Karnataka Dam Water Level: ಫೆ.16ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಕರ್ನಾಟಕದ ಜಲಾಶಯಗಳ ಫೆಬ್ರವರಿ16ರ ನೀರಿನ ಮಟ್ಟ: ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಮುಂದಿನ 48 ಗಂಟೆಗಳ ಕಾಲ ರಾಜ್ಯಾದ್ಯಂತ ಒಣಹವೆ ಬೀಸುವ ಸಾಧ್ಯತೆ ಇದೆ. ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ವಾಗಿರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲು ಹೆಚ್ಚುತ್ತಿರುವುದರಿಂದ ಜಲಾಶಯಗಳಿಂದ ನೀರು ಖಾಲಿಯಾಗುತ್ತಿದೆ. ಹಾಗಾದರೆ ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ 12 ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಫೆಬ್ರವರಿ 16ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಜಲಾಶಯಗಳ ನೀರಿನ ಮಟ್ಟ | ||||||
ಕರ್ನಾಟಕದ ಪ್ರಮುಖ ಜಲಾಶಯಗಳು (Dam) | ಗರಿಷ್ಠ ನೀರಿನ ಮಟ್ಟ (ಮೀ) | ಒಟ್ಟು ಸಾಮರ್ಥ್ಯ (ಟಿಎಂಸಿ) | ಇಂದಿನ ನೀರಿನ ಮಟ್ಟ (ಟಿಎಂಸಿ) | ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) | ಒಳಹರಿವು (ಕ್ಯೂಸೆಕ್ಸ್) | ಹೊರಹರಿವು (ಕ್ಯೂಸೆಕ್ಸ್) |
ಆಲಮಟ್ಟಿ ಜಲಾಶಯ (Almatti Dam) | 519.60 | 123.08 | 50.89 | 64.41 | 0 | 833 |
ತುಂಗಭದ್ರಾ ಜಲಾಶಯ (Tungabhadra Dam) | 497.71 | 105.79 | 9.40 | 41.49 | 0 | 255 |
ಮಲಪ್ರಭಾ ಜಲಾಶಯ (Malaprabha Dam) | 633.80 | 37.73 | 12.43 | 17.91 | 0 | 194 |
ಕೆ.ಆರ್.ಎಸ್ (KRS Dam) | 38.04 | 49.45 | 16.63 | 33.17 | 491 | 765 |
ಲಿಂಗನಮಕ್ಕಿ ಜಲಾಶಯ (Linganamakki Dam) | 554.44 | 151.75 | 43.67 | 75.47 | 216 | 2769 |
ಕಬಿನಿ ಜಲಾಶಯ (Kabini Dam) | 696.13 | 19.52 | 12.30 | 11.89 | 101 | 500 |
ಭದ್ರಾ ಜಲಾಶಯ (Bhadra Dam) | 657.73 | 71.54 | 30.96 | 55.83 | 134 | 1928 |
ಘಟಪ್ರಭಾ ಜಲಾಶಯ (Ghataprabha Dam) | 662.91 | 51.00 | 33.57 | 25.89 | 0 | 126 |
ಹೇಮಾವತಿ ಜಲಾಶಯ (Hemavathi Dam) | 890.58 | 37.10 | 14.18 | 22.06 | 95 | 500 |
ವರಾಹಿ ಜಲಾಶಯ (Varahi Dam) | 594.36 | 31.10 | 8.50 | 11.18 | 0 | 887 |
ಹಾರಂಗಿ ಜಲಾಶಯ (Harangi Dam) | 871.38 | 8.50 | 3.41 | 3.28 | 201 | 200 |
ಸೂಫಾ (Supa Dam) | 564.00 | 145.33 | 61.70 | 78.8^6 | 274 | 2634 |
ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು/ ದಟ್ಟಮಂಜು ಬಹಳಷ್ಟು ಸಾಧ್ಯತೆಗಳಿರುತ್ತದೆ. ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ