9 ಗಂಟೆಯಿಂದ ಜಾರಿಯಾಯ್ತು ಕೊರೊನಾ ಕರ್ಫ್ಯೂ: ಏನಿರುತ್ತೆ? ಏನಿರಲ್ಲ? ಯಾವುದಕ್ಕೆ ಅನುಮತಿ? ಇಲ್ಲಿದೆ ಮಾಹಿತಿ

Karnataka Lockdown Guidelines: ಕರ್ನಾಟಕದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಹೊರಡಿಸಿರುವ ಈ ಹೊಸ ಮಾರ್ಗಸೂಚಿಯ ಸರ್ಕಾರಿ ಆದೇಶವು ಏಪ್ರಿಲ್ 27ರ ರಾತ್ರಿ 9 ಗಂಟೆಯಿಂದ ಮೇ 12ರ ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಹೊಸ ಮಾರ್ಗಸೂಚಿಯ ಅನ್ವಯ ರಾಜ್ಯದಲ್ಲಿ ಲಭ್ಯವಿರುವ ಸೇವೆಗಳು ಮತ್ತು ನಿಷೇಧಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

9 ಗಂಟೆಯಿಂದ ಜಾರಿಯಾಯ್ತು ಕೊರೊನಾ ಕರ್ಫ್ಯೂ: ಏನಿರುತ್ತೆ? ಏನಿರಲ್ಲ? ಯಾವುದಕ್ಕೆ ಅನುಮತಿ? ಇಲ್ಲಿದೆ ಮಾಹಿತಿ
ಸ್ವಗ್ರಾಮಕ್ಕೆ ಹಿಂತಿರುಗುತ್ತಿರುವ ಜನ
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on:Apr 27, 2021 | 9:07 PM

ಬೆಂಗಳೂರು: ರಾಜ್ಯದಲ್ಲಿ ಕೊರನಾ ಸೋಂಕಿನ 2ನೇ ಅಲೆಗೆ ಕಡಿವಾಣ ಹಾಕಲೆಂದು ರಾಜ್ಯ ಸರ್ಕಾರವು ಸೋಮವಾರ 14 ದಿನಗಳ ಕಟ್ಟುನಿಟ್ಟಿನ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ. ಮಧ್ಯಾಹ್ನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಲಾಕ್​ಡೌನ್ ನಿರ್ಬಂಧದ ವಿವರಗಳನ್ನು ಮಾಧ್ಯಮಗೋಷ್ಠಿಯಲ್ಲಿ ನೀಡಿದ್ದರು. ಈ ವೇಳೆ ಅವರು ‘ಸಂಜೆಯ ಹೊತ್ತಿಗೆ ಮುಖ್ಯಕಾರ್ಯದರ್ಶಿಗಳು ವಿಸ್ತೃತ ಆದೇಶ ಹೊರಡಿಸುತ್ತಾರೆ’ ಎಂದು ಹೇಳಿದ್ದರು. ಅದರಂತೆ ನಿನ್ನೆ (ಏಪ್ರಿಲ್ 26) ರಾಜ್ಯದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಕೊವಿಡ್ ಸೋಂಕು ನಿಯಂತ್ರಣಕ್ಕಾಗಿ ಹೊಸ ಮಾರ್ಗಸೂಚಿಯ ಸರ್ಕಾರಿ ಆದೇಶ ಹೊರಡಿಸಿದ್ದಾರೆ. ವಿಪತ್ತು ನಿರ್ವಹಣಾ ಕಾಯ್ದೆಯಡಿ ಹೊರಡಿಸಿರುವ ಈ ಮಾರ್ಗಸೂಚಿಯು ಏಪ್ರಿಲ್ 27ರ ರಾತ್ರಿ 9 ಗಂಟೆಯಿಂದ ಮೇ 12ರ ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಹೊಸ ಮಾರ್ಗಸೂಚಿಯ ಅನ್ವಯ ರಾಜ್ಯದಲ್ಲಿ ಲಭ್ಯವಿರುವ ಸೇವೆಗಳು ಮತ್ತು ನಿಷೇಧಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ಅಗತ್ಯ ಸೇವೆಗೆ ಸೀಮಿತ ಅವಧಿ – ಬೆಳಗ್ಗೆ 6ರಿಂದ 10 ಗಂಟೆವರೆಗೆ ಅಗತ್ಯಸೇವೆಯ ಅಂಗಡಿಗಳು ತೆರೆಯಬಹುದು – ದಿನಸಿ, ಹಣ್ಣು-ತರಕಾರಿ, ಮೀನು ಮಾಂಸ ಅಂಗಡಿ ತೆರೆಯಲು ಅವಕಾಶ‌ – ಮದ್ಯಂದಗಡಿಗಳು ಬೆಳಗ್ಗೆ 6ರಿಂದ 10ಗಂಟೆವರೆಗೆ ಮಾತ್ರ ಓಪನ್ ಬಾರ್‌ಗಳಲ್ಲಿ ಪಾರ್ಸೆಲ್‌ಗೆ ಮಾತ್ರ ಅವಕಾಶ – ಕೃಷಿ ಸಂಬಂಧಿಸಿದ ಚಟುವಟಿಕೆಗೆ ಯಾವುದೇ ನಿರ್ಬಂಧವಿಲ್ಲ – ಬ್ಯಾಂಕ್, ಇ-ಕಾಮರ್ಸ್​ ಸೇವೆಗಳಿಗೆ ನಿರ್ಬಂಧ ಇರುವುದಿಲ್ಲ

ಸಂಚಾರ ವಿವರ – ಏರ್‌ಪೋರ್ಟ್‌ ಬಸ್‌, ಟ್ಯಾಕ್ಸಿಗಳಿಗೆ ಷರತ್ತುಬದ್ಧ ಅವಕಾಶ – ಟ್ರಾವೆಲ್‌ ದಾಖಲಾತಿ, ಟಿಕೆಟ್ ತೋರಿಸುವುದು ಕಡ್ಡಾಯ – ತುರ್ತು ಸೇವೆಗೆ ಮಾತ್ರ ಆಟೋ, ಟ್ಯಾಕ್ಸಿಗೆ ಅವಕಾಶ – ಮೇ 12ರವರೆಗೆ ಮೆಟ್ರೋ ಸಂಚಾರ ಸಂಪೂರ್ಣ ಬಂದ್ – ಅಂತಾರಾಜ್ಯ ವಾಹನ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ – ಅಂತರ್ ಜಿಲ್ಲಾ, ಅಂತರ್ ರಾಜ್ಯ ತುರ್ತು ಸೇವೆಗೆ ಮಾತ್ರ ಅವಕಾಶ

ವಿದ್ಯಾರ್ಥಿ ಸಂಚಾರ – ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಸಂಚಾರಕ್ಕೆ ಅವಕಾಶವಿದೆ – ಅಡ್ಮಿಷನ್ ಟಿಕೆಟ್‌ ತೋರಿಸಿ ಸಂಚಾರಿಸಬಹುದು. – ಆಟೋ, ಟ್ಯಾಕ್ಸಿಯಲ್ಲಿ ವಿದ್ಯಾರ್ಥಿಗಳು ಸಂಚರಿಸಲು ಅನುಮತಿಯಿದೆ.

ಮದುವೆಗೆ 50 ಮಂದಿ – ಮದುವೆ ಕಾರ್ಯಕ್ರಮದಲ್ಲಿ 50 ಜನರು ಮಾತ್ರ ಪಾಲ್ಗೊಳ್ಳಬಹುದು. – ಅಂತ್ಯಕ್ರಿಯೆಯಲ್ಲಿ ಕೇವಲ ಐವರು ಮಾತ್ರ ಭಾಗಿ ಆಗಬೇಕು. ಈ ವಿಚಾರವನ್ನು ಕಟ್ಟುನಿಟ್ಟಾಗಿ ಗಮನಿಸಲಾಗುವುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.

ಇವೆಲ್ಲಾ ಬಂದ್ – ರಾಜ್ಯದಲ್ಲಿ ಎಲ್ಲ ಶಾಲಾ ಕಾಲೇಜುಗಳನ್ನು ಮುಚ್ಚಲು ಆದೇಶ – ಸಿನಿಮಾ ಹಾಲ್, ಶಾಪಿಂಗ್ ಮಾಲ್, ಜಿಮ್, ಯೋಗ ಕೇಂದ್ರ – ಸ್ಪಾ, ಮನರಂಜನಾ ಕೇಂದ್ರ, ಸಮುದಾಯ ಭವನಗಳನ್ನು ಬಂದ್​ ಮಾಡಲು ಆದೇಶ – ಸ್ಟೇಡಿಯಂ, ಆಟದ ಮೈದಾನ, ಕ್ರೀಡಾ ಸಂಕೀರ್ಣ, ಜಿಮ್​ಗಳು ತೆರೆಯುವಂತಿಲ್ಲ.

ಸಾಮಾಜಿಕ ಬದುಕಿಗೆ ಕಡಿವಾಣ – ಸಾಮಾಜಿಕ, ಧಾರ್ಮಿಕ, ಕ್ರೀಡಾ, ಮನರಂಜನಾ, ಸಾಂಸ್ಕೃತಿಕ, ರಾಜಕೀಯ ಚಟುವಟಿಕೆಗೆ ಸಂಪೂರ್ಣ ನಿರ್ಬಂಧ – ಮಂದಿರ, ಮಸೀದಿ, ಚರ್ಚ್​ಗಳಿಗೆ ಜನರು ಪ್ರವೇಶಿಸುವಂತಿಲ್ಲ. ಪೂಜಾರಿಗಳು ಮಾತ್ರ ಸಂಪ್ರದಾಯದಂತೆ ಸರಳ ಪೂಜೆ ಮಾಡಬಹುದು. – ಬಾರ್ ಮತ್ತು ರೆಸ್ಟೋರೆಂಟ್, ಹೋಟೆಲ್, ದರ್ಶಿನಿಗಳಲ್ಲಿ ಪಾರ್ಸೆಲ್​ಗೆ ಮಾತ್ರ ಅವಕಾಶ

ಉದ್ಯೋಗ ವಿಚಾರ – ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಯಾವುದೇ ನಿರ್ಬಂಧವಿಲ್ಲ – ಕೈಗಾರಿಕೆಗಳಲ್ಲಿ ಕೆಲಸಕ್ಕೆ ತೆರಳುವವರು, ರಾತ್ರಿ ಪಾಳಿ ಕೆಲಸಕ್ಕೆ ಹೋಗುವವರು ಐಡಿ ತೋರಿಸಬೇಕು – ನ್ಯಾಯಬೆಲೆ ಅಂಗಡಿ, ಆಹಾರ, ದಿನಸಿ, ಹಣ್ಣು, ತರಕಾರಿ, ಡೇರಿ, ಹಾಲಿನ ಬೂತ್, ಮೀನು, ಮಾಂಸ ಮಾರಾಟ ಇರುತ್ತೆ – ಖಾಸಗಿ ಸಂಸ್ಥೆಗಳಲ್ಲಿ ಕನಿಷ್ಠ ಮಟ್ಟದ, ಅಗತ್ಯ ಪ್ರಮಾಣದ ಸಿಬ್ಬಂದಿ  ಮಾತ್ರ ಕಚೇರಿಗೆ ಹಾಜರಾಗಬೇಕು. ಉಳಿದವರಿಗೆ ಮನೆಯಿಂದಲೇ ಕೆಲಸಕ್ಕೆ ವ್ಯವಸ್ಥೆ ಮಾಡಬೇಕು – ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಶೇ.50ರಷ್ಟು ಸಿಬ್ಬಂದಿ ಸಾಮಾನ್ಯ ಕೆಲಸಕ್ಕೆ, ಉಳಿದ 50ರಷ್ಟು ಸಿಬ್ಬಂದಿ ಕೊವಿಡ್​ ಡ್ಯೂಟಿಗೆ ಹಾಜರಾಗಬೇಕು – ರಾಜ್ಯದ ಎಲ್ಲ ಕೋರ್ಟ್​ಗಳ ಬಗ್ಗೆ ಹೈಕೋರ್ಟ್​ನಿಂದ ನಿರ್ಧಾರ – ಆರೋಗ್ಯ, ವೈದ್ಯಕೀಯ ಶಿಕ್ಷಣ, ಕಂದಾಯ, ಗೃಹ ಇಲಾಖೆ, ಅಗ್ನಿಶಾಮಕ ದಳ, ಕಾರಾಗೃಹ, ವಿಪತ್ತು ನಿರ್ವಹಣಾ ಸಿಬ್ಬಂದಿ, ಎಲ್ಲಾ ಡಿಸಿಗಳ ಕಚೇರಿ, ಬಿಬಿಎಂಪಿ ಸಿಬ್ಬಂದಿ, ಇತರೆ ಇಲಾಖೆಗಳ ಕೊವಿಡ್ ಸೇವಾ ಸಿಬ್ಬಂದಿಗೆ ಕೆಲಸಕ್ಕೆ ಹಾಜರಾಗಲು ಅವಕಾಶ

(Karnataka Lockdown Guidelines Whats available and allowed whats not here is the detailed list in Kannada)

ಇದನ್ನೂ ಓದಿ: Explainer: 18ರಿಂದ 45 ವಯೋಮಾನದವರಿಗೆ ಕೋವಿಡ್ ಲಸಿಕೆ; ನೋಂದಣಿ ಹೇಗೆ? ಪಡೆದುಕೊಳ್ಳುವುದು ಎಲ್ಲಿ? ಡೇಟ್ ಮಿಸ್ ಆದ್ರೆ ಏನು ಮಾಡಬೇಕು?

ಇದನ್ನೂ ಓದಿ: Explainer: ಕೊವಿಡ್ ಲಸಿಕೆಯ ಮೊದಲ ಡೋಸ್ ಪಡೆದು ಎರಡನೇ ಡೋಸ್ ಪಡೆಯದಿದ್ದರೆ ಏನಾಗುತ್ತದೆ?

Published On - 9:43 pm, Mon, 26 April 21

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?