AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ದರಪಟ್ಟಿ ಪ್ರದರ್ಶನ ಕಡ್ಡಾಯ, ಪಾಲಿಸದಿದ್ದರೆ ಕ್ರಮ: ಪರಿಶೀಲನೆಗೆ ಡಿಹೆಚ್​ಒಗಳಿಗೆ ಸೂಚನೆ

ರಾಜ್ಯದ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಪ್ರಮುಖ ಚಿಕಿತ್ಸೆಗಳು ಮತ್ತು ವೈದ್ಯಕೀಯ ಪ್ರೊಸೀಜರ್‌ಗಳ ದರಪಟ್ಟಿ ಪ್ರದರ್ಶಿಸುವುದು ಕಡ್ಡಾಯವಾಗಿದೆ. ನಿಯಮ ಪಾಲನೆಯಾಗುತ್ತಿದೆಯೇ ಎಂಬುದನ್ನು ಪರಿಶೀಲಿಸುವಂತೆ ಆರೋಗ್ಯ ಇಲಾಖೆ ಎಲ್ಲಾ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದೆ. ದರಪಟ್ಟಿ ಅಳವಡಿಸದ ಆಸ್ಪತ್ರೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ.

ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ದರಪಟ್ಟಿ ಪ್ರದರ್ಶನ ಕಡ್ಡಾಯ, ಪಾಲಿಸದಿದ್ದರೆ ಕ್ರಮ: ಪರಿಶೀಲನೆಗೆ ಡಿಹೆಚ್​ಒಗಳಿಗೆ ಸೂಚನೆ
ಸಾಂದರ್ಭಿಕ ಚಿತ್ರ ಹಾಗೂ ಸಚಿವ ಯುಟಿ ಖಾದರ್
ವಿನಯ್​ ಕಾಶಪ್ಪನವರ್​
| Edited By: |

Updated on: Nov 17, 2026 | 11:52 AM

Share

ಮುಖ್ಯಾಂಶಗಳು

  • ಹಲವು ಖಾಸಗಿ ಆಸ್ಪತ್ರೆಗಳಲ್ಲಿ ಇನ್ನೂ ಪ್ರಕಟವಾಗದ ಚಿಕಿತ್ಸಾ ದರ ಪಟ್ಟಿ
  • ಕಟ್ಟುನಿಟ್ಟಿನ ಪರಿಶೀಲನೆಗೆ ಆರೋಗ್ಯ ಇಲಾಖೆ ಸೂಚನೆ
  • ಎಲ್ಲ ಡಿಹೆಚ್​ಒಗಳಿಗೆ ನಿರ್ದೇಶನ ನೀಡಿದ ಆರೋಗ್ಯ ಇಲಾಖೆ

ಬೆಂಗಳೂರು, ನವೆಂಬರ್ 17: ರಾಜ್ಯದ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಪ್ರಮುಖ ಚಿಕಿತ್ಸೆಗಳು ಮತ್ತು ವೈದ್ಯಕೀಯ ಪ್ರೊಸೀಜರ್‌ಗಳ ದರಪಟ್ಟಿಯನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿದೆ. ಈ ನಿಯಮ ಪಾಲನೆಯಾಗುತ್ತಿದೆಯೇ ಎಂಬುದನ್ನು ಪರಿಶೀಲಿಸುವಂತೆ ರಾಜ್ಯದ ಎಲ್ಲಾ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ (DHO) ನಿರ್ದೇಶನ ನೀಡಿದೆ. ದರಪಟ್ಟಿ ಅಳವಡಿಸದ ಆಸ್ಪತ್ರೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದೆ.

ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ಮುನ್ನವೇ ರೋಗಿಗಳು ಮತ್ತು ಅವರ ಸಂಬಂಧಿಕರಿಗೆ ಚಿಕಿತ್ಸಾ ವೆಚ್ಚದ ಮಾಹಿತಿ ಲಭ್ಯವಾಗಬೇಕು ಎಂಬ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಆಸ್ಪತ್ರೆಗಳಲ್ಲಿ ಲಭ್ಯವಿರುವ ಪ್ರಮುಖ ಚಿಕಿತ್ಸೆಗಳು ಹಾಗೂ ವೈದ್ಯಕೀಯ ಪ್ರಕ್ರಿಯೆಗಳ ದರವನ್ನು ಸಾರ್ವಜನಿಕವಾಗಿ ಪ್ರದರ್ಶಿಸುವುದು ಕಡ್ಡಾಯವಾಗಿದೆ.

ಆಸ್ಪತ್ರೆಗಳಲ್ಲಿ ಸಾವಿರಾರು ಬಗೆಯ ಚಿಕಿತ್ಸಾ ಪ್ರೊಸೀಜರ್‌ಗಳಿರುವುದರಿಂದ ಎಲ್ಲದರ ದರಪಟ್ಟಿಯನ್ನು ಪ್ರದರ್ಶಿಸುವುದು ಕಷ್ಟ ಎಂದು ಖಾಸಗಿ ಆಸ್ಪತ್ರೆಗಳ ಅಸೋಸಿಯೇಷನ್‌ ಆರೋಗ್ಯ ಇಲಾಖೆಯೊಂದಿಗಿನ ಸಭೆಯಲ್ಲಿ ತಿಳಿಸಿತ್ತು. ಇದಕ್ಕೆ ಪರ್ಯಾಯ ವ್ಯವಸ್ಥೆ ರೂಪಿಸಿರುವ ಇಲಾಖೆ, ಪ್ರಮುಖ ಚಿಕಿತ್ಸೆಗಳ ದರಪಟ್ಟಿಯನ್ನು ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಪ್ರದರ್ಶಿಸುವಂತೆ ಸೂಚಿಸಿದೆ. ಉಳಿದ ಚಿಕಿತ್ಸಾ ಪ್ರೊಸೀಜರ್‌ಗಳ ದರವನ್ನು ಒಳಗೊಂಡ ಪ್ರತ್ಯೇಕ ಬುಕ್‌ಲೆಟ್ ಸಿದ್ಧಪಡಿಸಬೇಕು. ರೋಗಿಗಳು ಅಥವಾ ಅವರ ಸಂಬಂಧಿಕರು ಕೇಳಿದಾಗ ಈ ಬುಕ್‌ಲೆಟ್ ನೀಡಬೇಕು ಎಂದು ತಿಳಿಸಿದೆ. ಸರ್ಕಾರದ ಈ ಪ್ರಸ್ತಾವನೆಗೆ ಖಾಸಗಿ ಆಸ್ಪತ್ರೆಗಳ ಅಸೋಸಿಯೇಷನ್ ಕೂಡ ಒಪ್ಪಿಗೆ ಸೂಚಿಸಿದೆ.

ಆಡಳಿತಾತ್ಮಕ ಸಮಸ್ಯೆಗಳಿದ್ದರೆ ಪರಿಹಾರ ಕಂಡುಕೊಳ್ಳಲು ಸೂಚನೆ

ಹಲವು ಖಾಸಗಿ ಆಸ್ಪತ್ರೆಗಳು ಇನ್ನೂ ದರಪಟ್ಟಿಯನ್ನು ಪ್ರದರ್ಶಿಸಿಲ್ಲ ಎಂಬುದು ಆರೋಗ್ಯ ಇಲಾಖೆಯ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಿ ದರಪಟ್ಟಿ ಅಳವಡಿಸಿರುವುದನ್ನು ಪರಿಶೀಲಿಸುವಂತೆ ಎಲ್ಲಾ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ. ನಿಯಮ ಅನುಷ್ಠಾನದಲ್ಲಿ ಏನಾದರೂ ತಾಂತ್ರಿಕ ಅಥವಾ ಆಡಳಿತಾತ್ಮಕ ಸಮಸ್ಯೆಗಳಿದ್ದರೆ ಅವುಗಳನ್ನು ಸರ್ಕಾರದ ಗಮನಕ್ಕೆ ತರಬೇಕು ಎಂದು ನಿರ್ದೇಶಿಸಲಾಗಿದೆ.

ಇದನ್ನೂ ಓದಿ: ಕ್ಯಾನ್ಸರ್ ಬಳಿಕ ಹಾರ್ಟ್‌, ಕಿಡ್ನಿ ಔಷಧಗಳ ದರ ನಿಯಂತ್ರಣಕ್ಕೆ ಚಿಂತನೆ: ರಾಜ್ಯದಿಂದ ಕೇಂದ್ರಕ್ಕೆ ಮನವಿ

ಇದೇ ವೇಳೆ, ಖಾಸಗಿ ಆಸ್ಪತ್ರೆಗಳ ಅಸೋಸಿಯೇಷನ್ ಜೊತೆ ಮತ್ತೊಂದು ಸುತ್ತಿನ ಸಭೆ ನಡೆಸಿ ಸಮಸ್ಯೆಗಳನ್ನು ಪರಿಹರಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ದರಪಟ್ಟಿ ಪ್ರದರ್ಶಿಸದೆ ನಿಯಮ ಉಲ್ಲಂಘಿಸುವ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಲು ಇಲಾಖೆ ನಿರ್ಧರಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಿನಯ್​ ಕಾಶಪ್ಪನವರ್​
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
ಪ್ರಧಾನಿ ಮೋದಿ ಆಡಳಿತದ ಯಶೋಗಾಥೆ, ಯೋಜನೆಗಳ ಅಧ್ಯಯನ
ಪ್ರಧಾನಿ ಮೋದಿ ಆಡಳಿತದ ಯಶೋಗಾಥೆ, ಯೋಜನೆಗಳ ಅಧ್ಯಯನ
‘ಮಾಡಿರೋದೇ ಒಂದು ಸಿನಿಮಾ, ಗಂಡಸರ ಹಾಗೆ ನಡೆದುಕೋ; ಜಗ್ಗುಗೆ ಮಂಜು ಅವಾಜ್
‘ಮಾಡಿರೋದೇ ಒಂದು ಸಿನಿಮಾ, ಗಂಡಸರ ಹಾಗೆ ನಡೆದುಕೋ; ಜಗ್ಗುಗೆ ಮಂಜು ಅವಾಜ್
ಸೆಂಟ್ರಲ್ ಜೈಲಿನ ಬಳಿ ನಿಷಿದ್ಧ ವಸ್ತುಗಳು: ಕೈದಿಗಳಿಗೆ ತಲುಪಿಸುವ ಯತ್ನ ವಿಫಲ
ಸೆಂಟ್ರಲ್ ಜೈಲಿನ ಬಳಿ ನಿಷಿದ್ಧ ವಸ್ತುಗಳು: ಕೈದಿಗಳಿಗೆ ತಲುಪಿಸುವ ಯತ್ನ ವಿಫಲ
ವೃತ್ತಿಯಲ್ಲಿ ಬಡ್ತಿ, ಆರ್ಥಿಕ ಪ್ರಗತಿ ಹಾಗೂ ಅಪವಾದಗಳಿಂದ ಮುಕ್ತಿ
ವೃತ್ತಿಯಲ್ಲಿ ಬಡ್ತಿ, ಆರ್ಥಿಕ ಪ್ರಗತಿ ಹಾಗೂ ಅಪವಾದಗಳಿಂದ ಮುಕ್ತಿ
ಧರ್ಮಸ್ಥಳಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ ಕುಟುಂಬಕ್ಕೆ ಪೂರ್ಣಕುಂಭ ಸ್ವಾಗತ
ಧರ್ಮಸ್ಥಳಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ ಕುಟುಂಬಕ್ಕೆ ಪೂರ್ಣಕುಂಭ ಸ್ವಾಗತ
ಒಂದೇ ಪ್ರಕರಣ, ಎರಡು FIR: ಮೈಸೂರಿನಲ್ಲಿ ಎರಡು ಕೋಮಿನ ಮಧ್ಯೆ ನಡೆದಿದ್ದೇನು?
ಒಂದೇ ಪ್ರಕರಣ, ಎರಡು FIR: ಮೈಸೂರಿನಲ್ಲಿ ಎರಡು ಕೋಮಿನ ಮಧ್ಯೆ ನಡೆದಿದ್ದೇನು?
ಬಿಗ್ ಬಾಸ್ ಟಾಪ್ 5 ಯಾರು? ಗೆಲ್ಲೋದು ಯಾರು? ಭವಿಷ್ಯ ನುಡಿದ ಸೋನಿಕಾ
ಬಿಗ್ ಬಾಸ್ ಟಾಪ್ 5 ಯಾರು? ಗೆಲ್ಲೋದು ಯಾರು? ಭವಿಷ್ಯ ನುಡಿದ ಸೋನಿಕಾ
ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಎಲ್ಲಾ ಆನೆಗಳನ್ನ ಓಡಿಸುತ್ತೇವೆ ಎಂದ ಸಚಿವ
ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಎಲ್ಲಾ ಆನೆಗಳನ್ನ ಓಡಿಸುತ್ತೇವೆ ಎಂದ ಸಚಿವ
ಪ್ರತಿಭಟನೆಕಾರರ ನಡವಳಿಕೆಗೆ ಹಾಸನ ಡಿಸಿ ಬೇಸರ
ಪ್ರತಿಭಟನೆಕಾರರ ನಡವಳಿಕೆಗೆ ಹಾಸನ ಡಿಸಿ ಬೇಸರ
ಸ್ಟಿಂಗ್ ಆಪರೇಷನ್ ಕೇಸ್​: ಸಿಸಿಬಿ ಮುಂದೆ ಕೃಪಾ ಆಳ್ವಾ ಹಾಜರ್
ಸ್ಟಿಂಗ್ ಆಪರೇಷನ್ ಕೇಸ್​: ಸಿಸಿಬಿ ಮುಂದೆ ಕೃಪಾ ಆಳ್ವಾ ಹಾಜರ್