ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರಕಟ: ಭಾಸ್ಕರ ಹೆಗಡೆ ಸೇರಿ ಟಿವಿ9 ಕನ್ನಡ ವಾಹಿನಿಯ ನಾಲ್ವರಿಗೆ ಪ್ರಶಸ್ತಿ ಗರಿ

| Updated By: ರಮೇಶ್ ಬಿ. ಜವಳಗೇರಾ

Updated on: Feb 09, 2023 | 7:28 PM

2019, 2020, 2021, 2022ನೇ ಸಾಲಿನ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರಕಟವಾಗಿದೆ. ನಾಲ್ಕು ವರ್ಷಗಳು ಸೇರಿ 124 ಪತ್ರಕರ್ತರನ್ನು ಆಯ್ಕೆ ಮಾಡಲಾಗಿದ್ದು, ಇದರಲ್ಲಿ ಟಿವಿ9 ಕನ್ನಡ ವಾಹಿನಿಯ ನಾಲ್ವರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ ದೊರೆತಿದೆ.

ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರಕಟ: ಭಾಸ್ಕರ ಹೆಗಡೆ ಸೇರಿ ಟಿವಿ9 ಕನ್ನಡ ವಾಹಿನಿಯ ನಾಲ್ವರಿಗೆ ಪ್ರಶಸ್ತಿ ಗರಿ
ಟಿವಿ9 ವಾಹಿನಿಯ ನಾಲ್ವರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ
Follow us on

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರಕಟವಾಗಿದೆ. ಮಾಧ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪತ್ರಕರ್ತರನ್ನು ‘ಮಾಧ್ಯಮ ವಾರ್ಷಿಕ ಪ್ರಶಸ್ತಿ’ (karnataka media academy Award)ಹಾಗೂ ದತ್ತಿ ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ. ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 2019, 2020, 2021, 2022ನೇ ಸಾಲಿನ ಮಾಧ್ಯಮ ವಾರ್ಷಿಕ ಪ್ರಶಸ್ತಿಗೆ  ಪತ್ರಕರ್ತರನ್ನು ಆಯ್ಕೆ ಮಾಡಲಾಗಿದ್ದು, ಟಿವಿ9 ಕನ್ನಡ ವಾಹಿನಿಯ ನಾಲ್ವರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಸಿಕ್ಕಿದೆ. ಟಿವಿ9 ಕನ್ನಡ ಡಿಜಿಟಲ್​ ಎಡಿಟರ್, ಹಿರಿಯ ಪತ್ರಕರ್ತರಾದ ಭಾಸ್ಕರ ಹೆಗಡೆ ಅವರಿಗೆ 2022ನೇ ಸಾಲಿನ ‘ಮಾಧ್ಯಮ ವಾರ್ಷಿಕ ಪ್ರಶಸ್ತಿ’ದೊರೆತಿದೆ. ಇನ್ನು 2019ನೇ ಸಾಲಿನ ಮಾಧ್ಯಮ ಪ್ರಶಸ್ತಿಗೆ ಟಿವಿ9ನ ಮುಖ್ಯ ವರದಿಗಾರ ಹೆಚ್​.ವಿ. ಕಿರಣ್, 2021ನೇ ಸಾಲಿನ ಪ್ರಶಸ್ತಿಗೆ ಟಿವಿ9 ಪ್ರೊಗ್ರಾಮಿಂಗ್ ಸಂಪಾದಕರಾದ ಎ.ಕಬೀರ್ ಕಾಂತಿಲ ಹಾಗೂ 2022ನೇ ಸಾಲಿನ ಮಾಧ್ಯಮ ವಾರ್ಷಿಕ ಪ್ರಶಸ್ತಿಗೆ ಟಿವಿ9 ಆ್ಯಂಕರ್ ಸುಕನ್ಯ ಆಯ್ಕೆಯಾಗಿದ್ದಾರೆ.

ಕೊರೋನಾ ಇದ್ದ ಕಾರಣ ಕಳೆದ ಎರಡು ವರ್ಷ ಪ್ರಶಸ್ತಿ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ 2019ರಿಂದ 2022ರ ವರೆಗೆ ನಾಲ್ಕು ವರ್ಷಗಳ ಮಾಧ್ಯಮ ವಾರ್ಷಿಕ ಪ್ರಶಸ್ತಿಗೆ ಒಟ್ಟು 124 ಪತ್ರಕರ್ತರನ್ನು ಆಯ್ಕೆ ಮಾಡಲಾಗಿದೆ. ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರ ಕಾರ್ಯ ಸಾಧನೆ ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇನ್ನು 21 ಪತ್ರಕರ್ತರನ್ನು ದತ್ತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಪ್ರಶಸ್ತಿ ಪುರಸ್ಕೃತರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಆದ್ರೆ, ಇನ್ನೂ ಪ್ರಶಸ್ತಿ ಪ್ರದಾನ ಸಮಾರಂಭದ ದಿನಾಂಕ ನಿಗದಿಯಾಗಿಲ್ಲ. ಇನ್ನು ವಾರ್ಷಿಕ ಪ್ರಶಸ್ತಿ ಪುರಸ್ಕೃತರಿಗೆ ತಲಾ 25 ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಫಲಕ ನೀಡಿ ಸನ್ಮಾನಿಸಲಾಗುತ್ತದೆ.

Published On - 7:13 pm, Thu, 9 February 23