ಅರಣ್ಯನಾಶಕ್ಕೆ ಕಾರಣರಾದವರ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ: ಸಚಿವ ಅರವಿಂದ ಲಿಂಬಾವಳಿ

ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಈಗಾಗಲೇ ಅರಣ್ಯ ನಾಶಕ್ಕೆ ಕಾರಣ ಆದ 13 ಪ್ರಕರಣಗಳಲ್ಲಿ ಕೇಸು ದಾಖಲು ಮಾಡಲಾಗಿದೆ. ಅವರ ಮೇಲೆ ಕಠಿಣವಾದ ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಿದರು.

ಅರಣ್ಯನಾಶಕ್ಕೆ ಕಾರಣರಾದವರ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ: ಸಚಿವ ಅರವಿಂದ ಲಿಂಬಾವಳಿ
ಅರವಿಂದ ಲಿಂಬಾವಳಿ
Follow us
TV9 Web
| Updated By: ganapathi bhat

Updated on:Apr 06, 2022 | 7:08 PM

ಗದಗ: ಅರಣ್ಯಕ್ಕೆ ಬೆಂಕಿ ಬೀಳಲು ಮತ್ತು ಅರಣ್ಯನಾಶಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ. ಗದಗ ಜಿಲ್ಲೆಯ ಶೆಟ್ಟಿಕೆರೆ ಹಾಗೂ ಅದರ ಸುತ್ತಮುತ್ತಲ ಅರಣ್ಯ ಪ್ರದೇಶಕ್ಕೆ ಇಂದು (ಮಾರ್ಚ್ 14) ಭೇಟಿ ನೀಡಿದ ಅವರು ಬೆಂಕಿ ಬಿದ್ದು ನಾಶವಾದ ಅರಣ್ಯಪ್ರದೇಶವನ್ನು ವೀಕ್ಷಿಸಿದ್ದಾರೆ.

ಬಳಿಕ, ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಈಗಾಗಲೇ ಅರಣ್ಯ ನಾಶಕ್ಕೆ ಕಾರಣ ಆದ 13 ಪ್ರಕರಣಗಳಲ್ಲಿ ಕೇಸು ದಾಖಲು ಮಾಡಲಾಗಿದೆ. ಅವರ ಮೇಲೆ ಕಠಿಣವಾದ ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಿದರು. ಅರಣ್ಯ ಉಳಿಯಬೇಕಾದರೆ ಜನರು ಅರಣ್ಯ ಇಲಾಖೆಯ ಜೊತೆ ಕೈಜೋಡಿಸಿ ಅರಣ್ಯ ರಕ್ಷಣೆಗೆ ಸಹಕರಿಸಬೇಕು ಎಂದು ಅರವಿಂದ ಲಿಂಬಾವಳಿ ಮನವಿ ಮಾಡಿದರು.

ಕುರಿಗಾಹಿಗಳು ತಮ್ಮ ಕುರಿಗಳಿಗಾಗಿ ಹುಲ್ಲು ಸಂಗ್ರಹಿಸಲು ಬರುತ್ತಾರೆ ಅಂತಹವರನ್ನು ಕ್ರಿಮಿನಲ್ ಎಂದು ಹೇಳಲು ಬರುವುದಿಲ್ಲ, ಇಂತಹ ಕುರಿಗಾಹಿಗಳು ಬೇಸಿಗೆಯಲ್ಲಿ ಇಲಾಖೆಯೊಂದಿಗೆ ಕೈಜೋಡಿಸಿ ಅರಣ್ಯ ಸ್ವಚ್ಛಗೊಳಿಸಲು ಸಹಕರಿಸಬೇಕು ಎಂದು ತಿಳಿಸಿದರು.

ಶೆಟ್ಟಿಗೆರೆ ಸುತ್ತಮುತ್ತಲ ಪ್ರದೇಶದಲ್ಲಿ ಸಾಮಾಜಿಕ ಅರಣ್ಯ ಬೆಳೆಸಲು ಆದ್ಯತೆ ನೀಡಲಾಗುತ್ತದೆ. ಇದಕ್ಕೆ ಅಗತ್ಯವಾದ ಸೂಚನೆಯನ್ನು ಅರಣ್ಯಾಧಿಕಾರಿಗಳಿಗೆ ನೀಡಿದ್ದೇನೆ ಎಂದು ಹೇಳಿದರು. ಜಿಲ್ಲೆಯಲ್ಲಿರುವ ಅರಣ್ಯ ಸಂಬಂಧಿ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದಿದ್ದೇನೆ. ಹಾಗೆಯೇ ಸಿಬ್ಬಂದಿಗಳಿಗೆ ಇರುವ ಸಮಸ್ಯೆ ಬಗ್ಗೆಯೂ ಚರ್ಚಿಸಿದ್ದೇನೆ. ಅವುಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು.

ARAVINDA LIMBAVALI AT GADAGA

ಅಧಿಕಾರಿಗಳೊಂದಿಗೆ ಸಚಿವ ಅರವಿಂದ ಲಿಂಬಾವಳಿ

ಮಂತ್ರಾಲಯ ಅಭಿವೃದ್ಧಿ ಕಾಮಗಾರಿ ಪರಿಶೀಲನೆ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮಠದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ನಾನಾ ಅಭಿವೃದ್ಧಿ ಕಾಮಗಾರಿಗಳನ್ನು ಚುರುಕುಗೊಳಿಸಲು ಅಗತ್ಯವಿರುವ ಎಲ್ಲಾ ಸಹಕಾರ ನೀಡುವುದಾಗಿ ಕರ್ನಾಟಕ ಅರಣ್ಯ , ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ನಿನ್ನೆ (ಮಾರ್ಚ್ 13) ತಿಳಿಸಿದ್ದರು. ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭೇಟಿ ನೀಡಿ , ದರ್ಶನ ಪಡೆದ ಸಂದರ್ಭದಲ್ಲಿ ಮಠದ ವತಿಯಿಂದ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ್ದರು.

ಈ ಸಮಯದಲ್ಲಿ ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿ ಶ್ರೀ ಸುಭುಧೇಂದ್ರ ತೀರ್ಥ ಸ್ವಾಮೀಜಿ ಸಚಿವ ಅರವಿಂದ ಲಿಂಬಾವಳಿಗೆ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಿದ್ದರು. ಸಚಿವ ಅರವಿಂದ ಲಿಂಬಾವಳಿ ಮಂತ್ರಾಲಯ ಗುರು ಶ್ರೀ ರಾಘವೇಂದ್ರ ಮಠದ ಅಭಿವೃದ್ಧಿ ಸಮಿತಿ ಸದಸ್ಯರಾಗಿ 2009ರಿಂದಲೂ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಶ್ರೀಮಠದ ಕೆಲಸಗಳಲ್ಲಿ ಸಕ್ರಿಯವಾಗಿದ್ದಾರೆ. ಹಾಗಾಗಿ ಲಿಂಬಾವಳಿ ನಿನ್ನೆ ಮಂತ್ರಾಲಯದ ಅಭಿವೃದ್ಧಿ ಕಾರ್ಯಗಳ ಪರಿವೀಕ್ಷಣೆ ನಡೆಸಿದ್ದರು.

ಇದನ್ನೂ ಓದಿ: ಮಂತ್ರಾಲಯದ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಅರವಿಂದ ಲಿಂಬಾವಳಿ

ಬಿಜೆಪಿ ಕರ್ನಾಟಕ ರಾಜ್ಯ ಘಟಕದ ಉಪಾಧ್ಯಕ್ಷ ಹುದ್ದೆಗೆ ಅರವಿಂದ ಲಿಂಬಾವಳಿ ರಾಜೀನಾಮೆ

Published On - 9:05 pm, Sun, 14 March 21

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ