Karnataka Dam Water Level: ಫೆ.16ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

|

Updated on: Feb 16, 2024 | 7:31 AM

ಕರ್ನಾಟಕದ ಜಲಾಶಯಗಳ ಫೆಬ್ರವರಿ16ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಫೆ.16ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಸುಫಾ ಡ್ಯಾಂ
Follow us on

ಮುಂದಿನ 48 ಗಂಟೆಗಳ ಕಾಲ ರಾಜ್ಯಾದ್ಯಂತ ಒಣಹವೆ ಬೀಸುವ ಸಾಧ್ಯತೆ ಇದೆ. ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​​ ಹೆಚ್ವಾಗಿರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲು ಹೆಚ್ಚುತ್ತಿರುವುದರಿಂದ ಜಲಾಶಯಗಳಿಂದ ನೀರು ಖಾಲಿಯಾಗುತ್ತಿದೆ.  ಹಾಗಾದರೆ ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ 12 ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಫೆಬ್ರವರಿ 16ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 50.89 64.41 0 833
ತುಂಗಭದ್ರಾ ಜಲಾಶಯ (Tungabhadra Dam) 497.71 105.79 9.40 41.49 0 255
ಮಲಪ್ರಭಾ ಜಲಾಶಯ (Malaprabha Dam) 633.80 37.73 12.43 17.91 0 194
ಕೆ.ಆರ್.ಎಸ್ (KRS Dam) 38.04 49.45 16.63 33.17 491 765
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 43.67 75.47 216 2769
ಕಬಿನಿ ಜಲಾಶಯ (Kabini Dam) 696.13 19.52 12.30 11.89 101 500
ಭದ್ರಾ ಜಲಾಶಯ (Bhadra Dam) 657.73 71.54 30.96 55.83 134 1928
ಘಟಪ್ರಭಾ ಜಲಾಶಯ (Ghataprabha Dam) 662.91 51.00 33.57 25.89 0 126
ಹೇಮಾವತಿ ಜಲಾಶಯ (Hemavathi Dam) 890.58 37.10 14.18 22.06 95 500
ವರಾಹಿ ಜಲಾಶಯ (Varahi Dam) 594.36 31.10 8.50 11.18 0 887
ಹಾರಂಗಿ ಜಲಾಶಯ (Harangi Dam)​​ 871.38 8.50 3.41 3.28 201 200
ಸೂಫಾ (Supa Dam) 564.00 145.33 61.70 78.8^6 274 2634

ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು/ ದಟ್ಟಮಂಜು ಬಹಳಷ್ಟು ಸಾಧ್ಯತೆಗಳಿರುತ್ತದೆ. ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್​ ಇರುವ ಬಹಳಷ್ಟು ಸಾಧ್ಯತೆಗಳಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ