AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Lockdown: ಕರ್ನಾಟಕ ಲಾಕ್​ಡೌನ್ ವಿಸ್ತರಣೆ; ನಾಳೆ ನಡೆಯಲಿರುವ ಸಭೆಯಲ್ಲೇ ಅಂತಿಮ ತೀರ್ಮಾನ ಖಚಿತ

Lockdown Extension: 2ನೇ ಹಂತದ ಲಾಕ್​ಡೌನ್ ಘೋಷಣೆ ಆಗುತ್ತಿದ್ದಂತೆಯೇ ಸ್ವತಃ ಮುಖ್ಯಮಂತ್ರಿಗಳೇ ಪ್ಯಾಕೇಜ್ ಘೋಷಣೆ ಮಾಡುತ್ತಾರೆ. ಸದ್ಯದ ಪರಿಸ್ಥಿತಿ ಅವಲೋಕಿಸಿ ಪ್ಯಾಕೇಜ್ ಘೋಷಣೆ ಮಾಡಲಾಗುತ್ತದೆ ಎಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಸಚಿವ ಆರ್. ಅಶೋಕ್ ತಿಳಿಸಿದರು.

Karnataka Lockdown: ಕರ್ನಾಟಕ ಲಾಕ್​ಡೌನ್ ವಿಸ್ತರಣೆ; ನಾಳೆ ನಡೆಯಲಿರುವ ಸಭೆಯಲ್ಲೇ ಅಂತಿಮ ತೀರ್ಮಾನ ಖಚಿತ
ಲಾಕ್ಡೌನ್
guruganesh bhat
|

Updated on:May 18, 2021 | 6:19 PM

Share

ರಾಮನಗರ: ಕರ್ನಾಟಕದಲ್ಲಿ ಲಾಕ್‌ಡೌನ್ ವಿಸ್ತರಣೆ ಬಗ್ಗೆ ನಾಳೆ ಹನ್ನೊಂದು ಗಂಟೆಗೆ ನಡೆಯಲಿರುವ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ. ಎಲ್ಲರ ಸಲಹೆ ಪಡೆದು ಅಂತಿಮ ತೀರ್ಮಾನ ಮಾಡಲಾಗುತ್ತದೆ ಎಂದು ರಾಮನಗರದಲ್ಲಿ ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ್ ನಾರಾಯಣ ತಿಳಿಸಿದರು.

ಆಯಾ ಜಿಲ್ಲೆಯವರು ಲಾಕ್ ಡೌನ್ ವಿಸ್ತರಣೆ ಮಾಡಿಕೊಳ್ಳಲು ಆಗುವುದಿಲ್ಲ. ಕೆಲವೊಂದು ನಿರ್ವಹಣೆ ಮಾಡಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಇದೆ. ನಾಳೆ ಬೆಳಗ್ಗೆ ಹನ್ನೊಂದು ಗಂಟೆಗೆ ಸಭೆ ಸೇರುತ್ತಿದ್ದೇವೆ. ಎಲ್ಲರ ಸಲಹೆ ಪಡೆದು ತೀರ್ಮಾನ ಮಾಡಲಾಗುತ್ತದೆ. ಪರಿಸ್ಥಿತಿ ನೋಡಿ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಅವರು ತಿಳಿಸಿದರು.

ಜನರು ನಗರಪ್ರದೇಶ ಬಿಟ್ಟು ಹಳ್ಳಿಗಳಿಗೆ ಹೋಗಿರುವ ಕಾರಣ ಗ್ರಾಮೀಣ ಭಾಗದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿವೆ. ಹೀಗಾಗಿ ವೈದ್ಯರು ಗ್ರಾಮೀಣ ಭಾಗದ ಕಡೆ ಹೋಗಬೇಕು. ಬೆಂಗಳೂರು ಗ್ರಾಮಾಂತರದಲ್ಲಿ ಪೈಲಟ್ ಪ್ರಾಜೆಕ್ಟ್‌ಗೆ ಚಾಲನೆ ನೀಡಲಾಗಿದೆ. ಈ ಯೋಜನೆಗೆ ನರ್ಸಿಂಗ್ ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಬಳಸುತ್ತೇವೆ ಎಂದು ಅವರು ಸುದ್ದಿಗಾರರಿಗೆ ಮಾಹಿತಿ ನೀಡಿದರು.

ಲಾಕ್​ಡೌನ್ ವಿಸ್ತರಣೆ ಬಗ್ಗೆ ಕಂದಾಯ ಸಚಿವರು ಹೇಳೋದೇನು? ಲಾಕ್‌ಡೌನ್ ಮುಂದುವರಿಸಬೇಕೆಂಬುದು ನನ್ನ ಅಭಿಪ್ರಾಯವಾಗಿದ್ದು, ಆದರೆ ಲಾಕ್‌ಡೌನ್ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿರ್ಧರಿಸುತ್ತಾರೆ ಎಂದು ಉಡುಪಿಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.

ಮಹಾರಾಷ್ಟ್ರ, ಕೇರಳ, ದೆಹಲಿಯಲ್ಲಿ ರಾಜ್ಯದಲ್ಲೂ ಲಾಕ್‌ಡೌನ್ ಮುಂದುವರಿಸಿದರೆ ಉತ್ತಮ. 2ನೇ ಹಂತದ ಲಾಕ್​ಡೌನ್ ಘೋಷಣೆ ಆಗುತ್ತಿದ್ದಂತೆಯೇ ಸ್ವತಃ ಮುಖ್ಯಮಂತ್ರಿಗಳೇ ಪ್ಯಾಕೇಜ್ ಘೋಷಣೆ ಮಾಡುತ್ತಾರೆ. ಸದ್ಯದ ಪರಿಸ್ಥಿತಿ ಅವಲೋಕಿಸಿ ಪ್ಯಾಕೇಜ್ ಘೋಷಣೆ ಮಾಡಲಾಗುತ್ತದೆ ಎಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಸಚಿವ ಆರ್. ಅಶೋಕ್ ತಿಳಿಸಿದರು.

ಇದನ್ನೂ ಓದಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 4 ಲಕ್ಷಕ್ಕೂ ಹೆಚ್ಚು ಕೊವಿಡ್ ಸೋಂಕಿತರು ಗುಣಮುಖರಾಗಿದ್ದಾರೆ, ಈ ಟ್ರೆಂಡ್ ಮುಂದುವರೆಯಬೇಕು; ಲವ್ ಅಗರ್ವಾಲ್

ಕೊವಿಡ್ ಸಾವಿನ ಸಂಖ್ಯೆಯಲ್ಲಿ ವ್ಯತ್ಯಾಸ; ಬಿಹಾರ ಸರ್ಕಾರಕ್ಕೆ ಪಾಟ್ನಾ ಹೈಕೋರ್ಟ್ ತರಾಟೆ

(Karnataka Lockdown extending decision will be decided tomorrow says DCM Dr.Ashwath Narayan)

Published On - 6:13 pm, Tue, 18 May 21

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ