Lokayukta Raids: ಬೆಂಗಳೂರು ಸೇರಿ ರಾಜ್ಯದ 63 ಕಡೆ ಲೋಕಾಯುಕ್ತ ದಾಳಿ

| Updated By: ರಮೇಶ್ ಬಿ. ಜವಳಗೇರಾ

Updated on: Dec 05, 2023 | 8:24 AM

Lokayukta raids government officials ಬೆಂಗಳೂರು ಸೇರಿ ರಾಜ್ಯದ 63 ಕಡೆ ಲೋಕಾಯುಕ್ತ ದಾಳಿಯಾಗಿದೆ. ಇಂದು ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ಅಧಿಕಾರಿಗಳ ವಿರುದ್ಧ ಅಕ್ರಮ ಆಸ್ತಿ ಗಳಿಕೆ ದೂರು ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳ 13 ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ.

Lokayukta Raids: ಬೆಂಗಳೂರು ಸೇರಿ ರಾಜ್ಯದ 63 ಕಡೆ ಲೋಕಾಯುಕ್ತ ದಾಳಿ
ಲೋಕಾಯುಕ್ತ
Follow us on

ಬೆಂಗಳೂರು, (ಡಿಸೆಂಬರ್ 05): ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಇಂದು(ಮಂಗಳವಾರ) ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ (Karnataka Lokayukta )ನಡೆಸಿದೆ. ರಾಜ್ಯದ 63 ಕಡೆ 13 ಅಧಿಕಾರಿಗಳ ಮನೆಗಳ ಮೇಲೆ ದಾಳಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಸುಮಾರು 200ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿದ್ದು, ಭ್ರಷ್ಟ ಅಧಿಕಾರಿಗಳ ಚಳಿ ಬಿಡಿಸಿದ್ದಾರೆ.

ಬೆಂಗಳೂರಿನಲ್ಲಿ ಮೂರು ಕಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ

ಬೆಂಗಳೂರಿನಲ್ಲಿ ಮೂರು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಸ್ಕಾಂ ಜಾಗೃತ ದಳ ಅಧಿಕಾರಿ T.N.ಸುಧಾಕರ್ ರೆಡ್ಡಿ ಮನೆ, ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಚ್​​​.ಎಸ್​​.ಕೃಷ್ಣಮೂರ್ತಿ ಮನೆ ಹಾಗೂ ಕುಂಬಳಗೂಡು-ಕಣಿಮಿಣಿಕೆ ಬಳಿಯ ಹಾಲು ಉತ್ಪಾದಕರ ಸಹಕಾರ ಸಂಘದ ಅಧಿಕಾರಿ ಮನೆ ಮೇಲೂ ದಾಳಿ ಮಾಡಿದ್ದು, ದಾಖಲೆಗಳನ್ನ ಪರಿಶೀಲನೆ ನಡೆಸಿದ್ದಾರೆ.

ಮೈಸೂರಿನಲ್ಲೂ ಲೋಕಾಯುಕ್ತ ಕಾರ್ಯಾಚರಣೆ

ಇಂದು ಬೆಳ್ಳಂಬೆಳಗ್ಗೆ ಮೈಸೂರಿನಲ್ಲೂ ಲೋಕಾಯುಕ್ತ ಕಾರ್ಯಾಚರಣೆ ನಡೆಸಿದ್ದು, ನಂಜನಗೂಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಮಹದೇವಸ್ವಾಮಿ ಮೇಲೆ ದಾಳಿ ಮಾಡಿದ್ದಾರೆ. ಮೈಸೂರಿನ ಗುರುಕುಲ ಬಡಾವಣೆ ನಿವಾಸ ಸೇರಿ 12 ಕಡೆ ಪರಿಶೀಲನೆ ನಡೆಸಿದ್ದಾರೆ. ಕುಟುಂಬದ ಹೆಸರಿನಲ್ಲಿ ಎಂ ಎಸ್ ಗ್ರೂಪ್ ಕಂಪನಿ, ಆದಾಯಕ್ಕೂ ಮೀರಿ ಅಸ್ತಿ ಗಳಿಕೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಡಿಜಿಪಿ ಪ್ರಶಾಂತ್ ಕುಮಾರ್ ಹಾಗೂ ಐ ಜಿ ಪಿ, ಸುಬ್ರಮಣ್ಣೀಶ್ವರ ರಾವ್ ಎಸ್. ಪಿ ಸುರೇಶ್ ಬಾಬು ಮಾರ್ಗದರ್ಶ‌ನದಲ್ಲಿ ಡಿಎಸ್‌ಪಿ, ಕೃಷ್ಣಯ್ಯ ನೇತೃತ್ವದಲ್ಲಿ 12 ತಂಡಗಳಿಂದ ವಿವಿಧ ಕಡೆಗಳಲ್ಲಿ ಪರಿಶೀಲನೆ ನಡೆದಿದೆ.

ಬಳ್ಳಾರಿ, ವಿಜಯನಗರ ಜಿಲ್ಲೆಯಲ್ಲಿ ಏಕಕಾಲಕ್ಕೆ ಲೋಕಯುಕ್ತ ದಾಳಿ

ಬಳ್ಳಾರಿ, ವಿಜಯನಗರ ಜಿಲ್ಲೆಯಲ್ಲಿ ಏಕಕಾಲಕ್ಕೆ ಲೋಕಯುಕ್ತ ದಾಳಿಯಾಗಿದೆ. ಬಳ್ಳಾರಿಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಚಂದ್ರಶೇಖರ, ಅರಣ್ಯ ಇಲಾಖೆಯ ಡಿಆರ್ ಎಫ್ ಓ ಮಾರುತಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಚಂದ್ರಶೇಖರ ಬಳ್ಳಾರಿಯಲ್ಲಿ ಕೆಲಸ ಮಾಡ್ತಿದ್ರು.. ಮನೆ ಮಾತ್ರ ಹೊಸಪೇಟೆಯಲ್ಲಿದೆ. ಇನ್ನು ಅರಣ್ಯ ಇಲಾಖೆಯ ಡಿಆರ್ ಎಫ್ ಓ ಮಾರುತಿ ಗಂಗಾವತಿಯಲ್ಲಿ‌ ಕೆಲಸ ಮಾಡ್ತಿದ್ರು ಮನೆ ಕಂಪ್ಲಿಯಲ್ಲಿದೆ. ಹೀಗಾಗಿ ಚಂದ್ರಶೇಖರ ಅವರ ಹೊಸಪೇಟೆ ಮನೆ ಮತ್ತು ಮಾರುತಿ ಅವರ ಕಂಪ್ಲಿ ಮತ್ತು ಗಂಗಾವತಿ ನಿವಾಸದ ಮೇಲೆ ದಾಳಿ ಮಾಡಿದ್ದು, ದಾಖಲೆ ಪರಿಶೀಲಿಸುತ್ತಿದ್ದಾರೆ.

ಬೀದರ್ ನಲ್ಲಿ ಲೋಕಾಯುಕ್ತ ಕಾರ್ಯಚರಣೆ

ಬೀದರ್​​ನಲ್ಲೂ ಸಹ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿದೆ. ಬೀದರ್ ನ ಪಶು ವೈಧ್ಯಕೀಯ ವಿಶ್ವವಿದ್ಯಾಲಯದ ನೌಕರರ ಸುನೀಲ್ ಕುಮಾರ್ ಮನೆ ಹಾಗೂ ಕಾಂಪ್ಲೆಕ್ಸ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ವಿಜಯೇಂದ್ರ ಪತ್ನಿಯ ಸಹೋದರನ ಮನೆ‌ ಮೇಲೆ‌ ಲೋಕ ದಾಳಿ

ಇನ್ನು ಮುಖ್ಯವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪತ್ನಿಯ ಸಹೋದರನ ಮನೆ‌ ಮೇಲೆ‌ ಲೋಕಾಯುಕ್ತ ದಾಳಿಯಾಗಿದೆ. ಡಾ ಪ್ರಭಲಿಂಗ ಮಾನಕರ್ ಯಾದಗಿರಿ ಡಿಎಚ್ ಓ ಆಗಿರುವ ಡಾ ಪ್ರಭುಲಿಂಗ್ ಮಾನಕರ್‌ ಅವರ ಕಲಬುರಗಿ ನಗರದ ಕರುಣೇಶ್ವರ ಕಾಲೋನಿಯಲ್ಲಿರುವ ನಿವಾಸದಲ್ಲಿ ಶೋಧ ನಡೆಸಿದ್ದಾರೆ.

Published On - 7:55 am, Tue, 5 December 23