ಜಿಂದಾಲ್ ಕಂಪನಿಗೆ 3667 ಎಕರೆ ಭೂಮಿ ಪರಭಾರೆ ಮಾಡಲು ಸಚಿವ ಆನಂದ್ ಸಿಂಗ್ ವಿರೋಧ

|

Updated on: Apr 30, 2021 | 4:04 PM

ಈ ಹಿಂದೆ ಬಿ.ಎಸ್.ಯಡಿಯೂರಪ್ಪ ಅವರು ವಿಪಕ್ಷದಲ್ಲಿದ್ದಾಗ ವಿರೋಧ ವ್ಯಕ್ತಪಡಿಸಿದ್ದರು. ಆದರೆ ಈಗ ಅವರೇ ಪರಭಾರೆ ಮಾಡುತ್ತಿರುವುದು ಸರಿಯಲ್ಲ. ಸರ್ಕಾರ ಯಾವ ರೀತಿ ತೀರ್ಮಾನ ಕೈಗೊಳ್ಳುವುದೆಂದು ನೋಡುವೆ. ಸರ್ಕಾರದ ನಿರ್ಧಾರ ಬಳಿಕ ಮತ್ತೆ ನನ್ನ ತೀರ್ಮಾನ ತಿಳಿಸುವೆ ಎಂದು ಅವರು ತಿಳಿಸಿದ್ದಾರೆ.

ಜಿಂದಾಲ್ ಕಂಪನಿಗೆ 3667 ಎಕರೆ ಭೂಮಿ ಪರಭಾರೆ ಮಾಡಲು ಸಚಿವ ಆನಂದ್ ಸಿಂಗ್ ವಿರೋಧ
ಆನಂದ್ ಸಿಂಗ್
Follow us on

ಬಳ್ಳಾರಿ: ಜಿಂದಾಲ್ ಕಂಪನಿಗೆ 3667 ಎಕರೆ ಭೂಮಿ ಪರಭಾರೆ ಮಾಡಲು ಸಚಿವ ಆನಂದ್ ಸಿಂಗ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಭೂಮಿಯನ್ನು ಲೀಸ್ ರೂಪದಲ್ಲಿ ಕೊಡಲಿ, ಪರಭಾರೆ ಮಾಡುವುದು ಬೇಡ. ಸುಮಾರು ಮೂರು ಸಾವಿರ ಕೋಟಿ ಬೆಲೆ ಬಾಳುವ ಭೂಮಿಯನ್ನು ಕಡಿಮೆ ದರದಲ್ಲಿ ಪರಭಾರೆ ಮಾಡುವುದು ಸರಿಯಲ್ಲ. ನಾನು ಈ ಹಿಂದೆ ಕೂಡ ವಿರೋಧ ಮಾಡಿದ್ದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿರೋಧ ವ್ಯಕ್ತಪಡಿಸುವೆ ಎಂದು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಆನಂದ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.

ಈ ಹಿಂದೆ ಬಿ.ಎಸ್.ಯಡಿಯೂರಪ್ಪ ಅವರು ವಿಪಕ್ಷದಲ್ಲಿದ್ದಾಗ ವಿರೋಧ ವ್ಯಕ್ತಪಡಿಸಿದ್ದರು. ಆದರೆ ಈಗ ಅವರೇ ಪರಭಾರೆ ಮಾಡುತ್ತಿರುವುದು ಸರಿಯಲ್ಲ. ಸರ್ಕಾರ ಯಾವ ರೀತಿ ತೀರ್ಮಾನ ಕೈಗೊಳ್ಳುವುದೆಂದು ನೋಡುವೆ. ಸರ್ಕಾರದ ನಿರ್ಧಾರ ಬಳಿಕ ಮತ್ತೆ ನನ್ನ ತೀರ್ಮಾನ ತಿಳಿಸುವೆ ಎಂದು ಅವರು ತಿಳಿಸಿದ್ದಾರೆ.

ಬಳ್ಳಾರಿ ಜಿಲ್ಲೆಯಲ್ಲಿ ಬೆಡ್‌ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗಿದೆ. ಪ್ರತಿ ತಾಲೂಕು ಸರ್ಕಾರಿ ಆಸ್ಪತ್ರೆಗಳಲ್ಲಿ 50 ಬೆಡ್ ವ್ಯವಸ್ಥೆ ಮಾಡಲಾಗಿದೆ.  ಹಾಸ್ಟೆಲ್‌ಗಳಲ್ಲಿ ಬೆಡ್ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ. ಜಿಂದಾಲ್ ಕಂಪನಿಯಲ್ಲಿ 1 ಸಾವಿರ ಆಕ್ಸಿಜನ್ ಬೆಡ್ ವ್ಯವಸ್ಥೆ ಮಾಡಲಾಗಿದೆ. ಬಳ್ಳಾರಿ ಜಿಲ್ಲೆಯಲ್ಲಿ ತಜ್ಞ ವೈದ್ಯರು, ಸಿಬ್ಬಂದಿ, ನರ್ಸ್‌ ಕೊರತೆಯಿದ್ದು, ಒಂದು ವರ್ಷದ ಅವಧಿಗೆ ಉತ್ತಮ ವೇತನ ನೀಡಿ ನೇಮಕ ಮಾಡಿಕೊಳ್ಳಲಾಗುವುದು, ಜಿಲ್ಲೆಗೆ ಮತ್ತೆ 50 ವೆಂಟಿಲೇಟರ್ ಖರೀದಿಗೆ ಕ್ರಮ ಕೈಗೊಳ್ಳಲಾಗುವುದು.  ಜಿಲ್ಲೆಯಲ್ಲಿ ಸೋಂಕಿತರ ಸಾವಿನ ಪ್ರಮಾಣ ಹೆಚ್ಚಳ ವಿಚಾರದ ಕುರಿತು ಮಾತನಾಡಿದ ಅವರು, ಆರೋಗ್ಯ ಸ್ಥಿತಿ ಗಂಭೀರವಾದಾಗ ಆಸ್ಪತ್ರೆಗೆ ದಾಖಲಾಗ್ತಿದ್ದಾರೆ. ಇದರಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಡುತ್ತಿದ್ದಾರೆ. ಆರೋಗ್ಯ ಸ್ಥಿತಿ ಗಂಭೀರವಾಗುವ ಮುನ್ನ ಆಸ್ಪತ್ರೆಗೆ ದಾಖಲಾಗಿ ಎಂದು ಮನವಿ ಮಾಡಿದರು.

ಇದನ್ನೂ ಓದಿ: Explainer: 18ರಿಂದ 45 ವಯೋಮಾನದವರಿಗೆ ಕೋವಿಡ್ ಲಸಿಕೆ; ನೋಂದಣಿ ಹೇಗೆ? ಪಡೆದುಕೊಳ್ಳುವುದು ಎಲ್ಲಿ? ಡೇಟ್ ಮಿಸ್ ಆದ್ರೆ ಏನು ಮಾಡಬೇಕು?

ಮೇ 1ರಿಂದಲೇ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ಸಿಗದು; ಸಿಎಸ್ ರವಿಕುಮಾರ್