ಕಾವೇರಿ ನೀರು ಮಧ್ಯೆ ಕರ್ನಾಟಕಕ್ಕೆ ಮತ್ತೊಂದು ಶಾಕ್, ಮೇಕೆದಾಟು ಡಿಪಿಆರ್ ವಾಪಸ್

ಬರಗಾಲದ ಮಧ್ಯೆಯೂ ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ ಆದೇಶಿಸಲಾಗಿದೆ. ಇದರ ಮಧ್ಯೆ ಇದೀಗ ತಮಿಳುನಾಡು ಹಾಗೂ ಕರ್ನಾಟಕದ ನಡುವಿನ ವಿವಾದದ ಮೇಕೆದಾಟು ಯೋಜನೆಯ ವಿಸ್ತೃತ ಯೋಜನಾ ವರದಿ (DPR)ಯನ್ನು ವಾಪಸ್ ಕಳುಹಿಸಿದೆ. ಇದರಿಂದ ಕರ್ನಾಟಕಕ್ಕಿಂದು ಡಬಲ್ ಆಘಾತವಾಗಿದೆ. ಅಷ್ಟಕ್ಕೂ ಸಿಡಬ್ಲ್ಯೂಸಿ ಹೇಳಿದ್ದೇನು? ಡಿಪಿಆರ್ ಏಕೆ ವಾಪಸ್ ಕಳುಹಿಸಿದ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಕಾವೇರಿ ನೀರು ಮಧ್ಯೆ ಕರ್ನಾಟಕಕ್ಕೆ ಮತ್ತೊಂದು ಶಾಕ್, ಮೇಕೆದಾಟು ಡಿಪಿಆರ್ ವಾಪಸ್
Mekedatu Project
Edited By:

Updated on: Jul 30, 2026 | 7:36 PM

ಬೆಂಗಳೂರು, (ಜುಲೈ 30): ಮೇಕೆದಾಟು ಜಲಾಶಯ ನಿರ್ಮಾಣಕ್ಕೆ ( Mekedatu Project ) ಕರ್ನಾಟಕವು ತಮಿಳುನಾಡು, ಕೇರಳ ಹಾಗೂ ಪುದುಚೆರಿಯಂತಹ ನೆರೆ ರಾಜ್ಯಗಳ ಒಪ್ಪಿಗೆ ಪಡೆಯುವ ಅಗತ್ಯವಿಲ್ಲ ಎಂದು ಕೇಂದ್ರ ಜಲಶಕ್ತಿ ಸಚಿವಾಲಯ ಹೇಳಿತ್ತು. ಇದು ಕರ್ನಾಟಕಕ್ಕೆ ಮತ್ತಷ್ಟು ಬಲ ತಂದಿತ್ತು. ಆದ್ರೆ, ಇದೀಗ ಇದೇ ಕೇಂದ್ರ ಜಲ ಆಯೋಗ (CWC) ಕರ್ನಾಟಕ ಸರ್ಕಾರ ಸಲ್ಲಿಸಿದ್ದ ವಿಸ್ತೃತ ಯೋಜನಾ ವರದಿ (DPR)ಯನ್ನು ವಾಪಸ್ ಕಳುಹಿಸಿದೆ. ಯೋಜನಾ ಪ್ರಸ್ತಾವನೆ ಕಾವೇರಿ ಜಲ ವಿವಾದ ನ್ಯಾಯಮಂಡಳಿ (CWDT) ನೀಡಿರುವ ತೀರ್ಪು ಹಾಗೂ 2018ರ ಸುಪ್ರೀಂ ಕೋರ್ಟ್ ತೀರ್ಪಿಗೆ ಅನುಗುಣವಾಗಿಲ್ಲ ಎಂದು ಆಯೋಗ ಅಭಿಪ್ರಾಯಪಟ್ಟಿದೆ.

ನೀರಿನ ಬಳಕೆಯ ಪ್ರಮಾಣ ಹೆಚ್ಚಿಸಿದ್ದ ಕರ್ನಾಟಕ ಸರ್ಕಾರ, ಬೆಂಗಳೂರಿನ ಕುಡಿಯುವ ನೀರಿಗಾಗಿ 6.95 TMC ನೀರು ಕೇಳಿತ್ತು. ಹೀಗಾಗಿ ಕೆಲವು ಅಂಶಗಳ ಬಗ್ಗೆ ಸ್ಪಷ್ಟನೆ ಕೇಳಿರುವ ಕೇಂದ್ರ ಜಲ ಆಯೋಗ, ಡಿಪಿಆರ್​​ ಅನ್ನು ವಾಪಸ್ ಕಳುಹಿಸಿದ್ದು, ಡಿಪಿಆರ್‌ನಲ್ಲಿರುವ ಕೆಲ ಅಂಶ ಮಾರ್ಪಡಿಸಿ ಪರಿಷ್ಕೃತ ವಿಸ್ತ್ರತ ಯೋಜನಾ ವರದಿ ಸಲ್ಲಿಸುವಂತೆ ಸಿಡಬ್ಲ್ಯುಸಿ ಸೂಚಿಸಿದೆ.

ಇದನ್ನೂ ಓದಿ: ಮೇಕೆದಾಟು ಯೋಜನೆ: ಕರ್ನಾಟಕಕ್ಕೆ ತಮಿಳುನಾಡಿನ ಒಪ್ಪಿಗೆ ಅಗತ್ಯವಿಲ್ಲ ಎಂದ ಕೇಂದ್ರ ಜಲಶಕ್ತಿ ಸಚಿವಾಲಯ

 CWC ಡಿಪಿಆರ್ ವಾಪಸ್ ಕಳುಹಿಸಿದ್ಯಾಕೆ?

2018ರಲ್ಲಿ ಕರ್ನಾಟಕವು ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಕುಡಿಯುವ ನೀರಿನ ಅಗತ್ಯಕ್ಕಾಗಿ 4.75 ಟಿಎಂಸಿ ಅಡಿ ನೀರಿನ ಬಳಕೆಯನ್ನು ಪ್ರಸ್ತಾಪಿಸಿ, ಸುಮಾರು 23.75 ಟಿಎಂಸಿ ಅಡಿ ಸಂಗ್ರಹ ಸಾಮರ್ಥ್ಯದ ಡಿಪಿಆರ್‌ ಸಲ್ಲಿಸಿ ತಾತ್ವಿಕ ಒಪ್ಪಿಗೆ ಪಡೆದಿತ್ತು.ಆದರೆ, 2026ರ ಏಪ್ರಿಲ್‌ನಲ್ಲಿ ಸಲ್ಲಿಸಿದ ಪರಿಷ್ಕೃತ ಪ್ರಸ್ತಾವನೆಯಲ್ಲಿ ಬಳಕೆಯ ಪ್ರಮಾಣವನ್ನು 6.95 ಟಿಎಂಸಿ ಅಡಿಗೆ ಹೆಚ್ಚಿಸಲಾಗಿದೆ. ಕಾವೇರಿಗೆ ಅಡ್ಡಲಾಗಿ ತಿರುವು ತಡೆಗೋಡೆ ನಿರ್ಮಿಸುವ ಶಿವನಸಮುದ್ರ ನದಿ ಹರಿವು ವಿದ್ಯುತ್‌ ಯೋಜನೆಯನ್ನು ಹೊಸ ಘಟಕವಾಗಿ ಡಿಪಿಆರ್‌ನಲ್ಲಿ ಯಾವುದೇ ಪೂರ್ವಾನುಮತಿಯಿಲ್ಲದೆ ಸೇರಿಸಲಾಗಿದೆ.
Karnataka's Mekedatu DPR Returned As CWC Finds Proposal Violates Cauvery Tribunal Award2044ರ ವೇಳೆಗೆ ಬೆಂಗಳೂರಿನ ನೀರಿನ ಅಗತ್ಯ 64 ಟಿಎಂಸಿ ಅಡಿ ಎಂದು ಅಂದಾಜಿಸಿರುವ ರಾಜ್ಯ ಸರ್ಕಾರ, 1990ರ ಹಳೆಯ ಅಂಕಿಅಂಶಗಳನ್ನು ಆಧಾರವಾಗಿಟ್ಟುಕೊಂಡಿದೆ. ಆದರೆ ಸುಪ್ರೀಂ ಕೋರ್ಟ್‌ ತನ್ನ 2018ರ ತೀರ್ಪಿನಲ್ಲಿ ಬೆಂಗಳೂರು ಸೇರಿದಂತೆ ಕರ್ನಾಟಕದ ಒಟ್ಟು ಕುಡಿಯುವ ನೀರಿನ ಅಗತ್ಯವನ್ನು 33 ಟಿಎಂಸಿ ಅಡಿಗೆ (ಬೆಂಗಳೂರಿಗೆ ಮಾತ್ರ 24 ಟಿಎಂಸಿ ಅಡಿ) ಮಿತಿಗೊಳಿಸಿದೆ.

ಒಟ್ಟು 59.46 ಟಿಎಂಸಿ ಅಡಿ ಸಾಮರ್ಥ್ಯದ ಜಲಾಶಯ ನಿರ್ಮಿಸುವ ಕರ್ನಾಟಕದ ಸಮರ್ಥನೆಯು ಪ್ರಸ್ತುತ ದತ್ತಾಂಶಗಳಿಲ್ಲದೆ ಹಳೆಯ ಅಂಕಿಅಂಶಗಳ ಮೇಲೆ ಅವಲಂಬಿತವಾಗಿದೆ ಎಂದು ಆಯೋಗ ಸ್ಪಷ್ಟಪಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:41 pm, Thu, 30 July 26

ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
Loading...
Unable to load recommendations.
Follow Us