ವಿದ್ಯಾರ್ಥಿನಿಯರಿಗೆ ಗುಡ್​​​​ನ್ಯೂಸ್ ಕೊಟ್ಟ ಸರ್ಕಾರ: ಬರಲಿದೆ ಮುಟ್ಟಿನ ಕಪ್‌

ಕರ್ನಾಟಕ ಸರ್ಕಾರವು ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೆ ಮುಟ್ಟಿನ ಕಪ್ ವಿತರಿಸುವ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಿದೆ. ಈ ಹೊಸ ಯೋಜನೆ 10 ಲಕ್ಷಕ್ಕೂ ಹೆಚ್ಚು ಕಪ್‌ಗಳನ್ನು 61 ಕೋಟಿ ರೂ. ವೆಚ್ಚದಲ್ಲಿ ನೀಡಲಿದೆ. ಇದರಿಂದ ಸ್ಯಾನಿಟರಿ ನ್ಯಾಪ್ಕಿನ್‌ಗಳ ಮೇಲಿನ ಸರ್ಕಾರದ ವೆಚ್ಚ 10 ಕೋಟಿ ರೂ. ಉಳಿತಾಯವಾಗಲಿದೆ. ವಿದ್ಯಾರ್ಥಿನಿಯರ ಆರೋಗ್ಯ ಮತ್ತು ನೈರ್ಮಲ್ಯ ಸುಧಾರಿಸುವುದು ಇದರ ಮುಖ್ಯ ಉದ್ದೇಶವಾಗಿದೆ.

ವಿದ್ಯಾರ್ಥಿನಿಯರಿಗೆ ಗುಡ್​​​​ನ್ಯೂಸ್ ಕೊಟ್ಟ ಸರ್ಕಾರ: ಬರಲಿದೆ ಮುಟ್ಟಿನ ಕಪ್‌
ಸಾಂದರ್ಭಿಕ ಚಿತ್ರ

Updated on: Jan 07, 2026 | 2:32 PM

ಬೆಂಗಳೂರು, ಜ.7: ಶಾಲಾ- ಕಾಲೇಜು ವಿದ್ಯಾರ್ಥಿನಿಯರು ಅನುಭವಿಸುವ ಮುಟ್ಟಿನ ಸಮಸ್ಯೆಯ ಬಗ್ಗೆ ಹೊಸ ಯೋಜನೆಯೊಂದನ್ನು ಸರ್ಕಾರ ಹಾಕಿಕೊಂಡಿದೆ. ಕರ್ನಾಟಕದ ಆಯ್ದ ಜಿಲ್ಲೆಗಳಲ್ಲಿ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಮುಟ್ಟಿನ ಕಪ್‌ಗಳನ್ನು ಒದಗಿಸುವ ಪ್ರಾಯೋಗಿಕ ಯೋಜನೆಯ ಯಶಸ್ವಿಯಾಗಿ ಅನುಷ್ಠಾನವಾದ ನಂತರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ನಿರ್ಧರಿಸಿದೆ. ಸ್ವಚ್ಛ ಭಾರತ ಅಭಿಯಾನದ ಅಡಿಯಲ್ಲಿ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ಲಿಮಿಟೆಡ್ (KSMSCL) ಮೂಲಕ 61 ಕೋಟಿ ರೂ.ಗಳಿಗೂ ಹೆಚ್ಚು ವೆಚ್ಚದಲ್ಲಿ 10,38,912 ಮುಟ್ಟಿನ ಕಪ್‌ಗಳನ್ನು ಒದಗಿಸಲು ಸರ್ಕಾರ ಅನುಮೋದನೆ ಸಿಕ್ಕಿದೆ.

ಈ ಹಿಂದೆ ವಾರ್ಷಿಕವಾಗಿ 2,35,74,084 ಸ್ಯಾನಿಟರಿ ನ್ಯಾಪ್ಕಿನ್‌ಗಳನ್ನು ಖರೀದಿಸಲು ಸರ್ಕಾರ 71 ಕೋಟಿ ರೂ.ಗಳನ್ನು ಖರ್ಚು ಮಾಡುತ್ತಿತ್ತು. ಆದರೆ ಇದೀಗ ಮುಟ್ಟಿನ ಕಪ್‌ ನೀಡುವ ಈ ನಿರ್ಧಾರವು ಸ್ಯಾನಿಟರಿ ನ್ಯಾಪ್ಕಿನ್‌ಗಳ ಮೇಲಿನ ಸರ್ಕಾರದ ವೆಚ್ಚವನ್ನು 10 ಕೋಟಿ ರೂ.ಗಳಷ್ಟು ಕಡಿತಗೊಳಿಸಲಿದೆ ಎಂದು ಹೇಳಿದ್ದಾರೆ. ಮೂರು ತಿಂಗಳು ಸ್ಯಾನಿಟರಿ ನ್ಯಾಪ್ಕಿನ್‌ಗಳನ್ನು ಮತ್ತು ಮುಂದಿನ ಶೈಕ್ಷಣಿಕ ವರ್ಷಕ್ಕೆ ಒಂದು ಮುಟ್ಟಿನ ಕಪ್ ಅನ್ನು ಒದಗಿಸುವುದನ್ನು ಮುಂದುವರಿಸುತ್ತದೆ ಎಂದು ಇಲಾಖೆ ಹೇಳಿದೆ.

ಇದನ್ನೂ ಓದಿ: ಬೆಂಗಳೂರು ಟ್ರಾಫಿಕ್‌ ಸಮಸ್ಯೆಗೆ ಹೊಸ ಪ್ಲಾನ್: ಶಾಲಾ ಬಸ್‌ನಲ್ಲಿ ಬಯೋ-ಟಾಯ್ಲೆಟ್ ಸೌಲಭ್ಯ

ಇದಕ್ಕೂ ಮೊದಲು, ಡಿಸೆಂಬರ್ 2025ರಲ್ಲಿ ಶುಚಿ ಕಿಟ್ ಅಡಿಯಲ್ಲಿ ಒದಗಿಸಲಾದ ಸ್ಯಾನಿಟರಿ ನ್ಯಾಪ್ಕಿನ್‌ಗಳ ಕೊರತೆಯಿಂದಾಗಿ ಹದಿಹರೆಯದ ಹುಡುಗಿಯರು ಶಾಲೆಗೆ ಹೋಗುತ್ತಿಲ್ಲ ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿತ್ತು. ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಈ ವಿಷಯದ ಬಗ್ಗೆ ಸದನದಲ್ಲಿ ಚರ್ಚೆ ನಡೆದಿತ್ತು. ಈ ಬಗ್ಗೆ ಸಚಿವ ಗುಂಡೂರಾವ್ ತಕ್ಷಣವೇ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಭರವಸೆ ನೀಡಿದ್ದರು. ಇಲಾಖೆ ಮೂರು ತಿಂಗಳ ಕಾಲ ಸ್ಯಾನಿಟರಿ ನ್ಯಾಪ್ಕಿನ್‌ಗಳನ್ನು ಒದಗಿಸಲು ಅನುಮೋದನೆ ನೀಡಿದೆ. ಆದರೆ ಮುಟ್ಟಿನ ಕಪ್‌ ಬಗ್ಗೆ ಅನುಮೋದನೆ ಇನ್ನು ಸಿಕ್ಲಿಲ್ಲ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ