Karnataka Lockdown News: ಲಾಕ್​ಡೌನ್​ ಮಾಡೋದಾದರೆ ಪ್ರತಿ ಕುಟುಂಬಕ್ಕೂ 10 ಸಾವಿರ ರೂಪಾಯಿ ಕೊಡಲಿ – ಸಿದ್ದರಾಮಯ್ಯ

Karnataka Lockdown News: ಲಾಕ್​ಡೌನ್​ ಮಾಡುವುದೇ ಆದರೆ ಒಂದು ಕೋಟಿ ಕುಟುಂಬಗಳಿಗೆ ತಲಾ ಹತ್ತು ಸಾವಿರ ರೂಪಾಯಿ ನೀಡಲಿ. ಎಲ್ಲರಿಗೂ ಕಡ್ಡಾಯವಾಗಿ ಕೊರೊನಾ ಲಸಿಕೆ ವಿತರಿಸಲಿ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Karnataka Lockdown News: ಲಾಕ್​ಡೌನ್​ ಮಾಡೋದಾದರೆ ಪ್ರತಿ ಕುಟುಂಬಕ್ಕೂ 10 ಸಾವಿರ ರೂಪಾಯಿ ಕೊಡಲಿ - ಸಿದ್ದರಾಮಯ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ
Follow us
Skanda
| Updated By: preethi shettigar

Updated on: Apr 12, 2021 | 1:07 PM

ಬೀದರ್​: ರಾಜ್ಯದಲ್ಲಿ ಕೊರೊನಾ ಸೋಂಕಿನ ಭೀತಿ ಹೆಚ್ಚಳವಾಗುತ್ತಿರುವ ಹಿನ್ನೆಲೆ ಕಠಿಣ ಕ್ರಮದ ಕುರಿತು ಕರ್ನಾಟಕ ರಾಜ್ಯ ಸರ್ಕಾರ ಚಿಂತಿಸುತ್ತಿರುವ ಬೆನ್ನಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಲಾಕ್​ಡೌನ್ ಕುರಿತು ಮಾತನಾಡಿ ಲಾಕ್​ಡೌನ್ ಮಾಡುವುದಾದರೆ ಪ್ರತಿ ಕುಟುಂಬಕ್ಕೂ ಹತ್ತು ಸಾವಿರ ರೂಪಾಯಿ ಕೊಟ್ಟು ಮಾಡಲಿ ಎಂದು ಹೇಳಿದ್ದಾರೆ. ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ ಸಿದ್ದರಾಮಯ್ಯ, ಈ ಸರ್ಕಾರದವರು ಸೋಂಕು ಕಡಿಮೆಯಾದ ಕೂಡಲೇ ಎಲ್ಲವಕ್ಕೂ ಅನುಮತಿ ನೀಡಿದರು. ಸಭೆ, ಸಮಾರಂಭಗಳು ಎಗ್ಗಿಲ್ಲದೇ ನಡೆಯುವಾಗ ಬಿಗಿ ಕ್ರಮ ಕೈಗೊಳ್ಳಲಿಲ್ಲ. ಈಗ ಲಾಕ್​ಡೌನ್​ ಅಂತಾರೆ. ಆದ್ರೆ ಸೋಂಕು ನಿಯಂತ್ರಣಕ್ಕೆ ಲಾಕ್​ಡೌನ್ ಪರಿಹಾರ ಅಲ್ಲ ಎಂದು ಟೀಕಿಸಿದ್ದಾರೆ.

ಕೊರೊನಾ ನಿಯಂತ್ರಿಸಲು ಲಾಕ್​ಡೌನ್ ಪರಿಹಾರ ಅಲ್ಲ. ಮೊದಲು ರೋಗ ಹೇಗೆ ಹರಡುತ್ತಿದೆ ಎನ್ನುವುದನ್ನು ಕಂಡುಹಿಡಿಯಬೇಕು. ಅದಕ್ಕೆ ಚಿಕಿತ್ಸೆ ಕೊಡಬೇಕು. ಆ ಮೂಲಕ ಅದನ್ನು ತಡೆಗಟ್ಟಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೇ ಲಾಕ್​ಡೌನ್​ ಮಾಡುವುದೇ ಆದರೆ ಒಂದು ಕೋಟಿ ಕುಟುಂಬಗಳಿಗೆ ತಲಾ ಹತ್ತು ಸಾವಿರ ರೂಪಾಯಿ ನೀಡಲಿ. ಎಲ್ಲರಿಗೂ ಕಡ್ಡಾಯವಾಗಿ ಕೊರೊನಾ ಲಸಿಕೆ ವಿತರಿಸಲಿ ಎಂದು ಆಗ್ರಹಿಸಿದ್ದಾರೆ.

ಸೋಂಕು ಇಳಿಮುಖವಾಗುತ್ತಿದ್ದಂತೆಯೇ ಹೊರಗಿನಿಂದ ಬಂದವರನ್ನು ಪರೀಕ್ಷೆ ಮಾಡಲಿಲ್ಲ. ಬಿಗಿ ಕ್ರಮ ಕೈಗೊಳ್ಳೊದು ಬಿಟ್ಟರು. ಎಲ್ಲವಕ್ಕೂ ಅನುಮತಿ ನೀಡಿದರು. ಈಗ ಸೋಂಕು ಹರಡುತ್ತಿರುವಾಗ ಎಚ್ಚೆತ್ತುಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೇ, ಸರಕಾರ ಸರ್ವಪಕ್ಷ ನಿಯೋಗದ ಸಭೆ ಬಗ್ಗೆ ಮಾತನಾಡಿ ಅವರು ಕರೆಯದೇ ನಾನು ಹೋಗಲಾ ಎಂದು ಪ್ರಶ್ನಿಸಿ, ಸಭೆಗೆ ಕರೆಯಲಿ ಆಮೇಲೆ ನೋಡೋಣ ಎಂದಿದ್ದಾರೆ.

ಇದನ್ನೂ ಓದಿ: Karnataka Lockdown News: ಲಾಕ್​ಡೌನ್​ ಹೇರುವ ಪರಿಸ್ಥಿತಿ ತರಬೇಡಿ.. ಕೊರೊನಾ ಬಗ್ಗೆ ನಿರ್ಲಕ್ಷ್ಯ ಬೇಡ, ಲಸಿಕೆ ತೆಗೆದುಕೊಳ್ಳಿ : ಪ್ರತಾಪ್​ ಸಿಂಹ ಮನವಿ 

Karnataka Lockdown Latest Updates: 2ನೇ ಅಲೆ ಸಿಕ್ಕಾಪಟ್ಟೆ ಡೇಂಜರಸ್: ಆರ್ಥಿಕ ಚಟುವಟಿಕೆಗೆ ಬ್ರೇಕ್ ಹಾಕದೇ ತಡೆಗಟ್ಟುವುದು ಅಸಾಧ್ಯ, ಲಾಕ್​ಡೌನ್​ ಮುನ್ಸೂಚನೆ?

(Karnataka Lockdown News: Siddaramaiah demands to provide Rs 10 thousand compensation for each family if government announces Lockdown)

Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ