AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ 28 ಜಿಲ್ಲೆಗಳಲ್ಲಿ ಶೇ.10ಕ್ಕಿಂತ ಹೆಚ್ಚು ಕೊರೊನಾ ಪಾಸಿಟಿವಿಟಿ ಪ್ರಮಾಣ; ಮೇ.24ಕ್ಕೆ ಲಾಕ್​ಡೌನ್​ ಮುಗಿಯುವುದು ಅನುಮಾನ

Karnataka Lockdown: ಮೇ ತಿಂಗಳಲ್ಲಿ ಪಾಸಿಟಿವಿಟಿ ಪ್ರಮಾಣ ಶೇ.10 ಕ್ಕಿಂತ ಹೆಚ್ಚಿರುವ ಕರ್ನಾಟಕದ 28 ಜಿಲ್ಲೆಗಳನ್ನೂ ಸಂಪೂರ್ಣ ಲಾಕ್​ಡೌನ್ ಮಾಡುವುದಾದರೆ ಬಹುತೇಕ ಇಡೀ ಕರ್ನಾಟಕವೇ ಲಾಕ್​ಡೌನ್ ಆದಂತೆ ಆಗಲಿದೆ.

ರಾಜ್ಯದ 28 ಜಿಲ್ಲೆಗಳಲ್ಲಿ ಶೇ.10ಕ್ಕಿಂತ ಹೆಚ್ಚು ಕೊರೊನಾ ಪಾಸಿಟಿವಿಟಿ ಪ್ರಮಾಣ; ಮೇ.24ಕ್ಕೆ ಲಾಕ್​ಡೌನ್​ ಮುಗಿಯುವುದು ಅನುಮಾನ
ಲಾಕ್​ಡೌನ್​
Skanda
|

Updated on: May 14, 2021 | 9:21 AM

Share

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಎರಡನೇ ಅಲೆಯನ್ನು ನಿಯಂತ್ರಿಸಲು ಮೇ 10 ರಿಂದ ಮೇ 24ರ ತನಕ ಜಾರಿಯಾಗಿರುವ ಲಾಕ್​ಡೌನ್​ ಐಸಿಎಂಆರ್ ಸಲಹೆ ಜಾರಿ ಆದಲ್ಲಿ ಮತ್ತೆ ಮುಂದುವರೆಯುವ ಸಾಧ್ಯತೆ ಇದೆ. ಪಾಸಿಟಿವಿಟಿ ಪ್ರಮಾಣ ಶೇ.10ಕ್ಕಿಂತ ಹೆಚ್ಚಿರುವ ಜಿಲ್ಲೆಗಳನ್ನು 6ರಿಂದ 8 ವಾರಗಳ ಕಾಲ ಸಂಪೂರ್ಣ ಲಾಕ್​ಡೌನ್​ ಮಾಡಲು ಐಸಿಎಂಆರ್​ ಸಲಹೆ ನೀಡಿದ್ದು, ಅದನ್ನು ಪಾಲಿಸಿದ್ದೇ ಆದಲ್ಲಿ ಕರ್ನಾಟಕದ 28 ಜಿಲ್ಲೆಗಳಲ್ಲಿ ಆರರಿಂದ ಎಂಟು ವಾರ ಕಾಲ ಸಂಪೂರ್ಣ ಲಾಕ್​ಡೌನ್ ಮಾಡಬೇಕಾಗುತ್ತದೆ. ರಾಜ್ಯದ 31 ಜಿಲ್ಲೆಗಳ ಪೈಕಿ 28 ಜಿಲ್ಲೆಗಳಲ್ಲಿ ಪಾಸಿಟಿವಿಟಿ ಪ್ರಮಾಣ ಶೇ.10 ಕ್ಕಿಂತ ಮೇಲಿರುವುದರಿಂದ ಮೇ.24 ಕ್ಕೆ ಲಾಕ್​ಡೌನ್​ ಮುಗಿಯೋದು ಅನುಮಾನವಾಗಿದೆ.

ಮೇ ತಿಂಗಳಲ್ಲಿ ಪಾಸಿಟಿವಿಟಿ ಪ್ರಮಾಣ ಶೇ.10 ಕ್ಕಿಂತ ಹೆಚ್ಚಿರುವ ಕರ್ನಾಟಕದ 28 ಜಿಲ್ಲೆಗಳನ್ನೂ ಸಂಪೂರ್ಣ ಲಾಕ್​ಡೌನ್ ಮಾಡುವುದಾದರೆ ಬಹುತೇಕ ಇಡೀ ಕರ್ನಾಟಕವೇ ಲಾಕ್​ಡೌನ್ ಆದಂತೆ ಆಗಲಿದೆ. ಭಾರತದಲ್ಲಿ ಕ್ಷಿಪ್ರಗತಿಯಲ್ಲಿ ಹರಡುವ ಮೂಲಕ ಸಾಕಷ್ಟು ಸಾವು ನೋವುಗಳಿಗೆ ಕಾರಣವಾಗಿರುವ ಕೊರೊನಾ ಎರಡನೇ ಅಲೆಯನ್ನು ಹತೋಟಿಗೆ ತರಬೇಕೆಂದರೆ ಇನ್ನೂ ಆರರಿಂದ ಎಂಟು ವಾರಗಳ ಲಾಕ್​ಡೌನ್ ಅವಶ್ಯಕ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಅಭಿಪ್ರಾಯಪಟ್ಟಿರುವುದರಿಂದ ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಾಗಿದೆ.

ಐಸಿಎಂಆರ್​ ಏನೇನು ಹೇಳಿದೆ? ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಜಿಲ್ಲೆಗಳು ಮುಂದಿನ ಆರರಿಂದ ಎಂಟು ವಾರಗಳ ತನಕ ಲಾಕ್​ಡೌನ್​ ಆದರೆ ಉತ್ತಮ. ಪರೀಕ್ಷೆಗೆ ಒಳಪಟ್ಟವರ ಪೈಕಿ ಶೇ.10ಕ್ಕಿಂತ ಹೆಚ್ಚು ಮಂದಿಗೆ ಪಾಸಿಟಿವ್ ಕಾಣಿಸಿಕೊಳ್ಳುತ್ತದೆ ಎಂದಾದಲ್ಲಿ ನಿಯಮ ಪಾಲನೆ ಮಾಡಬೇಕಾಗುತ್ತದೆ. ಪ್ರಸ್ತುತ ಭಾರತದ 718 ಜಿಲ್ಲೆಗಳಲ್ಲಿ ಪರೀಕ್ಷೆಗೆ ಒಳಗಾದ ಮಂದಿಯಲ್ಲಿ ಶೇ.10ಕ್ಕಿಂತ ಹೆಚ್ಚಿನವರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಳ್ಳುತ್ತಿದೆ. ನವದೆಹಲಿ, ಮುಂಬೈ, ಬೆಂಗಳೂರಿನಂತಹ ನಗರಗಳೂ ಅಪಾಯದಲ್ಲಿವೆ ಎಂದಿದೆ.

ಪ್ರಸ್ತುತ ಅನೇಕ ರಾಜ್ಯಗಳು ಕೊರೊನಾ ತಡೆಗಟ್ಟುವಿಕೆಗಾಗಿ ಹಲವು ರೀತಿಯ ಕಠಿಣ ಕ್ರಮಗಳನ್ನು ಜಾರಿಗೆ ತಂದಿದ್ದು, ಸಂದರ್ಭಕ್ಕನುಗುಣವಾಗಿ ಅದನ್ನು ವಿಸ್ತರಿಸಿಕೊಳ್ಳುತ್ತಿವೆ. ಐಸಿಎಂಆರ್​ ಪ್ರಕಾರ ಶೇ.10ಕ್ಕಿಂತ ಅಧಿಕ ಪಾಸಿಟಿವ್ ಪ್ರಕರಣಗಳು ಕಾಣಿಸಿಕೊಳ್ಳುವ ಜಿಲ್ಲೆಗಳನ್ನು ಸಂಪೂರ್ಣ ಬಂದ್ ಮಾಡಲೇಬೇಕಿದ್ದು, ಪಾಸಿಟಿವಿಟಿ ಪ್ರಮಾಣವು ಶೇ.5ರಿಂದ 10ರ ನಡುವೆ ಬಂದಾಗ ನಿಯಮಾವಳಿಗಳನ್ನು ಸಡಿಲಿಸಬಹುದು. ಆದರೆ, ಆ ಪ್ರಮಾಣಕ್ಕೆ ಬರಲು ಆರರಿಂದ ಎಂಟು ವಾರಗಳಂತೂ ಬೇಕೇಬೇಕು ಎನ್ನಲಾಗುತ್ತಿದೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಮೇ 31ರವರೆಗೂ ಲಾಕ್​ಡೌನ್​ ಮುಂದುವರೆಯುವ ಸಾಧ್ಯತೆ; ಕ್ಯಾಬಿನೆಟ್​ ಸಭೆಯಲ್ಲಿ ಚರ್ಚೆ 

Corona Lockdown: ಇನ್ನೂ 6 ರಿಂದ 8 ವಾರಗಳ ಕಾಲ ಲಾಕ್​ಡೌನ್​ ಮುಂದುವರಿಕೆ ಅಗತ್ಯ: ಡಾ.ಬಲರಾಮ್​ ಭಾರ್ಗವ್

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ