Lockdown Guidelines: ವಾಹನ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ, ತುರ್ತು ಅಗತ್ಯವಿದ್ದರೆ ನಡೆದು ಹೋಗಿ

karnataka government lockdown guidelines: ಯಾವುದೇ ಪಾಸ್‌ ವ್ಯವಸ್ಥೆಯನ್ನು ಜಾರಿಗೆ ತರಲ್ಲ. ಪ್ರಯಾಣಿಸುವವರು ಸೂಕ್ತ ಕಾರಣ ನೀಡಲೇಬೇಕು. ಇದು ಸಂಪೂರ್ಣ ಲಾಕ್‌ಡೌನ್ ಅಲ್ಲ. ಇದು ಷರತ್ತುಬದ್ಧ ಲಾಕ್‌ಡೌನ್

Lockdown Guidelines: ವಾಹನ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ, ತುರ್ತು ಅಗತ್ಯವಿದ್ದರೆ ನಡೆದು ಹೋಗಿ
ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ (ಸಂಗ್ರಹ ಚಿತ್ರ)
Follow us
guruganesh bhat
|

Updated on:May 07, 2021 | 8:26 PM

ಬೆಂಗಳೂರು: ಮೇ 10ರಿಂದ ಮೇ 24ರವರೆಗೆ ಜಾರಿಯಾಗುವ ಕರ್ನಾಟಕ ಲಾಕ್​ಡೌನ್​ನಲ್ಲಿ ಕೊವಿಡ್ ಲಸಿಕೆ ಹಾಕಿಸಿಕೊಳ್ಳಲು ಅವಕಾಶವಿದೆ. ಸಾರ್ವಜನಿಕರು ಹತ್ತಿರದ ಆಸ್ಪತ್ರೆಗಳಿಗೆ ನಡೆದೇ ತೆರಳಿ ಲಸಿಕೆ ತೆಗೆದುಕೊಳ್ಳಬಹುದು.  ಹೋಟೆಲ್‌ಗಳಿಗೆ ಪಾರ್ಸೆಲ್ ತರಲು ಹೋಗಬೇಕಾದರೆ ನಡೆದುಕೊಂಡೇ ಹೋಗಬೇಕು. ವಾಹನಗಳಲ್ಲಿ ಹೋಟೆಲ್‌ಗಳಿಗೆ ಹೋಗಬಾರದು. ಹಗಲು ವೇಳೆ ಯಾವುದೇ ವಾಹನಗಳಿಗೆ ಅವಕಾಶವಿಲ್ಲ. ಯಾವುದೇ ಪಾಸ್‌ ವ್ಯವಸ್ಥೆಯನ್ನು ಜಾರಿಗೆ ತರಲ್ಲ. ಪ್ರಯಾಣಿಸುವವರು ಸೂಕ್ತ ಕಾರಣ ನೀಡಲೇಬೇಕು. ಇದು ಸಂಪೂರ್ಣ ಲಾಕ್‌ಡೌನ್ ಅಲ್ಲ. ಇದು ಷರತ್ತುಬದ್ಧ ಲಾಕ್‌ಡೌನ್ ಎಂದು ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಹೇಳಿದರು.

ನ್ಯಾಯಬೆಲೆ ಅಂಗಡಿಗಳು ತೆರೆಯಲಿವೆ. ಮದ್ಯ ಮಾರಾಟ ಮಳಿಗೆಗಳು ಕೇವಲ ಪಾರ್ಸೆಲ್ ಸೇವೆಗಾಗಿ ಬೆಳಿಗ್ಗೆ 6 ರಿಂದ 10ರ ವರೆಗೆ ತೆರೆಯಲಿವೆ. ಜನರು ಮನೆಯಿಂದ ಹೊರ ಬರುವುದನ್ನು ತಡೆಯುವ ನಿಟ್ಟಿನಲ್ಲಿ ದಿನದ 24 ಗಂಟೆಯೂ ಅಗತ್ಯ ವಸ್ತುಗಳ ಹೋಂ ಡೆಲಿವರಿ ಸೇವೆ ಒದಗಿಸುವುದನ್ನು ಉತ್ತೇಜಿಸಲಾಗುವುದು.

* ರಾಜ್ಯಾದ್ಯಂತ 144 ಸೆಕ್ಷನ್ ಜಾರಿಯಲ್ಲಿರಲಿದೆ.  ಜಿಲ್ಲೆಯಿಂದ ಜಿಲ್ಲೆಗೆ ಓಡಾಟಕ್ಕೆ ಅವಕಾಶ ಇಲ್ಲ.

* ಕೊವಿಡ್ ಲಸಿಕೆ ಹಾಕಿಸಿಕೊಳ್ಳಲು ಹೋಗುವುದಕ್ಕೆ ಅವಕಾಶವಿದೆ. ಲಾಕ್‌ಡೌನ್ ಅವಧಿಯಲ್ಲೂ ಲಸಿಕೆ ಹಾಕಿಸಿಕೊಳ್ಳುವುದಕ್ಕೆ ಯಾವುದೇ ನಿರ್ಬಂಧ ಇಲ್ಲ

* ತರಕಾರಿ, ಹೋಟೆಲ್​ಗೆ ನಡೆದುಕೊಂಡೇ ಹೋಗಬೇಕು. ಅಗತ್ಯ ಸೇವೆಗೆ, ಆರೋಗ್ಯ ಚಟುವಟಿಕೆಗೆ ಹೋಗುವವರು ಮಾತ್ರ ವಾಹನ ಓಡಾಟಕ್ಕೆ ಅವಕಾಶವಿದೆ.

* ಹೋಟೆಲ್ ನವರು ಹೋಮ್‌ ಡೆಲಿವರಿ ಮಾಡಬಹುದು.

*  ಐಟಿ ಮತ್ತು ಐಟಿಇಎಸ್ ಕಂಪೆನಿಗಳ ಅಗತ್ಯ ಸಿಬ್ಬಂದಿ ಮಾತ್ರ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸಲು ಅವಕಾಶವಿದ್ದು, ಇತರ ಸಿಬ್ಬಂದಿ ಮನೆಯಿಂದಲೇ ಕಾರ್ಯನಿರ್ವಹಿಸಬೇಕು.

*  ಸ್ಥಳದಲ್ಲಿಯೇ ಕಾರ್ಮಿಕರು/ ಸಿಬ್ಬಂದಿ ಲಭ್ಯವಿರುವ ಕೈಗಾರಿಕೆಗಳು/ ಉತ್ಪಾದನಾ ಘಟಕಗಳು ಕಾರ್ಯ ನಿರ್ವಹಿಸಬಹುದು.

* ಅಗತ್ಯ ವಸ್ತುಗಳ ತಯಾರಿಕಾ ಘಟಕಗಳ ಕಾರ್ಯನಿರ್ವಹಣೆಗೆ ಅವಕಾಶ ನೀಡಲಾಗುವುದು.

* ನಿರಂತರ ಕಾರ್ಯನಿರ್ವಹಣೆಯ ಅಗತ್ಯವಿರುವ ತಯಾರಿಕಾ ಘಟಕಗಳಿಗೆ ಅನುಮತಿ ನೀಡಲಾಗುವುದು.

* ರೈಲು, ವಿಮಾನ ಸಂಚಾರ ಮಾಡುವವರು ಆಟೋ ಟ್ಯಾಕ್ಸಿ ಬಳಸಲು ಬಹುದು ಟಿಕೆಟ್ ತೋರಿಸಬೇಕು.

* ಸರಕು ಸಾಗಣೆ ವಾಹನಗಳಿಗೆ ಸಂಚರಿಸಲು ಅವಕಾಶವಿದೆ. * ದೂರ ಸಂಪರ್ಕ, ಇಂಟರ್ ನೆಟ್ ಸೇವೆ, ಪ್ರಸಾರ ಮತ್ತು ಕೇಬಲ್ ಸೇವೆಗಳು ಲಭ್ಯವಾಗಲಿವೆ.

ಇದನ್ನೂ ಓದಿ: Karnataka Lockdown: ಕರ್ನಾಟಕ ಲಾಕ್​ಡೌನ್​; ಕೊರೊನಾ ತಡೆಗೆ ಮೇ 10ರಿಂದ 24ರ ವರೆಗೆ ಸಂಪೂರ್ಣ ರಾಜ್ಯ ಸ್ತಬ್ಧ

 ಮಕ್ಕಳಿಗೆ ಅಪಾಯ ಎಂಬ ಆತಂಕವಿರುವ ಕೊವಿಡ್ 3ನೇ ಅಲೆಯನ್ನು ಹೇಗೆ ನಿಭಾಯಿಸ್ತೀರಿ? ಭಾರತ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆ

(Karnataka Lockdown All vehicle movement is restricted people can go through only walk till May 24th says CS P Ravikumar)

Published On - 8:17 pm, Fri, 7 May 21

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!