ಕರ್ನಾಟಕದಲ್ಲಿ ಲೆಟರ್ ಟು ಸಿಎಂ ಜೋರಾಗಿದೆ. ಸಚಿವರು ನಮ್ಮ ಕರೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಇದು ರಾಜ್ಯ ರಾಜಕಾರಣದಲ್ಲಿ ಸಂಚಲ ಸೃಷ್ಟಿಸಿತ್ತು. ಇದಾದ ನಂತರ ಇದೀಗ ಎರಡನೇ ಬಾರಿಗೆ ಶಾಸಕ ಬಸವರಾಜ ರಾಯರೆಡ್ಡಿ ಅವರು ಜೆಸ್ಕಾಂ ಅಧಿಕಾರಿಗಳು ನಮ್ಮ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಶೀಘ್ರದಲ್ಲೆ ಸಭೆ ಕರೆಯಿರಿ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಇನ್ನು ಪಕ್ಷಾಂತರ ಬೂದಿ ಮುಚ್ಚಿದ ಕೆಂಡದಂತಿದ್ದು, ಯಾವ ಸಮಯದಲ್ಲಾದರೂ ಬೆಂಕಿ ಉದ್ಭವಿಸುವ ಸಾಧ್ಯತೆ ಇದೆ. ಇನ್ನು ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದಕ್ಕೆ ಮಂಡ್ಯ, ರಾಮನಗರ, ಮೈಸೂರು ಭಾಗದ ರೈತರು ಪ್ರತಿಭಟನೆ ಮಾಡುತ್ತಿದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹಾಗೇ ರಾಜ್ಯದಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ. ಈ ತಿಂಗಳು ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ. ಇದರೊಂದಿಗೆ ಇಂದಿನ ಲೇಟೆಸ್ಟ್ ಅಪ್ಡೇಟ್ಸ್ ಇಲ್ಲಿದೆ
ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಗೃಹ ಸಚಿವ ಡಾ.ಪರಮೇಶ್ವರ್ ಹೇಳಿಕೆ ವಿಚಾರ ‘ ಕೆಟ್ಟ ಮಾತುಗಳನ್ನು ಡಾ.ಜಿ.ಪರಮೇಶ್ವರ್ ಬಾಯಿಂದ ನಿರೀಕ್ಷಿಸಿರಲಿಲ್ಲ ಎಂದು ಬೆಂಗಳೂರಿನಲ್ಲಿ MLC ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ‘ವರ್ಗಾವಣೆ ದಂಧೆ ಅಸಹ್ಯ ಹುಟ್ಟಿಸುವ ರೀತಿ ನಡೆದು ಹೋಗಿದೆ. ಕಾಂಗ್ರೆಸ್ನ ಈ ಸಂಸ್ಕೃತಿ ಉದಯನಿಧಿ ಭಾವನೆಗೆ ಒತ್ತು ಕೊಡುತ್ತಿದೆ ಎಂದರು.
ಉತ್ತರ ಕನ್ನಡ: ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಗೋವಾ ಮದ್ಯ ವಶಪಡಿಸಿಕೊಂಡ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರದ ರಾಷ್ಟ್ರೀಯ ಹೆದ್ದಾರಿ 66ರ ಖಾಪ್ರಿ ದೇವಸ್ಥಾನ ಬಳಿ ನಡೆದಿದೆ. ಮಿಥುನ್ ನಾಯ್ಕ, ಸಂತೋಷ ಠಾಕರಕರ್, ಪ್ರಸಾದ ದೇಸಾಯಿ ಮದ್ಯ ಸಾಗಿಸುತ್ತಿದ್ದ ಆರೋಪಿತರು. ಕರ್ನಾಟಕ ಅಬಕಾರಿ ಕಾಯ್ದೆ ಕಲಂ 32, 34, 38(ಎ) ಅಡಿ ಪ್ರಕರಣ ದಾಖಲು ಮಾಡಲಾಗಿದೆ.
ಮೈಸೂರು: ದಸರಾ ಮಹೋತ್ಸವವನ್ನು ಅಚ್ಚುಕಟ್ಟಾಗಿ ನೆರವೇರಿಸಿ ಎಂದು ಅಧಿಕಾರಿಗಳ ಸಭೆಯಲ್ಲಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಸಲಹೆ ನೀಡಿದ್ದಾರೆ. ಮೈಸೂರು ಅರಮನೆ ಮಂಡಳಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ಕರೆಯಲಾಗಿದ್ದು, ನಮ್ಮ ನಾಡಿನ ಕಲೆ, ಸಂಸ್ಕೃತಿ, ಪರಂಪರೆಯನ್ನು ಸಾರುವ ದಸರಾವನ್ನು ಜನರ ಉತ್ಸವವನ್ನಾಗಿ ಅಚ್ಚುಕಟ್ಟಾಗಿ ನೆರವೇರಿಸಬೇಕು ಎಂದರು.
ಬೆಂಗಳೂರು: ಗೌರಿ ಲಂಕೇಶ್ ನೆನಪಿನಲ್ಲಿ ಗೌರಿ ನೆನಪು ಕಾರ್ಯಕ್ರಮವನ್ನು ಗೌರಿ ಮೆಮೊರಿಯಲ್ ಟ್ರಸ್ಟ್ ನಿಂದ ಬೆಂಗಳೂರಿನ ಟೌನ್ ಹಾಲ್ನಲ್ಲಿ ಆಯೋಜನೆ ಮಾಡಲಾಗಿದೆ. ಇನ್ನು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ಸರ್ವಾಧಿಕಾರದ ಕಾಲದಲ್ಲಿ ಭಾರತವನ್ನು ಮರುಕಟ್ಟುವ ಕುರಿತು ಸಂವಾದ ಕಾರ್ಯಕ್ರಮ ನಡೆಯಲಿದೆ.
ಬೆಳಗಾವಿ: ಸತೀಶ್ ಜಾರಕಿಹೊಳಿ, ನಮ್ಮ ನಡುವೆ ಯಾವುದೇ ವಾರ್ ಇಲ್ಲ, ನಮ್ಮದು ಬಿಜೆಪಿ ವಿರುದ್ಧದ ಹೋರಾಟ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ನಾನು 36 ಸಾವಿರ ಕೋಟಿ ಹಣವನ್ನು ಮಹಿಳೆಯರಿಗೆ ಕೊಡಬೇಕು. ಬಹಳಷ್ಟು ಅಳೆದು ತೂಗಿ ನಾನು ಸಚಿವೆಯಾಗಿ ಹೆಜ್ಜೆ ಇಡುತ್ತಿದ್ದೇನೆ ಎಂದಿದ್ದಾರೆ.
ರಾಮನಗರ: ನಗರದಿಂದ ಕನಕಪುರಕ್ಕೆ ಮೆಡಿಕಲ್ ಕಾಲೇಜು ಶಿಫ್ಟ್ ವಿಚಾರ ‘ ಕನಕಪುರಕ್ಕೆ ಮೊದಲೇ ಮೆಡಿಕಲ್ ಕಾಲೇಜು ಮಂಜೂರು ಆಗಿತ್ತು ಎಂದು ಕನಕಪುರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಕುಮಾರಸ್ವಾಮಿ ಸಿಎಂ ಆಗಿದ್ದಾಗ ಬಜೆಟ್ನಲ್ಲಿ ಘೋಷಣೆ ಮಾಡಿದ್ದರು. ಈಗ ಎರಡೂ ಕಡೆ ಮೆಡಿಕಲ್ ಕಾಲೇಜಿನ ಅವಶ್ಯಕತೆ ಇದೆ. ಕನಕಪುರದಲ್ಲಿ ನಿರ್ಮಾಣ ಆಗ್ತಿರುವ ಕಾಲೇಜು ರಾಮನಗರ ಬಳಿ ಇದೆ.
ರಾಮನಗರದಲ್ಲಿ ಯೂನಿವರ್ಸಿಟಿ ಆಗುತ್ತೆ ಎಂದರು.
ಬೆಂಗಳೂರು: ಮಾನವ ಮತ್ತು ವನ್ಯಪ್ರಾಣಿ ಸಂಘರ್ಷ ಹೆಚ್ಚುತ್ತಿರುವ ಹಿನ್ನಲೆ ಇಂದು ಸಿಎಂ ಸಿದ್ದರಾಮಯ್ಯ ಗೃಹ ಕಚೇರಿ ಕೃಷ್ಣಾದಲ್ಲಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅಧಿಕಾರಿಗಳನ್ನು ವರ್ಗಾವಣೆಯನ್ನು ಕೈಗೊಂಡಿದೆ. ಅದರಂತೆ ಇದೀಗ7 ಐಪಿಎಸ್ ಅಧಿಕಾರಿಗಳ ವರ್ಗಾವಣೆಗೆ ಸರ್ಕಾರ ತಾತ್ಕಾಲಿಕ ತಡೆ ನೀಡಿ ಆದೇಶ ಹೊರಡಿಸಿದೆ. ಕೂಡಲೇ ಡಿಜಿ-ಐಜಿಪಿ ಕಚೇರಿಗೆ ವರದಿ ಮಾಡಿಕೊಳ್ಳುವಂತೆ ಐಪಿಎಸ್ ಅಧಿಕಾರಿಗಳಾದ ಅಕ್ಷಯ್ ಮಚೀಂದ್ರ, ಅಬ್ದುಲ್ ಅಹದ್, ಭೀಮಾಶಂಕರ್ ಗುಳೇದ್, ಶೇಖರ್ ಟೆಕ್ಕಣನವರ್, ಸೈದುಲ್ಲಾ ಅಡಾವತ್, ನಿರಂಜನ್ ರಾಜೇ ಅರಸ್, ಬದರೀನಾಥ್ಗೆ ಸೂಚನೆ ನೀಡಲಾಗಿದೆ.
ಬೆಂಗಳೂರು: ನಗರದಲ್ಲಿ ಆಟೋ ಚಾಲಕನಿಂದ ವಿದೇಶಿ ಪ್ರಜೆಗೆ ವಂಚನೆಯಾದ ಆರೋಪ ಕೇಳಿಬಂದಿದೆ. ಬೆಂಗಳೂರು ಅರಮನೆ ವೀಕ್ಷಣೆಗೆ ಬಂದಿದ್ದ ವಿದೇಶಿ ಪ್ರಜೆಗಳ ಬಳಿ 500 ರೂ. ಪಡೆದು ಬಳಿಕ 100 ರೂ. ಕೊಟ್ಟಿದ್ದೀರಿ ಎಂದು ಆಟೋ ಚಾಲಕನ ವಂಚನೆ ಆರೋಪಿಸಿ, ನಂತರ ವಿದೇಶಿ ಪ್ರಜೆ ಯುಟ್ಯೂಬ್ಗೆ ವಿಡಿಯೋ ಅಪ್ಲೋಡ್ ಮಾಡಿದ್ದಾರೆ.
ಬೆಂಗಳೂರು: ನಿನ್ನೆ (ಸೆ.04) ಹುಲಿ ದಾಳಿಗೆ ಬಾಲಕ ಚರಣ್ ನಾಯ್ಕ್(7) ಮೃತಪಟ್ಟಿದ್ದಾನೆ. ಮೂರು ದಿನಗಳ ಹಿಂದೆ ವೆಂಕಟೇಶ್ ಕಾಡಾಣೆ ತುಳಿತಕ್ಕೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಕಳೆದ 15 ದಿನಗಳಲ್ಲಿ ಒಟ್ಟು 11 ಮಂದಿ ಮೃತಪಟ್ಟಿದ್ದಾರೆ. ಮಾನವ ಪ್ರಾಣಿ ಸಂಘರ್ಷದ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಹೇಳಿದರು.
ವಿಶ್ವ ವಿಖ್ಯಾತ ಮೈಸೂರು ದಸರಾ 2023 ಮಹೋತ್ಸವಕ್ಕೆ ಅರಮನೆ ನಗರಿ ಸಜ್ಜಾಗುತ್ತಿದೆ. ಸಾಂಸ್ಕೃತಿಕ ನಗರಿಯಲ್ಲಿ ದಸರಾ ವೈಭವ ಕಳೆಗಟ್ಟಿದ್ದು, ಇಂದು ಅರಮನೆಯಂಗಳಕ್ಕೆ ಗಜಪಡೆ ಆಗಮಿಸಿತು. ಮೈಸೂರು ಅರಮನೆ ಮಂಡಳಿ ವತಿಯಿಂದ ಗಜಪಡೆಗೆ ಸಾಂಪ್ರದಾಯಿಕ ಸ್ವಾಗತ ದೊರೆಯಿತು.
ಬೆಂಗಳೂರು: ಶಿಕ್ಷಣ ಬರೀ ವಿದ್ಯಾವಂತರನ್ನಾಗಿ ಮಾಡುವುದು ಅಲ್ಲ. ಸಮಾಜದಲ್ಲಿನ ಕೆಲಸಗಳಿಗೆ ಶಕ್ತಿ ತುಂಬುವ ಕೆಲಸ ಶಿಕ್ಷಕರು ಮಾಡಬೇಕು. ಜಾತೀಯತೆ, ಸಾಮಾಜಿಕ ಅಸಮಾನತೆ, ಅನೇಕ ಭಾಷೆ, ಸಂಸ್ಕೃತನಲ್ಲಿದೆ. ವೈವಿಧ್ಯತೆಯಲ್ಲಿ ಏಕತೆ ಇರಬೇಕು ಅಂತ ಸಂವಿಧಾನದಲ್ಲಿದೆ. ಮಕ್ಕಳಿಗೆ ಪೋಷಕರು ಮೊದಲ ಗುರು. ಆಮೇಲೆ ನೀವು ಎರಡನೇ ಗುರು. ಶಾಲೆಯಲ್ಲಿ ಏನು ಕಲೀತಿವೋ ಅದನ್ನ ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುತ್ತೇವೆ. ಜಾತ್ಯಾತೀಕ, ವೈಜ್ಞಾನಿಕ, ವೈಚಾರಿಕ ಮನೋಭಾವ ಬೆಳೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ಇದೆ ಅನ್ನೋದು ಸುಳ್ಳು ಸುದ್ದಿ. ಆ ರೀತಿ ಸುಮ್ಮನೆ ಸುಳ್ಳು ಹಬ್ಬಿಸಲಾಗುತ್ತಿದೆ. ಬೇಸಿಗೆಯಲ್ಲಿ ಬೇಕಾಗುವಷ್ಟು ವಿದ್ಯುತ್ ಈಗಲೇ ಇದೆ. ಥರ್ಮಲ್ ವಿದ್ಯುತ್ ಘಟಕಗಳು ದುರಸ್ತಿಯಲ್ಲಿದೆ. ಮಳೆ ಹೆಚ್ಚಾಗಿದೆ, ಇದರಿಂದ ವಿದ್ಯುತ್ ಉತ್ಪಾದನೆ ಕೂಡ ಹೆಚ್ಚಾಗಿದೆ. ಇಂದು ನಿಗದಿಗಿಂತ 100 ಯೂನಿಟ್ ವಿದ್ಯುತ್ ಉತ್ಪಾದನೆ ಹೆಚ್ಚಿದೆ ಎಂದು ಬೆಂಗಳೂರಿನಲ್ಲಿ ಇಂಧನ ಇಲಾಖೆ ಸಚಿವ ಕೆ.ಜೆ.ಜಾರ್ಜ್ ಹೇಳಿದರು.
ಬೆಂಗಳೂರು: ಫೇಲ್ ಆದ ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳು ಇನ್ಮುಂದೆ ವರ್ಷಕ್ಕೆ 3 ಬಾರಿ ಪರೀಕ್ಷೆ ಬರೆಯಬಹುದು. ಫೇಲ್ ಅಥವಾ ಕಡಿಮೆ ಅಂಕ ಬಂದವರು 3 ಬಾರಿ ಪರೀಕ್ಷೆ ಬರೆಯಬಹುದು ಎಂದು ವಿಧಾನಸೌಧದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನ ಡಾಕುಳಗಿ ಗ್ರಾಮದಲ್ಲಿ ಇಂದು ಬೆಳಿಗ್ಗೆ 9:11ಕ್ಕೆ ರಿಕ್ಟರ್ ಮಾಪಕದಲ್ಲಿ 2.6 ರಷ್ಟು ತೀವ್ರತೆಯಲ್ಲಿ ಭೂಕಂಪವಾಗಿದೆ.
ಮಂಡ್ಯ: ಕೆ ಆರ್ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಬಿಡುತ್ತಿರುವ ಹಿನ್ನೆಲೆಯಲ್ಲಿ ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಾರೆ. ತಮಿಳುನಾಡಿಗೆ ನೀರು ಬಿಡದಂತೆ ರಕ್ತದಿಂದ ಹೆಬ್ಬೆಟ್ಟು ಒತ್ತಿ ಚಳುವಳಿ ನಡೆಸಿದ್ದಾರೆ. ರಕ್ತ ಕೊಟ್ಟೆವೂ ನೀರು ಕೊಡೆವು ಎಂದು ಘೋಷಣೆ ಕೂಗುತ್ತಿದ್ದಾರೆ.
ತುಮಕೂರು: ಜಿಲ್ಲೆಯಕರ್ನಾಟಕ ನಗರ ನೀರು ಸರಬರಾಜು ಒಳಚರಂಡಿ ಮಂಡಳಿ ಎಇಇ ಕಾಶಿ ವಿಶ್ವನಾಥ ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಕೈಗೆ ಸಿಕ್ಕಿಬಿದ್ದಿದ್ದಾರೆ. ಕುಮಾರಿ ಎಂಬುವರ ಜಮೀನಿನ ವ್ಯಾಜ್ಯ ವಿಚಾರವನ್ನು ಬಗೆಹರಿಸಲು ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ. ಲೋಕಾಯುಕ್ತ ಡಿವೈಎಸ್ ಪಿ ಮಂಜುನಾಥ್, ಹರೀಶ್ ನೇತೃತ್ವದಲ್ಲಿ ದಾಳಿ ನಡೆದಿದೆ.
ಕೊಪ್ಪಳ: ಶಾಸಕ ರಾಯರೆಡ್ಡಿ ಸಿಎಂಗೆ ಪತ್ರ ಬರೆದ ಬೆನ್ನಲ್ಲೇ ಇಂದು (ಸೆ.05) ರಂದು ಇಂಧನ ಸಚಿವ ಕೆ ಜೆ ಜಾರ್ಜ್ ಜೆಸ್ಕಾಂ ಅಧಿಕಾರಿಗಳ ಸಭೆ ಕರೆದಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಜೆಸ್ಕಾಂ ಅಧಿಕಾರಿಗಳ ಜೊತೆ ಬೆಸ್ಕಾಂ ಕೇಂದ್ರ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ.
ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಮಧ್ಯೆ ವಾಕ್ಸಮರ ಶುರುವಾಗಿದೆ. ಉದಯನಿಧಿ ಸ್ಟಾಲಿನ್ ಹೇಳಿಕೆಗೆ ಬಿ.ಎಲ್.ಸಂತೋಷ್ ಟ್ವೀಟ್ ಮಾಡಿದ್ದರು. ಇದಕ್ಕೆ ಪ್ರಿಯಾಂಕ್ ಖರ್ಗೆ ಟ್ಚೀಟ್ ಮಾಡಿ ಚಿಕಿತ್ಸೆ ಅಗತ್ಯವಿರುವ ಸೋಂಕು ಇದೆ ಎಂದು ನೀವು ಒಪ್ಪಿಕೊಂಡಿದ್ದೀರಿ. ಸಾವಿರಾರು ವರ್ಷಗಳಿಂದ ಅನೇಕ ಸೋಂಕುಗಳಿವೆ ಮತ್ತು ಪ್ರಚಲಿತದಲ್ಲಿವೆ. ಅದು ಮನುಷ್ಯರ ನಡುವೆ ತಾರತಮ್ಯವನ್ನುಂಟು ಮಾಡುತ್ತದೆ ಮತ್ತು ಅವರ ಮಾನವನ ಘನತೆಯನ್ನು ನಿರಾಕರಿಸುತ್ತದೆ. ನಿಮ್ಮಷ್ಟು ಬುದ್ಧಿವಂತನಲ್ಲ, ದಯವಿಟ್ಟು ನನಗೆ ಜ್ಞಾನೋದಯ ಮಾಡಿ. ಸಮಾಜದಲ್ಲಿ ಇಂತಹ ನಿಯಮಗಳನ್ನು ಯಾರು ಹಾಕಿದರು? ಇನ್ನೊಬ್ಬರಿಗಿಂತ ಹೆಚ್ಚು ನೀತಿವಂತರನ್ನಾಗಿ ಮಾಡುವುದು ಯಾವುದು? ಜಾತಿಯ ಆಧಾರದ ಮೇಲೆ ನಮ್ಮನ್ನು ವಿಭಜಿಸಿದವರು ಯಾರು ? ಕೆಲ ಜನರು ಏಕೆ ಅಸ್ಪೃಶ್ಯರಾಗಿದ್ದಾರೆ. ಅಸ್ಪೃಶ್ಯರು ಈಗಲೂ ದೇವಸ್ಥಾನಗಳನ್ನು ಏಕೆ ಪ್ರವೇಶಿಸಬಾರದು? ಮಹಿಳೆಯರ ಕೀಳು ಸ್ಥಿತಿ ಒತ್ತಿಹೇಳುವ ಈ ಆಚರಣೆ ಯಾರು ಪಡೆದರು ? ಅಸಮಾನ ಮತ್ತು ದಮನಕಾರಿಯಾದ ಜಾತಿ ವ್ಯವಸ್ಥೆಯಲ್ಲಿ ಯಾರು ಸಿಕ್ಕರು ? ಎಂದು ಟ್ವೀಟ್ ಮಾಡಿದ್ದಾರೆ.
ರಾಯಚೂರು: ಲಿಂಗಸುಗೂರು ಪುರಸಭೆಯ ನಾಲ್ವರು ಸದಸ್ಯರ ಸದಸ್ಯತ್ವ ರದ್ದುಗೊಳಿಸಲಾಗಿದೆ. ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಪಾಲ್ಗೊಂಡ ಹಿನ್ನೆಲೆಯಲ್ಲಿ ಫಾತೀಮಾ, ಮೌಲಾಸಾಬ್, ಎ.ಪ್ರಮೋದ್ ಕುಮಾರ್, ಶರಣಪ್ಪ ಅನರ್ಹಗೊಂಡಿದ್ದಾರೆ. ಸದಸ್ಯರು ಕಾಂಗ್ರೆಸ್ನಿಂದ ಆಯ್ಕೆಯಾಗಿ ಕೆಆರ್ಪಿಪಿ ಪರ ಪ್ರಚಾರ ನಡೆಸಿದ್ದರು. ಈ ವಿಚಾರವಾಗಿ ಲಿಂಗಸುಗೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದರು. ಜಿಲ್ಲಾ ದಂಡಾಧಿಕಾರಿಗಳ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನಾಲ್ವರು ಸದಸ್ಯರ ಸದಸ್ಯತ್ವ ರದ್ದು ಮಾಡಲಾಗಿದೆ.
ಬೆಂಗಳೂರು: ನಾಳೆ (ಸೆ.06) ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟ ಮಾಡುವಂತಿಲ್ಲ ಎಂದು ಬಿಬಿಎಂಪಿ ಸುತ್ತೋಲೆ ಹೊರಡಿಸಿದೆ.
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ, ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆಯಿಂದ ಮಳೆ ಮುನ್ಸೂಚನೆ ನೀಡಿದೆ. ಕರಾವಳಿ ವಲಯದಲ್ಲಿ ಜಾಸ್ತಿ ಮಳೆಯಾಗಲಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು, ಮಧ್ಯ ಕರ್ನಾಟಕದ ಭಾಗಗಳಲ್ಲಿ ಸುಮಾರಾಗಿ ಮಳೆಯಾಗಲಿದೆ. ಮಂಗಳೂರು, ಉಡುಪಿ, ಉತ್ತರ ಕನ್ನಡದ ಕರಾವಳಿ ಭಾಗಗಳಲ್ಲಿ ವರುಣಾರ್ಭಟ ಜೋರಾಗಲಿದೆ.
ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗದ ದಕ್ಷಿಣ ಭಾಗ, ಉತ್ತರ ಕನ್ನಡದ ಪೂರ್ವಭಾಗ, ಧಾರವಾಡ, ಹಾವೇರಿ, ಗದಗ, ವಿಜಯನಗರ ಜಿಲ್ಲೆಗೆ ಸಾಧಾರಣ ಮಳೆಯಾಗಬಹುದು. ಮೈಸೂರು, ಚಾಮರಾಜನಗರ, ಮಂಡ್ಯದ ದಕ್ಷಿಣ – ಪಶ್ಚಿಮ, ಚಿತ್ರದುರ್ಗ, ಬಳ್ಳಾರಿ, ಹುಬ್ಬಳ್ಳಿ ಧಾರವಾಡದ ಉತ್ತರ ಭಾಗ, ಬೆಳಗಾವಿ, ಬಾಗಲಕೋಟೆಗೆ ಹಗುರ ಮಳೆಯಾಗಲಿದೆ.
ಮೈಸೂರು: ಜಿಲ್ಲೆಯ ಟಿ.ನರಸೀಪುರದಲ್ಲಿ ಮತ್ತೆ ಚಿರತೆ ಹಾವಳಿ ಶುರುವಾಗಿದೆ. ಕಾವೇರಿಪುರ ಮೂಡಲಹುಂಡಿ ಗ್ರಾಮದಲ್ಲಿ ಎರಡು ಮೇಕೆ ಮೇಲೆ ಚಿರತೆ ದಾಳಿ ಮಾಡಿದೆ. ಚಿರತೆ ನಿನ್ನೆ (ಸೆ.05) ಗ್ರಾಮದ ಕಾಲುವೆ ಸಮೀಪ ಕಾಣಿಸಿಕೊಂಡಿತ್ತು. ಇದೀಗ ಚಿರತೆ ಹಾವಳಿಯಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಬೆಂಗಳೂರು: ಡಿಎಂಕೆ ಮುಖಂಡ ವಿ.ಕೆ.ಗುರುಸ್ವಾಮಿ ಮೇಲೆ ಹಲ್ಲೆ ಮಾಡಿರುವ ಘಟನೆ ಬಾಣಸವಾಡಿಯ ಕಮ್ಮನಹಳ್ಳಿ ಹೋಟೆಲ್ನಲ್ಲಿ ನಡೆದಿದೆ. ಸದ್ಯ ಬಾಣಸವಾಡಿ ಪೊಲೀಸರು ಆರೋಪಿಗಳಿಗಾಗಿ ತಲಾಶ್ ನಡೆಸಿದ್ದಾರೆ.
ಮಂಡ್ಯ/ಮೈಸೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನ ವಿರೋಧಿಸಿ ಧರಣಿ ಮಂಡ್ಯ ಜಿಲ್ಲೆಯಲ್ಲಿ ಪ್ರತಿಭಟನೆಗಳು ಮುಂದುವರೆದಿವೆ. ಇಂದು (ಸೆ.05) ಮಂಡ್ಯದಲ್ಲಿ ಬೆಳಗ್ಗೆ 10.30ಕ್ಕೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನ ನಿಲ್ಲಿಸುವಂತೆ ಆಗ್ರಹಿ, ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಲಿದ್ದಾರೆ. ಅಲ್ಲದೇ ಬೆಳಗ್ಗೆ 11 ಗಂಟೆಗೆ ಮಂಡ್ಯದ ಕಾವೇರಿ ನೀರಾವರಿ ನಿಗಮದ ಮುಂದೆ ರಾಜ್ಯ ರೈತ ಸಂಘದ ಸದಸ್ಯರು ಪ್ರತಿಭಟನೆ ಮಾಡಲಿದ್ದಾರೆ. ಮಧ್ಯಾಹ್ನ 12ಕ್ಕೆಶ್ರೀರಂಗಪಟ್ಟಣದಲ್ಲಿ ಭೂತಾಯಿ ಹೋರಾಟ ಸಮಿತಿ ಸದಸ್ಯರು ಧರಣಿ ಮಾಡಲಿದ್ದಾರೆ.
ರಾಜ್ಯದ 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
Published On - 8:00 am, Tue, 5 September 23