AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lokayukta Recruitment 2026: ಕರ್ನಾಟಕ ಲೋಕಾಯುಕ್ತ ಇಲಾಖೆಯಲ್ಲಿ ಉದ್ಯೋಗವಕಾಶ; ಪರೀಕ್ಷೆಯಿಲ್ಲದೆ ನೇರ ನೇಮಕಾತಿ, ಪಿಯುಸಿ ಆಗಿದ್ರೆ ಸಾಕು

ಕರ್ನಾಟಕ ಲೋಕಾಯುಕ್ತ ಇಲಾಖೆಯಿಂದ ಕ್ಲರ್ಕ್ ಮತ್ತು ಟೈಪಿಸ್ಟ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ. ಒಟ್ಟು 26 ಹುದ್ದೆಗಳಿಗೆ ಯಾವುದೇ ಪರೀಕ್ಷೆಯಿಲ್ಲದೆ, ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು. ದ್ವಿತೀಯ ಪಿಯುಸಿ ಪಾಸಾದವರು ಅರ್ಹರಾಗಿದ್ದು, ಮಾಸಿಕ 34,100 ರೂ.ನಿಂದ 67,600 ರೂ. ವೇತನ ಸಿಗಲಿದೆ. ಅರ್ಹರು ಆಗಸ್ಟ್ 17ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. ಇದೊಂದು ಉತ್ತಮ ಸರ್ಕಾರಿ ಉದ್ಯೋಗಾವಕಾಶ.

Lokayukta Recruitment 2026: ಕರ್ನಾಟಕ ಲೋಕಾಯುಕ್ತ ಇಲಾಖೆಯಲ್ಲಿ ಉದ್ಯೋಗವಕಾಶ; ಪರೀಕ್ಷೆಯಿಲ್ಲದೆ ನೇರ ನೇಮಕಾತಿ, ಪಿಯುಸಿ ಆಗಿದ್ರೆ ಸಾಕು
ಕರ್ನಾಟಕ ಲೋಕಾಯುಕ್ತ ನೇಮಕಾತಿ
ಅಕ್ಷತಾ ವರ್ಕಾಡಿ
|

Updated on:Jul 17, 2026 | 3:19 PM

Share

ಮುಖ್ಯಾಂಶಗಳು

  • ಕರ್ನಾಟಕ ಲೋಕಾಯುಕ್ತ ಇಲಾಖೆಯಲ್ಲಿ ಉದ್ಯೋಗವಕಾಶ.
  • ಕ್ಲರ್ಕ್ ಮತ್ತು ಟೈಪಿಸ್ಟ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ.
  • ಯಾವುದೇ ಪರೀಕ್ಷೆಯಿಲ್ಲದೆ, ನೇರ ಸಂದರ್ಶನ ಮೂಲಕ ಆಯ್ಕೆ.

ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಕರ್ನಾಟಕದ ಯುವಕ-ಯುವತಿಯರಿಗೆ ಸುವರ್ಣಾವಕಾಶವೊಂದು ಒದಗಿಬಂದಿದೆ. ಕರ್ನಾಟಕ ಲೋಕಾಯುಕ್ತ ಇಲಾಖೆಯು ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಖಾಲಿ ಇರುವ ಕ್ಲರ್ಕ್ (Clerk) ಮತ್ತು ಟೈಪಿಸ್ಟ್ (Typist) ಹುದ್ದೆಗಳನ್ನು ಭರ್ತಿ ಮಾಡಲು ಈ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಆಸಕ್ತರು ತಕ್ಷಣವೇ ಅರ್ಜಿ ಸಲ್ಲಿಸಬಹುದಾಗಿದೆ.

ಪರೀಕ್ಷೆಯಿಲ್ಲದೆ ನೇರ ನೇಮಕಾತಿ, ಒಟ್ಟು 26 ಹುದ್ದೆಗಳು:

ಈ ನೇಮಕಾತಿಯ ಅತ್ಯಂತ ಪ್ರಮುಖ ವೈಶಿಷ್ಟ್ಯವೆಂದರೆ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ. ಒಟ್ಟು 26 ಹುದ್ದೆಗಳ ಭರ್ತಿಗಾಗಿ ಈ ನೇಮಕಾತಿ ನಡೆಯುತ್ತಿದ್ದು, ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನದ (Direct Interview) ಮೂಲಕ ಆಯ್ಕೆ ಮಾಡಲಾಗುತ್ತದೆ. ಯಾವುದೇ ಪರೀಕ್ಷೆಯ ಆತಂಕವಿಲ್ಲದೆ ಸರ್ಕಾರಿ ಹುದ್ದೆ ಪಡೆಯಲು ಬಯಸುವ ಅಭ್ಯರ್ಥಿಗಳಿಗೆ ಇದೊಂದು ಅತ್ಯುತ್ತಮ ಅವಕಾಶವಾಗಿದೆ.

ಆಕರ್ಷಕ ಮಾಸಿಕ ವೇತನ ಶ್ರೇಣಿ:

ಲೋಕಾಯುಕ್ತ ಇಲಾಖೆಯ ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಅತ್ಯುತ್ತಮ ವೇತನವನ್ನು ನಿಗದಿಪಡಿಸಲಾಗಿದೆ. ಹುದ್ದೆಗಳಿಗೆ ನಿಯೋಜನೆಗೊಳ್ಳುವ ಅಭ್ಯರ್ಥಿಗಳಿಗೆ ಮಾಸಿಕವಾಗಿ ಕನಿಷ್ಠ ರೂ. 34,100 ರಿಂದ ಗರಿಷ್ಠ ರೂ. 67,600 ರವರೆಗೆ ಆಕರ್ಷಕ ವೇತನ ಶ್ರೇಣಿ ಸಿಗಲಿದೆ.

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ ದ್ವಿತೀಯ ಪಿಯುಸಿ (2nd PUC) ಅಥವಾ ಅದಕ್ಕೆ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು. ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ತುಂಬಿರಬೇಕು ಮತ್ತು ಗರಿಷ್ಠ ವಯೋಮಿತಿಯನ್ನು 40 ವರ್ಷಗಳಾಗಿ ನಿಗದಿಪಡಿಸಲಾಗಿದೆ. ಇದರೊಂದಿಗೆ, ಇಲಾಖೆಯ ನಿಯಮಗಳ ಪ್ರಕಾರ ಅರ್ಹ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಕೂಡ ಇರಲಿದೆ.

ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್ ಉದ್ಯೋಗ 2026: 10ನೇ ತರಗತಿ ಪಾಸಾದವರಿಗೆ ಸರ್ಕಾರಿ ಉದ್ಯೋಗದ ಅವಕಾಶ

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು:

ಈ ಹುದ್ದೆಗಳಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಗಸ್ಟ್ 17ರ ಒಳಗಾಗಿ ತಮ್ಮ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಕೊನೆಯ ದಿನಗಳಲ್ಲಿ ವೆಬ್‌ಸೈಟ್ ಸರ್ವರ್ ಬ್ಯುಸಿ ಇರುವ ಸಾಧ್ಯತೆ ಇರುವುದರಿಂದ, ಆಸಕ್ತರು ಕೊನೆಯ ದಿನಾಂಕದವರೆಗೆ ಕಾಯದೆ ಕೂಡಲೇ ಅರ್ಜಿ ಸಲ್ಲಿಸುವುದು ಒಳಿತು.

ಅರ್ಜಿ ಸಲ್ಲಿಸುವುದು ಹೇಗೆ?

ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿ ಪಡೆಯಲು, ಅಧಿಕೃತ ಅಧಿಸೂಚನೆಯನ್ನು ವೀಕ್ಷಿಸಲು ಹಾಗೂ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕರ್ನಾಟಕ ಲೋಕಾಯುಕ್ತ ಇಲಾಖೆಯ ಅಧಿಕೃತ ವೆಬ್‌ಸೈಟ್ lokayukta.karnataka.gov.in ಗೆ ಭೇಟಿ ನೀಡಿ.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:17 pm, Fri, 17 July 26

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ