಹಾಗೂ ಕೇಂದ್ರ ಸಚಿವರ ಜೊತೆ ಮಾತನಾಡುತ್ತೇವೆ. ಆದಷ್ಟು ಬೇಗ ಮೇಕೆದಾಟು ಯೋಜನೆಯನ್ನು ಸರ್ಕಾರ ಕೈಗೆತ್ತಿಕೊಳ್ಳುವ ಮೂಲಕ ರೈತರಿಗೆ ಅನುಕೂಲ ಕಲ್ಪಿಸಲಿ ನಿರ್ಮಲಾನಂದನಾಥ ಶ್ರೀ ಹೇಳಿದರು.

  • 22 Sep 2023 12:27 PM (IST)

    Karnataka Breaking News: ಮಾಗಡಿ ರಸ್ತೆ ಟೋಲ್ ಗೇಟ್ ಬಳಿ ಕರವೇ ಕಾರ್ಯಕರ್ತರ ಪ್ರತಿಭಟನೆ

    ಬೆಂಗಳೂರು: ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ಹಿನ್ನಲೆ ಕಾವೇರಿ ಕಿಚ್ಚು ಭುಗಿಲೆದ್ದಿದ್ದು, ರಾಜ್ಯಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಅದರಂತೆ ವಿಜಯನಗರದ ಮಾಗಡಿ ರಸ್ತೆ ಟೋಲ್ ಗೇಟ್ ಬಳಿ ಕಾವೇರಿ ನಿರ್ವಹಣಾ ಪ್ರಾಧಿಕಾರದ ಭೂತದಹನ ಮಾಡಿ ಪ್ರತಿಭಟನೆ ನಡೆಸಿದ್ದಾರೆ.

  • 22 Sep 2023 12:20 PM (IST)

    Karnataka Breaking News: ಬರಿದಾಗಿರುವ ಕಾವೇರಿಗೆ ಬರದ ಶಾಸನ; ಕಸಾಪ ರಾಜ್ಯಾಧ್ಯಕ್ಷ

    ಮಂಡ್ಯ: ಬರಿದಾಗಿರುವ ಕಾವೇರಿಗೆ ಬರದ ಶಾಸನ ಕೊಟ್ಟಿದ್ದಾರೆ ಎಂದು ಕಸಾಪ ರಾಜ್ಯಾಧ್ಯಕ್ಷ ಡಾ. ಮಹೇಶ್ ಜೋಶಿ ಮಂಡ್ಯದಲ್ಲಿ ಹೇಳಿದ್ದಾರೆ. ‘ಮಾರಣಾಂತಿಕ ತೀರ್ಪು ಕೊಟ್ಟಿದ್ದಾರೆ. ಕಾವೇರಿ ಕೊಳ್ಳದ ಡ್ಯಾಮ್ ಗಳು ಬರಿದಾಗುತ್ತಿವೆ. ಮಳೆ ಬರದಿದ್ದರೇ ಬರ ಬರಲಿದೆ ಎಂದಿದ್ದಾರೆ.

  • 22 Sep 2023 11:33 AM (IST)

    Karnataka Breaking News: ಮಹಿಳಾ ಮೀಸಲಾತಿ ಬಿಲ್ ಹೊಸ ಪ್ರಜಾಪ್ರಭುತ್ವದ ಬದ್ಧತೆಯ ಪ್ರತೀಕ; ಪ್ರಧಾನಿ ಮೋದಿ

    ನವದೆಹಲಿ: ಲೋಕಸಭೆ, ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಬಿಲ್ ಅಂಗೀಕಾರ ಹಿನ್ನಲೆ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ‘ಪೂರ್ಣ ಬಹುಮತದೊಂದಿಗೆ ಬಿಲ್ ಅಂಗೀಕಾರವಾಗಿದ್ದಕ್ಕೆ, ದೇಶದ ಎಲ್ಲ ತಾಯಂದಿಯರು, ಸೋದರಿಯರಿಗೆ ಅಭಿನಂದನೆ ಸಲ್ಲಿಸುತ್ತೇನೆ.ಇಂಥಹ ಐತಿಹಾಸಿಕ ನಿರ್ಣಯ ತೆಗೆದುಕೊಳ್ಳುವ ಅವಕಾಶ ಬಿಜೆಪಿಗೆ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಮಹಿಳಾ ಮೀಸಲಾತಿ ಬಿಲ್ ಬಗ್ಗೆ ಚರ್ಚೆ ನಡೆಯಲಿದ್ದು, ಮಹಿಳಾ ಮೀಸಲಾತಿ ಬಿಲ್ ಹೊಸ ಪ್ರಜಾಪ್ರಭುತ್ವದ ಬದ್ಧತೆಯ ಪ್ರತೀಕ ಎಂದು ಹೇಳಿದರು.

  • 22 Sep 2023 11:07 AM (IST)

    Karnataka Breaking News: ಮಹಿಳಾ ಮೀಸಲಾತಿ ಬಿಲ್ ಅಂಗೀಕಾರ; ಬಿಜೆಪಿ ರಾಷ್ಟ್ರೀಯ ಮಹಿಳಾ ಮೋರ್ಚಾದಿಂದ ಪ್ರಧಾನಿಗೆ ಸನ್ಮಾನ

    ನವದೆಹಲಿ: ಲೋಕಸಭೆ, ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಬಿಲ್ ಅಂಗೀಕಾರವಾದ ಹಿನ್ನಲೆ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಮಹಿಳಾ ಮೋರ್ಚಾದಿಂದ ಪ್ರಧಾನಿ ಮೋದಿಗೆ ಸನ್ಮಾನ ಮಾಡಲಾಯಿತು.

  • 22 Sep 2023 10:31 AM (IST)

    Karnataka Breaking News: ರಾಜ್ಯಸಭೆಯಲ್ಲಿ ಕಾವೇರಿ ನದಿ ಬಗ್ಗೆ ನಾನೊಬ್ಬನೇ ಮಾತಾಡಿದ್ದು; ಹೆಚ್​ಡಿ ದೇವೇಗೌಡ

    ದೆಹಲಿ: ಕಾವೇರಿ ನೀರಿನ ವಿಚಾರವಾಗಿ ಹೆಚ್​​ಡಿ ದೇವೇಗೌಡ ಮಾತಾಡಲಿಲ್ಲ ಎಂಬ ಎಐಸಿಸಿ ಅಧ್ಯಕ್ಷ ಖರ್ಗೆ ಹೇಳಿಕೆಗೆ ಹೆಚ್​.ಡಿ.ಡಿ ಪ್ರತಿಕ್ರಿಯೆ ನೀಡಿದ್ದಾರೆ ‘ರಾಜ್ಯಸಭೆಯಲ್ಲಿ ಕಾವೇರಿ ನದಿ ಬಗ್ಗೆ ನಾನೊಬ್ಬನೇ ಮಾತಾಡಿದ್ದು, ಕಾವೇರಿ ನದಿ ವಿಚಾರದ ಬಗ್ಗೆ ನನ್ನ ಬಾಯಿಯಿಂದ ಹೇಳಿಸಬೇಡಿ ಎಂದಿದ್ದಾರೆ.

  • 22 Sep 2023 10:16 AM (IST)

    Karnataka Breaking News: ಮೈತ್ರಿ ವಿಚಾರವಾಗಿ ಯಾವುದೇ ಪ್ರತಿಕ್ರಿಯೆ ನೀಡಲ್ಲ; ಹೆಚ್​ಡಿ ದೇವೇಗೌಡ

    ನವದೆಹಲಿ: ಮೈತ್ರಿ ವಿಚಾರವಾಗಿ ಯಾವುದೇ ಪ್ರತಿಕ್ರಿಯೆ ನೀಡಲ್ಲ ಎಂದು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರು ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು ‘ನಾನು ಕ್ಲಿಯರ್ ಆಗಿ ಹೇಳ್ತಿನಿ ರಿಯಾಕ್ಟ್ ಮಾಡಲ್ಲ. ಕುಮಾರಸ್ವಾಮಿ ಆ ಬಗ್ಗೆ ಮಾತಾಡ್ತಾರೆ ಎಂದರು.

  • 22 Sep 2023 09:46 AM (IST)

    Karnataka Breaking News: ತಮಿಳುನಾಡಿಗೆ ಕಾವೇರಿ; ಕನ್ನಡ ಪರ‌‌ ಸಂಘಟನೆ, ಕಾವೇರಿ ಹೋರಾಟ ಸಮಿತಿಯಿಂದ ಪ್ರತಿಭಟನೆ

    ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರ ಹಿನ್ನಲೆ ನೀರು ಸಂಸ್ಕರಣಾ ಘಟಕದ ಬಳಿ ಕನ್ನಡ ಪರ‌‌ ಸಂಘಟನೆ ಹಾಗೂ ಕಾವೇರಿ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತೊರೆ ಕಾಡನಹಳ್ಳಿ ಬಳಿ ಇರುವ ಪಂಪ್​ ಹೌಸ್​ ಎದುರು ಬೆಂಗಳೂರಿಗೆ ನೀರು ಹರಿಸದಂತೆ ಪ್ರತಿಭಟನೆ ನಡೆಸುತ್ತಿದ್ದಾರೆ.

  • 22 Sep 2023 09:24 AM (IST)

    Karnataka Breaking News: ಶಿರಾ ಪಟ್ಟಣದಲ್ಲಿ ಆರ್​​ಟಿಒ ಅಧಿಕಾರಿಗಳ ಕಾರ್ಯಾಚರಣೆ

    ತುಮಕೂರು: ಶಿರಾ ಪಟ್ಟಣದಲ್ಲಿ ಪರವಾನಗಿ ಇಲ್ಲದೆ ಓಡಿಸುತ್ತಿದ್ದ 15 ಆಟೋಗಳು ಹಾಗೂ 1 ಶಾಲಾ ಬಸ್​ಗಳನ್ನು​ ಆರ್​​ಟಿಒ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇನ್ಶೂರೆನ್ಸ್, ಡಿಎಲ್ ಇಲ್ಲದೇ ವಾಹನ ಓಡಿಸುತ್ತಿದ್ದ ಚಾಲಕರಿಗೆ ಆರ್​ಟಿಒ ಇನ್ಸ್​ಪೆಕ್ಟರ್ ಶರೀಫ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಶಾಕ್​ ನೀಡಿದ್ದಾರೆ.

  • 22 Sep 2023 09:01 AM (IST)

    Karnataka Breaking News: ರಾಜ್ಯಸಭೆಯಲ್ಲೂ ಮಹಿಳಾ ಮೀಸಲಾತಿ ಬಿಲ್ ಅಂಗೀಕಾರ; ಟ್ವೀಟ್​ ಮೂಲಕ ಧನ್ಯವಾದ ತಿಳಿಸಿದ ಮೋದಿ

    ದೆಹಲಿ: ರಾಜ್ಯಸಭೆಯಲ್ಲೂ ಮಹಿಳಾ ಮೀಸಲಾತಿ ಬಿಲ್ ಅಂಗೀಕಾರ ಹಿನ್ನಲೆ ಟ್ವೀಟ್​ ಮೂಲಕ ದೇಶದ 140 ಕೋಟಿ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಧನ್ಯವಾದ ತಿಳಿಸಿದ್ದಾರೆ. ‘ಮಹಿಳಾ ಮೀಸಲಾತಿ ಬಿಲ್​ ಅಂಗೀಕಾರಕ್ಕೆ ಸಹಕರಿಸಿದ ಎಲ್ಲರಿಗೂ ಧನ್ಯವಾದ. ಉಭಯ ಸದನಗಳ ಸದಸ್ಯರಿಗೂ ಅಭಿನಂದನೆ ತಿಳಿಸಿದ್ದಾರೆ.

  • 22 Sep 2023 08:56 AM (IST)

    Karnataka Breaking News: ಹಳೇ ವೈಷಮ್ಯ; ಗಲಾಟೆಯಲ್ಲಿ ಐವರಿಗೆ ಚಾಕು ಇರಿತ

    ಶಿವಮೊಗ್ಗ: ಹಳೆ ವೈಷಮ್ಯ ಹಿನ್ನೆಲೆ ಎರಡು ಗುಂಪುಗಳ ನಡುವೆ ಗಲಾಟೆ ಆಗಿದ್ದು, ಈ ವೇಳೆ ಗಲಾಟೆಯಲ್ಲಿ 5 ಮಂದಿಗೆ ಚಾಕು ಇರಿದ ಘಟನೆ ಶಿವಮೊಗ್ಗದ ದ್ರೌಪದಮ್ಮ ಸರ್ಕಲ್​ನಲ್ಲಿ ತಡರಾತ್ರಿ ನಡೆದಿದೆ. ಪವನ್ ಹಾಗೂ ಕಿರಣ್ ಎಂಬ ಎರಡು ಗುಂಪಿನಿಂದ ಗಲಾಟೆ ನಡೆದಿದ್ದು, ಚಾಕು ಇರಿತಕ್ಕೊಳಗಾದ ಐದು ಮಂದಿ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಕುರಿತು ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

  • 22 Sep 2023 08:03 AM (IST)

    Karnataka Breaking News: ಇಂದು ಬಿಜೆಪಿ ಜೆಡಿಎಸ್ ಮೈತ್ರಿ ಮೀಟಿಂಗ್

    ದೆಹಲಿ: ನಿನ್ನೆ ನಿಗದಿಯಾಗಿದ್ದ ಅಮಿತ್ ಶಾ ಹಾಗೂ ಹೆಚ್​ಡಿ ಕುಮಾರಸ್ವಾಮಿ ಮೀಟಿಂಗ್, ಇಂದು ನಿಗದಿ ಮಾಡಲಾಗಿದೆ. ಲೋಕಸಭಾ ವಿಶೇಷ ಅಧಿವೇಶನ ನಿನ್ನೆ ತಡವಾಗಿ ಮುಗಿದ ಹಿನ್ನೆಲೆ ಇಂದು‌ ಮೈತ್ರಿ ಮಾತುಕತೆ ನಡೆಯಲಿದೆ. ಇವತ್ತು ಸಂಜೆ ಒಳಗಾಗಿ ಕಮಲದಳ ದೋಸ್ತಿ ಮೈತ್ರಿ ಅಧಿಕೃತ ಘೋಷಣೆ ಮಾಡಲಿದ್ದು, ಅಮಿತ್ ಶಾ, ಜೆಪಿ ನಡ್ಡಾ ಜೊತೆ ಕುಮಾರಸ್ವಾಮಿ, ಎಚ್​ಡಿ ರೇವಣ್ಣ ಮೈತ್ರಿ ಮಾತುಕತೆ ಮಾಡಲಿದ್ದಾರೆ. ಈ ಕುರಿತು ಅಮಿತ್ ಶಾ ಇಂದು ಎರಡು ಗಂಟೆ ನಂತರ ಮೈತ್ರಿ ಮೀಟಿಂಗ್​ಗೆ ಸಮಯ ಕೊಟ್ಟಿದ್ದಾರೆ.

  • 22 Sep 2023 07:57 AM (IST)

    Karnataka Breaking News: ಮಂಡ್ಯದಲ್ಲಿ ಇಂದು ರೈತರು, ಕನ್ನಡ ಸಂಘಟನೆಗಳಿಂದ ಸರಣಿ ಪ್ರತಿಭಟನೆ

    ಮಂಡ್ಯ: ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ಹಿನ್ನಲೆ ಮಂಡ್ಯ ಜಿಲ್ಲೆಯಲ್ಲಿ ಕಾವೇರಿ ನೀರಿಗಾಗಿ ಹೋರಾಟ ತೀವ್ರಗೊಂಡಿದೆ. ಜಿಲ್ಲೆಯಲ್ಲಿಂದು ರೈತರು, ಕನ್ನಡ ಸಂಘಟನೆಗಳಿಂದ ಸರಣಿ ಪ್ರತಿಭಟನೆ ನಡೆಯಲಿದೆ. ಇಡೀ ಬೆಂಗಳೂರಿಗೆ ನೀರು ಸರಬರಾಜು ಮಾಡುವ ಟಿ.ಕೆ.ಹಳ್ಳಿ ಪಂಪ್​​ಹೌಸ್​ಗೆ ಕನ್ನಡಪರ ಸಂಘಟನೆಗಳ ಮುತ್ತಿಗೆ ಹಾಕಲಿದ್ದು, ಬೆಂಗಳೂರಿಗೆ ನೀರು ನಿಲ್ಲಿಸಿ ರೈತರ ಬೆಳೆಗೆ ನೀರು ಹರಿಸುವಂತೆ ಆಗ್ರಹಿಸಲಿದ್ದಾರೆ.

  • Published On - Sep 22,2023 7:54 AM

    Follow us
    ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
    ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
    ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
    ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
    ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
    ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
    ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
    ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
    ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
    ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
    ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
    ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
    ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
    ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
    ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
    ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
    ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
    ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
    ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
    ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ