AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yadgiri Water Contamination: ಸ್ವಯಂಪ್ರೇರಿತರಾಗಿ ಪ್ರಕರಣ ಕೈಗೆತ್ತಿಕೊಂಡ ಲೋಕಾಯುಕ್ತರು; ತನಿಖೆಗೆ ಆದೇಶ

ಯಾದಗಿರಿ ಜಿಲ್ಲೆಯ ಗುರುಮಠಕಲ್​ ತಾಲೂಕಿನ ಅನಪುರ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 3 ಮೃತಪಟ್ಟಿದ್ದು, 80 ಕ್ಕೂ ಅಧಿಕ ಜನ ಅಸ್ವಸ್ಥಗೊಂಡಿದ್ದಾರೆ.

Yadgiri Water Contamination: ಸ್ವಯಂಪ್ರೇರಿತರಾಗಿ ಪ್ರಕರಣ ಕೈಗೆತ್ತಿಕೊಂಡ ಲೋಕಾಯುಕ್ತರು; ತನಿಖೆಗೆ ಆದೇಶ
ಕರ್ನಾಟಕ ಲೋಕಾಯುಕ್ತ, ಯಾದಗಿರಿ ಅನಪುರ ಗ್ರಾಮ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Feb 18, 2023 | 8:38 AM

Share

ಬೆಂಗಳೂರು: ಯಾದಗಿರಿ (Yadgiri) ಜಿಲ್ಲೆಯ ಗುರುಮಠಕಲ್​ ತಾಲೂಕಿನಲ್ಲಿ ಕಲುಷಿತ ನೀರು (Water Contamination) ಜನರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್​​ ಪಾಟೀಲ್​ ಸ್ವಯಂ ಪ್ರೇರಿತವಾಗಿ ಪ್ರಕರಣವನ್ನು ಕೈಗೆತ್ತಿಕೊಂಡಿದ್ದು, ತನಿಖೆಗೆ ಆದೇಶಿಸಿದ್ದಾರೆ. ಘಟನೆ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗುರುಮಠಕಲ್​ ತಾಲೂಕಿನ ಅನಪುರ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 3 ಮೃತಪಟ್ಟಿದ್ದು, 80 ಕ್ಕೂ ಅಧಿಕ ಜನ ಅಸ್ವಸ್ಥಗೊಂಡಿದ್ದರು. ಕರ್ನಾಟಕ ಗ್ರಾಮ ಸ್ವರಾಜ ಮತ್ತು ಪಂಚಾಯತ ರಾಜ್​ ಕಾಯ್ದೆಯ ಸೆಕ್ಷನ್​ 58ರ ಅಡಿ, ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಮತ್ತು ಶುದ್ಧ ಕುಡಿಯುವ ನೀರು ಸರಬರಾಜು ಮಾಡುವುದು ಗ್ರಾಮ ಪಂಚಾಯಿತಿಗಳ ಮೂಲಭೂತ ಕರ್ತವ್ಯವಾಗಿದೆ. ಶುದ್ಧ ಕುಡಿಯುವ ನೀರು ನೀಡುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ವಿಫಲವಾದರೆ, ಅದು ಕಾಯ್ದೆಯ 21ನೇ ಪರಿಚ್ಛೇದದ ಅಡಿಯಲ್ಲಿ ಮೂಲಭೂತ ಹಕ್ಕಿನ ಉಲ್ಲಂಘನೆಯಾಗುತ್ತದೆ. ಅಲ್ಲದೇ ಕರ್ನಾಟಕ ಲೋಕಾಯುಕ್ತ ಕಾಯ್ದೆ ಸೆಕ್ಷನ್ 2 (1) ರ ಪ್ರಕಾರ ದುರಾಡಳಿತಕ್ಕೆ ಸಮನಾಗಿರುತ್ತದೆ ಎಂದು ನ್ಯಾಯಮೂರ್ತಿ ಬಿಎಸ್​ ಪಾಟೀಲ್ ಅವರು ತನಿಖಾ ಆದೇಶದ ಪ್ರತಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಯಾದಗಿರಿ: ಕಲುಷಿತ ನೀರು ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಸಾವು

ಅನುಪುರ ಗ್ರಾಮಸ್ಥರಿಗೆ ಸುರಕ್ಷಿತ ಕುಡಿಯುವ ನೀರು ಒದಗಿಸುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ವಿಫಲ ಅಥವಾ ನಿರ್ಲಕ್ಷ್ಯ ತೋರಿದ್ದಾರೆ ಎಂದು ತಿಳಿದುಬಂದಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ನಿರ್ದೇಶಕರು, ಜಿಲ್ಲಾಧಿಕಾರಿ ಮತ್ತು ಯಾದಗಿರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಮತ್ತು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಗುರುಮಿಟ್ಕಲ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ( ಪಿಡಿಒ) ಹಾಗೂ ಯಾದಗಿರಿ ಜಿಲ್ಲೆಯ ಅನುಪುರ ಜಿ.ಪಂ.ಅಧ್ಯಕ್ಷರಿಗೆ, ಗ್ರಾಮದಲ್ಲಿ ಉಂಟಾದ ಅವಘಡದ ಬಗ್ಗೆ ಪರಿಶೀಲನೆ ನಡೆಸಿ, ಗ್ರಾಮಕ್ಕೆ ಶುದ್ಧ ಕುಡಿಯುವ ನೀರು ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಂಡ ಬಗ್ಗೆ ಮಾರ್ಚ್ 1, 2023 ರಂದು ಅಥವಾ ಅದಕ್ಕೂ ಮೊದಲು ಸಮಗ್ರ ವರದಿಯನ್ನು ಲೋಕಾಯುಕ್ತಕ್ಕೆ ಸಲ್ಲಿಸುವಂತೆ ನ್ಯಾಯಮೂರ್ತಿ ಪಾಟೀಲ್​ ಅವರು ಸೂಚನೆ ನೀಡಿದ್ದಾರೆ.

ಇನ್ನು ಈ ಘಟನೆಗೆ ಕಾರಣರಾದ ಅಧಿಕಾರಿಗಳ ವಿವರ, ಮೃತರ ವಾರಸುದಾರರಿಗೆ ನೀಡಿದ ಪರಿಹಾರ ಮತ್ತು ಚಿಕಿತ್ಸೆ ನೀಡಲು ತೆಗೆದುಕೊಂಡ ಕ್ರಮಗಳ ಬಗ್ಗೆಯೂ ವಿವರಗಳನ್ನು ತಿಳಿಸುವಂತೆ ಲೋಕಾಯುಕ್ತರು ನಿರ್ದೇಶಿಸಿದ್ದಾರೆ. ಹಾಗೇ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಖುದ್ದಾಗಿ ಗ್ರಾಮಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದಾರೆ.

ಅವಘಡಕ್ಕೆ ಮೂಢನಂಬಿಕೆ ಕಾರಣ

ದೇವಸ್ಥಾನ ತೆರವು ಮಾಡಿದ್ದಕ್ಕಾಗಿ ಈ ಅವಘಡ ಸಂಭವಿಸಿದೆ ಎಂದು ಗ್ರಾಮಸ್ಥರಲ್ಲಿ ಮೂಢನಂಬಿಕೆ ಮನೆಮಾಡಿದೆ. ಗ್ರಾಮದ ಕರೆಯಮ್ಮ ದೇವಿಯ ದೇವಸ್ಥಾನ ಹಳೆ‌‌‌‌ ಕಟ್ಟಡವಾಗಿದ್ದರಿಂದ ಗ್ರಾಮಸ್ಥರು ತೆರವುಗೊಳಿಸಿ ಹೊಸ ದೇವಸ್ಥಾನ ಕಟ್ಟೋಕೆ ಮುಂದಾಗಿದ್ದರು. ಇದೆ‌ ಕಾರಣಕ್ಕೆ ದೇವಸ್ಥಾನ ತೆರವು ಮಾಡಿ ಮೂರ್ತಿ ಬೇರೆ ಕಡೆ ಸ್ಥಳಾಂತರ ಮಾಡಲಾಗಿದೆ. ಮೂರ್ತಿ ಸ್ಥಳಾಂತರ ಮಾಡಿದ್ದಕ್ಕೆ ಗ್ರಾಮದಲ್ಲಿ ಪರಿಸ್ಥಿತಿ ಬಿಗಡಾಯಿಸಿದೆ. ಇದರಿಂದ ಗ್ರಾಮದಲ್ಲಿ ವಾಂತಿ ಭೇದಿ ಆರಂಭವಾಗಿದೆ ಎಂದು ಜನರು ನಂಬಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:36 am, Sat, 18 February 23

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು