Karnataka Lockdown: ನಾಳೆ ಸಂಜೆಯಿಂದ ಕರ್ನಾಟಕದಲ್ಲಿ ಕೊವಿಡ್ ಕರ್ಫ್ಯೂ! ಕೊರೊನಾ ನಿಯಂತ್ರಣಕ್ಕಾಗಿ 14 ದಿನ ರಾಜ್ಯಕ್ಕೆ ಬೀಗ
Karnataka Lockdown News: 14-15 ದಿನಗಳ ಕಾಲ ಕರ್ನಾಟಕವನ್ನು ಲಾಕ್‌ಡೌನ್ ಮಾಡಲು ನಿರ್ಧರಿಸಿದ್ದು, ನಾಳೆ ಸಂಜೆಯಿಂದ ಲಾಕ್‌ಡೌನ್ ಜಾರಿಯಾಗಲಿದೆ. 15 ದಿನಗಳ ಕಾಲ ಈ ಕಠಿಣ ನಿಯಮ ಮುಂದುವರೆಯಲಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೊಂಕಿನ ಎರಡನೇ ಅಲೆ ವ್ಯಾಪಕವಾಗಿ ಹಬ್ಬುತ್ತಿರುವುದರಿಂದ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲೇಬೇಕಾದ ಅನಿವಾರ್ಯತೆಗೆ ಸಿಲುಕಿದೆ. ಹೀಗಾಗಿ 14 ದಿನಗಳ ಕಾಲ ಕರ್ನಾಟಕವನ್ನು ಲಾಕ್‌ಡೌನ್ ಮಾಡಲು ನಿರ್ಧರಿಸಿದ್ದು, ನಾಳೆ ಸಂಜೆಯಿಂದ ಲಾಕ್‌ಡೌನ್ ಜಾರಿಯಾಗಲಿದೆ. 15 ದಿನಗಳ ಕಾಲ ಈ ಕಠಿಣ ನಿಯಮ ಮುಂದುವರೆಯಲಿದೆ ಎಂದು ಸರ್ಕಾರ ತಿಳಿಸಿದೆ.
ಬೆಳಗ್ಗೆ 6-10 ಗಂಟೆವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಉತ್ಪಾದನಾ ವಲಯ ಎಂದಿನಂತೆ ಮುಂದುವರಿಯುತ್ತದೆ. ಕೃಷಿ ಚಟುವಟಿಕೆಗಳಿಗೂ ಯಾವುದೇ ತೊಂದರೆ ಇಲ್ಲ. ರಾಜ್ಯದಲ್ಲಿ ಎಂದಿನಂತೆ ಕರ್ಫ್ಯೂ ಮುಂದುವರಿಯುತ್ತದೆ. ರಾಜ್ಯದಲ್ಲಿ ಆಕ್ಸಿಜನ್ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಇನ್ನುಮುಂದೆ ಆಕ್ಸಿಜನ್ ಕೊರತೆಯಾಗುವುದಿಲ್ಲ. ರಾಜ್ಯಕ್ಕೆ 800 ಮೆಟ್ರಿಕ್ ಟನ್ ಆಕ್ಸಿಜನ್ ಕೊಡಲು ಕೇಂದ್ರ ಸರ್ಕಾರ ಕೊಡಲು ಒಪ್ಪಿಕೊಂಡಿದೆ. ಎಂದು ತಿಳಿಸಿದ್ದಾರೆ. ಅಲ್ಲದೇ ರೆಮ್ಡೆಸಿವಿರ್ ಇಂಜೆಕ್ಷನ್ ಕೊರತೆಯೂ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಎರಡು ವಾರದಲ್ಲಿ ಕೊರೊನಾ ನಿಯಂತ್ರಣಕ್ಕೆ ಬಾರದಿದ್ದರೆ ಮತ್ತೆ ಕಠಿಣ ಕ್ರಮ ಮುಂದುವರೆಸಬೇಕಾದ ಅನಿವಾರ್ಯತೆ ಬರಬಹುದು. ಹಾಗಾಗಿ ಜನರು ಸಹಕಾರ ನೀಡಿ ಕೊರೊನಾ ನಿಯಂತ್ರಿಸಬೇಕು ಎಂದಿದ್ದಾರೆ. ಜನರ ಓಡಾಟಕ್ಕೆ ಸಾರಿಗೆ ಸಂಚಾರ ಇರುವುದಿಲ್ಲ. ಆದರೆ, ಸರಕು ಸಾಗಣೆ ವಾಹನ ಸಂಚಾರಕ್ಕೆ ಯಾವುದೇ ಅಡ್ಡಿಯಾಗುವುದಿಲ್ಲ ಎಂದು ತಿಳಿಸಿದ್ದಾರೆ.
ತಾಲ್ಲೂಕು ತಹಶೀಲ್ದಾರ್ ನೋಡೆಲ್ ಆಫೀಸರ್ ಆಗಿ ಕೆಲಸ ಮಾಡುತ್ತಾರೆ. ಇದನ್ನು ನಾವು ಕೋವಿಡ್ ಕರ್ಫ್ಯೂ ಅಂತೀವಿ. ಬೆಳಿಗ್ಗೆ 6ರಿಂದ 10ರವರೆಗೆ ದಿನಬಳಕೆಯ ವಸ್ತು ಖರೀದಿಗೆ ಅವಕಾಶ ಇರಲಿದೆ. ಬೇರೆ ಯಾವುದಕ್ಕೂ ಅವಕಾಶ ಇರಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ರಾಜ್ಯದಲ್ಲಿ ಆರೋಗ್ಯ ವ್ಯವಸ್ಥೆ ಕುಸಿಯುತ್ತಿದೆ. ಮೇ ಮೊದಲ ವಾರದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಲಿದ್ದು, ಸೋಂಕಿತರ ಸಂಖ್ಯೆ ಡಬಲ್, ತ್ರಿಬಲ್ ಆಗಲಿದೆ. ಹೀಗಾಗಿ ತಜ್ಞರ ಸಲಹೆಯಂತೆ ಲಾಕ್‌ಡೌನ್ ಮಾಡಿ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಪಟ್ಟು ಹಿಡಿದ ಪರಿಣಾಮ ಕೊನೆಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಸ್ತು ಎಂದಿದ್ದಾರೆ ಎನ್ನಲಾಗಿದೆ.
ಇದೇ ವೇಳೆ ಉಚಿತ ಕೊರೊನಾ ಲಸಿಕೆ ಬಗ್ಗೆ ಮಾತನಾಡಿ
ಭಾರತದಲ್ಲಿ ಇಂದು 3,52,991 ಕೊರೊನಾ ಕೇಸ್ಗಳು ದಾಖಲು, ಒಂದೇ ವಾರದಲ್ಲಿ 22.49 ಲಕ್ಷ ಪ್ರಕರಣಗಳು ಭಾರತದಲ್ಲಿ ಕಳೆದ 24ಗಂಟೆಯಲ್ಲಿ 3,52,991 ಪ್ರಕರಣಗಳು ದಾಖಲಾಗಿದ್ದು, 2,891 ಜನರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಭಾನುವಾರ ಕೂಡ ದೇಶದಲ್ಲಿ 3.55 ಹೊಸ ಕೇಸ್ಗಳು, 2,807 ಸಾವುಗಳು ದಾಖಲಾಗಿವೆ. ಈ ಎರಡೂ ಸಂಖ್ಯೆಗಳು ಜಗತ್ತಿನ ಉಳಿದೆಲ್ಲ ರಾಷ್ಟ್ರಗಳಲ್ಲಿ ದಾಖಲಾದ ಕೊರೊನಾ ಸೋಂಕಿತರ ಸಂಖ್ಯೆಗಿಂತ ಜಾಸ್ತಿ. ದೇಶದಲ್ಲಿ ಕೇವಲ 7 ದಿನಗಳಲ್ಲಿ ಅಂದರೆ ಏಪ್ರಿಲ್ 18-25ರವರೆಗೆ 22.49 ಲಕ್ಷ ಕೊರೊನಾ ಕೇಸ್ಗಳು ದಾಖಲಾಗಿವೆ. ಸಾಂಕ್ರಾಮಿಕ ರೋಗ ಪ್ರಾರಂಭವಾದಾಗಿನಿಂದ ಏಳುದಿನಗಳಲ್ಲಿ 22 ಲಕ್ಷಕ್ಕೂ ಅಧಿಕ ಕೊರೊನಾ ಪ್ರಕರಣಗಳು ದಾಖಲಾಗಿದ್ದು ಇದೇ ಮೊದಲು ಮತ್ತು ಅದೂ ಭಾರತದಲ್ಲೇ ಆಗಿದೆ.
ಇದನ್ನೂ ಓದಿ: PM Modi Announcement: 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ, ಲಾಕ್‌ಡೌನ್ ಎಂಬುದು ರಾಜ್ಯಗಳ ಕೊನೆ ಆಯ್ಕೆಯಾಗಲಿ: ಮೋದಿ
Published On - 2:11 pm, Mon, 26 April 21