Lokayukta Raid: ಕರ್ನಾಟಕದಾದ್ಯಂತ ಲೋಕಾಯುಕ್ತ ದಾಳಿ: ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಯಲ್ಲಿ ದಾಖಲೆ ಪರಿಶೀಲನೆ

ಇಂದು(ಮೇ 31) ಬೆಳ್ಳಂಬೆಳಗ್ಗೆ ಕರ್ನಾಟಕದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಸರ್ಕಾರಿ ಅಧಿಕಾರಿ ನಿವಾಸ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆ ನಡೆಸಿದ್ದಾರೆ.

Lokayukta Raid: ಕರ್ನಾಟಕದಾದ್ಯಂತ ಲೋಕಾಯುಕ್ತ ದಾಳಿ: ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಯಲ್ಲಿ ದಾಖಲೆ ಪರಿಶೀಲನೆ
ಸಾಂದರ್ಭಿಕ ಚಿತ್ರ
Follow us
ರಮೇಶ್ ಬಿ. ಜವಳಗೇರಾ
|

Updated on:May 31, 2023 | 8:56 AM

ತುಮಕೂರು/ಹಾವೇರಿ:  ಅತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು(ಮೇ 31) ಬೆಳ್ಳಂಬೆಳಗ್ಗೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದರೆ, ಮತ್ತೊಂದೆಡೆ ರಾಜ್ಯದ ವಿವಿದೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ(Karnataka Lokayukta raid) ಮಾಡಿದ್ದಾರೆ. ಬೆಂಗಳೂರು, ತುಮಕೂರು(Tumakuru) ಹಾಗೂ ಹಾವೇರಿ(Haveri) ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ  ಮಾಡಿದ್ದಾರೆ. ಸರ್ಕಾರಿ ಅಧಿಕಾರಿಗಳು ಆದಾಯ ಮೀರಿ ಅಧಿಕ ಆಸ್ತಿ ಗಳಿಸಿದ ಆರೋಪದ ಮೇಲೆ ದಾಳಿ ನಡೆದಿದ್ದು, ಆದಾಯದ ಮೂಲ, ಆಸ್ತಿ ಪತ್ರಗಳು, ಬ್ಯಾಂಕ್ ವಿವರಗಳ ಬಗ್ಗೆ ಲೋಕಾಯುಕ್ತರ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: NIA Raid: ಬಿಹಾರದಲ್ಲಿ ಮೋದಿ ಕಾರ್ಯಕ್ರಮ ವೇಳೆ ದುಷ್ಕೃತ್ಯಕ್ಕೆ ಸಂಚು ಕೇಸ್, ದಕ್ಷಿಣ ಕನ್ನಡದ 16 ಕಡೆ NIA ದಾಳಿ

ತುಮಕೂರಿನ ಕೆಐಎಡಿಬಿ ಅಧಿಕಾರಿ ಮನೆ ಮೇಲೆ ದಾಳಿ

ತುಮಕೂರಿನ ಕೆಐಎಡಿಬಿ ಅಧಿಕಾರಿ ನರಸಿಂಹಮೂರ್ತಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಗರದ ಆರ್.ಟಿ. ನಗರದಲ್ಲಿ ಇರುವ ಮನೆ ಮೇಲೆ ಲೋಕಾಯುಕ್ತ ಡಿಎಸ್ ಪಿಗಳಾದ ಮಂಜುನಾಥ್ ಹಾಗೂ ಹರೀಶ್ ತಂಡ ದಾಳಿ ಮಾಡಿದ್ದು, ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸುತ್ತಿದೆ.

ಹಾವೇರಿ ಜಿಲ್ಲೆಯಲ್ಲಿ ಲೋಕಾಯುಕ್ತ ದಾಳಿ

ಇನ್ನು ಹಾವೇರಿ ಜಿಲ್ಲೆಯಲ್ಲೂ ಲೋಕಾಯುಕ್ತ ದಾಳಿಯಾಗಿದೆ. ಹಾವೇರಿಯ ನಿರ್ಮಿತಿ ಕೇಂದ್ರದ ಇಂಜಿನಿಯರ್ ವಾಗೀಶ್ ಶೇಟ್ಟರ್ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ರಾಣೆಬೆನ್ನೂರು ನಗರದ ನಿವಾಸ ಹಾಗೂ ಹಾವೇರಿಯ ದೇವಗರಿಯ ಜಿಲ್ಲಾಧಿಕಾರಿ ಕಚೇರಿ ಬಳಿ ಇರುವ ನಿರ್ಮಿತಿ ಕೇಂದ್ರ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನ ಎರಡು ಕಡೆ ಲೋಕಾಯುಕ್ತ ದಾಳಿ

ಬೆಂಗಳೂರಿನ ಎರಡು ಕಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಮಾಡಿದ್ದಾರೆ. ನಗರದ ಬಸವೇಶ್ವರನಗರದಲ್ಲಿರುವ ಬೆಸ್ಕಾ ಟೆಕ್ನಿಕಲ್ ಡೈರೆಕ್ಟರ್ ರಮೇಶ್ ಮನೆ ಮೇಲೆ ದಾಳಿಯಾಗಿದೆ. ಇನ್ನು ಇಂಡಸ್ಟ್ರೀಸ್ ಆಂಡ್ ಬಾಯ್ಲರ್ ಇಲಾಖೆ ಅಧಿಕಾರಿಯೊಬ್ಬರ ಮನೆ ಮೇಲೆ ಲೋಕಾಯುಕ್ತ ದಾಳಿ ಮಾಡಿದ್ದ, ಕಡತಗಳ ಪರಿಶೀಲನೆ ನಡೆಸಿದ್ದಾರೆ.

ಮೈಸೂರಿನಲ್ಲೂ ಲೋಕಾಯುಕ್ತ ಕಾರ್ಯಾಚರಣೆ

ಮೈಸೂರಿನ ನಿವೇದಿತಾ ನಗರ ಸಂಕ್ರಾಂತಿ ವೃತ್ತದ ಬಳಿ ಇರುವ ಮೈಸೂರು ಮಹಾನಗರ ಪಾಲಿಕೆ ಅಧಿಕಾರಿ ಮಹೇಶ್ ಕುಮಾರ್ ನಿವಾಸದ ಮೇಲೆ ದಾಳಿಯಾಗಿದೆ. ತೋಟದ ಮನೆ ಸೇರಿ ಹಲವು ಕಡೆ ಒಟ್ಟು 13 ಅಧಿಕಾರಿಗಳ ತಂಡ ಏಕಕಾಲಕ್ಕೆ ದಾಳಿ ಮಾಡಿ‌ ಕಾರ್ಯಾಚರಣೆ ನಡೆಸಿದೆ.

ಬೀದರ್ ಭೂಸೇನಾ ನಿಗಮದ ಅಧಿಕಾರಿ ಮೇಲೂ ದಾಳಿ

ಬೀದರ್ ಭೂಸೇನಾ ನಿಗಮದ ಅಧಿಕಾರಿ ಮನೆ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೀದರ್ ಹಾಗೂ ಚಿಟಗುಪ್ಪಾ ತಾಲೂಕಿನ ಮುತ್ತಂಗಿ ಗ್ರಾಮದ ಫಾರ್ಮ್ ಹೌಸ್ ಮೇಲೂ ಲೋಕಾಯುಕ್ತ ಡಿವೈಎಸ್ಪಿ ಓಲೆಕಾರ ನೇತೃತ್ವದಲ್ಲಿ ದಾಳಿ ದಾಳಿಯಾಗಿದೆ. ಬೀದರ್ ಹಾಗೂ ಚಿಟಗುಪ್ಪಾ ತಾಲೂಕಿನ ಮುತ್ತಂಗಿ ಗ್ರಾಮದ ಫಾರ್ಮ್ ಹೌಸ್ ನಲ್ಲೂ ಪರಿಶೀಲನೆ ನಡೆಸಿದ್ದಾರೆ.

Published On - 8:19 am, Wed, 31 May 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್