AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಕ್ರೋ ಫೈನಾನ್ಸ್‌ ಹಾವಳಿ: ಸಿಎಂ ಸಿದ್ದರಾಮಯ್ಯ ನೇತೃತ್ವದ ಉನ್ನತ ಮಟ್ಟದ ಸಭೆಯಲ್ಲಿ ಏನೇನು ಚರ್ಚೆಯಾಯ್ತ? ಇಲ್ಲಿದೆ ಮಾಹಿತಿ

ಮೈಕ್ರೋ ಫೈನಾನ್ಸ್‌ಗಳ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಬಡ ಜನರಿಗೆ ಆಗುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಕ್ರಮಕೈಗೊಳ್ಳುವ ಸಲುವಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಶನಿವಾರ ಉನ್ನತ ಮಟ್ಟದ ಸಭೆ ನಡೆಯಿತು. ಸಭೆಯಲ್ಲಿ ಏನೇನು ಚರ್ಚೆಯಾಯಿತು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

ಮೈಕ್ರೋ ಫೈನಾನ್ಸ್‌ ಹಾವಳಿ: ಸಿಎಂ ಸಿದ್ದರಾಮಯ್ಯ ನೇತೃತ್ವದ ಉನ್ನತ ಮಟ್ಟದ ಸಭೆಯಲ್ಲಿ ಏನೇನು ಚರ್ಚೆಯಾಯ್ತ? ಇಲ್ಲಿದೆ ಮಾಹಿತಿ
ಸಿಎಂ ಸಿದ್ದರಾಮಯ್ಯ
Anil Kalkere
| Edited By: |

Updated on:Jan 25, 2025 | 3:21 PM

Share

ಬೆಂಗಳೂರು, ಜನವರಿ 25: ಸಾಲ ವಸೂಲಾತಿಗೆ ರೌಡಿಶೀಟರ್​​​ಗಳು, ಗೂಂಡಾಗಳನ್ನು ಬಳಸಲೇಬಾರದು. ಸಾಲ ವಸೂಲಾತಿ ಜವಾಬ್ದಾರಿಯನ್ನು ಫೈನಾನ್ಸ್​ಗಳು ಔಟ್​​ಸೋರ್ಸ್ ಕೊಡಬಾರದು. ಹಾಗೆ ಮಾಡಿದ್ದೇ ಆದರೆ ಅಂಥವರ ವಿರುದ್ಧ ಕೇಸು ದಾಖಲಿಸಿ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆಂದು ಸಿಎಂ ಸಿದ್ದರಾಮಯ್ಯ ಶನಿವಾರ ಖಡಕ್ ಸಂದೇಶ ರವಾನಿಸಿದ್ದಾರೆ. ಗೃಹ ಕಚೇರಿ ಕೃಷ್ಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಗೃಹ ಸಚಿವ ಪರಮೇಶ್ವರ್ ಹಾಗೂ ಉನ್ನತ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಮೈಕ್ರೋಫೈನಾನ್ಸ್ ಅಸೋಸಿಯೇಷನ್ ಅಭಿಪ್ರಾಯ ಪಡೆದಿದ್ದೇನೆ. ಆರ್​​​ಬಿಐ ಅಧಿಕಾರಿಗಳ ಅಭಿಪ್ರಾಯವನ್ನೂ ಕೇಳಿದ್ದೇನೆ. ಯಾರಿಗೂ ಸಾಲ ಕೊಡಬೇಡಿ ಎಂದು ನಾವು ಹೇಳುವುದಿಲ್ಲ. ಆದರೆ ವಸೂಲಿ ಮಾಡುವಾಗ ಕಿರುಕುಳ ಕೊಡಲೇಬಾರದು. ಆರ್​​ಬಿಐ ನಿಯಮದಂತೆ ನಡೆದುಕೊಳ್ಳಬೇಕೆಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

ಸಂಜೆ 5 ರ ನಂತರ ಸಾಲ ವಸೂಲಾತಿಗೆ ಹೋಗಬಾರದು: ಸಿಎಂ

ಸಾಲ ವಸೂಲಾತಿ ವೇಳೆ ಆರ್​ಬಿಐ ನಿಯಮದಂತೆ ನಡೆದುಕೊಳ್ಳಬೇಕು. ಸಂಜೆ 5 ಗಂಟೆ ನಂತರ ಸಾಲ ವಸೂಲಾತಿಗೆ ಹೋಗಬಾರದು. ಮೈಕ್ರೋ ಫೈನಾನ್ಸ್, ಗಿರವಿ ಅಂಗಡಿಯವರು ಕಾನೂನು ಪಾಲಿಸಬೇಕು. ಕಾನೂನು ಉಲ್ಲಂಘಿಸುವವರ ವಿರುದ್ಧ ಮುಲಾಜಿಲ್ಲದೆ ಕ್ರಮಕೈಗೊಳ್ಳುತ್ತೇವೆ. ಇಂದು ನಡೆದ ಸಭೆಯಲ್ಲಿ ಎಚ್ಚರಿಕೆ ನೀಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಸುಗ್ರೀವಾಜ್ಞೆ ಮೂಲಕ ಕೂಡಲೇ ಹೊಸ ಕಾನೂನು: ಸಿಎಂ

ಅನಧಿಕೃತ ವ್ಯವಹಾರ ನಡೆಸುತ್ತಿರುವ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸಾಲಗಾರರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಲು ಕಾನೂನು ತರುತ್ತೇವೆ. ಕಾನೂನು ಇಲಾಖೆ, ಗೃಹ ಇಲಾಖೆ, ಕಂದಾಯ ಇಲಾಖೆಯಿಂದ ಕ್ರಮ ಕೈಗೊಳ್ಳಲಾಗುವುದು. ನೆರೆ ರಾಜ್ಯಗಳಲ್ಲಿರುವ ಕಾನೂನು ಪರಿಶೀಲಿಸಿ ಹೊಸ ಕಾನೂನು ಜಾರಿಗೆ ತರುತ್ತೇವೆ. ಸುಗ್ರೀವಾಜ್ಞೆ ಮೂಲಕ ಕೂಡಲೇ ಹೊಸ ಕಾನೂನನ್ನು ತರುತ್ತೇವೆ. ಒಂದು ವೇಳೆ ಸಾಲಗಾರರಿಗೆ ಕಿರುಕುಳ ನೀಡಿದರೆ ಕೇಸ್ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದರು.

ಶೇ 17.07ಕ್ಕಿಂತ ಹೆಚ್ಚು ಬಡ್ಡಿ ಪಡೆಯುವಂತಿಲ್ಲ: ಸಿಎಂ

ಮೈಕ್ರೋ ಫೈನಾನ್ಸ್ ಕಂಪನಿಗಳು ಆರ್​ಬಿಐ ಅಡಿಯಲ್ಲಿ ಬರುತ್ತವೆ. ಆರ್​ಬಿಐ ನಿಯಮದಂತೆ ಶೇ 17.07ಕ್ಕಿಂತ ಹೆಚ್ಚು ಬಡ್ಡಿ ಪಡೆಯುವಂತಿಲ್ಲ. ಯಾವುದೇ ಸಾಲಗಾರರಿಗೆ 3 ಬಾರಿಗಿಂತ ಹೆಚ್ಚು ಸಾಲ ಕೊಡುವಂತಿಲ್ಲ. ಮೈಕ್ರೋ ಫೈನಾನ್ಸ್ ಕಂಪನಿಗಳು ಆರ್​ಬಿಐ ನಿಯಮಕ್ಕಿಂತ ಹೆಚ್ಚು, ಅಂದರೆ, ಸುಮಾರು ಶೇ 28, 29 ರಷ್ಟು ಬಡ್ಡಿ ವಸೂಲಿ ಮಾಡುತ್ತಿರುವ ಬಗ್ಗೆ ಮಾಹಿತಿ ಇದೆ. ಇದರ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮಾಹಿತಿ ನೀಡುತ್ತೇವೆ. ಅಧಿಕ ಬಡ್ಡಿ ವಸೂಲಿ ಮಾಡ್ತಿರುವ ಫೈನಾನ್ಸ್ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಸಂಜೆಯೊಳಗೆ ಆರೋಪಿಗಳ ಬಂಧನ: ಡಿಸಿಎಂ ಡಿಕೆ ಶಿವಕುಮಾರ್ ಭರವಸೆ

ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಕಿರುಕುಳ ತಪ್ಪಿಸಲು ಕ್ರಮ ಕೈಗೊಳ್ಳುತ್ತೇವೆ. ರಾಜ್ಯಾದ್ಯಂತ ದಾಖಲಾಗಿರುವ ಕೇಸ್​ಗಳ ಬಗ್ಗೆ ಕೂಡಲೇ ಕ್ರಮಕ್ಕೆ ಸೂಚನೆ ನೀಡಿದ್ದೇವೆ. ಸಂಜೆಯೊಳಗೆ ಆರೋಪಿಗಳನ್ನು ಬಂಧಿಸಲು ಸೂಚಿಸಿದ್ದೇವೆ. ಸಾಲಗಾರರಿಗೆ ಕಿರುಕುಳ ಕೊಟ್ಟವರ ವಿರುದ್ಧ ಕ್ರಮಕ್ಕೆ ಸೂಚಿಸಿದ್ದೇವೆ. ಸಭೆಯಲ್ಲಿ ಭಾಗಿಯಾಗಿದ್ದ ಡಿಜಿ & ಐಜಿಪಿಗೆ ಸೂಚನೆ ನೀಡಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ಹೆಚ್ಚಾಗಿದ್ದು, ಇದರ ಪರಿಣಾಮ ಕೆಲವು ಮಂದಿ ಆತ್ಮಹತ್ಯೆಗೆ ಶರಣಾಗಿದ್ದರೆ ಇನ್ನು ಕೆಲವರು ಊರು ಬಿಟ್ಟು ಗುಳೇ ಹೋಗುವಂತಾಗಿದೆ. ಚಿಕ್ಕಮಗಳೂರು, ರಾಮನಗರ, ರಾಯಚೂರು, ಬೆಳಗಾವಿ, ಮಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮೈಕ್ರೋ ಫೈನಾನ್ಸ್‌ ದೌರ್ಜನ್ಯ ಹೆಚ್ಚಾದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿದ್ದು ಹಲವು ಮಹತ್ವದ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ. ಜತೆಗೆ ಮೈಕ್ರೋಫೈನಾನ್ಸ್ ಸಂಸ್ಥೆಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನೂ ನೀಡಲಾಗಿದೆ.

ಸಭೆಯಲ್ಲಿ ಯಾರೆಲ್ಲ ಭಾಗವಹಿಸಿದ್ದರು?

ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆದಿದೆ. ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹಸಚಿವ ಡಾ. ಜಿ ಪರಮೇಶ್ವರ್, ಕಂದಾಯ ಸಚಿವ ಕೃಷ್ಣ ಭೈರೇಗೌಡ, ಕಾನೂನು ಸಚಿವ ಹೆಚ್​ಕೆ ಪಾಟೀಲ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಸಭೆಯಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಮಿತಿ ಮೀರಿದ ಮೈಕ್ರೋ ಫೈನಾನ್ಸ್ ಕಿರುಕುಳ: ಊರು ಬಿಟ್ಟ ಜನ, ಮಹಿಳೆಯರ ಕಣ್ಣೀರು, ಮೂವರು ಬಲಿ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:01 pm, Sat, 25 January 25

ರಾಜಸ್ಥಾನದ ಕೆಮಿಕಲ್ ಫ್ಯಾಕ್ಟರಿಯಲ್ಲಿ ನಡೆದ ಸ್ಫೋಟದ ಹೊಸ ವಿಡಿಯೋ ವೈರಲ್
ರಾಜಸ್ಥಾನದ ಕೆಮಿಕಲ್ ಫ್ಯಾಕ್ಟರಿಯಲ್ಲಿ ನಡೆದ ಸ್ಫೋಟದ ಹೊಸ ವಿಡಿಯೋ ವೈರಲ್
ದಾರಿ ಬಿಡುವ ವಿಚಾರಕ್ಕೆ ಬಸ್- ಆಟೋ ಚಾಲಕ ಹೊಡೆದಾಟ, ವಿಡಿಯೋ ನೋಡಿ
ದಾರಿ ಬಿಡುವ ವಿಚಾರಕ್ಕೆ ಬಸ್- ಆಟೋ ಚಾಲಕ ಹೊಡೆದಾಟ, ವಿಡಿಯೋ ನೋಡಿ
ಬಾಲ್ಕನಿಯಲ್ಲಿ ಬಟ್ಟೆ ಒಣಗಿಸುವಾಗ ಕಾಲು ಜಾರಿ ಕೆಳಗೆ ಬಿದ್ದ ಮಹಿಳೆ
ಬಾಲ್ಕನಿಯಲ್ಲಿ ಬಟ್ಟೆ ಒಣಗಿಸುವಾಗ ಕಾಲು ಜಾರಿ ಕೆಳಗೆ ಬಿದ್ದ ಮಹಿಳೆ
‘ಬಿಲ್ಲ ರಂಗ ಬಾಷ’ ತಡ ಆಗ್ತಿರೋದಕ್ಕೆ ರಿಯಲ್ ಕಾರಣ ತಿಳಿಸಿದ ಕಿಚ್ಚ ಸುದೀಪ್
‘ಬಿಲ್ಲ ರಂಗ ಬಾಷ’ ತಡ ಆಗ್ತಿರೋದಕ್ಕೆ ರಿಯಲ್ ಕಾರಣ ತಿಳಿಸಿದ ಕಿಚ್ಚ ಸುದೀಪ್
ಜೈಲಿನಲ್ಲಿ ದರ್ಶನ್ ನೋಡಿ ಖುಷಿಯಿಂದ ವಾಪಸ್ ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ನೋಡಿ ಖುಷಿಯಿಂದ ವಾಪಸ್ ಹೊರಟ ವಿಜಯಲಕ್ಷ್ಮಿ
ಮಗಳ ಮದುವೆ ಸಾಲ ತೀರಿಸೋಕೆ ದುಡಿಯುತ್ತಿದ್ದ ಅಪ್ಪ-ಮಗ ಒಟ್ಟಿಗೆ ಸಾವು
ಮಗಳ ಮದುವೆ ಸಾಲ ತೀರಿಸೋಕೆ ದುಡಿಯುತ್ತಿದ್ದ ಅಪ್ಪ-ಮಗ ಒಟ್ಟಿಗೆ ಸಾವು
ಸಚಿವ ಸ್ಥಾನಕ್ಕೆ ರಾಜೀನಾಮೆ: ಸ್ಪಷ್ಟನೆ ಕೊಟ್ಟ SS ಮಲ್ಲಿಕಾರ್ಜುನ್
ಸಚಿವ ಸ್ಥಾನಕ್ಕೆ ರಾಜೀನಾಮೆ: ಸ್ಪಷ್ಟನೆ ಕೊಟ್ಟ SS ಮಲ್ಲಿಕಾರ್ಜುನ್
ಸಿದ್ದಾರೂಢರ ಮಹಾರಥೋತ್ಸವದಲ್ಲಿ ಭಕ್ತ ಸಾಗರ: ಎತ್ತ ನೋಡಿದ್ರೂ ಜನವೋ ಜನ
ಸಿದ್ದಾರೂಢರ ಮಹಾರಥೋತ್ಸವದಲ್ಲಿ ಭಕ್ತ ಸಾಗರ: ಎತ್ತ ನೋಡಿದ್ರೂ ಜನವೋ ಜನ
ಜೈಲಿನಲ್ಲೇ ದರ್ಶನ್ ಹುಟ್ಟುಹಬ್ಬ: ವಿಶ್ ಮಾಡಲು ಬಂದ ವಿಜಯಲಕ್ಷ್ಮಿ, ಧನ್ವೀರ್
ಜೈಲಿನಲ್ಲೇ ದರ್ಶನ್ ಹುಟ್ಟುಹಬ್ಬ: ವಿಶ್ ಮಾಡಲು ಬಂದ ವಿಜಯಲಕ್ಷ್ಮಿ, ಧನ್ವೀರ್
ಸಚಿವರ ನೇತೃತ್ವದ ಕೆಡಿಪಿ ಸಭೆಯಲ್ಲಿ ನಿದ್ರೆಗೆ ಜಾರಿದ ಅಧಿಕಾರಿಗಳು
ಸಚಿವರ ನೇತೃತ್ವದ ಕೆಡಿಪಿ ಸಭೆಯಲ್ಲಿ ನಿದ್ರೆಗೆ ಜಾರಿದ ಅಧಿಕಾರಿಗಳು