ಕರ್ನಾಟಕ ಮೆಡಿಕಲ್ ಕಾಲೇಜುಗಳ ವಿರುದ್ಧ ಮತ್ತೆ ಕ್ರಮಕ್ಕೆ ಮುಂದಾದ ಆರೋಗ್ಯ ವಿವಿ: ಕಳ್ಳಾಟವಾಡಿದರೆ ಸೀಟ್ ಕಡಿತಕ್ಕೆ ಶಿಫಾರಸು

ಕರ್ನಾಟಕದ ಅನೇಕ ವೈದ್ಯಕೀಯ ಕಾಲೇಜುಗಳಲ್ಲಿ ಮೂಲಸೌಕರ್ಯದ ಕೊರತೆ ಮತ್ತು ಸಿಬ್ಬಂದಿ ಕೊರತೆ ಇರುವುದು ತಿಳಿದುಬಂದಿದೆ. ಹೀಗಾಗಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ಇದೀಗ ರಾಷ್ಟ್ರೀಯ ವೈದ್ಯಕೀಯ ಆಯೋಗಕ್ಕೆ ವರದಿ ಸಲ್ಲಿಸಲು ಸಿದ್ಧವಾಗಿದೆ. ಮೂಲಸೌಕರ್ಯ ಕೊರತೆಯಿರುವ ಕಾಲೇಜುಗಳ ವೈದ್ಯಕೀಯ ಸೀಟುಗಳನ್ನು ಕಡಿಮೆ ಮಾಡಲು ಶಿಫಾರಸು ಮಾಡಲಾಗುತ್ತದೆ ಎನ್ನಲಾಗಿದೆ.

ಕರ್ನಾಟಕ ಮೆಡಿಕಲ್ ಕಾಲೇಜುಗಳ ವಿರುದ್ಧ ಮತ್ತೆ ಕ್ರಮಕ್ಕೆ ಮುಂದಾದ ಆರೋಗ್ಯ ವಿವಿ: ಕಳ್ಳಾಟವಾಡಿದರೆ ಸೀಟ್ ಕಡಿತಕ್ಕೆ ಶಿಫಾರಸು
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ
Follow us
Vinay Kashappanavar
| Updated By: Ganapathi Sharma

Updated on:Jan 10, 2025 | 8:00 AM

ಬೆಂಗಳೂರು, ಜನವರಿ 10: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿನ ಅನೇಕ ವೈದ್ಯಕೀಯ ಕಾಲೇಜುಗಳಲ್ಲಿ ಮೂಲಸೌಕರ್ಯ ಸಮಸ್ಯೆ ಇರುವುದು ಮತ್ತೆ ಬೆಳಕಿಗೆ ಬಂದಿದೆ. ಉತ್ತಮ ಸೌಲಭ್ಯ ಒದಗಿಸದ, ಸಿಬ್ಬಂದಿ ಕೊರತೆ ಇರುವ, ಕಳಪೆ ಉಪಕರಣಗಳು, ರೋಗಿಗಳ ದತ್ತಾಂಶಗಳನ್ನು ಸರಿಯಾಗಿ ನಿರ್ವಹಿಸದ ರಾಜ್ಯದ 27 ವೈದ್ಯಕೀಯ ಕಾಲೇಜುಗಳಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್​ಎಂಸಿ) ಈ ಹಿಂದೆ ದಂಡ ವಿಧಿಸಿ ಶಾಕ್ ನೀಡಿತ್ತು. ಇದಿಗ ಮತ್ತೆ ರಾಜ್ಯದ ಮೆಡಿಕಲ್ ಕಾಲೇಜುಗಳಿಗೆ ಚಾಟಿ ಬೀಸಲು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಮುಂದಾಗಿದೆ.

ಎನ್​ಎಂಸಿಗೆ ವರದಿ ನೀಡಲು ಸಿದ್ಧತೆ

ಮೂಲಭೂತ ಸೌಕರ್ಯಕೊರತೆ ಹಾಗೂ ಸರಿಯಾದ ಸೇವೆ ನೀಡದೆ ಕಳ್ಳಾಟವಾಡುತ್ತಿರುವ ಮೆಡಿಕಲ್ ಕಾಲೇಜುಗಳ ವಿರುದ್ಧ ಮತ್ತೆ ಎನ್​ಎಂಸಿಗೆ ವರದಿ ನೀಡಲು ಆರೋಗ್ಯ ವಿಶ್ವವಿದ್ಯಾಲಯ ಮುಂದಾಗಿದೆ. ಈ ಹಿಂದೆ ಎನ್​ಎಂಸಿ ರಾಜ್ಯದ 27 ಮೆಡಿಕಲ್ ಕಾಲೇಜಿಗೆ ನೋಟಿಸ್ ನೀಡಿ ದಂಡ ವಿಧಿಸಿತ್ತು. ಆ ಬಳಿಕ ಕೂಡ ಹಲವು ಮೆಡಿಕಲ್ ಕಾಲೇಜಿಗಳು ಮತ್ತೆ ಕಳ್ಳಾಟವಾಡುತ್ತಿವೆ. ಸಾಕಷ್ಟು ಮೆಡಿಕಲ್ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯ ಕೊರತೆ, ಸಿಬ್ಬಂದಿ ಕೊರತೆ ಇದೆ. ಜತೆಗೆ ರೋಗಿಗಳಿಗೆ ಸರಿಯಾದ ಚಿಕಿತ್ಸೆಯನ್ನೂ ನೀಡುತ್ತಿಲ್ಲ ಎಂಬ ಆರೋಪಗಳಿವೆ. ಹೀಗಾಗಿ ಇತಂಹ ಕಾಲೇಜುಗಳ ವರದಿ ಪಡೆಯಲು ಆರೋಗ್ಯ ವಿವಿ ಮುಂದಾಗಿದೆ.

ಮೆಡಿಕಲ್ ಸೀಟ್ ಕಡಿತಕ್ಕೆ ಶಿಫಾರಸು!

ಮೂಲಸೌಕರ್ಯ ಕೊರತೆ ಇರುವ ಕಾಲೇಜುಗಳ ಮೆಡಿಕಲ್ ಸೀಟ್ ಕಡಿತಕ್ಕೆ ಎನ್​ಎಂಸಿಗೆ ವರದಿ ನೀಡಲು ಕೂಡಾ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ಸಿದ್ಧತೆ ಮಾಡಿದೆ. ಮೂಲಭೂತ ಸೌಕರ್ಯ, ಸಿಬ್ಬಂದಿ ಕೊರತೆ, ಕಳಪೆ ಉಪಕರಣಗಳು, ರೋಗಿಗಳ ದತ್ತಾಂಶಗಳನ್ನು ಸರಿಯಾಗಿ ನಿರ್ವಹಿಸದ ರಾಜ್ಯದ ಮೆಡಿಕಲ್ ಕಾಲೇಜುಗಳ ಸಂಪೂರ್ಣ ಮಾಹಿತಿಯನ್ನು ಪಡೆಯಲು ಮುಂದಾಗಿದೆ. ಒಂದೊಮ್ಮೆ ಮತ್ತೆ ಮೆಡಿಕಲ್ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯ ಕೊರತೆ ಸಮಸ್ಯೆ ಕಂಡು ಬಂದರೆ, ಮೆಡಿಕಲ್ ಕಾಲೇಜುಗಳ ಸೀಟ್​​​ಗಳಿಗೆ ಎನ್​ಎಂಸಿ ಕತ್ತರಿ ಹಾಕಲಿದೆ.

ಈ ವಿಚಾರವಾಗಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ಎಂಕೆ ರಮೇಶ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಹೆಚ್‌ಎಂಪಿವಿ ವೈರಸ್‌ ನಿಜಕ್ಕೂ ಅಪಾಯಕಾರಿಯೇ?‌ ಈ ಬಗ್ಗೆ ಡಾ. ಜಗದೀಶ್‌ ಚತುರ್ವೇದಿ ಏನು ಹೇಳಿದ್ದಾರೆ ನೋಡಿ

ಒಟ್ಟಿನಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸೇರಿ ಹಲವು ಖಾಸಗಿ ಕಾಲೇಜುಗಳು ಕನಿಷ್ಠ ಮಾನದಂಡ ಪಾಲನೆ ಮಾಡುತ್ತಿಲ್ಲ. ಹೀಗಾಗಿ ರಾಜೀವ್ ಗಾಂಧಿ ಆರೋಗ್ಯ ವಿವಿ ಕ್ರಮಕ್ಕೆ ಮುಂದಾಗಿದೆ. ಇನ್ನಾದರೂ ವೈದ್ಯಕೀಯ ಕಾಲೇಜುಗಳಲ್ಲಿ ಎಲ್ಲೆಲ್ಲಿ ಖಾಲಿ ಹುದ್ದೆ ಇದೆಯೋ ಅವುಗಳನ್ನು ಸರ್ಕಾರ ಭರ್ತಿ ಮಾಡಬೇಕಿದೆ. ಖಾಸಗಿ ವೈದ್ಯಕೀಯ ಕಾಲೇಜುಗಳು ಇನ್ನಾದರೂ ಉತ್ತಮ ಮೂಲಸೌಕರ್ಯದ ಕಡೆ ಗಮನಕೊಡಬೇಕಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:59 am, Fri, 10 January 25

ರಾಜ್ಯಾಧ್ಯಕ್ಷನ ಚುನಾವಣೆಯನ್ನು ಶಿವರಾಜ್ ಚೌಹಾನ್ ನೋಡಿಕೊಳ್ಳುತ್ತಾರೆ: ಅಶೋಕ
ರಾಜ್ಯಾಧ್ಯಕ್ಷನ ಚುನಾವಣೆಯನ್ನು ಶಿವರಾಜ್ ಚೌಹಾನ್ ನೋಡಿಕೊಳ್ಳುತ್ತಾರೆ: ಅಶೋಕ
ವರಿಷ್ಠರು ದೆಹಲಿಗೆ ತೆರಳಬೇಕಿದ್ದರಿಂದ ಬೇಗ ಭಾಷಣ ಮುಗಿಸಿದ ಸಿದ್ದರಾಮಯ್ಯ
ವರಿಷ್ಠರು ದೆಹಲಿಗೆ ತೆರಳಬೇಕಿದ್ದರಿಂದ ಬೇಗ ಭಾಷಣ ಮುಗಿಸಿದ ಸಿದ್ದರಾಮಯ್ಯ
ಅಮೆರಿಕದಲ್ಲಿನ ಅಭಿಮಾನಿಗಳ ಎದುರು ಹಾಡು ಹೇಳಿ ರಂಜಿಸಿದ ಶಿವರಾಜ್​ಕುಮಾರ್
ಅಮೆರಿಕದಲ್ಲಿನ ಅಭಿಮಾನಿಗಳ ಎದುರು ಹಾಡು ಹೇಳಿ ರಂಜಿಸಿದ ಶಿವರಾಜ್​ಕುಮಾರ್
ಪ್ರಧಾನ ಮಂತ್ರಿ ಹುದ್ದೆಯನ್ನೇ ಸೋನಿಯಾ ಗಾಂಧಿ ತ್ಯಾಗ ಮಾಡಿದ್ದರು: ಖರ್ಗೆ
ಪ್ರಧಾನ ಮಂತ್ರಿ ಹುದ್ದೆಯನ್ನೇ ಸೋನಿಯಾ ಗಾಂಧಿ ತ್ಯಾಗ ಮಾಡಿದ್ದರು: ಖರ್ಗೆ
ಎಐಸಿಸಿ ಕಟ್ಟಡಕ್ಕೆ ಗಾಂಧಿ ಭವನ ಅಂತ ಯಾಕೆ ಹೆಸರಿಟ್ಟಿಲ್ಲ? ಆರ್ ಅಶೋಕ
ಎಐಸಿಸಿ ಕಟ್ಟಡಕ್ಕೆ ಗಾಂಧಿ ಭವನ ಅಂತ ಯಾಕೆ ಹೆಸರಿಟ್ಟಿಲ್ಲ? ಆರ್ ಅಶೋಕ
ಪಕ್ಷದ ವಿದ್ಯಮಾನಗಳಿಂದ ತಳಮಟ್ಟದ ಕಾರ್ಯಕರ್ತ ನೊಂದಿದ್ದಾನೆ: ಸುನೀಲ ಕುಮಾರ್
ಪಕ್ಷದ ವಿದ್ಯಮಾನಗಳಿಂದ ತಳಮಟ್ಟದ ಕಾರ್ಯಕರ್ತ ನೊಂದಿದ್ದಾನೆ: ಸುನೀಲ ಕುಮಾರ್
ಬಿಗ್​ಬಾಸ್ ಮನೆಯಲ್ಲಿ ‘ಯಜಮಾನ’, ಝಾನ್ಸಿ ಆವಾಜ್​ಗೆ ತಲೆತಗ್ಗಿಸಿದ ರಜತ್
ಬಿಗ್​ಬಾಸ್ ಮನೆಯಲ್ಲಿ ‘ಯಜಮಾನ’, ಝಾನ್ಸಿ ಆವಾಜ್​ಗೆ ತಲೆತಗ್ಗಿಸಿದ ರಜತ್
ಭೈರತಿ ಸುರೇಶ್ ಕಾರಿಗೆ ಎಸ್ಕಾರ್ಟ್ ವಾಹನ ಟಚ್: ಪೊಲೀಸರಿಗೆ ಬೈಯ್ದ ಸಚಿವ
ಭೈರತಿ ಸುರೇಶ್ ಕಾರಿಗೆ ಎಸ್ಕಾರ್ಟ್ ವಾಹನ ಟಚ್: ಪೊಲೀಸರಿಗೆ ಬೈಯ್ದ ಸಚಿವ
Video: ರಿಯಲ್ ಎಸ್ಟೇಟ್ ಬ್ರೋಕರ್​ ಕೆನ್ನೆಗೆ ಬಾರಿಸಿದ ಬಿಜೆಪಿ ಸಂಸದ
Video: ರಿಯಲ್ ಎಸ್ಟೇಟ್ ಬ್ರೋಕರ್​ ಕೆನ್ನೆಗೆ ಬಾರಿಸಿದ ಬಿಜೆಪಿ ಸಂಸದ
ನೆಲಮಂಗಲ: ಚೆನ್ನಾಗಿದ್ದ ರಸ್ತೆಯನ್ನು ಅಗೆದ ಜಮೀನ್ದಾರರು, ಗ್ರಾಮಸ್ಥರ ಆಕ್ರೋಶ
ನೆಲಮಂಗಲ: ಚೆನ್ನಾಗಿದ್ದ ರಸ್ತೆಯನ್ನು ಅಗೆದ ಜಮೀನ್ದಾರರು, ಗ್ರಾಮಸ್ಥರ ಆಕ್ರೋಶ