Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ಭ್ರಷ್ಟ ಅಧಿಕಾರಿಗಳ ಆಸ್ತಿ, ಹಣ, ಚಿನ್ನ ಕಂಡು ಲೋಕಾಯುಕ್ತರೇ ಬೆರಗು, ಎಲ್ಲರೂ ಕೋಟ್ಯಾಧೀಶರು

ಲೋಕಾಯುಕ್ತ ಅಧಿಕಾರಿಗಳು ಕರ್ನಾಟಕದಾದ್ಯಂತ 10 ಭ್ರಷ್ಟ ಸರ್ಕಾರಿ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ, ಚಿನ್ನ ಪತ್ತೆಯಾಗಿತ್ತು. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಗದಗ, ಕಲಬುರಗಿ, ರಾಯಚೂರು, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ದಾಳಿ ನಡೆದಿದೆ. ಡಿಹೆಚ್‌ಒ ಸುನಿಲ್ ಕುಮಾರ್ ಮತ್ತು ಡಿವೈಎಸ್ಪಿ ನಂಜುಂಡಯ್ಯ ಅವರ ಆಸ್ತಿಗಳ ಮೌಲ್ಯ ಅತಿ ಹೆಚ್ಚಾಗಿದೆ.

10 ಭ್ರಷ್ಟ ಅಧಿಕಾರಿಗಳ ಆಸ್ತಿ, ಹಣ, ಚಿನ್ನ ಕಂಡು ಲೋಕಾಯುಕ್ತರೇ ಬೆರಗು, ಎಲ್ಲರೂ ಕೋಟ್ಯಾಧೀಶರು
ಲೋಕಾಯುಕ್ತ ದಾಳಿ
Follow us
Prajwal Kumar NY
| Updated By: ವಿವೇಕ ಬಿರಾದಾರ

Updated on:Dec 11, 2024 | 9:05 AM

ಬೆಂಗಳೂರು, ಡಿಸೆಂಬರ್​ 11: ಮಂಗಳವಾರ (ಡಿಸೆಂಬರ್​ 10) ಬೆಳ್ಳಂಬೆಳಗ್ಗೆ ಲೋಕಾಯುಕ್ತ (Lokayukta) ಅಧಿಕಾರಿಗಳು ಕರ್ನಾಟಕದಾದ್ಯಂತ ಏಕಕಾಲಕ್ಕೆ ದಾಳಿ ಮಾಡಿದ್ದರು. ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಗದಗ, ಕಲಬುರುಗಿ, ರಾಯಚೂರು, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿನ 10 ಭ್ರಷ್ಟ ಸರ್ಕಾರಿ ಅಧಿಕಾರಿಗಳ ಮನೆ ಮತ್ತು ಕಚೇರಿ ಮೇಲೆ ಏಕಕಾಲಕ್ಕೆ ದಾಳಿ ಮಾಡಿದ್ದರು. ಈ ವೇಳೆ ಕೋಟ್ಯಾಂತರ ಮೌಲ್ಯದ ಆಸ್ತಿ, ಚಿನ್ನ ಪತ್ತೆಯಾಗಿದೆ. ಬೆಂಗಳೂರು ಒಂದರಲ್ಲೇ ಐದು ಕಡೆ ದಾಳಿ ಮಾಡಲಾಗಿತ್ತು.

ದಾಳಿಗೆ ಒಳಗಾದ 10 ಅಧಿಕಾರಿಗಳ ಚರಾಸ್ತು, ಸ್ಥಿರಾಸ್ತಿ ಮೌಲ್ಯ

  1. ಬೆಸ್ಕಾಂ ಅಧೀಕ್ಷಕ ಅಭಿಯಂತರ ಲಕೇಶ್ ಬಾಬು ಅವರ ಚರಾಸ್ತಿ ಮತ್ತು ಸ್ಥಿರಾಸ್ತಿ ಮೌಲ್ಯ 6,70,95,000 ಕೋಟಿ ರೂ.
  2. ಕಂದಾಯ ನಿರೀಕ್ಷಕ ಎಸ್.ಜಿ.ಸುರೇಶ್ ಚರಾಸ್ತಿ ಮತ್ತು ಸ್ಥಿರಾಸ್ತಿ ಮೌಲ್ಯ 1,82,61,215 ಕೋಟಿ ರೂ.
  3. ಬೆಂಗಳೂರು ಗ್ರಾಮಾಂತರ ಡಿಹೆಚ್​​ಒ ಸುನೀಲ್ ಕುಮಾರ್ ಚರಾಸ್ತಿ ಮತ್ತು ಸ್ಥಿರಾಸ್ತಿ ಮೌಲ್ಯ 6,63,90,000 ಕೋಟಿ ರೂ.
  4. ಬಿಬಿಎಂಪಿ ತೆರಿಗೆ ಇನ್ಸ್​ಪೆಕ್ಟರ್​​​ ಕೃಷ್ಣಪ್ಪ ಚರಾಸ್ತಿ ಮತ್ತು ಸ್ಥಿರಾಸ್ತಿ ಮೌಲ್ಯ 2,21,09,551 ಕೋಟಿ ರೂ.
  5. ಉನ್ನತ ಶಿಕ್ಷಣ ಇಲಾಖೆ ಉಪ ಕಾರ್ಯದರ್ಶಿ ಏಕೇಶ್ ಬಾಬು ಚರಾಸ್ತಿ ಮತ್ತು ಸ್ಥಿರಾಸ್ತಿ ಮೌಲ್ಯ 7,92,00,000 ಕೋಟಿ ರೂ. ಪತ್ತೆಯಾಗಿದೆ. ಇವರ ಮನೆಯಲ್ಲಿ ಹಣ ಎಣಿಸುವ ಮಷಿನ್ ಪತ್ತೆಯಾಗಿದೆ.
  6. ಚನ್ನಪಟ್ಟಣ ಪೊಲೀಸ್ ತರಬೇತಿ ಶಾಲೆ ಡಿವೈಎಸ್​ಪಿ ನಂಜುಂಡಯ್ಯ ಚರಾಸ್ತಿ ಮತ್ತು ಸ್ಥಿರಾಸ್ತಿ ಮೌಲ್ಯ 12,53,00,225 ಕೋಟಿ ರೂ.
  7. ಗದಗ ಪಂಚಾಯಿತಿ ಇಂಜಿನಿಯರಿಂಗ್ ವಿಭಾಗ ಎಸ್​ಡಿಎ ಲಕ್ಷ್ಮಣ ಕೊನೆರಪ್ಪ ಕರ್ಣಿ ಚರಾಸ್ತಿ ಮತ್ತು ಸ್ಥಿರಾಸ್ತಿ ಮೌಲ್ಯ 2,01,81,000 ಕೋಟಿ ರೂ.
  8. ಕಲಬುರಗಿ ಮಹಾನಗರ ಪಾಲಿಕೆ ಅಧೀಕ್ಷಕ ಅಭಿಯಂತರ ರಾಮಪ್ಪ ಚರಾಸ್ತಿ ಮತ್ತು ಸ್ಥಿರಾಸ್ತಿ ಮೌಲ್ಯ 3,58,46,000 ಕೋಟಿ ರೂ.
  9. ಕೊಪ್ಪಳ ಅಬಕಾರಿ ನಿರೀಕ್ಷಕ ರಮೇಶ್ ಅಗಡಿ ಚರಾಸ್ತಿ ಮತ್ತು ಸ್ಥಿರಾಸ್ತಿ ಮೌಲ್ಯ ₹1,61,23,175
  10. ಹಿರಿಯೂರು ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿ ಎಸ್.ಸುರೇಶ್ ಚರಾಸ್ತಿ ಮತ್ತು ಸ್ಥಿರಾಸ್ತಿ ಮೌಲ್ಯ 3,50,14,417 ಕೋಟಿ ರೂ.

ಈವರೆಗಿನ ಮಾಹಿತಿ ಪ್ರಕಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಡಿಹೆಚ್​ಒ ಸುನಿಲ್ ಕುಮಾರ್ ಮತ್ತು ಡಿಎಸ್​ಪಿ ನಂಜುಡಯ್ಯ ಹಣದ ತಿಮಿಂಗಿಲಗಳಾಗಿದ್ದಾರೆ. ರಾಜಾನುಕುಂಟೆ ಬಳಿ ಇರುವ ನಂಜುಂಡಯ್ಯ ಅವರ ನಿವಾಸ ಕಂಡು ಲೋಕಾಯುಕ್ತ ಅಧಿಕಾರಿಗಳೇ ಶಾಕ್ ಆಗಿದ್ದರು.‌ ಇದು ಮನೆಯೋ ಅಥವಾ ಅರಮನೆಯೋ ಎಂದು ಬೆರಗಾಗಿದ್ದರು. ಮನೆಯೊಳಗೆ ಐಶಾರಾಮಿ ವ್ಯವಸ್ಥೆ ಇತ್ತು. ಸ್ವಿಮ್ಮಿಂಗ್ ಪೂಲ್, ಜಿಮ್ ಮತ್ತು ಥಿಯೇಟರ್ ನಂತಹ ಐಶಾರಾಮಿ ವ್ಯವಸ್ಥೆ ಮನೆಯಲ್ಲಿತ್ತು.

ಇದನ್ನೂ ಓದಿ: ಬಳ್ಳಾರಿ ಬಾಣಂತಿಯರ ಸರಣಿ ಸಾವು ಕೇಸ್​: ಲೋಕಾಯುಕ್ತದಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲು

ಬೆಂಗಳೂರಿನ ಮಂಜುನಾಥ ನಗರದಲ್ಲಿ ಇರುವ ಡಿಹೆಚ್​ಒ ಸುನಿಲ್ ನಿವಾಸದ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು. ಆದರೆ, ಸುನಿಲ್ ಮಾತ್ರ ಮನೆಯ ಗೇಟ್ ತೆರೆಯದೆ, ನಾಲ್ಕು ಗಂಟೆಗಳ ಕಾಲ ಲೋಕಾಯುಕ್ತ ಅಧಿಕಾರಿಗಳನ್ನು ಸತಾಯಿಸಿದ್ದರು.‌ ಈ ಬಗ್ಗೆಯೂ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಇದುವರೆಗೆ, ಸನಿಲ್​ ಮನೆಯಲ್ಲಿ 15 ಲಕ್ಷ ನಗದು ಮತ್ತು ಕೆಜಿ ಗಟ್ಟಲೆ ಚಿನ್ನ ಸಿಕ್ಕಿದೆ ಎನ್ನಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:45 am, Wed, 11 December 24

ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್