AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲಿನ ದರ ಏರಿಕೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಿಷ್ಟು

ಹಾಲಿನ ದರ ಏರಿಕೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಿಷ್ಟು

ಗಂಗಾಧರ​ ಬ. ಸಾಬೋಜಿ
|

Updated on: Sep 26, 2026 | 3:52 PM

Share

ಹಾಲಿನ ದರ ಏರಿಕೆ ಸಂಬಂಧ ಸಿಎಂ ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ ನೀಡಿದ್ದಾರೆ. ಹತ್ತು ರೂಪಾಯಿ ಹೆಚ್ಚಳ ಮತ್ತು ಸಂಘಗಳಿಗೆ ಎರಡು ರೂಪಾಯಿ ನೀಡುವಂತೆ ಹಾಲು ಉತ್ಪಾದಕ ಸಂಘಗಳ ಅಧ್ಯಕ್ಷರು ಮನವಿ ಮಾಡಿದ್ದಾರೆ. ರೈತರ ತೀವ್ರ ಆಕ್ರೋಶ, ಸಂಸ್ಥೆಗಳ ನಷ್ಟದ ಹಿನ್ನೆಲೆಯಲ್ಲಿ ಕ್ಯಾಬಿನೆಟ್‌ನಲ್ಲಿ ಪರಿಶೀಲಿಸುವುದಾಗಿ ಸಿಎಂ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್​​ 26: ಎಲ್ಲಾ ಒಕ್ಕೂಟಗಳ ಅಧ್ಯಕ್ಷರು ಬಂದು ಭೇಟಿ ಮಾಡಿದ್ದಾರೆ. 12 ರೂ. ಹೆಚ್ಚಿಸಿ 2 ನಮಗೆ ಕೊಡಿ ಅಂತಾ ಒಕ್ಕೂಟ ಕೇಳುತ್ತಿದೆ. ಹಾಲಿನ ದರ ಏರಿಕೆ ಬಗ್ಗೆ ಸಂಪುಟದಲ್ಲಿ ಚರ್ಚೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಈ ವಿಚಾರವನ್ನು ಸಚಿವ ಸಂಪುಟ ಸಭೆಯಲ್ಲಿ ಪರಿಶೀಲನೆ ನಡೆಸಲಾಗುವುದು. ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿರುವ ದರಗಳ ಕುರಿತು ಸಮಗ್ರ ವರದಿ ತರಿಸಿಕೊಳ್ಳಲಾಗುತ್ತಿದೆ. ಪ್ರಸ್ತುತ ಪ್ರತಿ ಸಂಸ್ಥೆ ಹಾಗೂ ಹಾಲು ಸಂಘಗಳಿಗೆ ನಷ್ಟವಾಗುತ್ತಿದ್ದು, ಸುಮಾರು 50 ಸಾವಿರ ಜನರು ಸೇರಿ ತಮ್ಮ ಸಮಸ್ಯೆ ತೋಡಿಕೊಂಡಿದ್ದಾರೆ. ರೈತರಲ್ಲಿ ತೀವ್ರ ಆಕ್ರೋಶ ಹಾಗೂ ನೋವಿರುವುದರಿಂದ ಅವರ ಹಿತರಕ್ಷಣೆಗಾಗಿ ಕ್ಯಾಬಿನೆಟ್‌ನಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More