ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಪತ್ರ: 50 ಸಾವಿರ ಸಿಲಿಂಡರ್ ಬೇಡಿಕೆ ಬಗ್ಗೆ ಪ್ರಸ್ತಾಪ

ಇಸ್ರೇಲ್‌-ಇರಾನ್‌ ಯುದ್ಧ 21ನೇ ದಿನಕ್ಕೆ ಕಾಲಿಟ್ಟರೆ, ಭಾರತದಲ್ಲಿ ಗ್ಯಾಸ್ ಸಂಕಷ್ಟ ಎದುರಾಗಿ 10 ದಿನವೇ ಕಳೆದಿದೆ. ಇಷ್ಟಾದ್ರೂ ಸಮಸ್ಯೆ ಬಗೆಹರಿದಿಲ್ಲ. ಇತ್ತ ಕರ್ನಾಟಕದಲ್ಲೂ ಸಿಲಿಂಡರ್​ ಅಭಾವ ಮುಂದುವರೆದಿದೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, ಸಮರ್ಪಕ ಹಂಚಿಕೆಗೆ ಮನವಿ ಮಾಡಿದ್ದಾರೆ.

ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಪತ್ರ: 50 ಸಾವಿರ ಸಿಲಿಂಡರ್ ಬೇಡಿಕೆ ಬಗ್ಗೆ ಪ್ರಸ್ತಾಪ
ಸಿಎಂ ಸಿದ್ದರಾಮಯ್ಯ
Image Credit source: tv9 kannada

Updated on: Mar 20, 2026 | 6:43 PM

ಬೆಂಗಳೂರು, ಮಾರ್ಚ್​ 20: ದೇಶದಲ್ಲಿ ಸಿಲಿಂಡರ್ (Cylinder) ಅಭಾವದ ಸರಣಿ ಸಮಸ್ಯೆ ಮುಂದುವರೆದಿದೆ. ಇತ್ತ ಕರ್ನಾಟಕದಲ್ಲೂ ಎಲ್​​​ಪಿಜಿಗಾಗಿ ಹೋಟೆಲ್ ಮಾಲೀಕರು ನಿತ್ಯ ಪರದಾಡುತ್ತಿದ್ದಾರೆ. ಒಂದ್ಕಡೆ ಗೃಹಬಳಕೆ ಸಿಲಿಂಡರ್ ಪಡೆಯಲು ಜನರು ಮುಗಿಬಿದ್ದರೆ, ಮತ್ತೊಂದ್ಕಡೆ ವಾಣಿಜ್ಯ ಸಿಲಿಂಡರ್ ಇಲ್ಲದೆ ಹಲವು ಉದ್ಯಮಗಳು ಬಂದ್ ಆಗುತ್ತಿವೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ (cm Siddaramaiah) ಮತ್ತೊಮ್ಮೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, ಮಧ್ಯಪ್ರವೇಶಕ್ಕೆ ಆಗ್ರಹಿಸಿದ್ದಾರೆ.

ಕೇಂದ್ರ ಸಚಿವ ಹರ್ದೀಪ್ ಸಿಂಗ್​ಗೆ ಸಿಎಂ ಪತ್ರ

ಸಿಎಂ ಸಿದ್ದರಾಮಯ್ಯ ಈ ಹಿಂದೆ ಕೇಂದ್ರ ಸರ್ಕಾರಕ್ಕೆ ಪತ್ರವೊಂದನ್ನ ಬರೆದಿದ್ದರು. ಈಗ ಸಿಲಿಂಡರ್ ಸಮಸ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಮತ್ತೊಂದು ಪತ್ರ ಬರೆದಿದ್ದಾರೆ. ಕೇಂದ್ರ ಸಚಿವ ಹರ್ದೀಪ್ ಸಿಂಗ್​ಗೆ ಬರೆದ ಪತ್ರದಲ್ಲಿ ರಾಜ್ಯದ ಸಿಲಿಂಡರ್​ಗಳ ಅಭಾವದ ಬಗ್ಗೆ ಉಲ್ಲೇಖಿಸಿದ್ದಾರೆ. 50 ಸಾವಿರ ಸಿಲಿಂಡರ್​ಗಳು ಬೇಕು. ಭಾರತಕ್ಕೆ ಬಂದಿರುವ ತೈಲ ಹಡಗುಗಳ ತೈಲವನ್ನ ಸಮರ್ಪಕವಾಗಿ ಹಂಚಿಕೆ ಮಾಡುವಂತೆ ಮನವಿ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಟ್ವೀಟ್​

ರೆಸ್ಟೋರೆಂಟ್​ಗಳು, ಹೋಟೆಲ್​ಗಳು, ಅಡುಗೆ ತಯಾರಿಸುವ ಸಂಸ್ಥೆಗಳು ಹಾಗೂ ಪಿಜಿಗಳಲ್ಲಿ ಸಿಲಿಂಡರ್ ಅಭಾವ ಹೆಚ್ಚಾಗಿದೆ. ಹೀಗಾಗಿ 50 ಸಾವಿರ LPG ಸಿಲಿಂಡರ್​ಗಳ ಬೇಡಿಕೆಗೆ ಇದೆ. ನಾವು ದಿನಕ್ಕೆ 1000 ಸಿಲಿಂಡರ್​ಗಳನ್ನು ಮಾತ್ರ ಪೂರೈಸಲು ಸಮರ್ಥರಾಗಿದ್ದೇವೆ. ಈ ಕಾರಣಕ್ಕೆ ಹೋಟೆಲ್, ಪಿಜಿಗಳು ಮುಚ್ಚುವ ಪರಿಸ್ಥಿತಿ ಎದುರಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆ ಎಲ್​ಪಿಜಿ ಸಿಲಿಂಡರ್ ಕೊರತೆ: ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿಗೆ ಸಿಎಂ ಸಿದ್ದರಾಮಯ್ಯ ಪತ್ರ

ವಿದ್ಯಾರ್ಥಿಗಳು, ಐಟಿ ನೌಕರರು, ರೈತರು, ಡೈರಿ ಉತ್ಪಾದಕರು ಸೇರಿದಂತೆ ಅನೇಕ ಜನ ಆತಿಥ್ಯ ವಲಯದ ಮೇಲೆ ಅವಲಂಬಿತರಾಗಿದ್ದಾರೆ. ಇದೇ ರೀತಿ ಎಲ್​ಪಿಜಿ ಇಲ್ಲದೇ ಆಟೋ ರೀಕ್ಷಗಳಿಗೂ ಸಂಕಷ್ಟ ಶುರುವಾಗಿದೆ. ಭಾರತ 2 ಟ್ಯಾಂಕರ್​ಗಳನ್ನ ಸ್ವೀಕರಿಸಿದೆ. ಇದು ಸಮಸ್ಯೆಗಳನ್ನ ನಿವಾರಿಸುತ್ತದೆ. ಹೀಗಾಗಿ ಕರ್ನಾಟಕಕ್ಕೆ ಸಮರ್ಪಕ ಹಂಚಿಕೆ ಮಾಡಿ. ನಮ್ಮ ಲಭ್ಯತೆ ಚಿತಪಡಿಸಿಕೊಳ್ಳಲು ನೀವು ಹಸ್ತಕ್ಷೇಪ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:42 pm, Fri, 20 March 26

ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Loading...
Unable to load recommendations.
Follow Us