Karnataka Lorry Strike: ಇಂದು ಮಧ್ಯರಾತ್ರಿಯಿಂದಲೇ ಲಾರಿ ಮುಷ್ಕರ, ನಾಳೆಯಿಂದ ಅಗತ್ಯ ವಸ್ತುಗಳ ಸಾಗಾಟಕ್ಕೆ ತಟ್ಟಲಿದೆ ಬಿಸಿ

ಕರ್ನಾಟಕ ಲಾರಿ ಮುಷ್ಕರ: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನ ಕಂಗಲಾಗಿದ್ದಾರೆ. ಬೆಲೆ ಏರಿಕೆ ವಿರುದ್ಧ ವಿಪಕ್ಷಗಳು ಬೀದಿಗಿಳಿವೆ. ಈ ಮಧ್ಯೆ ಡಿಸೇಲ್ ದರ ಏರಿಕೆ ಲಾರಿ ಮಾಲೀಕರನ್ನು ಕಂಗಲಾಗಿಸಿದೆ. ಹೀಗಾಗಿ ಡೀಸೆಲ್ ದರ‌ ಇಳಿಸುವಂತೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಲಾರಿ ಮಾಲೀಕರು ಕರೆ ನೀಡಿದ್ದಾರೆ.

Karnataka Lorry Strike: ಇಂದು ಮಧ್ಯರಾತ್ರಿಯಿಂದಲೇ ಲಾರಿ ಮುಷ್ಕರ, ನಾಳೆಯಿಂದ ಅಗತ್ಯ ವಸ್ತುಗಳ ಸಾಗಾಟಕ್ಕೆ ತಟ್ಟಲಿದೆ ಬಿಸಿ
ಸಾಂದರ್ಭಿಕ ಚಿತ್ರ
Edited By:

Updated on: Apr 14, 2025 | 7:44 AM

ಬೆಂಗಳೂರು, ಏಪ್ರಿಲ್ 14: ಡಿಸೆಲ್ ದರ ಏರಿಕೆ Diesel Price), ಟೋಲ್ ಶುಲ್ಕ ಹೆಚ್ಚಳ, ಆರ್​ಟಿಒ ಅಧಿಕಾರಿಗಳ ಕಿರುಕುಳ ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಇಂದು ಮಧ್ಯರಾತ್ರಿಯಿಂದಲೇ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ (Lorry Strike) ರಾಜ್ಯ ಲಾರಿ ಮಾಲೀಕರ ಸಂಘ (Lorry Owners assosiation) ಕರೆ ನೀಡಿದೆ. ಸುಮಾರು 6 ಲಕ್ಷಕ್ಕೂ ಹೆಚ್ಚು ಲಾರಿಗಳು ಇಂದು ಮಧ್ಯರಾತ್ರಿಯಿಂದಲೇ ಸೇವೆ ಬಂದ್​ ಮಾಡಲಿದ್ದು, ಹಲವು ಸೇವೆಗಳಿಗೆ ಬಿಸಿ ತಟ್ಟಲಿದೆ. 6 ತಿಂಗಳಲ್ಲಿ ಸರ್ಕಾರ 2ಬಾರಿ ಡಿಸೇಲ್ ದರ ಹೆಚ್ಚಿಸಿದೆ. ಡೀಸೆಲ್ ದರ ಇಳಿಸಬೇಕು ಹಾಗೂ ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಸರ್ಕಾರಕ್ಕೆ ಲಾರಿ ಮಾಲೀಕರು ಏಪ್ರಿಲ್ 14ರ ಗಡುವು ಕೊಟ್ಟಿದ್ರು. ಆದರೆ, ಸರ್ಕಾರ ಇದಕ್ಕೆ ಸ್ಪಂದಿಸಿಲ್ಲ. ಹೀಗಾಗಿ ಇಂದು ಮಧ್ಯರಾತ್ರಿಯಿಂದಲೆ ಮುಷ್ಕರಕ್ಕೆ ರಾಜ್ಯ ಲಾರಿ ಮಾಲೀಕರ ಸಂಘ ಮುಂದಾಗಿದೆ. ಪರಿಣಾಮವಾಗಿ ಮಂಗಳವಾರದಿಂದ ಅನೇಕ ಸೇವೆಗಳಲ್ಲಿ ವ್ಯತ್ಯಯ ಆಗಲಿದೆ.

ಅನಿರ್ಧಿಷ್ಠಾವಧಿ ಲಾರಿ ಮುಷ್ಕರ: ಯಾವೆಲ್ಲ ಲಾರಿಗಳು ಬಂದ್?

ಲಾರಿ ಮುಷ್ಕರದ ಕಾರಣ 6 ಲಕ್ಷ ಲಾರಿಗಳ ಸಂಚಾರ ಬಂದ್ ಆಗಲಿದೆ. ಜಲ್ಲಿ ಕಲ್ಲು, ಮರಳು ಲಾರಿಗಳು, ಗೂಡ್ಸ್ ವಾಹನಗಳು, ಅಕ್ಕಿ ಸಾಗಿಸುವ ಲಾರಿಗಳ ಸಂಚಾರ ಸ್ಥಗಿತಗೊಳ್ಳಲಿದೆ. ಜತೆಗೆ, ಪೆಟ್ರೋಲ್, ಡೀಸೆಲ್ ಸಾಗಿಸುವ ಲಾರಿಗಳೂ ಬಂದ್ ಆಚರಿಸಲಿವೆ. ಬೇರೆ ರಾಜ್ಯಗಳ ಲಾರಿಗಳಿಗೂ ಪ್ರವೇಶವಿಲ್ಲ ಎಂದು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ತಿಳಿಸಿದ್ದಾರೆ.

ಏರ್​ಪೋರ್ಟ್ ಟ್ಯಾಕ್ಸಿಗಳು ಕೂಡ ಬಂದ್

ಏಪ್ರಿಲ್ 15ರಂದು ಒಂದು ದಿನ ಏರ್​ಪೋರ್ಟ್ ಟ್ಯಾಕ್ಸಿಯನ್ನು ರಸ್ತೆಗಿಳಿಸದಿರಲು ಏರ್‌ಪೋರ್ಟ್ ಟ್ಯಾಕ್ಸಿ ಡ್ರೈವರ್ಸ್ ಯೂನಿಯನ್ ನಿರ್ಧರಿಸಿದೆ. ಆದರೆ, ಅನಿರ್ಧಿಷ್ಠಾವಧಿ ಮುಷ್ಕರದ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧರಿಸಲಿದ್ದಾರೆ. ಒಟ್ಟಾರೆಯಾಗಿ, ಸರಕು ಸಾಗಾಟ ಬಂದ್​ ಆದರೆ ದಿನಬಳಕೆ ವಸ್ತುಗಳ ಮೇಲೆ ಬಿಸಿ ತಟ್ಟಲಿದೆ. ಹೀಗಾಗಿ, ಸರ್ಕಾರ ಯಾವ ರೀತಿ ಲಾರಿ ಮಾಲೀಕರ ಮನವೊಲಿಸುತ್ತದೆ ಎಂಬುದನ್ನು ಕಾದುನೋಡಬೇಕಿದೆ.

ಇದನ್ನೂ ಓದಿ
ಅಂಚೆ ಮೂಲಕ ಮನೆ ಬಾಗಿಲಿಗೆ ಬರಲಿದೆ ಮಾವು: ಇಂದೇ ಆರ್ಡರ್​ ಮಾಡಿ
ಡೀಸೆಲ್​ ದರ ಏರಿಕೆ ಖಂಡಿಸಿ ಏ. 14 ರಂದು ಲಾರಿ ಮಾಲೀಕರ ಮುಷ್ಕರ
ಸಾಕಾ, ಬೇಕಾ... ಹಾಲಿನ ದರ ಏರಿಕೆ ಬೆನ್ನಲ್ಲೇ ಕಾಫಿ, ಚಹಾ ದರ ಹೆಚ್ಚಳ
ಕೊಲೆ ಆರೋಪದಲ್ಲಿ ಜೈಲು ಸೇರಿದ್ದ ಪತಿ: 5 ವರ್ಷ ಬಳಿಕ ಲವರ್ ಜತೆ ಸಿಕ್ಕ ಪತ್ನಿ

ಕೆಲವು ದಿನಗಳ ಹಿಂದಷ್ಟೇ ಸರ್ಕಾರ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಶೇಕಡ 2.73 ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಿತ್ತು. ಇದರ ಪರಿಣಾಮವಾಗಿ ಕರ್ನಾಟಕದಲ್ಲಿ ಡಿಸೆಲ್ ಬೆಲೆ 2 ರೂಪಾಯಿಯಷ್ಟು ಹೆಚ್ಚಳವಾಗಿತ್ತು. ಏಪ್ರಿಲ್ 1ರಿಂದಲೇ ದರ ಹೆಚ್ಚಳ ಜಾರಿಗೆ ಬಂದಿತ್ತು.

ಇದನ್ನೂ ಓದಿ: ಡೀಸೆಲ್​ ಬೆಲೆ ಹೆಚ್ಚಳ: ಕರ್ನಾಟಕದಲ್ಲಿ ಈಗ 1 ಲೀಟರ್​ ಡೀಸೆಲ್​ ಬೆಲೆ ಎಷ್ಟು? ಇಲ್ಲಿದೆ ಮಾಹಿತಿ

ಈಗಾಗಲೇ ರಾಜ್ಯದಲ್ಲಿ ಬಹುತೇಕ ಅಗತ್ಯ ವಸ್ತುಗಳ ಬೆಲೆ ದುಬಾರಿಯಾಗಿದ್ದು, ಡೀಸೆಲ್ ಬೆಲೆ ಹೆಚ್ಚಳ ಹಾಗೂ ಲಾರಿ ಮುಷ್ಕರ ಮತ್ತಷ್ಟು ಸಮಸ್ಯೆ ತಂದೊಡ್ಡಲಿದೆ. ಪೆಟ್ರೋಲ್, ಡೀಸೆಲ್ ಪೂರೈಕೆ ಲಾರಿಗಳೂ ಮುಷ್ಕರದಲ್ಲಿ ಭಾಗಿಯಾಗುವುದರಿಂದ ಇಂಧನ ಪೂರೈಕೆ ಮೇಲೆ ಬಿಸಿ ತಟ್ಟಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:43 am, Mon, 14 April 25