ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಾಳೆಯಿಂದ ಎರಡು ದಿನಗಳ ಕಾಲ ಜಿ20 ದೇಶಗಳ ಶೃಂಗಸಭೆ ಆರಂಭವಾಗಲಿದೆ. ವಿಶ್ವದ ಅಗ್ರರಾಷ್ಟ್ರಗಳ ನಾಯಕರು ಜಿ20 ಶೃಂಗಸಭೆಯಲ್ಲಿ ಭಾಗಿಯಾಗಲಿವೆ. ಅಮೆರಿಕ ಅಧ್ಯಕ್ಷ ಜೋ ಬೈಡೆನ್, ಬ್ರಿಟನ್ ಪ್ರಧಾನಿ ರಿಷಿ ಸುನಕ್, ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ, ಚೀನಾ ಪ್ರಧಾನಿ ಲಿ ಕಿಯಾಂಗ್, ಜಪಾನ್ ಪ್ರಧಾನಿ ಫಮಿಯೋ ಕಿಶಿದಾ, ಇಟಲಿ ಪ್ರಧಾನಿ ಜಾರ್ಜಿಯಾ, ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ, ದ.ಕೊರಿಯಾ ಅಧ್ಯಕ್ಷ ಯೂನ್ ಸುಕ್ ಜಿ20 ಸದಸ್ಯ ದೇಶಗಳ ಪ್ರಮುಖರು, ವಿಶೇಷ ಆಹ್ವಾನಿತರು, ಗಣ್ಯರು ಭಾಗಿಯಾಗಲಿದ್ದಾರೆ. ಮತ್ತೊಂದು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರು ಗುರುವಾರ ಕೇಂದ್ರ
ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾಗಿ ಸಾಕಷ್ಟು ಕುತೂಹಲ ಮೂಡಿಸಿದೆ. ಇದರೊಂದಿಗೆ ಇಂದಿನ ಲೇಟೆಸ್ಟ್ ಅಪ್ಡೇಟ್ಸ್ ಇಲ್ಲಿದೆ.
ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಯ ಪಾಲಂ ಏರ್ಬೇಸ್ಗೆ ಚೀನಾ ಪ್ರಧಾನಿ ಕಿಯಾಂಗ್ ಆಗಮಿಸಿದ್ದು, ಚೀನಾ ಪ್ರಧಾನಿ ಲಿ ಕಿಯಾಂಗ್ನ್ನು ಕೇಂದ್ರ ಸಚಿವ ವಿ.ಕೆ.ಸಿಂಗ್ ಸ್ವಾಗತಿಸಿದ್ದಾರೆ.
ಪ್ರಧಾನಿ ಮೋದಿ, ಅಮೆರಿಕ ಅಧ್ಯಕ್ಷ ಬೈಡೆನ್ ದ್ವಿಪಕ್ಷೀಯ ಚರ್ಚೆ ವಿಚಾರವಾಗಿ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ಅಮೆರಿಕ ಅಧ್ಯಕ್ಷ ಬೈಡೆನ್ ಜೊತೆ ಮಾತುಕತೆ ಅತ್ಯಂತ ಫಲಪ್ರದವಾಗಿತ್ತು. ಭಾರತ, ಅಮೆರಿಕ ನಡುವೆ ಆರ್ಥಿಕ, ಜನರ ಸಂಪರ್ಕ ಮತ್ತಷ್ಟು ಹೆಚ್ಚಿಸುವ ಹಲವಾರು ವಿಷಯಗಳನ್ನು ನಾವು ಚರ್ಚಿಸಲು ಸಾಧ್ಯವಾಯಿತು. ನಮ್ಮ ಸ್ನೇಹ ಜಾಗತಿಕ ಒಳಿತನ್ನು ಹೆಚ್ಚಿಸುವಲ್ಲಿ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ ಎಂದಿದ್ದಾರೆ.
Happy to have welcomed @POTUS @JoeBiden to 7, Lok Kalyan Marg. Our meeting was very productive. We were able to discuss numerous topics which will further economic and people-to-people linkages between India and USA. The friendship between our nations will continue to play a… pic.twitter.com/Yg1tz9kGwQ
— Narendra Modi (@narendramodi) September 8, 2023
ದೆಹಲಿಯ 7 ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಮಂತ್ರಿಗಳ ನಿವಾಸದಲ್ಲಿ ಪ್ರಧಾನಿ ಮೋದಿ, ಅಮೆರಿಕ ಅಧ್ಯಕ್ಷ ಬೈಡೆನ್ ದ್ವಿಪಕ್ಷೀಯ ಮಾತುಕತೆ ಅಂತ್ಯವಾಗಿದೆ. ಜಿ20 ಶೃಂಗಸಭೆಗೂ ಮುನ್ನ ಮೋದಿ, ಜೋ ಬೈಡನ್ ಮಹತ್ವದ ಚರ್ಚೆ ನಡೆಸಿದ್ದರು.
ಜಿ 20 ಶೃಂಗಸಭೆ ಹಿನ್ನೆಲೆ ದೆಹಲಿಗೆ ಆಗಮಿಸಿರುವ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದ್ದಾರೆ. ಶೃಂಗಸಭೆಗೂ ಮುನ್ನ ಹಲವು ವಿಷಯಗಳ ಬಗ್ಗೆ ಉಭಯ ನಾಯಕರು ಚರ್ಚೆ ಮಾಡಿದ್ದಾರೆ.
Prime Minister Narendra Modi and US President Joe Biden are holding talks at 7, Lok Kalyan Marg in Delhi. Their discussions include a wide range of issues and will further deepen the bond between India and USA: PMO pic.twitter.com/FxZ7SwWhde
— ANI (@ANI) September 8, 2023
ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಯ ಪಾಲಂ ಏರ್ಬೇಸ್ಗೆ ಇಂಡೋನೇಷ್ಯಾ ಅಧ್ಯಕ್ಷ ವಿಡೋಡೊ ಆಗಮಿಸಿದ್ದಾರೆ. ಜೊಕೊ ವಿಡೋಡೊ ಅವರನ್ನು ಕೇಂದ್ರ ಸಚಿವ ಶಾಂತನು ಸ್ವಾಗತಿಸಿದರು.
#WATCH | G-20 in India | Indonesian President Joko Widodo arrives in Delhi for the G-20 Summit#G20India2023 pic.twitter.com/MtOQ5ezDvA
— ANI (@ANI) September 8, 2023
ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಕೆನಡಾ ಪ್ರಧಾನಿ ಟ್ರುಡೋ ಇಂದು ದೆಹಲಿಯ ಪಾಲಂ ಏರ್ಬೇಸ್ಗೆ ಆಗಮಿಸಿದ್ದಾರೆ. ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋಗೆ ಕೇಂದ್ರ ಸರ್ಕಾರದ ವತಿಯಿಂದ ಸ್ವಾಗತ ಮಾಡಲಾಯಿತು.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಾಳೆಯಿಂದ ಜಿ20 ಶೃಂಗಸಭೆ ಹಿನ್ನೆಲೆ ನವದೆಹಲಿಗೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಆಗಮಿಸಿದ್ದಾರೆ. ಅಮೆರಿಕ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಲಾಗುತ್ತಿದ್ದು, ಅಮೆರಿಕ ಅಧ್ಯಕ್ಷರನ್ನು ಕೇಂದ್ರ ಸಚಿವ ವಿ.ಕೆ.ಸಿಂಗ್ ಸ್ವಾಗತಿಸಿದರು. ಕೆಲ ಹೊತ್ತಿನಲ್ಲೇ ಪ್ರಧಾನಿ ಮೋದಿಯನ್ನು ಬೈಡೆನ್ ಭೇಟಿಯಾಗಲಿದ್ದಾರೆ. ಶೃಂಗಸಭೆಗೂ ಮುನ್ನ ಉಭಯ ನಾಯಕರಿಂದ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.
US President Biden arrives in India for G20 Summit, to hold bilateral meeting with PM Modi
Read @ANI Story | https://t.co/ElHcsJmhIJ#JoeBiden #G20India2023 #G20SummitDelhi #G20Delhi pic.twitter.com/ev5OOPBWrd
— ANI Digital (@ani_digital) September 8, 2023
G20 ಶೃಂಗಸಭೆಯ ಮೊದಲ ದಿನದ ವೇಳಾಪಟ್ಟಿ ಹೀಗಿದೆ.
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಾಳೆಯಿಂದ ಜಿ20 ಶೃಂಗಸಭೆ ಹಿನ್ನೆಲೆ ಇಂದು ದೆಹಲಿಗೆ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಆಗಮಿಸಿದ್ದಾರೆ.
ಭಾರತದಲ್ಲಿ ಜಿ20 ಶೃಂಗಸಭೆ ಆಯೋಜಿಸಿದ್ದು ಯಶಸ್ವಿಯಾಗಿದೆ. ನಾನು ಹಿಂದೂ ಆಗಿರುವುದಕ್ಕೆ ಹೆಮ್ಮೆ ಇದೆ ಎಂದು ಬ್ರಿಟನ್ ಪ್ರಧಾನಿ ರಿಷಿ ಸುನಕ್ ಹೇಳಿದ್ದಾರೆ.
ಅಂತರರಾಷ್ಟ್ರೀಯ ವಿಷಯಗಳ ಬಗ್ಗೆ ಯಾವ ನಿಲುವುಗಳನ್ನು ತೆಗೆದುಕೊಳ್ಳಬೇಕು ಎಂದು ಭಾರತಕ್ಕೆ ಹೇಳುವುದು ನನ್ನ ಕೆಲಸವಲ್ಲ ಎಂದು ಯುಕೆ ಪ್ರಧಾನಿ ರಿಷಿ ಸುನಕ್ ಹೇಳಿದ್ದಾರೆ. ರಷ್ಯಾ ಮತ್ತು ಉಕ್ರೇನ್ ಬಗ್ಗೆ ಭಾರತದ ನಿಲುವಿನ ಬಗ್ಗೆ ಮಾತನಾಡಿದ ಅವರು, ಭಾರತವು ಅಂತರರಾಷ್ಟ್ರೀಯ ಕಾನೂನಿನ ನಿಯಮ, ಯುಎನ್ ಚಾರ್ಟರ್ ಮತ್ತು ಪ್ರಾದೇಶಿಕ ಸಮಗ್ರತೆಗೆ ಗೌರವದ ಬಗ್ಗೆ ಸರಿಯಾಗಿ ಕಾಳಜಿ ವಹಿಸುತ್ತದೆ ಎಂದು ನನಗೆ ತಿಳಿದಿದೆ ಎಂದಿದ್ದಾರೆ.
#WATCH | G-20 in India: On India’s position on Russia and Ukraine, UK PM Rishi Sunak to ANI says, “Well, it’s not for me to tell India what positions to take on international issues, but I know India rightly cares about the international rule of law, the UN Charter and respect… pic.twitter.com/DPBdc7iAR1
— ANI (@ANI) September 8, 2023
ಜೆಡಿಎಸ್ ಜೊತೆ ಮೈತ್ರಿ, ಹೊಂದಾಣಿಕೆ ಆಗಿಲ್ಲವೆಂದು ದೆಹಲಿ ನಾಯಕರು ದೂರವಾಣಿ ಕರೆ ಮಾಡಿ ತಿಳಿಸಿದ್ದಾರೆ ಎಂದು ಮಾಜಿ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಯಾವುದೇ ಪಕ್ಷದ ಮೈತ್ರಿ ಆಗಬೇಕಾದರೆ ಕೇಂದ್ರ ಸರ್ವೆ ಮಾಡಿಸುತ್ತೆ. ಸರ್ವೆ ವರದಿ ಆಧಾರದಲ್ಲಿ ಮೈತ್ರಿ ಬಗ್ಗೆ ಕೇಂದ್ರದ ನಾಯಕರು ತಿಳಿಸುತ್ತಾರೆ ಎಂದರು.
ವೈಯಕ್ತಿಕವಾಗಿ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ನನಗೆ ಒಪ್ಪಿಗೆ ಇದೆ. ಸೀಟು ಹಂಚಿಕೆ ಬಗ್ಗೆ ನಮ್ಮ ಜೊತೆ ಯಾವುದೇ ಚರ್ಚೆ ನಡೆದಿಲ್ಲ. ಬಿಜೆಪಿಯ ಹಾಲಿ ಸಂಸದರ ಕ್ಷೇತ್ರಗಳನ್ನು ಕೇಳುವ ಪ್ರಶ್ನೆ ಉದ್ಭವಿಸಲ್ಲ. ಆ ಪ್ರಯತ್ನ ದೇವೇಗೌಡರು ಮಾಡಲ್ಲ ಅಂತಾ ಅಂದುಕೊಂಡಿದ್ದೇನೆ. ಮಾತುಕತೆ ಪೂರ್ಣ ಆದ ಮೇಲೆ ದೇವೇಗೌಡರ ಭೇಟಿ ಮಾಡುತ್ತೇನೆ. ಪ್ರಧಾನಿ, ಅಮಿತ್ ಶಾ ಜೊತೆ ದೇವೇಗೌಡರು ಮಾತುಕತೆ ನಡೆಸಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ನವದೆಹಲಿ ಶೃಂಗಸಭೆಯಲ್ಲಿ ಭಾಗವಹಿಸುವ ಜಿ 20 ನಾಯಕರು ನ್ಯಾಷನಲ್ ಗ್ಯಾಲರಿ ಆಫ್ ಮಾಡರ್ನ್ ಆರ್ಟ್ (ಎನ್ಜಿಎಂಎ)ಗೆ ಸಹ ಭೇಟಿ ನೀಡಲಿದ್ದಾರೆ. ಹಾಗಾಗಿ ಸಾಂಪ್ರದಾಯಿಕ ಕಿವಿಯೋಲೆಗಳು ಮತ್ತು ಆಭರಣಗಳು, ಶಾಲುಗಳನ್ನು ಪ್ರದರ್ಶಿಸಲಾಗುವುದು.
#WATCH | G 20 in India | Delhi: Spouses of G 20 leaders participating in the New Delhi Summit will visit the National Gallery of Modern Art (NGMA ), which will be showcasing traditional earrings & jewellery, quilts and Pashmina shawls.
Wrap Studio CEO Siddharth Saigal says, “We… pic.twitter.com/saZaF9Q5rw
— ANI (@ANI) September 8, 2023
ಮಾಧ್ಯಮದವರನ್ನು ಬಿಡದಿರುವುದು ಸಂಶಯ ಮೂಡಿಸುತ್ತಿದೆ. ಆದೇಶಕ್ಕಿಂತಲೂ ಹೆಚ್ಚುವರಿ ನೀರು ತಮಿಳುನಾಡಿಗೆ ಬಿಟ್ಟಿದ್ದಾರೆ. ಹೆಚ್ಚು ನೀರು ಹರಿಸಿದ್ದರಿಂದಲೇ ಮಾಧ್ಯಮದವರಿಗೆ ಬಿಡುತ್ತಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಎಕ್ಸ್ ಖಾತೆಯ ಕವರ್ ಇಮೇಜ್ ಬದಲಾವಣೆ ಮಾಡಿದ್ದು, ಜಿ20 ಶೃಂಗಸಭೆಗಾಗಿ ನಿರ್ಮಾಣವಾಗಿರುವ ಭಾರತ್ ಮಂಟಪದ ಮುಂಭಾಗ ಸ್ಥಾಪಿಸಿರುವ ನಟರಾಜ ಮೂರ್ತಿ ಚಿತ್ರವನ್ನು ಹಾಕಿಕೊಂಡಿದ್ದಾರೆ. ನಟರಾಜ ಮೂರ್ತಿ ಶೃಂಗಸಭೆಯ ಆಕರ್ಷಣೆ ಕೇಂದ್ರ ಬಿಂದುವಾಗಿದೆ.
G20: Nataraja Statue at Bharat Mandapam now cover image of PM Modi on X
Read @ANI Story |https://t.co/69GjkBiOlw#G20 #G20India2023 #G20SummitDelhi #NarendraModi #BharatMandapam #Modi #NatarajaStatue pic.twitter.com/PGPATCmjje
— ANI Digital (@ani_digital) September 8, 2023
ನವದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆಯೋಜಿಸಿದ್ದ ಜಿ20 ಔತಣಕೂಟಕ್ಕೆ ಕಾಂಗ್ರೆಸ್ ಮುಖ್ಯಸ್ಥ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹ್ವಾನಿಸದ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಜಿ20 ಔತಣಕೂಟಕ್ಕೆ ಖರ್ಗೆ ಅವರನ್ನು ಆಹ್ವಾನಿಸದ ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
ಕಾರ್ಯಕರ್ತರಿಗೆ ರಕ್ಷಣೆ ಸಿಗುತ್ತಿಲ್ಲ, ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋಲಿಸಬೇಕು. ಇದೇ ಕಾರಣಕ್ಕೆ ಬಿಜೆಪಿ ಜೊತೆ ಮೈತ್ರಿಗೆ ಎಲ್ಲರೂ ಒಲವು ಹೊಂದಿದ್ದಾರೆ. ಬಿಜೆಪಿ ಜೊತೆ ಸೇರಿ ಚುನಾವಣೆ ಎದುರಿಸೋಣ ಅನ್ನೋದು ಅಭಿಪ್ರಾಯ. ಕಾಂಗ್ರೆಸ್ ಜೊತೆ ಹೋಗಲು ನಮಗೆ ಇಷ್ಟವಿಲ್ಲ ಎಂದು ಮೈಸೂರಿನಲ್ಲಿ JDS ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಹೇಳಿದರು.
ದೆಹಲಿ ಏರ್ಪೋರ್ಟ್ಗೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಬಂದಿಳಿದಿದ್ದಾರೆ. ವಿಶೇಷ ವಿಮಾನದಲ್ಲಿ ರಿಷಿ ಸುನಕ್ ಆಗಮಿಸಿದ್ದು, ಕೇಂದ್ರ ಸಚಿವ ಅಶ್ವಿನಿ ಕುಮಾರ್ ಚೌಬೆ ರಿಷಿ ಸುನಕ್ರನ್ನು ಸ್ವಾಗತಿಸಿದರು.
ಜಿ-20 ಶೃಂಗಸಭೆಯಲ್ಲಿ ಭಾಗಿಯಾಗಲು ಜಪಾನ್ ಪ್ರಧಾನಿ ಕಿಶಿಡಾ ದೆಹಲಿಗೆ ಆಗಮಿಸಿದ್ದಾರೆ. ಫ್ಯೂಮಿಯೋ ಕಿಶಿಡಾರನ್ನು ಕೇಂದ್ರ ಸಚಿವ ಅಶ್ವಿನಿ ಕುಮಾರ್ ಚೌಬೆ ಸ್ವಾಗತಿಸಿದರು.
ಬೆಂಗಳೂರು: ಬಹಳ ದೊಡ್ಡ ದೊಡ್ಡ ಆಶ್ವಾಸನೆ ಕೊಟ್ಟು ಸರ್ಕಾರ ಅಧಿಕಾರಕ್ಕೆ ಬಂತು. ಇವರು ಅಕ್ಕಿ ಕೊಡುತ್ತಿರುವುದು ನರೇಂದ್ರ ಮೋದಿ ಅವರು ಕೊಡುತ್ತಿರುವ ಅಕ್ಕಿ. ಕರ್ನಾಟಕದಲ್ಲಿ ಗೃಹಲಕ್ಷಿ ಯೋಜನೆ ಬರುವಂತಹ ದಿನಗಳಲ್ಲಿ ಕಾಂಗ್ರೆಸ್ ಗೆ ಮುಳುವಾಗುತ್ತದೆ. ಬೆಂಗಳೂರಿನ ಹೊರ ವಲಯದ ಅಧಿಕಾರಿ 8 ಕೋಟಿ ಕೊಟ್ಟಿದ್ದಾರೆ. ಅವರು ಬೇಡ ಅಂತ ಹೋದರೇ ಅದೇ ಜಾಗಕ್ಕೆ 13 ಕೋಟಿ ಪಡೆದು ನೇಮಕ ಮಾಡಿದ್ದಾರೆ. ಕುಮಾರ ಕೃಪಾದಲ್ಲಿ ದಂಧೆ ನಡೆಯುತ್ತಿದೆ. ಇವತ್ತು ಯಾವುದೇ ಅಧಿಕಾರಿ ಮುಕ್ತವಾಗಿ ಕೆಲಸ ಮಾಡಲು ಬಿಡುತ್ತಿಲ್ಲ. ಸಣ್ಣಪುಟ್ಟ ವಿಚಾರಕ್ಕೆ ಬಿಜೆಪಿ ಕಾರ್ಯಕರ್ತರನ್ನು ಬಂಧಿಸುತ್ತಿದ್ದಾರೆ. ಪೊಲೀಸ್ ಅಧಿಕಾರಿಗಳಿಗೆ ಎಚ್ಚರಿಕೆ ಕೊಡುತ್ತೇನೆ. ನಿಮ್ಮ ನಿಷ್ಟೆ ಕಾನೂನಿಗೆ ಇರಬೇಕು. ಕಾವೇರಿ ನದಿ ನೀರಿನ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರೈತರಿಗೆ ನೀರು ಹರಿಸದೇ ತಮಿಳುನಾಡಿಗೆ ಹರಿಸಿದೆ. ಒಂದು ಕಾಳು ಅಕ್ಕಿಯನ್ನೂ ನೀವು ಕೊಟ್ಟಿಲ್ಲ, ನೀವು ನೀಚರು ಎಂದು ಬಸವರಾಜ ಬೊಮ್ಮಾಯಿ ವಾಗ್ದಾಳಿ ಮಾಡಿದರು.
ಮಂಡ್ಯ: ಕೃಷ್ಣರಾಜಸಾಗರ ಜಲಾಶಯದಲ್ಲಿ ನೀರಿನ ಮಟ್ಟ 98 ಅಡಿಗೆ ಕುಸಿತವಾಗಿದೆ. ತಮಿಳುನಾಡಿಗೆ ನೀರು ಹರಿಸಿದ ಪರಿಣಾಮ 12 ಟಿಎಂಸಿ ನೀರು ಖಾಲಿಯಾಗಿದೆ. ಜಲಾಶಯದ ಹಿನ್ನೀರು ಪ್ರದೇಶ ಬಹುತೇಕ ಬರಡು ಭೂಮಿಯಂತಾಗಿದೆ. ತಮಿಳುನಾಡಿಗೆ ಮತ್ತಷ್ಟು ನೀರು ಹರಿಸಿದರೆ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗುತ್ತದೆ. ಬೆಳೆಗೆ ನೀರಿಲ್ಲದೆ ಆತಂಕದಲ್ಲಿರುವ ರೈತರು ರಸ್ತೆಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ.
ಬಿಜೆಪಿ, ಜೆಡಿಎಸ್ ಮೊದಲಿನಿಂದಲು ಒಂದೆ ಇದ್ದಾರೆ. ಬಿಜೆಪಿ, ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ಗೆ ಯಾವುದೇ ಪರಿಣಾಮ ಬೀರಲ್ಲ. ಕಾಂಗ್ರೆಸ್ ಪಕ್ಷ ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತೆದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 20 ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸ ಇದೆ. ಬಿಜೆಪಿ, ಜೆಡಿಎಸ್ ಹಿಂದಿನಿಂದ ಒಳಗೊಳಗೆ ಒಂದೆ ಇದ್ದರು, ಇದೀಗ ಬಹಿರಂಗವಾಗಿ ಒಪ್ಪಂದ ಮಾಡಿಕೊಂಡಿದ್ದಾರೆ ಅಷ್ಟೇ ಎಂದು ಕಲಬುರಗಿ ನಗರದಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹೇಳಿದರು.
ಬೆಂಗಳೂರು: ಹಿಂದೂ ದೇವರ ಹೆಸರು ಇಟ್ಟುಕೊಂಡಿದ್ದಾರೆ. ಸನಾತನ ಧರ್ಮದ ವಿರುದ್ಧ ಮಾತನಾಡ್ತಾರೆ.
ಸಿದ್ದರಾಮ, ಶಿವಕುಮಾರ, ಪರಮೇಶ್ವರ, ಚಂದ್ರಶೇಖರ ಎಂದೆಲ್ಲಾ ಹೆಸರು ಇಟ್ಟುಕೊಂಡಿದ್ದಾರೆ. ಮಾತನಾಡುವ ಮೊದಲು ನಿಮ್ಮ ಹೆಸರು ಬದಲಾಯಿಸಿಕೊಳ್ಳಿ. ನಾಯಿ, ಕೋಳಿ, ಕತ್ತೆ ಎಂದೆಲ್ಲಾ ಹೆಸರು ಬದಲಾಯಿಸಿಕೊಳ್ಳಿ. ಪ್ರಚಾರಕ್ಕಾಗಿ ಸನಾತನ ಧರ್ಮದ ವಿರುದ್ದ ಮಾತನಾಡುವುದನ್ನು ನಿಲ್ಲಿಸಿ ಎಂದು ಶಾಸಕ ಎಸ್.ಆರ್. ವಿಶ್ವನಾಥ್ ಹೇಳಿದರು.
ಹುಬ್ಬಳ್ಳಿ: ಇಬ್ಬರು ಅಸಹಾಯಕರು ಸೇರಿ ಮೈತ್ರಿ ಮಾಡಿಕೊಳ್ಳುತ್ತಿದ್ದಾರೆ ಎಂದು ಜೆಡಿಎಸ್ - ಬಿಜೆಪಿ ಮೈತ್ರಿ ವಿಚಾರಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದರು. ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವುದು ಜೆಡಿಎಸ್ ಮತ್ತು ಬಿಜೆಪಿಗೆ ಬಿಟ್ಟ ವಿಚಾರ. ಹಿಂದೆಯೂ ಮೈತ್ರಿ ಮಾಡಿಕೊಳ್ಳುತ್ತೇವೆ ಅಂದರು
ನಂತರ ಅದಕ್ಕೆ ಬ್ರೇಕ್ ಆಯ್ತು. ವಿಧಾನಸಭೆ ಚುನಾವಣೆಯಲ್ಲಿ ಇಬ್ಬರು ಪರಸ್ಪರ ಫೈಟ್ ಮಾಡಿದ್ದರು. ಈಗ ಮತ್ತೆ ಮೈತ್ರಿ ವಿಚಾರ ಮಾತಾಡುತ್ತಿದ್ದಾರೆ. ಅನುಕೂಲವಿದ್ದಾಗ ಮೈತ್ರಿ ಮಾಡಿಕೊಳ್ಳುವುದು, ಅನಾನುಕೂಲವಾದಾಗ ಮೈತ್ರಿಯಿಂದ ಹಿಂದೆ ಸರಿಯುವುದು. ಈ ರೀತಿ ಮಾಡಿದಾಗ ಜನರ ನಂಬಿಕೆಯನ್ನು ಕಳೆದುಕೊಳ್ಳುತ್ತಾರೆ. ಜೊತೆಗೆ ಆಯಾ ಪಕ್ಷಗಳ ಕ್ರೆಡಿಬಿಲಿಟಿ ಸಹ ಹೋಗುತ್ತೆ ಎಂದರು.
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಉಭಯ ಪಕ್ಷಗಳ ವರಿಷ್ಠರ ಜೊತೆ ಮಾತುಕತೆ ನಡೆದಿದೆ. ನಮ್ಮ ವರಿಷ್ಠರ ಜೊತೆ ಜೆಡಿಎಸ್ ವರಿಷ್ಠರು ಮಾತನಾಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುತ್ತೇವೆ. ಜೆಡಿಎಸ್ಗೆ ನಾಲ್ಕು ಸ್ಥಾನ ಬಿಟ್ಟುಕೊಡುವ ಬಗ್ಗೆ ಮಾತುಕತೆ ನಡೆದಿದೆ. ಮೈತ್ರಿಯಿಂದ ಲೋಕಸಭಾ ಚುನಾವಣೆಯಲ್ಲಿ ಮತ್ತಷ್ಟು ಶಕ್ತಿ ಬರಲಿದೆ. ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 26 ಸ್ಥಾನ ಗೆಲ್ಲುವ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.
ರಾಯಚೂರು: ಸನಾತನ ಧರ್ಮದ ಬಗ್ಗೆ ಉದಯನಿಧಿ ಸ್ಟಾಲಿನ್ ಹೇಳಿಕೆ ಸಂಬಂಧಿಸಿದಂತೆ ಮೊಘಲರು, ಔರಂಗಜೇಬ್ ಸೇರಿ ಅನೇಕರು ದಾಳಿ ಮಾಡಿದ್ದಾರೆ. ಅವರಿಂದಲೇ ನಮ್ಮ ಭಾರತವನ್ನು ಇಸ್ಲಾಮೀಕರಣ ಮಾಡಲಾಗಿಲ್ಲ. ಸನಾತನ ಧರ್ಮದ ಬಗ್ಗೆ ಮಾತಾಡಿದವರಿಗೆ ಕುಷ್ಠ ರೋಗ ಮತ್ತು ಏಡ್ಸ್ ಹತ್ತಿದೆ. ಯಾರೋ ಒಬ್ಬ ಸಚಿವ ಸನಾತನ ಧರ್ಮದ ಹುಟ್ಟು ಎಲ್ಲಿ ಅಂತಾನೆ. ಆ ಮಂತ್ರಿ ಯಾರಿಗೆ ಹುಟ್ಟಿದ್ದಾರೆ ಅವರಿಗೆ ಗೊತ್ತಿಲ್ಲ ಎಂದು
ರಾಯಚೂರಿನಲ್ಲಿ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ವಾಗ್ದಾಳಿ ಮಾಡಿದರು.
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸಂಬಂಧಿಸಿದಂತೆ ಬಿಜೆಪಿಯ ಬಿ ಟೀಂ ಜೆಡಿಎಸ್ ಅಂತಾ ಅಧಿಕೃತವಾಗಿ ಗೊತ್ತಾಗುತ್ತಿದೆ. ನಾವು ಯಾರ ಜೊತೆಗೂ ಮೈತ್ರಿ ಮಾಡಿಕೊಳ್ಳಲ್ಲ. ವಿಧಾನಸಭೆಯಲ್ಲಿ ಸ್ವಂತ ಬಲದಿಂದ ಹೇಗೆ 135 ಸ್ಥಾನ ಗೆದ್ದಿದ್ದೇವೆ. ಅದೇ ರೀತಿ ಲೋಕಸಭೆಯಲ್ಲೂ ಕನಿಷ್ಠ 20 ಸ್ಥಾನ ಗೆದ್ದೆ ಗೆಲ್ಲುತ್ತೇವೆ. ಕನಿಷ್ಠ 20 ಸ್ಥಾನ ಗೆದ್ದೆ ಗೆಲ್ಲುತ್ತೇವೆ, ಇದು ನೂರಕ್ಕೆ ನೂರರಷ್ಟು ಸತ್ಯ. ಜೆಡಿಎಸ್-ಬಿಜೆಪಿ ಮೈತ್ರಿ ಮಾಡಿಕೊಂಡರೆ ಕಾಂಗ್ರೆಸ್ಗೆ ಅನುಕೂಲವಾಗುತ್ತದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು.
ಮಂಡ್ಯ: ಪರಿಹಾರಕ್ಕಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆಂಬ ಸಚಿವ ಶಿವಾನಂದ ಪಾಟೀಲ್ ವಿವಾದಾತ್ಮ ಹೇಳಿಕೆ ಖಂಡಿಸಿ ಮಂಡ್ಯದಲ್ಲಿ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಸಚಿವ ಶಿವಾನಂದ ಪಾಟೀಲ್ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಚಿವ ಶಿವಾನಂದ ಪಾಟೀಲ್ ಅವರಿಗೆ ಪರಿಹಾರ ಹಣ ನೀಡಲು ರೈತರು ಭಿಕ್ಷೆ ಮೂಲಕ ಹಣ ಸಂಗ್ರಹಿಸಿದರು.
ಮಂಡ್ಯ: ತಮಿಳುನಾಡಿಗೆ ಕೆಆರ್ಎಸ್ ಡ್ಯಾಂ ನೀರು ಬಿಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ರೈತರ ಹೋರಾಟ ತೀವ್ರಗೊಂಡಿದೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಬೆಸರಗರಹಳ್ಳಿ ಸಂಪೂರ್ಣ ಬಂದ್ ಆಗಿದೆ. ಬೆಸರಗರಹಳ್ಳಿ ಗ್ರಾಮ ಸುತ್ತಮುತ್ತಲಿನ ಗ್ರಾಮಗಳಿಗೆ ಪ್ರಮುಖ ವಾಣಿಜ್ಯ ಕೇಂದ್ರವಾಗಿದೆ. ರಾಜ್ಯ ಸರ್ಕಾರದ ನಡೆ ಖಂಡಿಸಿ ಅಂಗಡಿ ಮುಂಗಟ್ಟುಗಳು ಸಹ ಬಂದ್ ಆಗಿವೆ. ರೈತ ಸಂಘ ಬಂದ್ ಕರೆಗೆ ವರ್ತಕರು ಉತ್ತಮ ಬೆಂಬಲ ವ್ಯಕ್ತಪಡಿಸಿದ್ದಾರೆ.
ರಾಮನಗರ: ಮೆಡಿಕಲ್ ಕಾಲೇಜು ಸ್ಥಳಾಂತರ ಹಿನ್ನೆಲೆ ರಾಮನಗರದಲ್ಲಿ ವಿವಿಧ ಸಂಘಟನೆಗಳು ಬಂದ್ಗೆ ಕರೆ ನೀಡಿದ್ದು, ಎಪಿಎಂಸಿ ಸಂಪೂರ್ಣ ಸ್ತಬ್ಧವಾಗಿದೆ. ರೈತರು ಸ್ವಯಂಪ್ರೇರಿತರಾಗಿ ಬಂದ್ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ವರ್ತಕರು, ವ್ಯಾಪಾರಿಗಳು, ದಲ್ಲಾಳಿಗಳು, ರೈತರು ಬಂದ್ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿ: ಬರಗಾಲದ ಬಗ್ಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ. ಶೀಘ್ರದಲ್ಲೇ ಬರ ತಾಲೂಕುಗಳನ್ನು ಘೋಷಣೆ ಮಾಡಲಾಗುತ್ತೆ. ಬರಗಾಲ ಕುರಿತು ಕೇಂದ್ರಕ್ಕೂ ವರದಿ ಸಲ್ಲಿಸುತ್ತೇವೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದರು.
ಕೋಲಾರ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ಬಿಜೆಪಿ ಕೋಲಾರ ಜಿಲ್ಲಾಧಿಕಾರಿ ಕಚೇರಿ ಎದುರು 11 ಗಂಟಗೆ ಪ್ರತಿಭಟನೆ ನಡೆಸಲಿದೆ. ಸಂಸದ ಮುನಿಸ್ವಾಮಿ, ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ವೇಣುಗೋಪಾಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಸರ್ಕಾರದ ವಿದ್ಯುತ್ ಲೋಡ್ ಶೆಡ್ಡಿಂಗ್, ವಿದ್ಯುತ್ ದರ ಏರಿಕೆ ಸೇರಿ ಹಲವು ವಿಚಾರಗಳ ಕುರಿತು ಪ್ರತಿಭಟನೆ ಮಾಡಲಿದೆ.
ರಾಮನಗರ: ರಾಜೀವ್ ಗಾಂಧಿ ಮೆಡಿಕಲ್ ಕಾಲೇಜು ಕನಕಪುರಕ್ಕೆ ಶಿಫ್ಟ್ ಆದ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳು ಇಂದು (ಸೆ.08) ರಾಮನಗರ ಬಂದ್ಗೆ ಕರೆ ನೀಡಿವೆ. ಐಜೂರು ವೃತ್ತದಲ್ಲಿ ಪ್ರತಿಭಟನೆ ಪ್ರಾರಂಭವಾಗಿದ್ದು, ಪ್ರತಿಭಟನೆಯಲ್ಲಿ ಜೆಡಿಎಸ್, ಬಿಜೆಪಿ ಕನ್ನಡಪರ ಸಂಘಟನೆಗಳ ಸದಸ್ಯರು ಭಾಗಿಯಾಗಲಿದ್ದಾರೆ. ಸ್ಥಳದಲ್ಲಿ ಪೊಲೀಸರಿಂದ ಬಿಗಿ ಬಂದೋಬಸ್ತ್ ಇದೆ.
ಹುಬ್ಬಳ್ಳಿ: ನಾನು ಸನಾತನ ಧರ್ಮದ ಬಗ್ಗೆ ಮಾತನಾಡಿಲ್ಲ. ನಾನು ಬೇರೆಯವರ ವಿಶ್ಲೇಷಣೆಗಳಿಗೆ ಉತ್ತರ ಕೊಡುವುದಿಲ್ಲ. ಬಿಜೆಪಿಯವರು ಹೋರಾಟ ಮಾಡಲಿ. ರಾಜ್ಯದಲ್ಲಿ ಬಿಜೆಪಿಯವರಿಗೆ ಜನತೆ ಉತ್ತರ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲೂ ಬಿಜೆಪಿಗೆ ಜನ ಉತ್ತರ ನೀಡಲಿದ್ದಾರೆ ಎಂದು ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರು: ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ವಿರುದ್ಧ ಇಂದು (ಸೆ.08) ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ಬಿಜೆಪಿ ಕಾರ್ಯಕರ್ತರು ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಅಭಿವೃದ್ಧಿಯನ್ನು ಕಡೆಗಣಿಸಿದೆ. ರಾಜ್ಯದಲ್ಲಿ ಬರಗಾಲ ಇದ್ದರೂ ಯಾವುದೇ ಕ್ರಮಕೈಗೊಂಡಿಲ್ಲ. ಬಿಜೆಪಿ ಅವಧಿಯ ಕಾಮಗಾರಿಗಳನ್ನು ತಡೆದಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸುತ್ತಿದೆ. ಕಾರ್ಯಕರ್ತರ ಮೇಲೆ ಅನಗತ್ಯ ಕೇಸ್ ಹಾಕಿ ದ್ವೇಷ ಸಾಧಿಸುತ್ತಿದ್ದಾರೆ. ಸರ್ಕಾರದ ಈ ವೈಫಲ್ಯಗಳನ್ನು ಖಂಡಿಸಿ ಬಿಜೆಪಿ ಪ್ರತಿಭಟನೆಗೆ ಕರೆ ನೀಡಿದೆ.
Published On - 7:55 am, Fri, 8 September 23