AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lorry Strike: ಮುಂದಿನ ವಾರ ಲಾರಿ ಮುಷ್ಕರ ಬಹುತೇಕ ಫಿಕ್ಸ್, ಡೀಸೆಲ್​​ ದರ ಏರಿಕೆಗೆ ಲಾರಿ ಮಾಲೀಕರ ಆಕ್ರೋಶ

ಕರ್ನಾಟಕ ಲಾರಿ ಮುಷ್ಕರ: ಬೆಲೆ ಏರಿಕೆ ಹೊಡೆತದಿಂದ ಜನ ಕಂಗಾಲಾಗಿದ್ದಾರೆ. ಹಾಲು, ಮೊಸರು ದರ ಏರಿಕೆ ಹಾಗೂ ಕಸ ತೆರಿಗೆ ಇತ್ಯಾದಿಗಳಿಂದ ಕಂಗಟ್ಟಿರುವ ಜನರಿಗೆ ಇದೀಗ ಡೀಸೆಲ್ ಬೆಲೆ ಹೆಚ್ಚಳದ ಬಿಸಿ ಪರೋಕ್ಷವಾಗಿ ತಟ್ಟಲಿದೆ. ಆದರೆ ಲಾರಿ ಮಾಲೀಕರಿಗೆ ನೇರವಾಗಿ ಹೊಡೆತ ಬೀಳಲಿದೆ. ಡಿಸೆಲ್ ದರ ಏರಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಅವರು ಮುಷ್ಕರ ನಡೆಸಲು ಮುಂದಾಗಿದ್ದಾರೆ.

Lorry Strike: ಮುಂದಿನ ವಾರ ಲಾರಿ ಮುಷ್ಕರ ಬಹುತೇಕ ಫಿಕ್ಸ್, ಡೀಸೆಲ್​​ ದರ ಏರಿಕೆಗೆ ಲಾರಿ ಮಾಲೀಕರ ಆಕ್ರೋಶ
ಸಾಂದರ್ಭಿಕ ಚಿತ್ರ
Kiran Surya
| Edited By: |

Updated on:Apr 04, 2025 | 1:08 PM

Share

ಬೆಂಗಳೂರು, ಏಪ್ರಿಲ್ 4: ಇತ್ತೀಚೆಗಷ್ಟೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರು ಮುಷ್ಕರಕ್ಕೆ ಕರೆ ನೀಡಲು ಮುಂದಾಗಿದ್ದು, ಅವರನ್ನು ಅದ್ಹೇಗೋ ಸಮಾಧಾನ ಮಾಡಿದ್ದ ರಾಜ್ಯ ಸರ್ಕಾರ (Karnataka Govt) ಮುಷ್ಕರ ನಡೆಸದಂತೆ ತಡೆದಿತ್ತು. ಆದರೆ, ಇದೀಗ ಲಾರಿ ಮಾಲೀಕರ (Lorry Owners) ಸರದಿ. ಡೀಸೆಲ್ ಬೆಲೆ ಏರಿಕೆ  (Diesel Price Hike) ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಲಾರಿ ಮಾಲೀಕರು, ಲಾರಿ ಮುಷ್ಕರ ನಡೆಸಲು ಮುಂದಾಗಿದ್ದಾರೆ. ಈ ಸಂಬಂಧ ಶನಿವಾರ ಸಭೆ ನಡೆಸಲಿದ್ದಾರೆ.

ಲಾರಿ ಮಾಲೀಕರ ಸಂಘದ ಅಧ್ಯಕ್ಷರು ಹೇಳಿದ್ದೇನು?

ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಎರಡು ಬಾರಿ ಡೀಸೆಲ್ ಬೆಲೆ ಹೆಚ್ಚಳ ಮಾಡಲಾಗಿದೆ. ಹಾಗಾಗಿ ನಾಳೆ ಈ ಕುರಿತು ಸಭೆ ನಡೆಸುತ್ತೇವೆ. ದರ ಏರಿಕೆ ಖಂಡಿಸಿ ಮುಂದಿನ ವಾರ ಮುಷ್ಕರಕ್ಕೆ ಕರೆ ನೀಡಲಿದ್ದೇವೆ ಎಂದು ರಾಜ್ಯ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಜಿಆರ್ ಷಣ್ಮುಗಪ್ಪ ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಸರ್ಕಾರ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಶೇಕಡ 2.73 ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಿತ್ತು. ಇದರ ಪರಿಣಾಮವಾಗಿ ಕರ್ನಾಟಕದಲ್ಲಿ ಡಿಸೆಲ್ ಬೆಲೆ 2 ರೂಪಾಯಿಯಷ್ಟು ಹೆಚ್ಚಳವಾಗಿದೆ. ಏಪ್ರಿಲ್ 1ರಿಂದಲೇ ದರ ಹೆಚ್ಚಳ ಜಾರಿಗೆ ಬಂದಿದೆ. ದರ ಹೆಚ್ಚಳದ ನಂತರ ಬೆಂಗಳೂರಿನಲ್ಲಿ ಡೀಸೆಲ್ ಬೆಲೆ ಪ್ರತಿ ಲೀಟರ್​ಗೆ 91.02 ರೂಪಾಯಿ ಆಗಿದೆ. ಒಂದೆಡೆ ಡೀಸೆಲ್ ದರ ಹೆಚ್ಚಳಕ್ಕೆ ಆಕ್ಷೇಪ ವ್ಯಕ್ತವಾಗಿದ್ದರೆ ಮತ್ತೊಂದೆಡೆ ತನ್ನ ನಿರ್ಧಾರವನ್ನು ಸರ್ಕಾರ ಸಮರ್ಥಿಸಿಕೊಂಡಿದೆ.

ಇದನ್ನೂ ಓದಿ
Image
ಸಾಕಾ, ಬೇಕಾ... ಹಾಲಿನ ದರ ಏರಿಕೆ ಬೆನ್ನಲ್ಲೇ ಕಾಫಿ, ಚಹಾ ದರ ಹೆಚ್ಚಳ
Image
ಬೆಂಗಳೂರು: ಬಿಹಾರದ ಯುವತಿಯ ಅಪಹರಿಸಿ ಅತ್ಯಾಚಾರ, ಇಬ್ಬರ ಬಂಧನ
Image
ಕೊಲೆ ಆರೋಪದಲ್ಲಿ ಜೈಲು ಸೇರಿದ್ದ ಪತಿ: 5 ವರ್ಷ ಬಳಿಕ ಲವರ್ ಜತೆ ಸಿಕ್ಕ ಪತ್ನಿ
Image
ಡೀಸೆಲ್​ ಬೆಲೆ ಹೆಚ್ಚಳ: ಕರ್ನಾಟಕದಲ್ಲೀಗ 1 ಲೀಟರ್​ ಡೀಸೆಲ್​ ಬೆಲೆ ಎಷ್ಟು?

ಅಗತ್ಯ ವಸ್ತುಗಳ ಬೆಲೆ ಮತ್ತೆ ಹೆಚ್ಚಳವಾಗುವ ಆತಂಕ

ಈಗಾಗಲೇ ರಾಜ್ಯದಲ್ಲಿ ಬಹುತೇಕ ಅಗತ್ಯ ವಸ್ತುಗಳ ಬೆಲೆ ದುಬಾರಿಯಾಗಿದ್ದು, ಡೀಸೆಲ್ ಬೆಲೆ ಹೆಚ್ಚಳದಿಂದ ಮತ್ತಷ್ಟು ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಅಗತ್ಯ ವಸ್ತುಗಳ ಸಾಗಾಟ ದರ ಹೆಚ್ಚಳವಾದಲ್ಲಿ, ಮತ್ತೆ ಬೆಲೆ ಏರಿಕೆಯ ಹೊಡೆತ ಎದುರಿಸಬೇಕಾಗಬಹುದು. ಅದರಲ್ಲೂ ಒಂದು ವೇಳೆ ಲಾರಿ ಮುಷ್ಕರ ನಡೆದಿದ್ದೆ ಆದಲ್ಲಿ ಅಗತ್ಯ ವಸ್ತುಗಳ ಪೂರೈಕೆ ಮೇಲೆ ನಕಾರಾತ್ಮಕ ಪರಿಣಾಮವಾಗಲಿದೆ.

ಇದನ್ನೂ ಓದಿ: ಡೀಸೆಲ್​ ಬೆಲೆ ಹೆಚ್ಚಳ: ಕರ್ನಾಟಕದಲ್ಲಿ ಈಗ 1 ಲೀಟರ್​ ಡೀಸೆಲ್​ ಬೆಲೆ ಎಷ್ಟು? ಇಲ್ಲಿದೆ ಮಾಹಿತಿ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:01 pm, Fri, 4 April 25