AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಲಾಕ್​ಡೌನ್​: ಬಾರ್​ಗಳಲ್ಲಿ ಪಾರ್ಸೆಲ್​ಗೆ ಅವಕಾಶ, ಸಮಯ ನಿಗದಿ

ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 6ರಿಂದ 10 ಗಂಟೆಗೆ ಅವಕಾಶವಿದೆ. ಬೆಳಗ್ಗೆ 10 ಗಂಟೆಯ ನಂತರ ಒಬ್ಬನೇ ಒಬ್ಬ ವ್ಯಕ್ತಿಯೂ ರಸ್ತೆಗೆ ಇಳಿಯುವಂತಿಲ್ಲ.

ಕರ್ನಾಟಕ ಲಾಕ್​ಡೌನ್​: ಬಾರ್​ಗಳಲ್ಲಿ ಪಾರ್ಸೆಲ್​ಗೆ ಅವಕಾಶ, ಸಮಯ ನಿಗದಿ
ಸಂಗ್ರಹ ಚಿತ್ರ
ರಾಜೇಶ್ ದುಗ್ಗುಮನೆ
|

Updated on:May 07, 2021 | 8:40 PM

Share

ಕೊರೊನಾ ಎರಡನೇ ಅಲೆ ಮಿತಿಮೀರಿ ಹರಡುತ್ತಿದೆ. ಕೊವಿಡ್​ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕೊರೊನಾ ಕರ್ಫ್ಯೂ ಜಾರಿಗೊಳಿಸಿತ್ತು. ಆದಾಗ್ಯೂ ರಾಜ್ಯದಲ್ಲಿ ಕೊವಿಡ್​ ಕೇಸ್​ಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಹೀಗಾಗಿ, ಈ ಬಾರಿ ಸರ್ಕಾರ ಕಠಿಣ ಕ್ರಮದ ಮೊರೆ ಹೋಗಿದೆ. ಮೇ 10ರಿಂದ ಮೇ 24ರವರೆಗೆ ರಾಜ್ಯದಲ್ಲಿ ಲಾಕ್​ಡೌನ್​ ಘೋಷಣೆ ಮಾಡಿದೆ. ಕೊರೊನಾ ಕರ್ಫ್ಯೂದಲ್ಲಿದ್ದಂತೆಯೇ  ಈ ಬಾರಿ ಬಾರ್​ನಲ್ಲಿ ಪಾರ್ಸೆಲ್​ ಅವಕಾಶ ಇದೆ. 

ಕರ್ನಾಟಕದಲ್ಲಿ ಕೊರೊನಾ ಸೊಂಕಿನ ಎರಡನೇ ಅಲೆ ವ್ಯಾಪಕವಾಗಿ ಹಬ್ಬುತ್ತಿರುವುದರಿಂದ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲೇಬೇಕಾದ ಅನಿವಾರ್ಯತೆಗೆ ಸಿಲುಕಿದೆ. ಹೀಗಾಗಿ 14 ದಿನಗಳ ಕಾಲ ಕರ್ನಾಟಕವನ್ನು ಲಾಕ್​ಡೌನ್ ಮಾಡಲು ನಿರ್ಧರಿಸಿದ್ದು, ಮೇ 10ರಿಂದ ಇದು ಜಾರಿಗೆ ಬರಲಿದೆ.

ಕೊರೊನಾ ಮೊದಲನೆ ಅಲೆ ಕಾಣಿಸಿಕೊಂಡಾಗ ಏಕಾಏಕಿ ಲಾಕ್​ಡೌನ್​ ಘೋಷಣೆ ಮಾಡಲಾಗಿತ್ತು. ಇದರಿಂದ ಜನಸಾಮಾನ್ಯರು ಕಂಗಾಲಾಗಿದ್ದರು. ಅಲ್ಲದೆ, ಮದ್ಯಪ್ರಿಯರು ಆಲ್ಕೋಹಾಲ್​ಗಾಗಿ ತುಂಬಾನೇ ಪರಿತಪಿಸಿದ್ದರು. ಈಗ ಹಾಗಾಗದಂತೆ ನೋಡಿಕೊಳ್ಳಲು ಬೆಳಗ್ಗೆ 6-10 ಗಂಟೆವರೆಗೆ ಬಾರ್​ನಲ್ಲಿ ಪಾರ್ಸೆಲ್​ಗೆ ಅವಕಾಶ ಇದೆ.

ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 6ರಿಂದ 10 ಗಂಟೆಗೆ ಅವಕಾಶವಿದೆ. ಬೆಳಗ್ಗೆ 10 ಗಂಟೆಯ ನಂತರ ಒಬ್ಬನೇ ಒಬ್ಬ ವ್ಯಕ್ತಿಯೂ ರಸ್ತೆಗೆ ಇಳಿಯುವಂತಿಲ್ಲ. ಆದರೆ, ಆರೋಗ್ಯ ಮತ್ತು ಅನಿವಾರ್ಯ ಕೆಲಸಗಳಿಗೆ ಪಾಸ್ ವ್ಯವಸ್ಥೆ ಮಾಡಲಾಗುವುದು ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.

ಹಾಲಿನ ಬೂತ್‌ ತೆರೆಯಲು ಸಂಜೆವರೆಗೂ ಅವಕಾಶ ನೀಡಲಾಗಿದೆ. ಸರ್ಕಾರಿ ಕಚೇರಿ ಭಾಗಶಃ ಕೆಲಸ ನಿರ್ವಹಿಸುತ್ತವೆ. ಕಟ್ಟಡ ಕಾಮಗಾರಿಗೆ ಯಾವುದೇ ಅಡ್ಡಿ ಇಲ್ಲ. ಅಗತ್ಯ ವಸ್ತು ಸಾಗಿಸುವ ವಾಹನಗಳಿಗೆ ಅಡ್ಡಿ ಇಲ್ಲ. ಕೂಲಿ ಕಾರ್ಮಿಕರು ಬೆಂಗಳೂರು ಬಿಟ್ಟು ಹೋಗಬಾರದು. ಸ್ಥಳೀಯ ಕಾರ್ಮಿಕರನ್ನು ಬಳಸಿಕೊಂಡು ಕಾಮಗಾರಿಗಳು ನಡೆಯಬಹುದು. ತಳ್ಳುವ ಗಾಡಿ, ತರಕಾರಿ ಮಾರಲು ಅವಕಾಶ ನೀಡಲಾಗಿದೆ. ಜಿಲ್ಲೆಯಿಂದ ಜಿಲ್ಲೆಗೆ ಓಡಾಟಕ್ಕೆ ಅವಕಾಶ ಇಲ್ಲ.

ಇದನ್ನೂ ಓದಿ: Karnataka Lockdown: ಕರ್ನಾಟಕ ಲಾಕ್​ಡೌನ್​ ಅವಧಿಯಲ್ಲಿ ಯಾವೆಲ್ಲಾ ಸೇವೆ ಲಭ್ಯವಿರಲಿದೆ, ಯಾವುದು ಇಲ್ಲ? ಇಲ್ಲಿದೆ ಮಾಹಿತಿ

Karnataka Lockdown: ಕರ್ನಾಟಕ ಲಾಕ್​ಡೌನ್​; ಕೊರೊನಾ ತಡೆಗೆ ಮೇ 10ರಿಂದ 24ರ ವರೆಗೆ ಸಂಪೂರ್ಣ ರಾಜ್ಯ ಸ್ತಬ್ಧ

Published On - 8:35 pm, Fri, 7 May 21